ಹೊಸ ಸ್ಯಾಂಟ್ರೋ ಕಾರು ಖರೀದಿಗೆ ಬುಕ್ಕಿಂಗ್ ಆರಂಭ- ಬೆಲೆ ಎಷ್ಟಿರಲಿದೆ ಗೊತ್ತಾ?

ದೇಶದ ಜನಪ್ರಿಯ ಕಾರು ಮಾದರಿಗಳಲ್ಲಿ ಒಂದಾಗಿರುವ ಸ್ಯಾಂಟ್ರೋ ಆವೃತ್ತಿಯು ಆಟೋ ಉದ್ಯಮದಲ್ಲಿ ಹಲವು ವಿಶೇಷತೆಗಳಿಗೆ ಕಾರಣವಾಗಿರುವುದಲ್ಲದೇ ಕಾರು ಪ್ರಿಯರ ಹಾಟ್ ಫೆವರಿಟ್ ಆಗಿರುವುದು ಬಹುತೇಕರಿಗೆ ಗೊತ್ತಿರುವ ಗೊತ್ತಿರುವ ವಿಚಾರ. ಇದೀಗ ಮತ್ತೊಮ್ಮೆ ಸಂಚಲನ ಸೃಷ್ಠಿಸಲು ಸಜ್ಜಾಗಿರುವ ಸ್ಯಾಂಟ್ರೋ ಕಾರು ನೆಕ್ಸ್ಟ್ ಜನರೇಷನ್ ವೈಶಿಷ್ಟ್ಯತೆಗಳನ್ನು ಹೊತ್ತು ಬರುತ್ತಿದೆ.

ಹೊಸ ಸ್ಯಾಂಟ್ರೋ ಕಾರು ಖರೀದಿಗೆ ಬುಕ್ಕಿಂಗ್ ಆರಂಭ- ಬೆಲೆ ಎಷ್ಟಿರಲಿದೆ ಗೊತ್ತಾ?

ಸ್ಯಾಂಟ್ರೋ ಕಾರುಗಳು ಬಿಡುಗಡೆಗೊಂಡ 20 ವರ್ಷವಾದ್ರು ಇನ್ನು ಕೂಡಾ ಬೇಡಿಕೆಯಲ್ಲಿ ಮುಂಚೂಣಿಯಲ್ಲಿರುವ ಏಕೈಕ ಕಾರು ಮಾದರಿಯಾಗಿದ್ದು, ಇದೀಗ ಮಹತ್ತರ ಬದಲಾವಣೆಯೊಂದಿಗೆ ಮರಳಿ ಮಾರುಕಟ್ಟೆಗೆ ಲಗ್ಗೆಯಿಡುತ್ತಿದೆ. ಹೀಗಾಗಿ ಬಿಡುಗಡೆಯ ಹೊಸ್ತಿನಲ್ಲಿರುವ ಸ್ಯಾಂಟ್ರೋ ಕಾರುಗಳ ಖರೀದಿಗೆ ಆನ್‌ಲೈನ್ ಬುಕ್ಕಿಂಗ್ ಆರಂಭಿಸಲಾಗಿದೆ.

ಹೊಸ ಸ್ಯಾಂಟ್ರೋ ಕಾರು ಖರೀದಿಗೆ ಬುಕ್ಕಿಂಗ್ ಆರಂಭ- ಬೆಲೆ ಎಷ್ಟಿರಲಿದೆ ಗೊತ್ತಾ?

ಹ್ಯುಂಡೈ ಸಂಸ್ಥೆಯು ನೆಕ್ಸ್ಟ್ ಜನರೇಷನ್ ಸ್ಯಾಂಟ್ರೋ ಕಾರುಗಳ ಬಿಡುಗಡೆಗಾಗಿ ಬೃಹತ್ ಯೋಜನೆ ರೂಪಿಸಿದ್ದು, ಇದೇ ತಿಂಗಳು 28ರಂದು ಹೊಸ ಕಾರನ್ನು ಬಿಡುಗಡೆಗೊಳಿಸಲು ಸಹ ವೇದಿಕೆ ಸಿದ್ದಮಾಡಿಕೊಳ್ಳುತ್ತಿದೆ. ಹೀಗಾಗಿ ಹೊಸ ಕಾರಿನ ಬಗೆಗೆ ಇದ್ದ ಕುತೂಹಲಕ್ಕೆ ನಿನ್ನೆಯಷ್ಟೆ ತೆರೆ ಎಳೆದಿದ್ದು, ಕಾರಿನ ಬೆಲೆಗಳ ಹೊರತಾಗಿ ಕಾರಿನಲ್ಲಿರುವ ತಾಂತ್ರಿಕ ಸೌಲಭ್ಯಗಳ ಬಹುತೇಕ ಮಾಹಿತಿಯನ್ನು ಹ್ಯುಂಡೈ ಸಂಸ್ಥೆಯು ಬಿಚ್ಚಿಟ್ಟಿದೆ.

