ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಹೊಸ ಮಹೀಂದ್ರಾ ಎಕ್ಸ್‌ಯುವಿ300 (ಎಸ್201)..

ಮಹೀಂದ್ರಾ ಸಂಸ್ಥೆಯು ಈ ವರ್ಷದ ಅಂತ್ಯದಲ್ಲಿ ತಮ್ಮ ಹೊಸ ವಾಹನಗಳನ್ನು ಬಿಡುಗಡೆಗೊಳಿಸಲಿದ್ದು, ಅವುಗಳು ಮರಾಜೊ ಎಮ್‍ಪಿವಿ, ಸಬ್ 4 ಮೀಟರ್ ಎಸ್‍‍201 (ಎಕ್ಸ್‌ಯುವಿ300) ಮತ್ತು ಮಹೀಂದ್ರಾ ಸ್ಯಾಂಗ್‌ಯಾಂಗ್ ರೆಕ್ಸ್ಟಾನ್ ಜಿ4 ಎಸ್‍‍ಯುವಿ (ಎಕ್ಸ್‌ಯ

By Rahul Ts

ಮಹೀಂದ್ರಾ ಸಂಸ್ಥೆಯು ಈ ವರ್ಷದ ಅಂತ್ಯದಲ್ಲಿ ತಮ್ಮ ಹೊಸ ವಾಹನಗಳನ್ನು ಬಿಡುಗಡೆಗೊಳಿಸಲಿದ್ದು, ಅವುಗಳು ಮರಾಜೊ ಎಮ್‍ಪಿವಿ, ಸಬ್ 4 ಮೀಟರ್ ಎಸ್‍‍201 (ಎಕ್ಸ್‌ಯುವಿ300) ಮತ್ತು ಮಹೀಂದ್ರಾ ಸ್ಯಾಂಗ್‌ಯಾಂಗ್ ರೆಕ್ಸ್ಟಾನ್ ಜಿ4 ಎಸ್‍‍ಯುವಿ (ಎಕ್ಸ್‌ಯುವಿ700) ಎಂದು ಖಚಿತವಾಗಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಹೊಸ ಮಹೀಂದ್ರಾ ಎಕ್ಸ್‌ಯುವಿ300 (ಎಸ್201)..

ಎಕ್ಸ್‌ಯುವಿ300 ಎಂದು ಕರೆಯಲ್ಪಡುತ್ತಿರುವ ಕಾಂಪ್ಯಾಕ್ಟ್ ಎಸ್‍‍ಯುವಿ ಕಾರನ್ನು ಮಹೀಂದ್ರಾ ಸಂಸ್ಥೆಯು ಸ್ಯಾಂಗ್‌ಯಾಂಗ್ ಟಿವಿಲೊ ಕಾರಿನ ಆಧಾರದ ಮೇಲೆ ವಿನ್ಯಾಸ ಮಾಡಲಾಗಿದ್ದು, ಜಾಗತಿಕ ಮಾರುಕಟ್ಟೆಗಳಲ್ಲಿ ಈಗಾಗಲೆ ಈ ಕಾರು ಮಾರಾಟಗೊಳ್ಳುತ್ತಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಹೊಸ ಮಹೀಂದ್ರಾ ಎಕ್ಸ್‌ಯುವಿ300 (ಎಸ್201)..

ಬಿಡುಗಡೆಗಾಗಿ ಮಹೀಂದ್ರಾ ಸಂಸ್ಥೆಯು ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆಗಾಗಿ ಭಾರತೀಯ ರಸ್ತೆಗಳಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸುತಿದ್ದು, ಕಾರಿನ ಒಳವಿನ್ಯಾಸ ಹಾಗು ಹೊರ ವಿನ್ಯಾಸದ ಚಿತ್ರಗಳು ಸೋರಿಕೆಯಾಗಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಹೊಸ ಮಹೀಂದ್ರಾ ಎಕ್ಸ್‌ಯುವಿ300 (ಎಸ್201)..

