ಬಿಡುಗಡೆಯಾಗಲಿರುವ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ ಹೇಗಿರಲಿದೆ?
ಇದೇ ವರ್ಷ ದೀಪಾವಳಿ ಹೊತ್ತಿಗೆ ಬಿಡುಗಡೆಗೊಳ್ಳಲಿರುವ ಹ್ಯುಂಡೈ ಇಂಡಿಯಾ ನಿರ್ಮಾಣದ ನೆಕ್ಸ್ಟ್ ಜನರೇಷನ್ ಸ್ಯಾಂಟ್ರೋ ಕಾರು ಆವೃತ್ತಿಯನ್ನು ಸ್ಪಾಟ್ ಟೆಸ್ಟಿಂಗ್ ನಡೆಸಲಾಗುತ್ತಿದ್ದು, ಹೊಸ ಕಾರಿನ ತಾಂತ್ರಿಕ ಅಂಶಗಳು ಇಲ್ಲಿವೆ.
ಇದೇ ವರ್ಷ ದೀಪಾವಳಿ ಹೊತ್ತಿಗೆ ಬಿಡುಗಡೆಗೊಳ್ಳಲಿರುವ ಹ್ಯುಂಡೈ ಇಂಡಿಯಾ ನಿರ್ಮಾಣದ ನೆಕ್ಸ್ಟ್ ಜನರೇಷನ್ ಸ್ಯಾಂಟ್ರೊ ಕಾರು ಆವೃತ್ತಿಯನ್ನು ಸ್ಪಾಟ್ ಟೆಸ್ಟಿಂಗ್ ನಡೆಸಲಾಗುತ್ತಿದ್ದು, ಹೊಸ ಕಾರಿನ ತಾಂತ್ರಿಕ ಅಂಶಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

ನೆಕ್ಸ್ಟ್ ಜನರೇಷನ್ ಸ್ಯಾಂಟ್ರೊ ಕಾರು ಆವೃತ್ತಿಯನ್ನು ಎಹೆಚ್2 ಎಂಬ ಕೋಡ್ ವಲ್ಡ್ ಹೆಸರಿನಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿರುವ ಹ್ಯುಂಡೈ ಸಂಸ್ಥೆಯು, ಚೆನ್ನೈ ಹೊರವಲಯದಲ್ಲಿ ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಬಗೆಗೆ ಹಲವು ಸುತ್ತಿನ ಸ್ಪಾಟ್ ಟೆಸ್ಟಿಂಗ್ ಕೈಗೊಂಡಿದೆ.

ಸ್ಟಾಟ್ ಟೆಸ್ಟಿಂಗ್ ವೇಳೆ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ ಉತ್ತಮ ಪ್ರದರ್ಶನ ತೊರುತ್ತಿದ್ದು, ಅಧಿಕ ಮೈಲೇಜ್ ಮತ್ತು ಅತ್ಯುತ್ತಮ ಬ್ರೇಕಿಂಗ್ ಸೌಲಭ್ಯಗಳು ಗ್ರಾಹಕರ ನಂಬಿಕೆಗೆ ವಿಶ್ವಾಸರ್ಹವಾಗಿವೆ ಎಂಬ ಮಾಹಿತಿ ದೊರೆತಿದೆ.

ಆದ್ರೆ ಸ್ಪಾಟ್ ಟೆಸ್ಟಿಂಗ್‌ನಲ್ಲಿ ಕಾಣಿಸಿಕೊಂಡ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ ಮೇಲೆ ಭಾರೀ ಪ್ರಮಾಣದ ಮುಸುಕು ಹಾಕಿದ್ದರ ಪರಿಣಾಮ ವಿನ್ಯಾಸಗಳ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಸಾಧ್ಯವಾಗಿಲ್ಲ.

ಆದರೂ ಮಧ್ಯಮ ವರ್ಗಗಳ ಸ್ನೇಹಿಯಾಗಿರುವ ಉತ್ತಮ ಹ್ಯಾಚ್‌ಬ್ಯಾಕ್ ಕಾರುಗಳ ಪಟ್ಟಿಯಲ್ಲಿ ಸ್ಥಾನ ಪಡೆಯಲು ಶಕ್ತವಾಗಿರುವ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ, 800 ಸಿಸಿ ಪೆಟ್ರೋಲ್ ಎಂಜಿನ್ ಇಲ್ಲವಾದ್ರೆ 1.0-ಲೀಟರ್ ಎಂಜಿನ್ ಪಡೆದುಕೊಳ್ಳಲಿದೆ. ಆದರೇ ಹೊಸ ಕಾರುಗಳಲ್ಲಿ ಡಿಸೇಲ್ ಆವೃತ್ತಿಯನ್ನು ಪರಿಚಯಿಸದಿರಲು ಹ್ಯುಂಡೈ ನಿರ್ಧರಿಸಿದೆ.

