Just In
- 1 hr ago Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- 1 hr ago ಬೈಕಿನಂತೆ ಮೈಲೇಜ್ ಕೊಡೋದ್ರಿಂದ ಈ ಹ್ಯುಂಡೈ ಕಾರಿನ ಮಾಲೀಕರು ಫುಲ್ ಖುಷ್
- 1 hr ago ಮಹೀಂದ್ರಾ ಪ್ರೀಯರಿಗೆ ಭಾರೀ ಸಿಹಿಸುದ್ದಿ: ಗಲ್ಲಿಗಲ್ಲಿಯಲ್ಲಿ ಶುರುವಾಗುತ್ತಾ ಸ್ಕಾರ್ಪಿಯೋ ಹವಾ!
- 2 hrs ago ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಬೆಸ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓಡುತ್ತವೆ!
Don't Miss!
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- News ಬೆಂಗಳೂರಿನಲ್ಲಿ ಮೋದಿ ಮತಬೇಟೆ; ರಾಜ್ಯಕ್ಕೆ ಪ್ರಧಾನಿ ಮೋದಿಯ ಕೊಡುಗೆ ಏನಿದೆ?: ಡಾ.ಜಿ ಪರಮೇಶ್ವರ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Movies ಹಳೇ ಟ್ವೀಟ್ ಹಾಕಿ ರಕ್ಷಿತ್ ಶೆಟ್ಟಿ ಹೇಳಿದ್ದೇನು? 'ರಿಚರ್ಡ್ ಆಂಟನಿ' ಕಥೆ ಏನಾಯ್ತು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹ್ಯಾಚ್ಬ್ಯಾಕ್ ಪ್ರಿಯರನ್ನು ಸೆಳೆದ ಸ್ಯಾಂಟ್ರೋ ಹೊಸ ಕಾರಿನ ಡಿಸೈನ್
ಮುಂಬರುವ ದೀಪಾವಳಿ ಹೊತ್ತಿಗೆ ಬಿಡುಗಡೆಗೊಳ್ಳಲಿರುವ ಹ್ಯುಂಡೈ ಇಂಡಿಯಾ ನಿರ್ಮಾಣದ ನೆಕ್ಸ್ಟ್ ಜನರೇಷನ್ ಸ್ಯಾಂಟ್ರೊ ಕಾರುಗಳು ಆವೃತ್ತಿಯನ್ನು ವಿನೂತನ ಡಿಸೈನ್ ಆಧರಿಸಿ ಬಿಡುಗಡೆಗೊಳ್ಳುವ ಸುಳಿವು ನೀಡಿದ್ದು, ಇದೀಗ ಕಾರಿನ ವಿನ್ಯಾಸದ ಕುರಿತಾದ ಅಧಿಕೃತ ಚಿತ್ರಗಳು ಬಹಿರಂಗಗೊಂಡಿವೆ.
ನೆಕ್ಸ್ಟ್ ಜನರೇಷನ್ ಸ್ಯಾಂಟ್ರೊ ಕಾರು ಆವೃತ್ತಿಯನ್ನು ಎಹೆಚ್2 ಎಂಬ ಕೋಡ್ ವಲ್ಡ್ ಹೆಸರಿನಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿರುವ ಹ್ಯುಂಡೈ ಸಂಸ್ಥೆಯು ಎಂಜಿನ್ ಕಾರ್ಯಕ್ಷಮತೆ ಬಗೆಗೆ ಹಲವು ಸುತ್ತಿನ ಸ್ಪಾಟ್ ಟೆಸ್ಟಿಂಗ್ ಕೈಗೊಂಡಿದ್ದು, ಈ ನಡುವೆ ಹೊಸ ಕಾರಿನ ಹೊರಭಾಗದ ವಿನ್ಯಾಸದ ಕುರಿತಾಗಿ ಕೆಲವು ಮಹತ್ವದ ಮಾಹಿತಿಗಳು ಲಭ್ಯವಾಗುತ್ತಿವೆ.
ಶಾರ್ಪ್ ಡಿಸೈನ್ ಹೊಂದಿರುವ ಹೊಸ ಸ್ಯಾಂಟ್ರೊ ಕಾರುಗಳು ವಿನೂತನವಾದ ಹೆಸರಿನೊಂದಿಗೆ ಮಾರುಕಟ್ಟೆಗೆ ಮರಳಿ ಬರಲಿದ್ದು, ಹೊಸ ಕಾರಿನ ಹೆಸರನ್ನು ಮುಂದಿನ ಅಕ್ಟೋಬರ್ 4ರಂದು ಹ್ಯುಂಡೈ ಸಂಸ್ಥೆಯು ಬಹಿರಂಗಗೊಳಿಸುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಈಗಾಗಲೇ ಸ್ಟಾಟ್ ಟೆಸ್ಟಿಂಗ್ ವೇಳೆ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ ಉತ್ತಮ ಪ್ರದರ್ಶನ ತೊರುತ್ತಿದ್ದು, ಅಧಿಕ ಮೈಲೇಜ್ ಮತ್ತು ಅತ್ಯುತ್ತಮ ಬ್ರೇಕಿಂಗ್ ಸೌಲಭ್ಯಗಳು ಗ್ರಾಹಕರ ನಂಬಿಕೆಗೆ ವಿಶ್ವಾಸರ್ಹವಾಗಿವೆ ಎಂಬ ಮಾಹಿತಿ ದೊರೆತಿದೆ.
