ಸ್ಪಾಟ್ ಟೆಸ್ಟಿಂಗ್ ವೇಳೆ ಹ್ಯಾಚ್‌ಬ್ಯಾಕ್ ಪ್ರಿಯರನ್ನು ಸೆಳೆದ ಹೊಸ ಸ್ಯಾಂಟ್ರೊ

Written By:

ಹ್ಯಾಚ್‌ಬ್ಯಾಕ್ ಕಾರುಗಳಲ್ಲಿ ಅತಿ ಹೆಚ್ಚು ಜನಪ್ರಿಯ ಹೊಂದಿರುವ ಹ್ಯುಂಡೈ ಸ್ಯಾಂಟ್ರೊ ಕಾರುಗಳು ಇದೀಗ ಮತ್ತೊಮ್ಮೆ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡುವ ನೀರಿಕ್ಷೆಯಲ್ಲಿದ್ದು, ಈ ಹಿನ್ನೆಲೆ ದೇಶದ ಪ್ರಮುಖ ಕಡೆಗಳಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸುವ ಮೂಲಕ ಹ್ಯಾಚ್‌ಬ್ಯಾಕ್ ಪ್ರಿಯರ ಮೆಚ್ಚುಗೆಗೆ ಕಾರಣವಾಗಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಹ್ಯಾಚ್‌ಬ್ಯಾಕ್ ಪ್ರಿಯರನ್ನು ಸೆಳೆದ ಹೊಸ ಸ್ಯಾಂಟ್ರೊ

ಇದೇ ವರ್ಷ ಮೂರನೇ ತ್ರೈಮಾಸಿಕ ಅವಧಿಗೆ ಬಿಡುಗಡೆಗೊಳ್ಳಲಿರುವ ಹ್ಯುಂಡೈ ಇಂಡಿಯಾ ನಿರ್ಮಾಣದ ನೆಕ್ಸ್ಟ್ ಜನರೇಷನ್ ಸ್ಯಾಂಟ್ರೊ ಕಾರು ಆವೃತ್ತಿಯು ಹಲವು ಬಾರಿ ಸ್ಪಾಟ್ ಟೆಸ್ಟಿಂಗ್‌ ವೇಳೆ ಸೆರೆಸಿಕ್ಕಿದ್ದು, ಇದೀಗ ಹೊಸ ಕಾರಿನ ಇಂಟಿರಿಯರ್ ಅಂಶಗಳ ಬಗೆಗೆ ಹೆಚ್ಚಿನ ಮಾಹಿತಿ ಲಭ್ಯವಾಗಿರುವುದು ಮತ್ತೊಂದು ವಿಶೇಷ.

ಸ್ಪಾಟ್ ಟೆಸ್ಟಿಂಗ್ ವೇಳೆ ಹ್ಯಾಚ್‌ಬ್ಯಾಕ್ ಪ್ರಿಯರನ್ನು ಸೆಳೆದ ಹೊಸ ಸ್ಯಾಂಟ್ರೊ

ಹ್ಯುಂಡೈ ಇಂಡಿಯಾ ಸಂಸ್ಥೆಯು ನೆಕ್ಸ್ಟ್ ಜನರೇಷನ್ ಸ್ಯಾಂಟ್ರೊ ಕಾರು ಆವೃತ್ತಿಯನ್ನು ಎಹೆಚ್2 ಎಂಬ ಕೋಡ್ ವಲ್ಡ್ ಹೆಸರಿನಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸಲಾಗುತ್ತಿದ್ದು, ನಿನ್ನೆಯಷ್ಟೇ ತಮಿಳುನಾಡಿನ ಜನಪ್ರಿಯ ಪ್ರವಾಸಿ ತಾಣ ಊಟಿ ಬಳಿ ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಬಗೆಗೆ ಹಲವು ಸುತ್ತಿನ ಸ್ಪಾಟ್ ಟೆಸ್ಟಿಂಗ್ ಕೈಗೊಳ್ಳಲಾಗಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಹ್ಯಾಚ್‌ಬ್ಯಾಕ್ ಪ್ರಿಯರನ್ನು ಸೆಳೆದ ಹೊಸ ಸ್ಯಾಂಟ್ರೊ

