ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ 7 ಸೀಟರ್ ಮಹೀಂದ್ರಾ ಎಕ್ಸ್‌ಯುವಿ700..

Written By:

ದೇಶಿಯ ವಾಹನ ತಯಾರಕ ಸಂಸ್ಥೆಯಾದ ಮಹೀಂದ್ರಾ ಆಂಡ್ ಮಹೀಂದ್ರಾ ದೇಶಿಯ ಮಾರುಕಟ್ಟೆಯಲ್ಲಿ ಈ ವರ್ಷ ಮೂರು ಹೊಸ ಕಾರುಗಳನ್ನು ಪರಿಚಯಿಸುವ ಯೋಜನೆಯಲಿದ್ದು, ಟೊಯೊಟಾ ಫಾರ್ಚುನರ್, ಫೋರ್ಡ್ ಎಂಡೀವರ್ ಕಾರುಗಳಿಗೆ ಪೈಪೋಟಿ ನೀಡಲು ಎಕ್ಸ್‌ಯುವಿ700 ಕಾರನ್ನು ಬಿಡುಗಡೆಗೊಳಿಸಲಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ 7 ಸೀಟರ್ ಮಹೀಂದ್ರಾ ಎಕ್ಸ್‌ಯುವಿ700..

ಮಹೀಂದ್ರಾ ಸಂಸ್ಥೆಯು ಶೀಘ್ರದಲ್ಲೆ 7 ಆಸನವುಳ್ಳ ಎಕ್ಸ್‌ಯುವಿ700 ಕಾರು ಮಾದರಿಯನ್ನು ಬಿಡುಗಡೆ ಮಾಡಲಿದ್ದು, ಈ ಹಿನ್ನೆಲೆ ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತಾಗಿ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿರುವ ವೇಳೆಯಲ್ಲಿ ಮುಸುಗಿಲ್ಲದೆ ಕಾಣಿಸಿಕೊಂಡು ಗ್ರಾಹಕರಲ್ಲಿ ಕುತೂಹಲವನ್ನು ಹೆಚ್ಚಿಸಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ 7 ಸೀಟರ್ ಮಹೀಂದ್ರಾ ಎಕ್ಸ್‌ಯುವಿ700..

ದಕ್ಷಿಣ ಕೊರಿಯಾದ ಮೂಲದ ಸ್ಯಾಂಗ್‌ಯಾಂಗ್‌ ಜೊತೆ ಕೈಜೋಡಿಸಿರುವ ಮಹೀಂದ್ರಾ ಸಂಸ್ಥೆಯು ಸುಧಾರಿತ ಮಾದರಿಯ ಎಕ್ಸ್‌ಯುವಿ700 ಅಭಿವೃದ್ಧಿಗೊಳಿಸಿದ್ದು, ಕ್ವಾಡ್ ಫ್ರೇಮ್ ತಂತ್ರಜ್ಞಾನದಡಿ ಈ ಕಾರನ್ನು ನಿರ್ಮಾಣ ಮಾಡಲಾಗಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ 7 ಸೀಟರ್ ಮಹೀಂದ್ರಾ ಎಕ್ಸ್‌ಯುವಿ700..

ಇದರಿಂದ ಕಾರಿನ ತೂಕವು ಸಾಕಷ್ಟು ಹಗುರವಾಗಿದರಲ್ಲದೇ ಎಂಜಿನ್ ಮತ್ತು ಇಂಧನ ಕಾರ್ಯಕ್ಷಮತೆ ಹೆಚ್ಚಿದ್ದು, ಎಸ್‌ಯುವಿ ಪ್ರಿಯರಿಗೆ ಉತ್ತಮ ಚಾಲನಾ ಅನುಭವ ನೀಡಲಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ 7 ಸೀಟರ್ ಮಹೀಂದ್ರಾ ಎಕ್ಸ್‌ಯುವಿ700..

ಮಹೀಂದ್ರಾ ಬಿಡುಗಡೆ ಮಾಡಲಿರುವ ಎಕ್ಸ್‌ಯುವಿ700 ಕಾರು ಮಾದರಿಯು 7 ಸೀಟರ್ ಮಾದರಿಯಾಗಿದ್ದು, ಆಪ್ ರೋಡ್ ಕೌಶಲ್ಯದೊಂದಿಗೆ ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, 8 ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಪ್ರಿಮಿಯಂ ಲೆದರ್ ಸೀಟುಗಳು, 360 ಡಿಗ್ರಿ ಕ್ಯಾಮೆರಾ ವ್ಯವಸ್ಥೆ ಹೊಂದಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ 7 ಸೀಟರ್ ಮಹೀಂದ್ರಾ ಎಕ್ಸ್‌ಯುವಿ700..