ಹೊಸ ಸ್ಯಾಂಟ್ರೋ ಕಾರು ಖರೀದಿಗೆ ಬುಕ್ಕಿಂಗ್ ಆರಂಭ- ಬೆಲೆ ಎಷ್ಟಿರಲಿದೆ ಗೊತ್ತಾ?

ಹೊಸ ಕಾರಿನ ಫಸ್ಟ್ ಲುಕ್ ನೋಡಿದ ಸಾವಿರಾರು ಗ್ರಾಹಕರು ಈಗಾಗಲೇ ಹೊಸ ಕಾರು ಬಿಡುಗಡೆಗೆ ಮುನ್ನವೇ ಖರೀದಿಗಾಗಿ ಮುಗಿಬಿದ್ದಿದ್ದು, ರೂ.11 ಸಾವಿರ ಮುಂಗಡದೊಂದಿಗೆ ಇಂದಿನಿಂದ ಅಧಿಕೃತ ಬುಕ್ಕಿಂಗ್ ಸ್ವಿಕರಿಸಲಾಗುತ್ತಿದೆ.

ಹೊಸ ಸ್ಯಾಂಟ್ರೋ ಕಾರು ಖರೀದಿಗೆ ಬುಕ್ಕಿಂಗ್ ಆರಂಭ- ಬೆಲೆ ಎಷ್ಟಿರಲಿದೆ ಗೊತ್ತಾ?

ಹೊಸ ಸ್ಯಾಂಟ್ರೋ ಕಾರು ಖರೀದಿಗಾಗಿ ಗ್ರಾಹಕರಲ್ಲೇ ಪೈಪೋಟಿ ಶುರುವಾಗಿದ್ದು, ದೀಪಾವಳಿ ಹಬ್ಬಕ್ಕೆ ಹೊಸ ಕಾರು ಖರೀದಿಸುವ ಸಲುವಾಗಿ ಈಗಾಗಲೇ 25 ಸಾವಿರಕ್ಕೂ ಅಧಿಕ ಗ್ರಾಹಕರು ಮುಂಗಡ ಪಾವತಿಸಿ ಕಾರು ಖರೀದಿಗಾಗಿ ಎದುರು ನೋಡುತ್ತಿದ್ದಾರೆ.

ಹೊಸ ಸ್ಯಾಂಟ್ರೋ ಕಾರು ಖರೀದಿಗೆ ಬುಕ್ಕಿಂಗ್ ಆರಂಭ- ಬೆಲೆ ಎಷ್ಟಿರಲಿದೆ ಗೊತ್ತಾ?

ಇನ್ನು ಹ್ಯುಂಡೈ ಸಂಸ್ಥೆಯು ತನ್ನ ಎಂಟ್ರಿ ಲೆವಲ್ ಇಯಾನ್ ಕಾರುಗಳನ್ನು ಸ್ಧಗಿತಗೊಳಿಸಿ ಹೊಸ ಸ್ಯಾಂಟ್ರೋ ಕಾರುಗಳ ಮೇಲೆ ಹೆಚ್ಚಿನ ಒತ್ತು ನೀಡಲು ಮುಂದಾಗಿದ್ದು, ವ್ಯಯಕ್ತಿಕ ಕಾರು ಬಳಕೆದಾರರಿಗೆ ಬೇಕಿರುವ ಎಲ್ಲಾ ಅಗತ್ಯ ಸೌಲಭ್ಯಗಳನ್ನು ನೀಡುವ ಮೂಲಕ ಎಂಟ್ರಿ ಲೆವಲ್ ಕಾರುಗಳಲ್ಲಿ ಹೊಸ ಸಂಚಲನ ಸೃಷ್ಠಿಸಿದೆ.