ಸ್ಟಾಟ್ ಟೆಸ್ಟಿಂಗ್ ವೇಳೆ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ ಕಾರುಗಳು ಉತ್ತಮ ಪ್ರದರ್ಶನ ತೊರುತ್ತಿದ್ದು, ಅಧಿಕ ಮೈಲೇಜ್ ಮತ್ತು ಅತ್ಯುತ್ತಮ ಬ್ರೇಕಿಂಗ್ ಸೌಲಭ್ಯಗಳು ಗ್ರಾಹಕರ ನಂಬಿಕೆಗೆ ವಿಶ್ವಾಸರ್ಹವಾಗಲಿವೆ ಎಂಬ ಮಾಹಿತಿಯೂ ದೊರೆತಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಹ್ಯಾಚ್‌ಬ್ಯಾಕ್ ಪ್ರಿಯರನ್ನು ಸೆಳೆದ ಹೊಸ ಸ್ಯಾಂಟ್ರೊ

ಆದ್ರೆ ಸ್ಪಾಟ್ ಟೆಸ್ಟಿಂಗ್‌ನಲ್ಲಿ ಕಾಣಿಸಿಕೊಂಡ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ ಮೇಲೆ ಭಾರೀ ಪ್ರಮಾಣದ ಮುಸುಕು ಹೊದಿಸಿದ ಪರಿಣಾಮ ವಿನ್ಯಾಸಗಳ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಸಾಧ್ಯವಾಗಿಲ್ಲ.

ಸ್ಪಾಟ್ ಟೆಸ್ಟಿಂಗ್ ವೇಳೆ ಹ್ಯಾಚ್‌ಬ್ಯಾಕ್ ಪ್ರಿಯರನ್ನು ಸೆಳೆದ ಹೊಸ ಸ್ಯಾಂಟ್ರೊ

ಆದರೆ, ಹೊಸ ಕಾರುಗಳು ಎಎಂಟಿ(ಆಟೋ ಮ್ಯಾಟಿಕ್ ಗೇರ್‌ಬಾಕ್ಸ್) ಕೂಡಾ ಹೊಂದುವ ಸಾಧ್ಯತೆಗಳಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು ಐ10 ಮಾದರಿಯಲ್ಲೇ ಒಳ ವಿನ್ಯಾಸದ ಸೌಲಭ್ಯಗಳನ್ನು ಪಡೆಯಲಿವೆ ಎನ್ನಲಾಗುತ್ತಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಹ್ಯಾಚ್‌ಬ್ಯಾಕ್ ಪ್ರಿಯರನ್ನು ಸೆಳೆದ ಹೊಸ ಸ್ಯಾಂಟ್ರೊ

ಹೀಗಾಗಿ ಮಧ್ಯಮ ವರ್ಗಗಳ ಸ್ನೇಹಿಯಾಗಿರುವ ಉತ್ತಮ ಹ್ಯಾಚ್‌ಬ್ಯಾಕ್ ಕಾರುಗಳ ಪಟ್ಟಿಯಲ್ಲಿ ಸ್ಥಾನ ಪಡೆಯಲು ಶಕ್ತವಾಗಿರುವ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ ಕಾರುಗಳು, 800 ಸಿಸಿ ಪೆಟ್ರೋಲ್ ಎಂಜಿನ್ ಇಲ್ಲವಾದ್ರೆ 1.0-ಲೀಟರ್ ಜೊತೆ ತ್ರಿ ಸಿಲಿಂರ್ ಎಂಜಿನ್ ಪಡೆದುಕೊಳ್ಳಲಿದೆ. ಆದ್ರೆ ಹೊಸ ಕಾರುಗಳಲ್ಲಿ ಡಿಸೇಲ್ ಆವೃತ್ತಿಯನ್ನು ಪರಿಚಯಿಸುತ್ತಿಲ್ಲ.

ಸ್ಪಾಟ್ ಟೆಸ್ಟಿಂಗ್ ವೇಳೆ ಹ್ಯಾಚ್‌ಬ್ಯಾಕ್ ಪ್ರಿಯರನ್ನು ಸೆಳೆದ ಹೊಸ ಸ್ಯಾಂಟ್ರೊ

ಬದಲಾಗಿ ಸಿಎನ್‌ಜಿ ಎಂಜಿನ್ ಪ್ರೇರಣೆ ಹೊಂದಿರುವ ಸ್ಯಾಂಟ್ರೊ ಕಾರುಗಳು ಪೆಟ್ರೋಲ್ ಮತ್ತು ಸಿಎನ್‌ಜಿ ಎರಡು ಮಾದರಿಯ ಇಂಧನವನ್ನು ಬಳಕೆ ಮಾಡಿಕೊಳ್ಳುವ ಸೌಲಭ್ಯ ಒದಗಿಸುತ್ತಿದ್ದು, ಗ್ರಾಹಕರು ತಮ್ಮ ಇಷ್ಟಕ್ಕೆ ಅನುಗುಣವಾಗಿ ಹೊಸ ಕಾರುಗಳನ್ನು ಆಯ್ಕೆ ಮಾಡಬಹುದು.