ಇದಷ್ಟೇ ಅಲ್ಲದೇ ಎಲೆಕ್ಟ್ರಿಕ್ ಸನ್ ರೂಫ್, ಪವರ್ಡ್ ಟೈಲ್‌ಗೆಟ್ ಸೇರಿದಂತೆ ಅತ್ಯಾಧುನಿಕ ಸುರಕ್ಷಾ ಸೌಲಭ್ಯಗಳನ್ನು ಹೊಂದಿರಲಿದ್ದು, ಎಸ್‌ಯುವಿ ಕಾರು ಮಾದರಿಗಳಲ್ಲಿ ಹೊಸ ಟ್ರೆಂಡ್ ಸೃಷ್ಟಿಸುವ ಎಲ್ಲಾ ಲಕ್ಷಣಗಳನ್ನು ಹೊಂದಿದೆ ಎನ್ನಬಹುದು.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ 7 ಸೀಟರ್ ಮಹೀಂದ್ರಾ ಎಕ್ಸ್‌ಯುವಿ700..

ಎಂಜಿನ್ ಸಾಮರ್ಥ್ಯ

ಬಿಡುಗಡೆಗೊಳ್ಳಲಿರುವ ಹೊಸ ಮಹೀಂದ್ರಾ ಎಕ್ಸ್‌ಯುವಿ700 ಯೂರೊ 2.2 ಲೀಟರ್, 4 ಸಿಲೆಂಡರ್, ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಸಹಾಯದಿಂದ 178ಬಿಹೆಚ್‍‍ಪಿ ಮತ್ತು 420 ಎನ್ಎಮ್ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪದೆದಿದ್ದು, 7 ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ 7 ಸೀಟರ್ ಮಹೀಂದ್ರಾ ಎಕ್ಸ್‌ಯುವಿ700..

ಜೊತೆಗೆ ಪೆಟ್ರೋಲ್ ಆವೃತ್ತಿಗಳು ಸಹ ಲಭ್ಯವಿರಲಿದ್ದು, 2 ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್‌ನೊಂದಿಗೆ 222-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದಿಸಲಿವೆ ಎಂದು ಹೇಳಲಾಗಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ 7 ಸೀಟರ್ ಮಹೀಂದ್ರಾ ಎಕ್ಸ್‌ಯುವಿ700..

ಇನ್ನು ಆಫ್ ರೋಡ್ ವೈಶಿಷ್ಟ್ಯತೆ ಹೊಂದಿರುವ ಎಕ್ಸ್‌ಯುವಿ 700 ಕಾರುಗಳಲ್ಲಿ ಹಿಂಬದಿ ಚಕ್ರಗಳಿಗೂ ಗೇರ್‌ಬಾಕ್ಸ್ ಶಕ್ತಿ ಪೂರೈಕೆಯ ಸೌಲಭ್ಯವಿದ್ದು, ಇದು ಕಠಿಣ ಪರಿಸ್ಥಿತಿಗಳಲ್ಲೂ ಸರಾಗವಾಗಿ ನುಗ್ಗಬಲ್ಲ ಬಲಿಷ್ಠ ಕಾರು ಮಾದರಿಯಾಗಲಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ 7 ಸೀಟರ್ ಮಹೀಂದ್ರಾ ಎಕ್ಸ್‌ಯುವಿ700..

ಪ್ರಯಾಣಿಕರ ಸುರಕ್ಷತೆಗಾಗಿ ಮಹೀಂದ್ರಾ ಎಕ್ಸ್‌ಯುವಿ700 ಕಾರಿನಲ್ಲಿ 9 ಏರ್‍‍ಬ್ಯಾಗ್ಸ್, ಅಡ್ವಾನ್ಸ್ಡ್ ಎಮರ್ಜೆನ್ಸಿ ಬ್ರೇಕಿಂಗ್ ಸಿಸ್ಟಮ್, ಲೇನ್ ಡಿಪಾರ್ಚುರ್ ವಾರ್ನಿಂಗ್, ಲೇನ್ ಚೇಂಜ್ ಅಸ್ಸಿಸ್ಟ್, ಟ್ರಾಫಿಕ್ ಸೇಫ್ಟಿ ಅಸ್ಸಿಸ್ಟ್ ಮತ್ತು ಹೈ ಬೀಮ್ ಅಸ್ಸಿಸ್ಟ್ ಅನ್ನು ಅಳವಡಿಸಲಾಗಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ 7 ಸೀಟರ್ ಮಹೀಂದ್ರಾ ಎಕ್ಸ್‌ಯುವಿ700..

7 ಆಸನ ಹೊತ್ತು ಮಾರುಕಟ್ಟೆಗೆ ಲಗ್ಗೆಯಿಡಲಿರುವ ಮಹೀಂದ್ರಾ ಎಕ್ಸ್‌ಯುವಿ700 ಕಾರು ದೆಹಲಿಯ ಎಕ್ಸ್ ಶೋರಂ ಪ್ರಕಾರ ರೂ 22 ರಿಂದ 25 ಲಕ್ಷದ ವರೆಗು ಇರಬಹುದೆಂದು ಅಂದಾಜಿಸಲಾಗಿದೆ.

Source : Rushlane

Read more on mahindra suv
English summary
New Mahindra XUV700 rear design revealed.

Latest Photos

ಕರ್ನಾಟಕ ವಿಧಾನಸಭೆ ಚುನಾವಣೆ 2018

ತಕ್ಷಣದ ಆಟೊ ಸುದ್ದಿಗಳನ್ನು ಡ್ರೈವ್ಸ್ಪಾರ್ಕ್ನಲ್ಲಿ ಪಡೆದುಕೊಳ್ಳಿ- Kannada DriveSpark

We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more