ಹೊಸ ಸ್ಯಾಂಟ್ರೋ ಕಾರು ಖರೀದಿಗೆ ಬುಕ್ಕಿಂಗ್ ಆರಂಭ- ಬೆಲೆ ಎಷ್ಟಿರಲಿದೆ ಗೊತ್ತಾ?

ಶಾರ್ಪ್ ಡಿಸೈನ್ ಹೊಂದಿರುವ ಹೊಸ ಸ್ಯಾಂಟ್ರೊ ಕಾರುಗಳು ಈಗಾಗಲೇ ಸ್ಟಾಟ್ ಟೆಸ್ಟಿಂಗ್ ವೇಳೆ ಅತ್ಯುತ್ತಮ ಮಾದರಿಯಲ್ಲಿ ಎಂಜಿನ್ ಕಾರ್ಯಕ್ಷಮತೆ ಪ್ರದರ್ಶನ ತೋರಿದ್ದು, ಅಧಿಕ ಮೈಲೇಜ್ ಮತ್ತು ಅತ್ಯುತ್ತಮ ಬ್ರೇಕಿಂಗ್ ಸೌಲಭ್ಯಗಳು ಗ್ರಾಹಕರ ನಂಬಿಕೆಗೆ ವಿಶ್ವಾಸರ್ಹವಾಗಿವೆ.

MOST READ: ಪ್ರತಿ ಚಾರ್ಜ್‌ಗೆ 250 ಕಿ.ಮಿ ಮೈಲೇಜ್ ನೀಡಬಲ್ಲ ಕ್ವಿಡ್ ಎಲೆಕ್ಟ್ರಿಕ್ ಕಾರು ಪ್ರದರ್ಶಿಸಿದ ರೆನಾಲ್ಟ್

ಹೊಸ ಸ್ಯಾಂಟ್ರೋ ಕಾರು ಖರೀದಿಗೆ ಬುಕ್ಕಿಂಗ್ ಆರಂಭ- ಬೆಲೆ ಎಷ್ಟಿರಲಿದೆ ಗೊತ್ತಾ?

ಹಳೆಯ ಮಾದರಿಯ ಸ್ಯಾಂಟ್ರೋ ಕಾರುಗಳಿಗೂ ಮತ್ತು ಹೊಸ ಸ್ಯಾಂಟ್ರೋ‌ ಕಾರುಗಳಿಗೂ ಸಾಕಷ್ಟು ಭಿನ್ನತೆಯಿದ್ದು, ಹೊಸ ಕಾರಿನ ಹೊರ ಮತ್ತು ಒಳ ಭಾಗದ ಡಿಸೈನ್‌ನಲ್ಲಿ ಸಾಕಷ್ಟು ಬದಲಾವಣೆ ಕಂಡಿರುವ ನೆಕ್ಸ್ಟ್ ಜನರೇಷನ್ ಸ್ಯಾಂಟ್ರೋ ಕಾರುಗಳು ಹೊಸ ಡಿಸೈನ್ ಪ್ರೇರಿತ ಬ್ಲ್ಯಾಕ್ ಗ್ರಿಲ್, ಫಾಗ್ ಲ್ಯಾಂಪ್, ಬ್ಲ್ಯಾಕ್ ಪ್ಲ್ಯಾಸ್ಟಿಕ್ ಕ್ಲ್ಯಾಡಿಂಗ್, ಸ್ಪೋರ್ಟಿ ಬಂಪರ್ ಪಡೆದುಕೊಂಡಿದೆ.

ಹೊಸ ಸ್ಯಾಂಟ್ರೋ ಕಾರು ಖರೀದಿಗೆ ಬುಕ್ಕಿಂಗ್ ಆರಂಭ- ಬೆಲೆ ಎಷ್ಟಿರಲಿದೆ ಗೊತ್ತಾ?

ಹೊಸ ಸ್ಯಾಂಟ್ರೋ ಕಾರು ರೆನಾಲ್ಟ್ ಕ್ವಿಡ್ ಮತ್ತು ಮಾರುತಿ ಸುಜುಕಿ ಸೆಲೆರಿಯೊ ಕಾರುಗಳಿಂತಲೂ ಉತ್ತಮ ವೀಲ್ಹ್ ಬೆಸ್ ಹೊಂದಿದ್ದು, 3610ಎಂಎಂ ಉದ್ದ, 1645ಎಂಎಂ ಅಗಲ, 1560ಎಂಎಂ ಎತ್ತರ ಮತ್ತು 160ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಪಡೆದುಕೊಂಡಿದೆ.