ಸ್ಪಾಟ್ ಟೆಸ್ಟಿಂಗ್ ವೇಳೆ ಹ್ಯಾಚ್‌ಬ್ಯಾಕ್ ಪ್ರಿಯರನ್ನು ಸೆಳೆದ ಹೊಸ ಸ್ಯಾಂಟ್ರೊ

ಇನ್ನು ಪ್ರಯಾಣಿಕ ಸುರಕ್ಷತೆಗಾಗಿ ಎಬಿಎಸ್ ಮತ್ತು ಡ್ಯುಯಲ್ ಏರ್‌ಬ್ಯಾಗ್ ಸೌಲಭ್ಯಗಳನ್ನು ಸಹ ಆಯ್ಕೆ ರೂಪದಲ್ಲಿ ನೀಡಲಿದ್ದು, ಪಾರ್ಕಿಂಗ್ ಸೆನ್ಸಾರ್, ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಮತ್ತು ವಿಶೇಷ ವಿನ್ಯಾಸದ ಟಾಲಿ ಬಾಯ್ ಡಿಸೈನ್ ಹೊಂದಿರಲಿವೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಹ್ಯಾಚ್‌ಬ್ಯಾಕ್ ಪ್ರಿಯರನ್ನು ಸೆಳೆದ ಹೊಸ ಸ್ಯಾಂಟ್ರೊ

ಹೊಸ ಕಾರಿನ ಬೆಲೆಗಳು

ಸಿಎನ್‌ಜಿ ಎಂಜಿನ್ ಪ್ರೇರಿತ ಸ್ಯಾಂಟ್ರೊ ಮಾದರಿಯು ಸಾಮಾನ್ಯ ಮಾದರಿಗಿಂತ 50 ಸಾವಿರ ಹೆಚ್ಚುವರಿ ಬೆಲೆ ಪಡೆಯುವ ಸಾಧ್ಯತೆಗಳಿದ್ದು, ಒಟ್ಟಿನಲ್ಲಿ ಕಾರಿನ ಬೆಲೆಗಳು ರೂ. 3.50 ಲಕ್ಷದಿಂದ ರೂ. 5 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಹ್ಯಾಚ್‌ಬ್ಯಾಕ್ ಪ್ರಿಯರನ್ನು ಸೆಳೆದ ಹೊಸ ಸ್ಯಾಂಟ್ರೊ

ಡ್ರೈವ್ ಸ್ಪಾರ್ಕ್ ಅಭಿಪ್ರಾಯ

ಹೊಸತನಗಳೊಂದಿಗೆ ಮಾರುಕಟ್ಟೆ ಪ್ರವೇಶ ಪಡೆಯುತ್ತಿರುವ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ ಆವೃತ್ತಿಯು ಸಣ್ಣ ಕಾರುಗಳ ವಿಭಾಗದಲ್ಲಿ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿದ್ದು, ಮಾರುತಿ ಸುಜುಕಿ ಸೆಲೆರಿಯೊ, ಟಾಟಾ ಟಿಯಾಗೋ ಮತ್ತು ರೆನಾಲ್ಟ್ ಕ್ವಿಡ್‌ಗೆ ತೀವ್ರ ಸ್ಪರ್ಧಿಯಾಗಲಿದೆ.

Read more on hyundai hatchback
English summary
New 2018 Hyundai Santro Interiors Spied For The First Time.
Story first published: Monday, May 14, 2018, 20:07 [IST]

Latest Photos

ಕರ್ನಾಟಕ ವಿಧಾನಸಭೆ ಚುನಾವಣೆ 2018

ತಕ್ಷಣದ ಆಟೊ ಸುದ್ದಿಗಳನ್ನು ಡ್ರೈವ್ಸ್ಪಾರ್ಕ್ನಲ್ಲಿ ಪಡೆದುಕೊಳ್ಳಿ- Kannada DriveSpark