ಇದರ ಜೊತೆಗೆ ಎಎಂಟಿ(ಆಟೋ ಮ್ಯಾಟಿಕ್ ಗೇರ್‌ಬಾಕ್ಸ್) ಕೂಡಾ ಹೊಂದುವ ಸಾಧ್ಯತೆಗಳಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು ಐ10 ಮಾದರಿಯಲ್ಲೇ ಒಳ ವಿನ್ಯಾಸದ ಸೌಲಭ್ಯಗಳನ್ನು ಪಡೆಯಲಿವೆ ಎನ್ನಲಾಗುತ್ತಿದೆ.

ಜೊತೆಗೆ ಪ್ರಯಾಣಿಕ ಸುರಕ್ಷತೆಗಾಗಿ ಎಬಿಎಸ್ ಮತ್ತು ಡ್ಯುಯಲ್ ಏರ್‌ಬ್ಯಾಗ್ ಸೌಲಭ್ಯಗಳನ್ನು ಸಹ ಆಯ್ಕೆ ರೂಪದಲ್ಲಿ ನೀಡಲಿದ್ದು, ಪಾರ್ಕಿಂಗ್ ಸೆನ್ಸಾರ್, ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಮತ್ತು ವಿಶೇಷ ವಿನ್ಯಾಸದ ಟಾಲಿ ಬಾಯ್ ಡಿಸೈನ್ ಹೊಂದಿರಲಿವೆ.

ಡ್ರೈವ್ ಸ್ಪಾರ್ಕ್ ಅಭಿಪ್ರಾಯ
ಹೊಸತನಗಳೊಂದಿಗೆ ಮಾರುಕಟ್ಟೆ ಪ್ರವೇಶ ಪಡೆಯುತ್ತಿರುವ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ ಆವೃತ್ತಿಯು ಸಣ್ಣ ಕಾರುಗಳ ವಿಭಾಗದಲ್ಲಿ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿದ್ದು, ಮಾರುತಿ ಸುಜುಕಿ ಸೆಲೆರಿಯೊ, ಟಾಟಾ ಟಿಯಾಗೋ ಮತ್ತು ರೆನಾಲ್ಟ್ ಕ್ವಿಡ್‌ಗೆ ತೀವ್ರ ಸ್ಪರ್ಧಿಯಾಗಲಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವಿಭಾಗದಲ್ಲಿನ ಟಾಪ್ ಸ್ಟೋರಿಗಳು:
01. ಕಾರು ಪ್ರಿಯರೇ ಇತ್ತ ಗಮನಿಸಿ- ನಂಬರ್ ಪ್ಲೇಟ್ ಖರೀದಿಯಲ್ಲಿ ಬದಲಾವಣೆ ತರಲಿದೆ ಕೇಂದ್ರ ಸರ್ಕಾರ..
02. ಏಪ್ರಿಲ್ 1ರಿಂದಲೇ 125ಸಿಸಿ ಮೇಲ್ಪಟ್ಟ ಬೈಕ್‌ಗಳಿಗೆ ಹೊಸ ರೂಲ್ಸ್..!!
03. ಭೀಕರ ಅಪಘಾತದಲ್ಲಿ ಟಾಟಾ ನೆಕ್ಸಾನ್ ಸಂಪೂರ್ಣ ಜಖಂ- ಕಾರಿನಲ್ಲಿದ್ದವರು ಅದೃಷ್ಟವಶಾತ್ ಪಾರು..!!
04. ವಾಹನ ಪ್ರಿಯರಿಗೆ ಸಿಹಿ ಸುದ್ಧಿ ನೀಡಿದ ಸಾರಿಗೆ ಇಲಾಖೆ..
04. ಟ್ರಾಫಿಕ್ ರೂಲ್ಸ್ ಬ್ರೇಕ್- ಮಗನನ್ನೇ ಹಿಡಿದು ದಂಡ ವಸೂಲಿ ಮಾಡಿದ ಪೊಲೀಸ್..


Click it and Unblock the Notifications