ಆದ್ರೆ ಸ್ಪಾಟ್ ಟೆಸ್ಟಿಂಗ್ನಲ್ಲಿ ಕಾಣಿಸಿಕೊಂಡ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ ಮೇಲೆ ಭಾರೀ ಪ್ರಮಾಣದ ಮುಸುಕು ಹಾಕಿದ್ದರ ಪರಿಣಾಮ ವಿನ್ಯಾಸಗಳ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಸಾಧ್ಯವಾಗಿಲ್ಲ ಎನ್ನಬಹುದು.
ಆದರೂ ಮಧ್ಯಮ ವರ್ಗಗಳ ಸ್ನೇಹಿಯಾಗಿರುವ ಉತ್ತಮ ಹ್ಯಾಚ್ಬ್ಯಾಕ್ ಕಾರುಗಳ ಪಟ್ಟಿಯಲ್ಲಿ ಸ್ಥಾನ ಪಡೆಯಲು ಶಕ್ತವಾಗಿರುವ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ, 800 ಸಿಸಿ ಪೆಟ್ರೋಲ್ ಎಂಜಿನ್ ಇಲ್ಲವಾದ್ರೆ 1.0-ಲೀಟರ್ ಎಂಜಿನ್ ಪಡೆದುಕೊಳ್ಳಲಿದೆ. ಆದರೇ ಹೊಸ ಕಾರುಗಳಲ್ಲಿ ಡಿಸೇಲ್ ಆವೃತ್ತಿಯನ್ನು ಪರಿಚಯಿಸದಿರಲು ಹ್ಯುಂಡೈ ನಿರ್ಧರಿಸಿದೆ.
ಜೊತೆಗೆ ಎಎಂಟಿ(ಆಟೋ ಮ್ಯಾಟಿಕ್ ಗೇರ್ಬಾಕ್ಸ್) ಕೂಡಾ ಹೊಂದುವ ಸಾಧ್ಯತೆಗಳಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಮತ್ತು ಐ10 ಮಾದರಿಯಲ್ಲೇ ಒಳ ವಿನ್ಯಾಸದ ಸೌಲಭ್ಯಗಳನ್ನು ಪಡೆಯಲಿವೆ ಎನ್ನಲಾಗುತ್ತಿದೆ.
ಪ್ರಯಾಣಿಕ ಸುರಕ್ಷತೆಗಾಗಿ ಎಬಿಎಸ್ ಮತ್ತು ಡ್ಯುಯಲ್ ಏರ್ಬ್ಯಾಗ್ ಸೌಲಭ್ಯಗಳನ್ನು ಸಹ ಆಯ್ಕೆ ರೂಪದಲ್ಲಿ ನೀಡಲಿದ್ದು, ಪಾರ್ಕಿಂಗ್ ಸೆನ್ಸಾರ್, ಟಚ್ಸ್ಕ್ರೀನ್ ಇನ್ಪೋಟೈನ್ಮೆಂಟ್ ಮತ್ತು ವಿಶೇಷ ವಿನ್ಯಾಸದ ಟಾಲಿ ಬಾಯ್ ಡಿಸೈನ್ ಹೊಂದಿರಲಿವೆ.
ಕಾರಿನ ಬೆಲೆ ಮತ್ತು ಬಿಡುಗಡೆಯ ಅವಧಿ (ಅಂದಾಜು)
ಸ್ಯಾಂಟ್ರೊ ಹೊಸ ಕಾರುಗಳನ್ನ ದೀಪಾವಳಿ ಹೊತ್ತಿಗೆ ಬಿಡುಗೊಳಿಸುವ ಬಗ್ಗೆ ಮಾಹಿತಿಗಳಿದ್ದು, ಹೊಸ ಕಾರಿನ ಬೆಲೆಯನ್ನು ಎಕ್ಸ್ಶೋರಂ ಪ್ರಕಾರ ರೂ. 3.90 ಲಕ್ಷದಿಂದ 4.20 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.
ಡ್ರೈವ್ ಸ್ಪಾರ್ಕ್ ಅಭಿಪ್ರಾಯ
ಹೊಸತನಗಳೊಂದಿಗೆ ಮಾರುಕಟ್ಟೆ ಪ್ರವೇಶ ಪಡೆಯುತ್ತಿರುವ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ ಆವೃತ್ತಿಯು ಸಣ್ಣ ಕಾರುಗಳ ವಿಭಾಗದಲ್ಲಿ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿದ್ದು, ಮಾರುತಿ ಸುಜುಕಿ ಸೆಲೆರಿಯೊ, ಟಾಟಾ ಟಿಯಾಗೋ ಮತ್ತು ರೆನಾಲ್ಟ್ ಕ್ವಿಡ್ಗೆ ತೀವ್ರ ಸ್ಪರ್ಧಿಯಾಗಲಿದೆ.