ಬಿಡುಗಡೆಗೊಳ್ಳಲಿರುವ ಹೊಸ ಸಿಯಾಜ್ ಫೇಸ್‍‍ಲಿಫ್ಟ್ ಕಾರು ಇದೇ...

ದೇಶದ ಪ್ರಮುಖ ವಾಹನ ತಯಾರಕ ಸಂಸ್ಥೆಯಾದ ಮಾರುತಿ ಸುಜುಕಿ ತನ್ನ ಜನಪ್ರಿಯ ಸಿಯಾಜ್ ಕಾರಿನ ಫೇಸ್‍‍ಲಿಫ್ಟ್ ಮಾದರಿಯನ್ನು ಬಿಡುಗಡೆಗೊಳಿಸುವ ಯೋಜನೆಯಲಿದೆ.

By Rahul Ts

ದೇಶದ ಪ್ರಮುಖ ವಾಹನ ತಯಾರಕ ಸಂಸ್ಥೆಯಾದ ಮಾರುತಿ ಸುಜುಕಿ ತನ್ನ ಜನಪ್ರಿಯ ಸಿಯಾಜ್ ಕಾರಿನ ಫೇಸ್‍‍ಲಿಫ್ಟ್ ಮಾದರಿಯನ್ನು ಬಿಡುಗಡೆಗೊಳಿಸುವ ಯೋಜನೆಯಲಿದ್ದು, ಈಗಾಗಲೆ ಹಲವಾರು ಬಾರಿ ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡು ಗ್ರಾಹಕರಲ್ಲಿ ಕುತೂಹಲವನ್ನು ಹೆಚ್ಚಿಸಿದೆ.

ಬಿಡುಗಡೆಗೊಳ್ಳಲಿರುವ ಹೊಸ ಸಿಯಾಜ್ ಫೇಸ್‍‍ಲಿಫ್ಟ್ ಕಾರು ಇದೇ...

ಬಿಡುಗಡೆಗು ಮುನ್ನವೆ ಹಲವಾರು ಬಾರಿ ಭಾರತೀಯ ರಸ್ಥೆಗಳಲ್ಲಿ ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಸಿಯಾಜ್ ಫೇ‍ಸ್‍ಲಿಫ್ಟ್ ಕಾರು ಇದೇ ಮೊದಲ ಬಾರಿಗೆ ನೆಕ್ಸಾ ಬ್ಲೂ ಬಣ್ಣದಲ್ಲಿ ಸಂಸ್ಥೆಯ ಚಿನ್ಹೆ ಮತ್ತು ಹೆಸರನ್ನು ಮಾತ್ರ ಕವರ್ ಮಾಡಿ ಉತ್ಪಾದನೆಯ ಅವತಾರದಲ್ಲಿ ಕಾಣಿಸಿಕೊಂಡಿದೆ.

ಬಿಡುಗಡೆಗೊಳ್ಳಲಿರುವ ಹೊಸ ಸಿಯಾಜ್ ಫೇಸ್‍‍ಲಿಫ್ಟ್ ಕಾರು ಇದೇ...

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಉತ್ಪಾದನೆಯ ಅವತಾರದ ಈ ಕಾರು ಶೀಘ್ರವೇ ಬಿಡುಗಡೆಗೊಳ್ಳಲಿದೆ ಎಂದು ಊಹಿಸಲಾಗಿದ್ದು, ಇದೇ ವರ್ಷದ ಕೊನೆಯ ತ್ರೈಮಾಸಿಕ ಅವಧಿಯಲ್ಲಿ ಸಿಯಾಜ್ ಫೇಸ್‍‍ಲಿಫ್ಟ್ ಕಾರುಗಳನ್ನು ಈ ಬಾರಿ ವಿನ್ಯಾಸದಲ್ಲಿ ಮತ್ತು ಎಂಜಿನ್ ಅನ್ನು ನವೀಕರಿಸಿ ಬಿಡುಗಡೆಗೊಳಿಸಲಿದೆ.

