ಹೊಸ ಸೌಲಭ್ಯಗಳನ್ನು ಹೊತ್ತು ಬರುತ್ತಿರುವ ನ್ಯೂ ಸ್ಯಾಂಟ್ರೋ ವಿಶೇಷತೆ ಏನು?

ಇದೇ ವರ್ಷ ಅಕ್ಟೋಬರ್ 28ರಂದು ಬಿಡುಗಡೆಗೊಳ್ಳಲಿರುವ ಹ್ಯುಂಡೈ ಇಂಡಿಯಾ ನಿರ್ಮಾಣದ ನೆಕ್ಸ್ಟ್ ಜನರೇಷನ್ ಸ್ಯಾಂಟ್ರೊ ಕಾರುಗಳು ವಿನೂತನ ವಿನ್ಯಾಸಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡುವುದು ಖಚಿತವಾಗಿದ್ದು, ಇದೀಗ ಕಾರಿನ ವೆರಿಯೆಂಟ್ ಮತ್ತು ಸುರಕ್ಷಾ ಸೌಲಭ್ಯಗಳ ಕುರಿತಾದ ಮಹತ್ವದ ಮಾಹಿತಿ ಲಭ್ಯವಾಗಿದೆ.

ಹೊಸ ಸೌಲಭ್ಯಗಳನ್ನು ಹೊತ್ತು ಬರುತ್ತಿರುವ ನ್ಯೂ ಸ್ಯಾಂಟ್ರೋ ವಿಶೇಷತೆ ಏನು?

ನೆಕ್ಸ್ಟ್ ಜನರೇಷನ್ ಸ್ಯಾಂಟ್ರೊ ಕಾರುಗಳನ್ನು ಸದ್ಯ ಎಹೆಚ್2 ಎಂಬ ಕೋಡ್ ವಲ್ಡ್ ಹೆಸರಿನಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿರುವ ಹ್ಯುಂಡೈ ಸಂಸ್ಥೆಯು ಎಂಜಿನ್ ಕಾರ್ಯಕ್ಷಮತೆ ಬಗೆಗೆ ಹಲವು ಸುತ್ತಿನ ಸ್ಪಾಟ್ ಟೆಸ್ಟಿಂಗ್ ಕೈಗೊಂಡಿದ್ದು, ಹ್ಯುಂಡೈ ಸಂಸ್ಥೆಯು ತನ್ನ ಎಂಟ್ರಿ ಲೆವಲ್ ಇಯಾನ್ ಕಾರುಗಳನ್ನು ಸ್ಧಗಿತಗೊಳಿಸಿ ಸ್ಯಾಂಟ್ರೋ ಹೆಚ್ಚಿನ ಒತ್ತು ನೀಡಲು ಮುಂದಾಗಿದೆ.

ಹೊಸ ಸೌಲಭ್ಯಗಳನ್ನು ಹೊತ್ತು ಬರುತ್ತಿರುವ ನ್ಯೂ ಸ್ಯಾಂಟ್ರೋ ವಿಶೇಷತೆ ಏನು?

ಶಾರ್ಪ್ ಡಿಸೈನ್ ಹೊಂದಿರುವ ಹೊಸ ಸ್ಯಾಂಟ್ರೊ ಕಾರುಗಳು ವಿನೂತನವಾದ ಹೆಸರಿನೊಂದಿಗೆ ಮಾರುಕಟ್ಟೆಗೆ ಮರಳಿ ಬರಲಿದ್ದು, ಹೊಸ ಕಾರಿನ ಹೆಸರನ್ನು ಮುಂದಿನ ಅಕ್ಟೋಬರ್ 9ರಂದು ಹ್ಯುಂಡೈ ಸಂಸ್ಥೆಯು ಬಹಿರಂಗಗೊಳಿಸಲು ಈಗಾಗಲೇ ವೇದಿಕೆ ಸಿದ್ದತೆ ಮಾಡಿಕೊಳ್ಳುತ್ತಿದೆ.

ಹೊಸ ಸೌಲಭ್ಯಗಳನ್ನು ಹೊತ್ತು ಬರುತ್ತಿರುವ ನ್ಯೂ ಸ್ಯಾಂಟ್ರೋ ವಿಶೇಷತೆ ಏನು?

