ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಪ್ರೇರಿತ ಸಿಯಾಜ್ ಫೇಸ್‌ಲಿಫ್ಟ್ ಬಿಡುಗಡೆ

By Praveen Sannamani

ಭಾರತೀಯ ಮಾರುಕಟ್ಟೆಯಲ್ಲಿ ತನ್ನದೇ ಆದ ಜನಪ್ರಿಯತೆ ಹೊಂದಿರುವ ಮಾರುತಿ ಸುಜುಕಿ ಸಂಸ್ಥೆಯು ಹೊಸ ಕಾರುಗಳ ವಿಭಾಗದಲ್ಲಿ ಬಹುದೊಡ್ಡ ಬದಲಾವಣೆಗೆ ಮುನ್ನುಡಿ ಬರೆದಿದ್ದು, ಇದೀಗ ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಪ್ರೇರಿತ ಸಿಯಾಜ್ ಫೇಸ್‌ಲಿಫ್ಟ್ ಕಾರುಗಳನ್ನು ಬಿಡುಗಡೆಗೊಳಿಸುವ ಮೂಲಕ ಸೆಡಾನ್ ಪ್ರಿಯರ ಆಕರ್ಷಣೆಗೆ ಸಜ್ಜಾಗಿದೆ.

ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಪ್ರೇರಿತ ಸಿಯಾಜ್ ಫೇಸ್‌ಲಿಫ್ಟ್ ಬಿಡುಗಡೆ

ಮಾರುತಿ ಸುಜುಕಿ ಸಂಸ್ಥೆಯು ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಪ್ರೇರಿತ ಸಿಯಾಜ್ ಫೇಸ್‌ಲಿಫ್ಟ್ ಕಾರುಗಳನ್ನು ಗ್ರಾಹಕರ ಆದ್ಯತೆಗೆ ತಕ್ಕಂತೆ ಒಟ್ಟು 11 ಆವೃತ್ತಿಗಳಲ್ಲಿ ಅಭಿವೃದ್ಧಿ ಮಾಡಿದ್ದು, ದೆಹಲಿ ಎಕ್ಸ್‌ಶೋರಂ ಪ್ರಕಾರ ಆರಂಭಿಕ ಕಾರು ಆವೃತ್ತಿಗೆ ರೂ.8.19 ಲಕ್ಷ ಮತ್ತು ಟಾಪ್ ಎಂಡ್ ಆವೃತ್ತಿಗೆ ರೂ.10.97 ಲಕ್ಷ ಬೆಲೆ ನಿಗದಿಗೊಳಿಸಲಾಗಿದೆ.

ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಪ್ರೇರಿತ ಸಿಯಾಜ್ ಫೇಸ್‌ಲಿಫ್ಟ್ ಬಿಡುಗಡೆ

ಹೊಸ ಸಿಯಾಜ್ ಕಾರುಗಳು ಪೆಟ್ರೋಲ್ ಮತ್ತು ಡಿಸೇಲ್ ಎಂಜಿನ್‌ಗಳಲ್ಲಿ ಆಯ್ಕೆಗೆ ಲಭ್ಯವಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ಸಿಗ್ಮಾ, ಡೆಲ್ಟಾ, ಡೆಲ್ಟ್ ಎಟಿ, ಜೆಟಾ, ಜೆಟಾ ಎಟಿ, ಆಲ್ಫಾ ಮತ್ತು ಆಲ್ಫಾ ಎಟಿ ಕಾರುಗಳನ್ನ ಪರಿಚಯಿಸಿದೆ. ಹೀಗಾಗಿ ವಿವಿಧ ಕಾರು ಆವೃತ್ತಿಗಳಲ್ಲಿ ವಿವಿಧ ಹಂತದ ಬೆಲೆ ಪಟ್ಟಿ ನಿಗದಿ ಮಾಡಲಾಗಿದೆ.

ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಪ್ರೇರಿತ ಸಿಯಾಜ್ ಫೇಸ್‌ಲಿಫ್ಟ್ ಬಿಡುಗಡೆ

ಕಾರು ಆವೃತ್ತಿ ಪಟ್ಟಿ ಮತ್ತು ಬೆಲೆ ಮಾಹಿತಿ( ದೆಹಲಿ ಎಕ್ಸ್‌ಶೋರಂ ಪ್ರಕಾರ)

ಕಾರು ಆವೃತ್ತಿಗಳು ಪೆಟ್ರೋಲ್ ವರ್ಷನ್

ಡೀಸೆಲ್ ವರ್ಷನ್
ಸಿಗ್ಮಾ ರೂ. 8,19,000 ರೂ. 9,19,000
ಡೆಲ್ಟಾ ರೂ. 8,80,000 ರೂ. 9,80,000
ಡೆಲ್ಟಾ ಎಟಿ ರೂ. 9,80,000 ಲಭ್ಯವಿಲ್ಲ
ಜೆಟಾ ರೂ. 9,57,000 ರೂ. 10,57,000
ಜೆಟಾ ಎಟಿ ರೂ. 10,57,000 ಲಭ್ಯವಿಲ್ಲ
ಆಲ್ಫಾ ರೂ. 9,97,000 ರೂ. 10,97,000
ಆಲ್ಫಾ ಎಟಿ ರೂ. 10,97,000 ಲಭ್ಯವಿಲ್ಲ

ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಪ್ರೇರಿತ ಸಿಯಾಜ್ ಫೇಸ್‌ಲಿಫ್ಟ್ ಬಿಡುಗಡೆ

ಹೊಸ ಸಿಯಾಜ್ ವಿನ್ಯಾಸಗಳು

ಹಳೆಯ ಸಿಯಾಜ್ ಕಾರುಗಳಿಂತಲೂ ಮಹತ್ವದ ಬದಲಾಣೆಗಳನ್ನ ಹೊಂದಿರುವ ಹೊಸ ಸಿಯಾಜ್ ಕಾರುಗಳು, ಮರು ವಿನ್ಯಾಸಗೊಳಿಸಲಾದ ಗ್ರಿಲ್, ಹೊಸ ವಿನ್ಯಾಸದ ಎಲ್ಇಡಿ ಡಿಆರ್‍ಎಲ್ ಹೆಡ್‍‍ಲ್ಯಾಂಪ್ಸ್, ಸೆಂಟ್ರಲ್ ಏರ್ ಡ್ಯಾಮ್‍ ನೊಂದಿಗೆ ರಿವ್ಯಾಂಪ್ಡ್ ಫ್ರಂಟ್ ಬಂಪರ್ ಮತ್ತು ಸಿ-ಆಕಾರದ ಕ್ರೋಮ್ ಅನ್ನು ಫಾಗ್ ಲ್ಯಾಂಪ್‍‍ನಲ್ಲಿ ಅಳವಡಿಸಿರುವುದು ಕಾರಿಗೆ ಸ್ಪೋರ್ಟಿ ಲುಕ್ ನೀಡಿದೆ.

ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಪ್ರೇರಿತ ಸಿಯಾಜ್ ಫೇಸ್‌ಲಿಫ್ಟ್ ಬಿಡುಗಡೆ

ಇದಲ್ಲದೆ ಸಿಯಾಜ್ ಫೇಸ್‍‍ಲಿಫ್ಟ್ ಕಾರುಗಳಲ್ಲಿ ಮಲ್ಟಿ ಸ್ಪೋಕ್ 15 ಇಂಚಿನ ಅಲಾಯ್ ಚಕ್ರಗಳು, ಕ್ರೋಮ್ ಆಧಾರಿತ ಡೋರ್ ಹ್ಯಾಂಡಲ್ಸ್ ಮತ್ತು ಒಆರ್‍‍ವಿಎಮ್ ಅನ್ನು ಇಂಟಿಗ್ರೇಟೆಡ್ ಟರ್ನ್ ಇಂಡಿಕೇಟರ್ಸ್ ಅನ್ನು ಪ್ರಸ್ತುತ ಮಾರಾಟಗೊಳ್ಳುತ್ತಿರುವ ಸಿಯಾಜ್ ಕಾರಿನಿಂದ ಆಧರಿಸಿದೆ. ಹಾಗೆಯೇ ಮರು ವಿನ್ಯಾಸಗೊಳಿಸಲಾದ ಹಿಂಭಾಗದ ಬಂಪರ್ ಅನ್ನು ಕೂಡಾ ಅಳವಡಿಸಲಾಗಿದೆ.

ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಪ್ರೇರಿತ ಸಿಯಾಜ್ ಫೇಸ್‌ಲಿಫ್ಟ್ ಬಿಡುಗಡೆ

ಕಾರಿನ ಒಳಭಾಗದ ವಿನ್ಯಾಸ

ಈ ಹಿಂದಿನ ಸಿಯಾಜ್ ಕಾರುಗಳಲ್ಲಿ ಲಭ್ಯವಿದ್ದ ಬಹುತೇಕ ತಾಂತ್ರಿಕ ಅಂಶಗಳು ಹೊಸ ಕಾರಿನಲ್ಲೂ ಮುಂದುವರಿಸಲಾಗಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿ ಬೇಡಿಕೆಗೆ ಅನುಗುಣವಾಗಿ ಕೆಲವೊಂದು ಹೊಸ ಸೌಲಭ್ಯಗಳನ್ನು ಜೋಡಣೆ ಮಾಡಲಾಗಿದೆ. ಇವುಗಳಲ್ಲಿ ಮರದ ದಿಣ್ಣೆಗಳಿಂದ ತಯಾರಿಸಲಾದ ಡ್ಯಾಶ್‌ಬೋರ್ಡ್, ಬಾಗಿಲು ಅಂಚುಗಳು ಹೊಸ ಆಕರ್ಷಣೆಯಾಗಿವೆ.

ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಪ್ರೇರಿತ ಸಿಯಾಜ್ ಫೇಸ್‌ಲಿಫ್ಟ್ ಬಿಡುಗಡೆ

ಜೊತೆಗೆ ಕಾರಿನ ಸ್ಟೀರಿಂಗ್ ವೀಲ್ಹ್, ಆಕರ್ಷಕವಾದ ಲೆದರ್ ಸೀಟುಗಳು, ಟಚ್ ಸ್ಕ್ರೀನ್ ಇನ್ಫೋಟೈನ್‌ಮೆಂಟ್, ಅಂಡ್ರಾಯಿಡ್ ಆಟೋ, ಆ್ಯಪಲ್ ಕಾರ್ ಪ್ಲೇ, ಸುಜುಕಿ ಕನೆಕ್ಟ್ ಟೆಲಿಮ್ಯಾಟಿಕ್ ಸಿಸ್ಟಂ, ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಜೊತೆ ಟಿಟಿಪಿ ಕಲರ್ ಎಂಐಡಿ ಮತ್ತು ಕ್ರೂಸ್ ಕಂಟ್ರೊಲರ್ ಸೌಲಭ್ಯವಿದೆ.

ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಪ್ರೇರಿತ ಸಿಯಾಜ್ ಫೇಸ್‌ಲಿಫ್ಟ್ ಬಿಡುಗಡೆ

