Just In
- 11 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 12 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 13 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 13 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- News Gold & Silver Price: ಮತ್ತೆ ಏರಿದ ಚಿನ್ನದ ದರ, ಇಂದಿನ ಬೆಳ್ಳಿ-ಬಂಗಾರದ ಬೆಲೆ ವಿವರ ತಿಳಿಯಿರಿ
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ಎರ್ಟಿಗಾ ಬಿಡುಗಡೆ- ಕಾರು ಖರೀದಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್..!
ಜನಪ್ರಿಯ ಕಾರು ಉತ್ಪಾದನಾ ಸಂಸ್ಥೆಯಾದ ಮಾರುತಿ ಸುಜುಕಿ ತನ್ನ ಬಹುನೀರಿಕ್ಷಿತ ನೆಕ್ಸ್ಟ್ ಜನರೇಷನ್ ಎರ್ಟಿಗಾ ಕಾರನ್ನು ಕಳೆದ 2 ದಿನಗಳ ಹಿಂದಷ್ಟೇ ಬಿಡುಗಡೆ ಮಾಡಿದ್ದು, ಎಂಪಿವಿ ವಿಭಾಗದಲ್ಲಿ ಮತ್ತೊಮ್ಮೆ ಸದ್ದು ಮಾಡಲು ಸಜ್ಜಾಗಿರುವ ಹೊಸ ಕಾರು ಹತ್ತಾರು ಹೊಸ ಸೌಲಭ್ಯಗಳನ್ನು ಹೊತ್ತು ಬಂದಿರುವುದು ಗ್ರಾಹಕರ ಆಕರ್ಷಣೆಗೆ ಕಾರಣವಾಗಿದೆ.
ಮಾರುತಿ ಸುಜುಕಿ ಸಂಸ್ಥೆಯ ಈಗಾಗಲೇ ಎರ್ಟಿಗಾ ಮಾರಾಟದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಪ್ರಸ್ತುತ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ನೆಕ್ಸ್ಟ್ ಜನರೇಷನ್ ಎರ್ಟಿಗಾ ಕಾರನ್ನು ರಸ್ತೆಗಿಳಿಸಿದೆ. ಹೀಗಾಗಿ ಬಿಡುಗಡೆ ನಂತರ ಸದ್ದು ಮಾಡುತ್ತಿರುವ ಎರ್ಟಿಗಾ ಖರೀದಿಗಾಗಿ ಸುಮಾರು 10 ಸಾವಿರಕ್ಕೂ ಹೆಚ್ಚು ಗ್ರಾಹಕರು ಈಗಾಗಲೇ ಮುಂಗಡ ಪಾವತಿ ಹೊಸ ಕಾರು ಪಡೆದುಕೊಳ್ಳುವ ತವಕದಲ್ಲಿದ್ದಾರೆ.
ಇನ್ನು ಹೊಸ ಎರ್ಟಿಗಾ ಕಾರು ದೆಹಲಿಯ ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.44 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ.10.90 ಲಕ್ಷ ಬೆಲೆ ಹೊಂದಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ಒಟ್ಟು 10 ವೆರಿಯೆಂಟ್ಗಳಲ್ಲಿ ಎರ್ಟಿಗಾ ಕಾರುಗಳನ್ನು ಆಯ್ಕೆ ಮಾಡಬಹುದಾಗಿದೆ.
ನೆಕ್ಸ್ಟ್ ಜನರೇಷನ್ ಮಾರುತಿ ಸುಜುಕಿ ಎರ್ಟಿಗಾ ಕಾರು ವಿಶ್ವದರ್ಜೆ ಕಾರು ಉತ್ಪಾದನಾ ಮಾದರಿಯಾದ 'ಹಾರ್ಟ್ಟೆಕ್ಟ್' ಪ್ಲಾಟ್ಫಾರ್ಮ್ನ ಅಡಿಯಲ್ಲಿ ವಿನ್ಯಾಸ ಮಾಡಲಾಗಿದ್ದು, ಮೂರನೇ ಸಾಲಿನಲ್ಲಿ ಕೂರುವ ಪ್ರಯಾಣಿಕರ ಆಸನ ವಿನ್ಯಾಸವನ್ನು ಈ ಬಾರಿ ತುಸು ವಿಸ್ತರಿಸಲಾಗಿದೆ.