ವಿಟಾರಾ ಬ್ರೆಝಾ ಡಿಸೈನ್ ಆಧರಿಸಿರುವ ಮಹೀಂದ್ರ ಹೊಸ ಕಾರನ್ನ ಎಸ್201 ಕೋಡ್ ಆಧಾರದ ಮೇಲೆ ಎಂಜಿನ್ ಕಾರ್ಯಕ್ಷಮತೆಯನ್ನು ಪರೀಕ್ಷೆ ಮಾಡಲಾಗುತ್ತಿದ್ದು, ಹೊಸ ಕಾರಿನ ಅಧಿಕೃತ ಹೆಸರು ಸಧ್ಯಕ್ಕೆ ಎಕ್ಸ್‌ಯುವಿ300 ಎಂದು ಕರೆಯಲ್ಪಡುತ್ತಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಹೊಸ ಮಹೀಂದ್ರಾ ಎಕ್ಸ್‌ಯುವಿ300 (ಎಸ್201)..

ಹೀಗಾಗಿ ಮುಂದಿನ ತಿಂಗಳು ಹೊಸ ಕಾರಿನ ಅಧಿಕೃತ ಹೆಸರು ಬಹಿರಂಗಪಡಿಸುವ ಸಾಧ್ಯತೆಗಳಿದ್ದು, ಹೊಸ ಕಾರುಗಳು ಡ್ಯುಯಲ್ ಟೋನ್ ಡ್ಯಾಶ್‌ಬೋರ್ಡ್, ಫ್ಲಕ್ಸ್ ಅಲ್ಯುಮಿನಿಯಂ ಪ್ಯಾನೆಲ್, ಸುಧಾರಿತ ಆಡಿಯೋ ಸಿಸ್ಟಂ, ಬ್ಯೂಟೂಥ್ ಕನೆಕ್ಟಿವಿಟಿ, ಸ್ಟಿರಿಂಗ್ ಮೇಲೆ ಎಸ್201 ಕೋಡ್ ನೇಮ್ ಪ್ಲೇಟ್ ಬಳಕೆ ಮಾಡಲಾಗಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಹೊಸ ಮಹೀಂದ್ರಾ ಎಕ್ಸ್‌ಯುವಿ300 (ಎಸ್201)..

ಕಾರು ಪ್ರಯಾಣಕ್ಕೆ ಅನುಕೂಲಕರವಾಗುವ ಇನ್‌ಸ್ಟ್ರುಮೆಂಟಲ್ ಕ್ಲಸ್ಟರ್, ಮಲ್ಟಿ ಫಂಕ್ಷನಲ್ ಸೇಂಟರ್ ಡಿಸ್‌ಫ್ಲೇ, ಸ್ಯಾಂಗ್‌ಯಾಂಗ್‌ ಟಿವೊಲಿ ಮಾದರಿಯಲ್ಲೇ ಬಹುತೇಕ ಇಂಟಿರಿಯರ್ ಡಿಸೈನ್‌ಗಳನ್ನು ಹೊಸ ಮಹೀಂದ್ರಾ ಕಂಪ್ಯಾಕ್ಟ್ ಎಸ್‌ಯುವಿಯಲ್ಲೂ ಬಳಕೆ ಮಾಡಿರುವುದನ್ನು ಸೆರೆಚಿತ್ರಗಳಲ್ಲಿ ನೋಡಬಹುದಾಗಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಹೊಸ ಮಹೀಂದ್ರಾ ಎಕ್ಸ್‌ಯುವಿ300 (ಎಸ್201)..

