ಈ ವರ್ಷದ ಬೆಸ್ಟ್ ಹ್ಯಾಚ್‍ಬ್ಯಾಕ್ ಕಾರ್ ಆಗಲಿದೆಯೆ ಮುಂದಿನ ತಲೆಮಾರಿನ ಹ್ಯುಂಡೈ ಸ್ಯಾಂಟ್ರೋ ಕಾರು.?
ಕೊರಿಯನ್ ಮೂಲದ ವಾಹನ ತಯಾರಕ ಸಂಸ್ಥೆಯಾದ ಹ್ಯುಂಡೈ ಈ ಹಿಂದೆಯೆ ತಮ್ಮ ಹ್ಯಾಚ್‍ಬ್ಯಾಕ್ ಕಾರಾದ ಸ್ಯಾಂಟ್ರೋವಿನಿಂದ ಸಾಕಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿದೆ.
ಕೊರಿಯನ್ ಮೂಲದ ವಾಹನ ತಯಾರಕ ಸಂಸ್ಥೆಯಾದ ಹ್ಯುಂಡೈ ಈ ಹಿಂದೆಯೆ ತಮ್ಮ ಹ್ಯಾಚ್‍ಬ್ಯಾಕ್ ಕಾರಾದ ಸ್ಯಾಂಟ್ರೋವಿನಿಂದ ಸಾಕಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿದ್ದು, ಈ ನಿಟ್ಟಿನಲ್ಲಿ ಮುಂದಿನ ತಲೆಮಾರಿನ ಸ್ಯಾಂಟ್ರೋ ಕಾರನ್ನು ಇದೇ ವರ್ಷದ ಆಗಸ್ಟ್ ತಿಂಗಳಿನಲ್ಲಿ ಬಿಡುಗಡೆಗೊಳಿಸಲು ಯೋಜಿಸುತ್ತಿದೆ.

ಹೊಸದಾಗಿ ಬರಲಿರುವ ಸ್ಯಾಂಟ್ರೋ ಕಾರುಗಳು ಈಗಾಗಲೆ ಹಲವಾರು ಬಾರಿ ಭಾರತೀಯ ರಸ್ಥೆಗಳಲ್ಲಿ ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡಿದ್ದು, ಬಿಡುಗಡೆಗು ಮುನ್ನವೆ ಮತ್ತೊಮ್ಮೆ ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡು ಗ್ರಾಹಕರಲ್ಲಿ ಹೆಚ್ಚು ನಿರೀಕ್ಷೆಯನ್ನು ಹುಟ್ಟುಹಾಕಿದೆ.

ಸ್ಟಾಟ್ ಟೆಸ್ಟಿಂಗ್ ವೇಳೆ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ ಉತ್ತಮ ಪ್ರದರ್ಶನ ತೊರುತ್ತಿದ್ದು, ಅಧಿಕ ಮೈಲೇಜ್ ಮತ್ತು ಅತ್ಯುತ್ತಮ ಬ್ರೇಕಿಂಗ್ ಸೌಲಭ್ಯಗಳು ಗ್ರಾಹಕರ ನಂಬಿಕೆಗೆ ವಿಶ್ವಾಸರ್ಹವಾಗಿವೆ ಎಂಬ ಮಾಹಿತಿ ದೊರೆತಿದೆ.

ಮಧ್ಯಮ ವರ್ಗಗಳ ಸ್ನೇಹಿಯಾಗಿರುವ ಉತ್ತಮ ಹ್ಯಾಚ್‌ಬ್ಯಾಕ್ ಕಾರುಗಳ ಪಟ್ಟಿಯಲ್ಲಿ ಸ್ಥಾನ ಪಡೆಯಲು ಶಕ್ತವಾಗಿರುವ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ, 800 ಸಿಸಿ ಪೆಟ್ರೋಲ್ ಎಂಜಿನ್ ಇಲ್ಲವಾದ್ರೆ 1.0-ಲೀಟರ್ ಎಂಜಿನ್ ಪಡೆದುಕೊಳ್ಳಲಿದೆ. ಆದರೇ ಹೊಸ ಕಾರುಗಳಲ್ಲಿ ಡಿಸೇಲ್ ಆವೃತ್ತಿಯನ್ನು ಪರಿಚಯಿಸದಿರಲು ಹ್ಯುಂಡೈ ನಿರ್ಧರಿಸಿದೆ.

ಇದರ ಜೊತೆಗೆ ಎಎಂಟಿ(ಆಟೋ ಮ್ಯಾಟಿಕ್ ಗೇರ್‌ಬಾಕ್ಸ್) ಕೂಡಾ ಹೊಂದುವ ಸಾಧ್ಯತೆಗಳಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು ಐ10 ಮಾದರಿಯಲ್ಲೇ ಒಳ ವಿನ್ಯಾಸದ ಸೌಲಭ್ಯಗಳನ್ನು ಪಡೆಯಲಿವೆ ಎನ್ನಲಾಗುತ್ತಿದೆ.