ಹೊಸ ಸ್ಯಾಂಟ್ರೋ ಕಾರು ಖರೀದಿಗೆ ಬುಕ್ಕಿಂಗ್ ಆರಂಭ- ಬೆಲೆ ಎಷ್ಟಿರಲಿದೆ ಗೊತ್ತಾ?

ಜೊತೆಗೆ ಹೊಸ ಸ್ಯಾಂಟ್ರೋ ಕಾರುಗಳು ಡಿ ಲೈಟ್, ಏರಾ, ಮ್ಯಾಗ್ಮಾ, ಸ್ಪೋರ್ಟ್ಜ್, ಸ್ಪೋರ್ಟ್ಜ್(o) ಮತ್ತು ಆಸ್ಟ್ರಾ ಎನ್ನುವ ಆರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಾಗಲಿದ್ದು, ಪ್ರತಿ ಮಾದರಿಯಲ್ಲೂ ಗರಿಷ್ಠ ಮಟ್ಟದ ಸುರಕ್ಷಾ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಹ್ಯುಂಡೈ ಭರವಸೆ ನೀಡಿದೆ.

ಹೊಸ ಸ್ಯಾಂಟ್ರೋ ಕಾರು ಖರೀದಿಗೆ ಬುಕ್ಕಿಂಗ್ ಆರಂಭ- ಬೆಲೆ ಎಷ್ಟಿರಲಿದೆ ಗೊತ್ತಾ?

ಪ್ರಯಾಣಿಕ ಸುರಕ್ಷತೆಗಾಗಿ ಎಬಿಎಸ್ ಮತ್ತು ಡ್ಯುಯಲ್ ಏರ್‌ಬ್ಯಾಗ್ ಸೌಲಭ್ಯಗಳನ್ನು ಸಹ ಆಯ್ಕೆ ರೂಪದಲ್ಲಿ ನೀಡಲಿದ್ದು, ಅಲಾಯ್ ಚಕ್ರಗಳು, ಪಾರ್ಕಿಂಗ್ ಸೆನ್ಸಾರ್, ಎಸಿ ವೆಂಟ್ಸ್, ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಮತ್ತು ವಿಶೇಷ ವಿನ್ಯಾಸದ ಟಾಲಿ ಬಾಯ್ ಡಿಸೈನ್ ಹೊಂದಿರಲಿವೆ.

ಹೊಸ ಸ್ಯಾಂಟ್ರೋ ಕಾರು ಖರೀದಿಗೆ ಬುಕ್ಕಿಂಗ್ ಆರಂಭ- ಬೆಲೆ ಎಷ್ಟಿರಲಿದೆ ಗೊತ್ತಾ?

ಎಂಜಿನ್ ಸಾಮರ್ಥ್ಯ

ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ ಕಾರುಗಳು 1.1-ಲೀಟರ್(1,100 ಸಿಸಿ) ಫೌರ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿರಲಿದ್ದು, 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಸೌಲಭ್ಯವು ಆಯ್ಕೆ ರೂಪದಲ್ಲಿ ದೊರೆಯಲಿವೆ.

ಹೊಸ ಸ್ಯಾಂಟ್ರೋ ಕಾರು ಖರೀದಿಗೆ ಬುಕ್ಕಿಂಗ್ ಆರಂಭ- ಬೆಲೆ ಎಷ್ಟಿರಲಿದೆ ಗೊತ್ತಾ?

ಇದಲ್ಲದೇ ಹೊಸ ಸ್ಯಾಂಟ್ರೋ ಕಾರುಗಳಲ್ಲಿ ಮ್ಯಾಗ್ಮಾ ಮತ್ತು ಸ್ಪೋರ್ಟ್ಜ್ ವೆರಿಯೆಂಟ್‌ಗಳಲ್ಲಿ ಸಿಎನ್‌ಜಿ ಎಂಜಿನ್ ಲಭ್ಯವಿರಲಿದ್ದು, ಇದು ಅತ್ಯುತ್ತಮ ಮೈಲೇಜ್ ನೀಡಬಲ್ಲ ಕಾರು ಮಾದರಿಯಾಗಿ ಮತ್ತಷ್ಟು ಜನಪ್ರಿಯತೆ ಹೊಂದಲಿದೆ.