ಬಿಡುಗಡೆಗೊಳ್ಳಲಿರುವ ಹೊಸ ಸಿಯಾಜ್ ಫೇಸ್‍‍ಲಿಫ್ಟ್ ಕಾರು ಇದೇ...

ಹೊಸ ಸಿಯಾಜ್ ಫೇಸ್‍‍ಲಿಫ್ಟ್ ಕಾರಿನ ಮುಂಭಾಗದಲ್ಲಿ ಮರಿ ವಿನ್ಯಾಸಗೊಳಿಸಲಾದ ಗ್ರಿಲ್, ಹೊಸದಾಗಿ ವಿನ್ಯಾಸಗೊಳಿಸಿದ ಎಲ್ಇಡಿ ಡಿಆರ್‍ಎಲ್ ಹೆಡ್‍‍ಲ್ಯಾಂಪ್ಸ್, ಸೆಂಟ್ರಲ್ ಏರ್ ಡ್ಯಾಮ್‍ ನೊಂದಿಗೆ ರಿವ್ಯಾಂಪ್ಡ್ ಫ್ರಂಟ್ ಬಂಪರ್ ಮತ್ತು ಸಿ-ಆಕಾರದ ಕ್ರೋಮ್ ಅನ್ನು ಫಾಗ್ ಲ್ಯಾಂಪ್‍‍ನಲ್ಲಿ ಅಳವಡಿಸಲಾಗಿದೆ.

ಬಿಡುಗಡೆಗೊಳ್ಳಲಿರುವ ಹೊಸ ಸಿಯಾಜ್ ಫೇಸ್‍‍ಲಿಫ್ಟ್ ಕಾರು ಇದೇ...

ಇದಲ್ಲದೆ ಸಿಯಾಜ್ ಫೇಸ್‍‍ಲಿಫ್ಟ್ ಮಲ್ಟಿ ಸ್ಪೋಕ್ ಅಲಾಯ್ ವ್ಹೀಲ್ಸ್, ಕ್ರೋಮ್ ಡೋರ್ ಹ್ಯಾಂಡಲ್ಸ್ ಮತ್ತು ಒಆರ್‍‍ವಿಎಮ್ ಅನ್ನು ಇಂಟಿಗ್ರೇಟೆಡ್ ಟರ್ನ್ ಇಂಡಿಕೇಟರ್ಸ್ ಅನ್ನು ಪ್ರಸ್ಥುತ ಮಾರಾಟಗೊಳ್ಳುತ್ತಿರುವ ಸಿಯಾಜ್ ಕಾರಿನಿಂದ ಆದರಿಸಿದೆ. ಹಾಗೆಯೆ ಮರು ವಿನ್ಯಾಸಗೊಳಿಸಲಾದ ಹಿಂಭಾಗದ ಬಂಪರ್ ಅನ್ನು ಕೂಡ ಅಳವಡಿಸಲಾಗಿದೆ.

ಬಿಡುಗಡೆಗೊಳ್ಳಲಿರುವ ಹೊಸ ಸಿಯಾಜ್ ಫೇಸ್‍‍ಲಿಫ್ಟ್ ಕಾರು ಇದೇ...

ಮಾರುತಿ ಸಿಯಾಜ್ ಫೇಸ್‍‍ಲಿಫ್ಟ್ ಕಾರು ಹೊಸದಾಗಿ 1.5 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಪಡೆದಿದ್ದು, ಪ್ರಸ್ಥುತ ಇರುವ 1.4 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಭರ್ತಿ ಮಾಡಲಿದೆ. ಇದಲ್ಲದೆ ಡೀಸೆಲ್ ವೇರಿಯಂಟ್ ಕಾರುಗಳು 1.3 ಲೀಟರ್ ಸ್ಮಾರ್ಟ್ ಹೈಬ್ರಿಡ್ ವೆಹಿಕಲ್ ಟೆಕ್ನಾಲಜಿ ಎಂಜಿನ್ ಅನ್ನು ಪಡೆದುಕೊಂಡಿದೆ.