ಹೊಸ ಹ್ಯುಂಡೈ ಸ್ಯಾಂಟ್ರೊ ಕಾರುಗಳು ಗಾತ್ರದಲ್ಲಿ ಐ10 ಕಾರಿಗಿಂತ ಹೆಚ್ಚಿರಲಿದ್ದು, ಅಗಲವಾದ ಏರ್ ಕ್ಯಾಬಿನ್ ಅನ್ನು ಪಡೆದಿರಲಿದೆ. ಹುಂಡೈ ಸಂಸ್ಥೆಯ ಎಂಟ್ರಿ ಲೆವೆಲ್ ಕಾರಾಗಿ ಆಗಿ ಮಾರುಕಟ್ಟೆಗೆ ಕಾಲಿಡಲಿರುವ ಮುಂದಿನ ತಲೆಮಾರಿನ ಸ್ಯಾಂಟ್ರೊ ಕಾರು ದೆಹಲಿಯ ಎಕ್ಸ್ ಶೋರಂ ಪ್ರಕಾರ 3 ಲಕ್ಷದಿಂದ ಆರಂಭಿಕ ಬೆಲೆಯನ್ನು ಪಡೆದುಕೊಂಡಿರಲಿವೆ ಎನ್ನಲಾಗಿದೆ.

ಜೊತೆಗೆ ಪ್ರಯಾಣಿಕ ಸುರಕ್ಷತೆಗಾಗಿ ಎಬಿಎಸ್ ಮತ್ತು ಡ್ಯುಯಲ್ ಏರ್‌ಬ್ಯಾಗ್ ಸೌಲಭ್ಯಗಳನ್ನು ಸಹ ಆಯ್ಕೆ ರೂಪದಲ್ಲಿ ನೀಡಲಿದ್ದು, ಪಾರ್ಕಿಂಗ್ ಸೆನ್ಸಾರ್, ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಮತ್ತು ವಿಶೇಷ ವಿನ್ಯಾಸದ ಟಾಲಿ ಬಾಯ್ ಡಿಸೈನ್ ಹೊಂದಿರಲಿವೆ.

ಡ್ರೈವ್ ಸ್ಪಾರ್ಕ್ ಅಭಿಪ್ರಾಯ
ಹೊಸತನಗಳೊಂದಿಗೆ ಮಾರುಕಟ್ಟೆ ಪ್ರವೇಶ ಪಡೆಯುತ್ತಿರುವ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ ಆವೃತ್ತಿಯು ಸಣ್ಣ ಕಾರುಗಳ ವಿಭಾಗದಲ್ಲಿ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿದ್ದು, ಮಾರುತಿ ಸುಜುಕಿ ಸೆಲೆರಿಯೊ, ಟಾಟಾ ಟಿಯಾಗೋ ಮತ್ತು ರೆನಾಲ್ಟ್ ಕ್ವಿಡ್‌ಗೆ ತೀವ್ರ ಸ್ಪರ್ಧಿಯಾಗಲಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವಿಭಾಗದಲ್ಲಿನ ಟಾಪ್ ಸ್ಟೋರಿಗಳು:
ಅಪ್ರಾಪ್ತರ ಕೈಗೆ ಬೈಕ್ ಕೊಟ್ಟಿದ್ದಕ್ಕೆ ಜೈಲು ಪಾಲಾದ 26 ಪೋಷಕರು
ಮರು ನೋಂದಣಿಗಾಗಿ ಬರೋಬ್ಬರಿ 60 ಲಕ್ಷ ತೆರಿಗೆ ಪಾವತಿಸಿದ ಬೆಂಟ್ಲಿ ಕಾರು ಮಾಲೀಕ..
ಹೆಲ್ಮೆಟ್ ಹಾಕದ ಬೈಕ್ ಸವಾರನ ಮೇಲೆ ಶೂ ಎಸೆದ ಟ್ರಾಫಿಕ್ ಪೊಲೀಸ್....
ಕಾರ್ ಡ್ರೈವಿಂಗ್ ವೇಳೆ ಈ ತಪ್ಪುಗಳನ್ನು ಮಾಡಲೇಬೇಡಿ..
ರಾತ್ರಿ ವೇಳೆ ಡ್ರೈವಿಂಗ್ ಮಾಡುವ ಮುನ್ನ ಈ ಅಮೂಲ್ಯ ಟಿಪ್ಸ್‌ಗಳನ್ನು ತಪ್ಪದೇ ಪಾಲಿಸಿ...


Click it and Unblock the Notifications