MOST READ: ಬೆಂಗಳೂರಿನಲ್ಲಿ ಮೊದಲ ಬಾರಿಗೆ ತನ್ನ ಹೊಸ ಕಾರುಗಳನ್ನು ಪ್ರದರ್ಶನ ಮಾಡಿದ ಕಿಯಾ

ಹೊಸ ಸ್ಯಾಂಟ್ರೋ ಕಾರು ಖರೀದಿಗೆ ಬುಕ್ಕಿಂಗ್ ಆರಂಭ- ಬೆಲೆ ಎಷ್ಟಿರಲಿದೆ ಗೊತ್ತಾ?

ಲಭ್ಯವಿರುವ ಬಣ್ಣಗಳು

ಗ್ರೀನ್, ಫೈರ್ಲಿ ರೆಡ್, ಇಂಪಿರಿಯರ್ ಬ್ಲಿಜ್, ಮರಿಯನ್ ಬ್ಲ್ಯೂ, ಸ್ಟಾರ್ ಡಸ್ಟ್, ಟೈಫೂನ್ ಸಿಲ್ವರ್ ಮತ್ತು ಪೊಲಾರ್ ವೈಟ್ ಬಣ್ಣಗಳಲ್ಲಿ ಹೊಸ ಸ್ಯಾಂಟ್ರೋ ಲಭ್ಯವಾಗಲಿದೆ.

ಹೊಸ ಸ್ಯಾಂಟ್ರೋ ಕಾರು ಖರೀದಿಗೆ ಬುಕ್ಕಿಂಗ್ ಆರಂಭ- ಬೆಲೆ ಎಷ್ಟಿರಲಿದೆ ಗೊತ್ತಾ?

ಕಾರಿನ ಬೆಲೆಗಳು(ಅಂದಾಜು)

ಎಂಟ್ರಿ ಲೆವಲ್ ಕಾರುಗಳಲ್ಲೇ ವಿಶೇಷ ಕಾರು ಮಾದರಿಯಾಗಿ ಹೊಸ ಸಂಚಲನ ಸೃಷ್ಠಿಸಲಿರುವ ಸ್ಯಾಂಟ್ರೋ ಕಾರುಗಳು ಆರಂಭಿಕವಾಗಿ ರೂ. 3.60 ಲಕ್ಷದಿಂದ ಟಾಪ್ ಎಂಡ್ ಮಾದರಿಗಳಿಗೆ ರೂ. 4.30 ಲಕ್ಷ ಬೆಲೆ ಪಡೆದುಕೊಳ್ಳುವ ಸಾಧ್ಯತೆಗಳಿವೆ.

ಹೊಸ ಸ್ಯಾಂಟ್ರೋ ಕಾರು ಖರೀದಿಗೆ ಬುಕ್ಕಿಂಗ್ ಆರಂಭ- ಬೆಲೆ ಎಷ್ಟಿರಲಿದೆ ಗೊತ್ತಾ?

ಈ ಮೂಲಕ ಎಂಟ್ರಿ ಲೆವಲ್ ಕಾರುಗಳ ಮಾರಾಟದಲ್ಲಿ ಮಾರುತಿ ಸುಜುಕಿ ಸಂಸ್ಥೆಗೆ ಪೈಪೋಟಿ ನೀಡಲಿರುವ ಹ್ಯುಂಡೈ ಸಂಸ್ಥೆಯು ಮಾರುತಿ ಆಲ್ಟೊ 800, ಸೆಲೆರಿಯೊ ಮತ್ತು ಟಾಟಾ ಮೋಟಾರ್ಸ್ ನಿರ್ಮಾಣದ ಟಿಯಾಗೊ ಕಾರುಗಳ ಮಾರಾಟಕ್ಕೆ ಟಕ್ಕರ್ ನೀಡಲಿದೆ.

Most Read Articles

ಹ್ಯುಂಡೈ ಸ್ಯಾಂಟ್ರೋ ಕಾರುಗಳ ಫೋಟೋ ಗ್ಯಾಲರಿ..!

Kannada
Read more on hyundai santro new car
English summary
New Hyundai Santro 2018 Online Bookings Open — Variant Details Revealed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X