ಈಗಾಗಲೇ ಸ್ಟಾಟ್ ಟೆಸ್ಟಿಂಗ್ ವೇಳೆ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ ಉತ್ತಮ ಪ್ರದರ್ಶನ ತೊರುತ್ತಿದ್ದು, ಅಧಿಕ ಮೈಲೇಜ್ ಮತ್ತು ಅತ್ಯುತ್ತಮ ಬ್ರೇಕಿಂಗ್ ಸೌಲಭ್ಯಗಳು ಗ್ರಾಹಕರ ನಂಬಿಕೆಗೆ ವಿಶ್ವಾಸರ್ಹವಾಗಿವೆ ಎಂಬ ಮಾಹಿತಿ ದೊರೆತಿದೆ.

ಹೊಸ ಸೌಲಭ್ಯಗಳನ್ನು ಹೊತ್ತು ಬರುತ್ತಿರುವ ನ್ಯೂ ಸ್ಯಾಂಟ್ರೋ ವಿಶೇಷತೆ ಏನು?

ಹೊಸ ಸ್ಯಾಂಟ್ರೋ ಕಾರುಗಳು ಏರಾ, ಮ್ಯಾಗ್ಮಾ, ಸ್ಪೋರ್ಟ್ಜ್, ಸ್ಪೋರ್ಟ್ಜ್(o) ಮತ್ತು ಆಸ್ಟ್ರಾ ಎನ್ನುವ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿ ಲಭ್ಯವಾಗಲಿದ್ದು, ಪ್ರತಿ ಮಾದರಿಯಲ್ಲೂ ಗರಿಷ್ಠ ಮಟ್ಟದ ಸುರಕ್ಷಾ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಹ್ಯುಂಡೈ ಭರವಸೆ ನೀಡಿದೆ.

ಹೊಸ ಸೌಲಭ್ಯಗಳನ್ನು ಹೊತ್ತು ಬರುತ್ತಿರುವ ನ್ಯೂ ಸ್ಯಾಂಟ್ರೋ ವಿಶೇಷತೆ ಏನು?

ಪ್ರಯಾಣಿಕ ಸುರಕ್ಷತೆಗಾಗಿ ಎಬಿಎಸ್ ಮತ್ತು ಡ್ಯುಯಲ್ ಏರ್‌ಬ್ಯಾಗ್ ಸೌಲಭ್ಯಗಳನ್ನು ಸಹ ಆಯ್ಕೆ ರೂಪದಲ್ಲಿ ನೀಡಲಿದ್ದು, ಅಲಾಯ್ ಚಕ್ರಗಳು, ಪಾರ್ಕಿಂಗ್ ಸೆನ್ಸಾರ್, ಎಸಿ ವೆಂಟ್ಸ್, ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಮತ್ತು ವಿಶೇಷ ವಿನ್ಯಾಸದ ಟಾಲಿ ಬಾಯ್ ಡಿಸೈನ್ ಹೊಂದಿರಲಿವೆ.

ಹೊಸ ಸೌಲಭ್ಯಗಳನ್ನು ಹೊತ್ತು ಬರುತ್ತಿರುವ ನ್ಯೂ ಸ್ಯಾಂಟ್ರೋ ವಿಶೇಷತೆ ಏನು?

ಎಂಜಿನ್ ಸಾಮರ್ಥ್ಯ

ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ ಕಾರುಗಳು 1.1 ಲೀಟರ್ ಫೌರ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿರಲಿದ್ದು, 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಸೌಲಭ್ಯವು ಆಯ್ಕೆ ರೂಪದಲ್ಲಿ ದೊರೆಯಲಿವೆ.

ಹೊಸ ಸೌಲಭ್ಯಗಳನ್ನು ಹೊತ್ತು ಬರುತ್ತಿರುವ ನ್ಯೂ ಸ್ಯಾಂಟ್ರೋ ವಿಶೇಷತೆ ಏನು?

ಕಾರಿನ ಬೆಲೆಗಳು(ಅಂದಾಜು)

ಎಂಟ್ರಿ ಲೆವಲ್ ಕಾರುಗಳಲ್ಲೇ ವಿಶೇಷ ಕಾರು ಮಾದರಿಯಾಗಿ ಹೊಸ ಸಂಚಲನ ಸೃಷ್ಠಿಸಲಿರುವ ಸ್ಯಾಂಟ್ರೋ ಕಾರುಗಳು ಆರಂಭಿಕವಾಗಿ ರೂ. 3.50 ಲಕ್ಷದಿಂದ ಟಾಪ್ ಎಂಡ್ ಮಾದರಿಗಳಿಗೆ ರೂ. 4.20 ಲಕ್ಷ ಬೆಲೆ ಪಡೆದುಕೊಳ್ಳುವ ಸಾಧ್ಯತೆಗಳಿವೆ.