ಎಂಜಿನ್ ಸಾಮರ್ಥ್ಯ

ಎಸ್‌ಹೆಚ್‌ವಿಎಸ್ ಸ್ಮಾರ್ಟ್ ಹೈಬ್ರಿಡ್ ಟೆಕ್ನಾಲಜಿ ಹೊಂದಿರುವ ಪೆಟ್ರೋಲ್ ಕಾರುಗಳು 1.5-ಲೀಟರ್ ಎಂಜಿನ್ ಪ್ರೇರಣೆಯೊಂದಿಗೆ 103-ಬಿಎಚ್‌ಪಿ ಮತ್ತು 138-ಎನ್ಎಂ ಟಾರ್ಕ್ ಉತ್ಪಾದಿಸಬಲ್ಲವು. ಇವುಗಳಲ್ಲಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಇಲ್ಲವೇ 4-ಸ್ಪೀಡ್ ಆಟೋ ಮ್ಯಾಟಿಕ್ ಗೇರ್‌ಬಾಕ್ಸ್ ವರ್ಷನ್ ಆಯ್ಕೆ ಮಾಡಬಹುದು.

ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಪ್ರೇರಿತ ಸಿಯಾಜ್ ಫೇಸ್‌ಲಿಫ್ಟ್ ಬಿಡುಗಡೆ

ಹಾಗೆಯೇ ಡಿಸೇಲ್ ಕಾರುಗಳು ಸಹ ಮೈಲ್ಡ್ ಹೈಬ್ರಿಡ್ ಟೆಕ್ನಾಲಜಿಯೊಂದಿಗೆ 1.3-ಲೀಟರ್ ಎಂಜಿನ್ ಪ್ರೇರಣೆಯಿಂದ 88-ಬಿಎಚ್‌ಪಿ ಮತ್ತು 200-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ ಗರಿಷ್ಠ ಮಟ್ಟದ ಇಂಧನ ದಕ್ಷತೆ ಪಡೆದುಕೊಂಡಿದೆ.

ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಪ್ರೇರಿತ ಸಿಯಾಜ್ ಫೇಸ್‌ಲಿಫ್ಟ್ ಬಿಡುಗಡೆ

ಹೊಸ ಕಾರುಗಳ ಮೈಲೇಜ್

ಸಿಯಾಜ್ ಫೇಸ್‌ಲಿಫ್ಟ್ ಕಾರುಗಳ ಎಂಜಿನ್ ವಿಭಾಗದಲ್ಲಿ ಸ್ಮಾರ್ಟ್ ಹೈಬ್ರಿಡ್ ತಂತ್ರಜ್ಞಾನ ಪರಿಚಯಿಸುವ ಮೂಲಕ ಇಂಧನ ದಕ್ಷತೆಯಲ್ಲಿ ಭಾರೀ ಬದಲಾವಣೆ ತರಲಾಗಿದ್ದು, ಹೊಸ ಕಾರುಗಳು ಪ್ರತಿ ಲೀಟರ್ ಪೆಟ್ರೋಲ್‌ಗೆ 21.56ಕಿ.ಮಿ( ಮ್ಯಾನುವಲ್ ವರ್ಷನ್), 20.28ಕಿ.ಮೀ( ಆಟೋಮ್ಯಾಟಿಕ್ ವರ್ಷನ್) ಮತ್ತು ಡೀಸೆಲ್ ಕಾರುಗಳು ಪ್ರತಿ ಲೀಟರ್‌ಗೆ 24ಕಿ.ಮೀ ಮೈಲೇಜ್ ಹಿಂದಿರುಗಿಸಲಿವೆ.

ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಪ್ರೇರಿತ ಸಿಯಾಜ್ ಫೇಸ್‌ಲಿಫ್ಟ್ ಬಿಡುಗಡೆ