ಬಿಡುಗಡೆಗೊಳ್ಳಲಿರುವ ಹೊಸ ಸಿಯಾಜ್ ಫೇಸ್‍‍ಲಿಫ್ಟ್ ಕಾರು ಇದೇ...

ಇನ್ನು ಟ್ರಾನ್ಸ್ ಮಿಷನ್ ಬಗ್ಗೆ ಹೇಳುವುದಾದರೆ ಎಂಜಿನ್ ಅನ್ನು 5 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ನೊಂದಿಗೆ ಜೋಡಿಸಲಾಗಿದ್ದು, ಇದು ಪ್ರಸ್ಥುತ ಇರುವ 4 ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಭರ್ತಿ ಮಾಡಲಿದೆ.

ಬಿಡುಗಡೆಗೊಳ್ಳಲಿರುವ ಹೊಸ ಸಿಯಾಜ್ ಫೇಸ್‍‍ಲಿಫ್ಟ್ ಕಾರು ಇದೇ...

ಸಿಯಾಜ್ ಫೇಸ್‍ಲಿಫ್ಟ್ ಕಾರಿನ ಒಳಭಾಗದಲ್ಲಿ ಅಪ್‍‍ಮಾರ್ಕೆಟ್ ಡ್ಯಾಶ್‍‍ಬೋರ್ಡ್, ಸೀಟ್ ಮತ್ತು ಹೊಸ ವೈಶಿಷ್ಟ್ಯತೆಗಳನ್ನು ಪಡೆದಿರಲಿದೆ ಎನ್ನಲಾಗಿದ್ದು, ಇನ್ನು ಹೊಸದಾಗಿ ಬಿಡುಗಡೆಗೊಳ್ಳುವ ಕಾರುಗಳು ಎಲೆಕ್ಟ್ರಿಕ್ ಸನ್‍ರೂಫ್, ಅಡಿಶನಲ್ ಸೇಫ್ಟಿ ಫೀಚರ್ಸ್ ಹಾಗು ಇನ್ನಿತರೆ ಆಯ್ಕೆಗಳನ್ನು ಪಡೆಯಲಿದೆ.

ಬಿಡುಗಡೆಗೊಳ್ಳಲಿರುವ ಹೊಸ ಸಿಯಾಜ್ ಫೇಸ್‍‍ಲಿಫ್ಟ್ ಕಾರು ಇದೇ...

ಇನ್ನು ಕಾರಿನ ಬೆಲೆಯ ಬಗ್ಗೆ ಯಾವುದೆ ಖಚಿತ ಮಾಹಿತಿಯು ಲಭ್ಯವಾಗಿಲ್ಲವಾದರು ದೆಹಲಿಯ ಎಕ್ಸ್ ಶೋರಂ ಪ್ರಕಾರ ರೂ 8 ರಿಂದ 12 ಲಕ್ಷದ ವರೆಗು ಇರಬಹುದೆಂದು ಎಂದಾಜಿಸಲಾಗಿದ್ದು, ಹೋಂಡಾ ಸಿಟಿ, ಹ್ಯುಂಡೈ ವರ್ನಾ, ವೋಲ್ಕ್ಸ್ ವ್ಯಾಗನ್ ವೆಂಟೊ ಮತ್ತು ಸ್ಕೋಡಾ ರ್‍ಯಾಪಿಡ್ ಕಾರುಗಳಿಗೆ ಪೈಪೋಟಿಯನ್ನು ನೀಡಲಿದೆ.

More from DriveSpark

Article Published On: Monday, June 25, 2018, 18:45 [IST]
English summary
2018 Maruti Ciaz Facelift Spotted Completely Undisguised.
Read more on maruti suzuki sedan
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+