7-ಇಂಚಿನ ಟಚ್‌ಸ್ಕ್ರೀನ್ ಇನ್ಪೋ‌ಟೈನ್‌ಮೆಂಟ್ ಬಳಕೆ ಮಾಡಲಾಗಿದ್ದು, ಸ್ಮಾರ್ಟ್ ಫೋನ್ ಕನೆಕ್ಟ್ ಮಾಡಿಕೊಳ್ಳುವ ಮೂಲಕ ಆಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ ನಿಯಂತ್ರಣ ಮಾಡಬಹುದಾಗಿದೆ. ಜೊತೆಗೆ ನ್ಯಾವಿಗೇಷನ್ ಮತ್ತು ರಿವರ್ಸ್ ಕ್ಯಾಮೆರಾ ಡಿಸ್‌ಫ್ಲೇ ಸಹ ಇದರಲ್ಲಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಹೊಸ ಮಹೀಂದ್ರಾ ಎಕ್ಸ್‌ಯುವಿ300 (ಎಸ್201)..

ಇನ್ನು ಹೆಚ್ಚುವರಿಯಾಗಿ ಕಾರಿನ ಒಳಭಾಗದ ಮಧ್ಯದಲ್ಲಿ ವಿಸ್ತರಿತ ಕನ್ಸೋಲ್ ಬಳಕೆ ಮಾಡಲಾಗಿದ್ದು, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, ಡ್ಯುಯಲ್ ಯುಎಸ್‌ಬಿ ಫೋರ್ಟ್ಸ್, ಆಕ್ಸ್ ಇನ್‌ಫುಟ್ ಜಾಕ್ಸ್, ವರ್ಟಿಕಲ್ ಎಸಿ ವೆಂಟ್, ಮಧ್ಯದಲ್ಲಿ ಟಚ್ ಸ್ಕ್ರಿನ್ ಸಿಸ್ಟಂ ಸೇರಿಸಲಾಗಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಹೊಸ ಮಹೀಂದ್ರಾ ಎಕ್ಸ್‌ಯುವಿ300 (ಎಸ್201)..

ಹಾಗೆಯೇ ಕಾರಿನ ಹೊರ ವಿನ್ಯಾಸಗಳ ಬಗೆಗೆ ಹೇಳುವುದಾದರೇ, ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಡಿಆರ್‌ಎಲ್ಎಸ್, ಎಲ್ಇಡಿ ಟೈಲ್ ಗೇಟ್, ORVMs,ಟರ್ನ್ ಇಂಡಿಕೇಟರ್ಸ್, ರೂಫ್ ರೈಲ್ಸ್, ರಿಯರ್ ಸ್ಪಾಯ್ಲರ್, ರಿಯರ್ ವೈಪರ್, 17-ಇಂಚಿನ ಅಲಾಯ್ ವೀಲ್ಹ್‌ಗಳನ್ನು ಹೊಂದಿರಲಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಹೊಸ ಮಹೀಂದ್ರಾ ಎಕ್ಸ್‌ಯುವಿ300 (ಎಸ್201)..

ಒಟ್ಟಿನಲ್ಲಿ ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಮಹೀಂದ್ರಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳು ಎಕ್ಸ್‌ಯುವಿ500ಗಿಂತ ಕೆಳ ಹಂತದ ಕಾರು ಆವೃತ್ತಿಯಾಗಿ ಅಭಿವೃದ್ಧಿ ಹೊಂದಲಿದ್ದು, ಬಿಡುಗಡೆಯ ನಂತರ ಮಾರುತಿ ಸುಜುಕಿ ವಿಟಾರಾ ಬ್ರೇಝಾ, ಟಾಟಾ ನೆಕ್ಸಾನ್, ಫೋರ್ಡ್ ಇಕೋ ಸ್ಪೋರ್ಟ್ಸ್ ಕಾರುಗಳಿಗೆ ತೀವ್ರ ಪೈಪೋಟಿ ನೀಡುವ ಗುಣಲಕ್ಷಣ ಪಡೆದಿದೆ.

Source : Rushlane

More from DriveSpark

Article Published On: Monday, August 27, 2018, 9:52 [IST]
English summary
New Mahindra XUV300 SUV spied.
Read more on mahindra suv new car
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+