ಸುರಕ್ಷಾ ಸೌಲಭ್ಯಗಳು

ಸಾಮಾನ್ಯ ಕಾರುಗಳಲ್ಲಿ ಫ್ರಂಟ್ ಡ್ಯುಯಲ್ ಏರ್‌ಬ್ಯಾಗ್‌ಗಳನ್ನು ಹೊಂದಿರುವ ಸಿಯಾಜ್ ಫೇಸ್‌ಲಿಫ್ಟ್ ಕಾರುಗಳು ಟಾಪ್ ಎಂಡ್ ಆವೃತ್ತಿಯಲ್ಲಿ 6 ಏರ್‌ಬ್ಯಾಗ್‌ಗಳನ್ನು ಪಡೆದುಕೊಂಡಿದೆ. ಜೊತೆಗೆ ಎಬಿಎಸ್, ಚಾಲಕನ್ನು ಎಚ್ಚರಿಸುವ ಸೀಟ್ ಬೆಲ್ಟ್ ವಾರ್ನಿಂಗ್, ರಿವರ್ಸ್ ಪಾರ್ಕಿಂಗ್ ಸೆನ್ಸಾರ್ ಮತ್ತು ಸ್ಪೀಡ್ ವಾರ್ನಿಂಗ್ ಮಾನಿಟರ್ ಇದರಲ್ಲಿದೆ. ಇದು ಗಂಟೆಗೆ 120 ಕಿ.ಮಿಗಿಂತ ಹೆಚ್ಚು ಚಾಲನೆ ಮಾಡುವಾಗ ಬಿಫ್ ಸೌಂಡ್ ಮೂಲಕ ಚಾಲಕನಿಗೆ ಎಚ್ಚರಿಕೆ ನೀಡುತ್ತದೆ.

ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಪ್ರೇರಿತ ಸಿಯಾಜ್ ಫೇಸ್‌ಲಿಫ್ಟ್ ಬಿಡುಗಡೆ

ಲಭ್ಯವಿರುವ ಬಣ್ಣಗಳು

ಒಟ್ಟು 7 ವಿವಿಧ ಬಣ್ಣದ ಆಯ್ಕೆಯನ್ನು ಹೊಂದಿರುವ ಸಿಯಾಜ್ ಫೇಸ್‌ಲಿಫ್ಟ್ ಕಾರುಗಳು ಬ್ಯೂ ನೆಕ್ಸಾ, ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಮಿಡ್‌ನೈಟ್ ಬ್ಲ್ಯಾಕ್, ಪರ್ಲ್ ಸಾಂಗ್ರಿಯಾ ರೆಡ್, ಪರ್ಲ್ ಮೆಟಾಲಿಕ್ ಡಿಗ್ನಿಟಿ ಬ್ರೌನ್, ಮೆಟಾಲಿಕ್ ಪ್ರಿಮಿಯಂ ಸಿಲ್ವರ್ ಮತ್ತು ಪರ್ಲ್ ಸ್ನೋ ವೈಟ್ ಬಣ್ಣಗಳಲ್ಲಿ ಲಭ್ಯವಿದೆ.

ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಪ್ರೇರಿತ ಸಿಯಾಜ್ ಫೇಸ್‌ಲಿಫ್ಟ್ ಬಿಡುಗಡೆ

ಒಟ್ಟಿನಲ್ಲಿ ಹಲವು ಹೊಸ ಸೌಲಭ್ಯವನ್ನು ಹೊತ್ತು ಮಾರುಕಟ್ಟೆ ಪ್ರವೇಶ ಪಡೆದಿರುವ ಹೊಸ ಸಿಯಾಜ್ ಕಾರುಗಳು ಎಂಜಿನ್ ವಿಭಾಗದಲ್ಲಿ ಗುರುತರ ಬದಲಾಣೆ ಹೊಂದಿರುವುದು ಸೆಡಾನ್ ಪ್ರಿಯರ ಆಕರ್ಷಣೆಗೆ ಕಾರಣವಾಗಲಿದ್ದು, ಹೋಂಡಾ ಸಿಟಿ, ಟೊಯೊಟಾ ಯಾರಿಸ್ ಮತ್ತು ಹ್ಯುಂಡೈ ವೆರ್ನಾ ಕಾರುಗಳಿಗೆ ನೇರ ಪೈಪೋಟಿ ನೀಡಲಿದೆ ಎನ್ನಬಹುದು.

Most Read Articles

Kannada
English summary
2018 Maruti Ciaz Facelift Launched In India; Prices Start At Rs 8.19 Lakh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X