ಹೊಸ ಸೌಲಭ್ಯಗಳನ್ನು ಹೊತ್ತು ಬರುತ್ತಿರುವ ನ್ಯೂ ಸ್ಯಾಂಟ್ರೋ ವಿಶೇಷತೆ ಏನು?

ಇಯಾನ್ ಕಾರುಗಳಿಗೆ ಗುಡ್‌ ಬೈ!

ಎಂಟ್ರಿ ಲೆವಲ್ ಹ್ಯಾಚ್‌ಬ್ಯಾಕ್ ಮಾದರಿಯಾದ ಇಯಾನ್ ಕಾರುಗಳ ಮಾರಾಟದಲ್ಲಿ ಅಷ್ಟಾಗಿ ಪ್ರಗತಿ ಕಂಡುಬರದ ಹಿನ್ನೆಲೆಯಲ್ಲಿ ಇಯಾನ್ ಕಾರುಗಳ ಮಾರಾಟವನ್ನು ಕೈಬಿಡಲು ನಿರ್ಧರಿಸಿರುವ ಹ್ಯುಂಡೈ ಸಂಸ್ಥೆಯು, ನ್ಯೂ ಜನರೇಷನ್ ಸ್ಯಾಂಟ್ರೋ ಕಾರುಗಳ ಮೇಲಿನ ಹೆಚ್ಚು ಗಮನಹರಿಸಲಿದೆ.

ಹೊಸ ಸೌಲಭ್ಯಗಳನ್ನು ಹೊತ್ತು ಬರುತ್ತಿರುವ ನ್ಯೂ ಸ್ಯಾಂಟ್ರೋ ವಿಶೇಷತೆ ಏನು?

ಈ ಮೂಲಕ ಎಂಟ್ರಿ ಲೆವಲ್ ಕಾರುಗಳ ಮಾರಾಟದಲ್ಲಿ ಮಾರುತಿ ಸುಜುಕಿ ಸಂಸ್ಥೆಗೆ ಪೈಪೋಟಿ ನೀಡಲಿರುವ ಹ್ಯುಂಡೈ ಸಂಸ್ಥೆಯು ಆಲ್ಟೊ 800, ಸೆಲೆರಿಯೊ, ಟಾಟಾ ಮೋಟಾರ್ಸ್ ನಿರ್ಮಾಣದ ಟಿಯಾಗೊ ಕಾರುಗಳ ಮಾರಾಟಕ್ಕೆ ಟಕ್ಕರ್ ನೀಡಲಿದೆ.

ಹೊಸ ಸೌಲಭ್ಯಗಳನ್ನು ಹೊತ್ತು ಬರುತ್ತಿರುವ ನ್ಯೂ ಸ್ಯಾಂಟ್ರೋ ವಿಶೇಷತೆ ಏನು?

ಜೊತೆಗೆ ಎಂಟ್ರಿ ಲೆವಲ್ ಕಾರು ಮಾದರಿಯಾಗಿರುವ ಸ್ಯಾಂಟ್ರೋಗಳಲ್ಲಿ ಗರಿಷ್ಠ ಮಟ್ಟದ ಸುರಕ್ಷಾ ಸೌಲಭ್ಯಗಳನ್ನು ಪರಿಚಯಿಸಲಿರುವ ಹ್ಯುಂಡೈ ಸಂಸ್ಥೆಯು ದೇಶದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗುತ್ತಿದ್ದು, ಅಕ್ಟೋಬರ್ 9ರಂದು ಹೊಸ ಕಾರಿನ ಮತ್ತಷ್ಟು ಮಾಹಿತಿಗಳು ಬಹಿರಂಗಗೊಳ್ಳಲಿವೆ.

More from DriveSpark

ಎಂಟ್ರಿ ಲೆವಲ್ ಕಾರು ವಿಭಾಗದಲ್ಲಿ ಹೊಸದಾಗಿ ಎಂಟ್ರಿ ನೀಡಿರುವ ಟಾಟಾ ಟಿಯಾಗೊ ಎನ್‌ಜಿಆರ್ ಎಡಿಷನ್ ಫೋಟೋ ಗ್ಯಾಲರಿ..

Article Published On: Wednesday, September 26, 2018, 14:17 [IST]
English summary
New Hyundai Santro Launch Next Month — Technical Details Revealed.
Read more on hyundai santro new car
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+