ನೆಕ್ಸ್ಟ್ ಜನರೇಷನ್ ಎರ್ಟಿಗಾ ಎಂಪಿವಿ ಕಾರಿನ ಮುಂಭಾಗದಲ್ಲಿ ಕ್ರೋಮ್ ಸ್ಟ್ರಿಪ್ನೊಂದಿಗೆ ಜೋಡಿಸಲಾದ ಹೊಸ ಗ್ರಿಲ್ ಮತ್ತು ಪ್ರೊಜೆಕ್ಟರ್ ಹೆಡ್ಲ್ಯಾಂಪ್ಗಳನ್ನು ಪಡೆದುಕೊಂಡಿದ್ದು, ಹಾಗೆಯೇ ಕಾರಿನ ಸೈಡ್ನಲ್ಲಿ ಫ್ಲೋಟಿಂಗ್ ರೂಫ್ ವಿನ್ಯಾಸ, 15-ಇಂಚಿನ ಅಲಾಯ್ ಚಕ್ರಗಳು ಮತ್ತು ಕಾರಿನ ಹಿಂಭಾಗದಲ್ಲಿ 'ಎಲ್' ಆಕಾರದ ಟೈಲ್ ಲೈಟ್ ಅನ್ನು ಪಡೆದಿದೆ.
ತಾಂತ್ರಿಕ ವೈಶಿಷ್ಟ್ಯತೆಗಳು
ಮಾರುತಿ ಸುಜುಕಿ ಡಿಜೈರ್ ಕಾರಿನಲ್ಲಿರುವ 7-ಇಂಚಿನ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಅನ್ನು ಹೊಸ ಎರ್ಟಿಗಾದಲ್ಲೂ ಬಳಕೆ ಮಾಡಲಾಗಿದ್ದು, ಆಂಡ್ರಾಯ್ಡ್ ಆಟೋ, ಆ್ಯಪಲ್ ಕಾರ್ ಪ್ಲೇ ಮತ್ತು ಬ್ಲೂಟೂಥ್ ಕನೆಕ್ಟಿವಿಟಿಯನ್ನು ಸಪೋರ್ಟ್ ಮಾಡುತ್ತದೆ. ಇದಲ್ಲದೇ ಕಪ್ ಹೋಲ್ಡರ್ಸ್ ಅನ್ನೂ ಕೂಡಾ ನೀಡಲಾಗುತ್ತಿದ್ದು, ಇನ್ಫೋಟೈನ್ಮೆಂಟ್ ಸಿಸ್ಟಮ್ಗೆ ಸಹಾಯವಾಗುವ ಹಲವಾರು ಬಟನ್ಗಳೊಂದಿಗೆ ಲೆದರ್ ಹೊದಿಕೆಯಿಂದ ಸಜ್ಜುಗೊಂಡ ಸ್ಟೀರಿಂಗ್ ವ್ಹೀಲ್ ಜೋಡಿಸಲಾಗಿದೆ.
ಸುರಕ್ಷಾ ವೈಶಿಷ್ಟ್ಯತೆಗಳು
ಹೊಸ ಎರ್ಟಿಗಾ ಕಾರಿನಲ್ಲಿ ಈ ಬಾರಿ ಪ್ರಯಾಣಿಕರ ಸುರಕ್ಷತೆಗಾಗಿ ಹೆಚ್ಚಿನ ಒತ್ತು ನೀಡಲಾಗಿದ್ದು, ಎಬಿಎಸ್, ಇಬಿಡಿ, ಐಎಸ್ಓಫಿಕ್ಸ್ ಚೈಲ್ಡ್ ಸೀಟ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಕಾರಿನ ಎಲ್ಲಾ ಮಾದರಿಗಳಲ್ಲಿ ನೀಡಲಾಗಿದೆ. ಇದಲ್ಲದೆ ಹೈ ಎಂಡ್ ಮಾದರಿಗಳಲ್ಲಿ ಸೇಫ್ಟಿ ಸೀಟ್ ಬೆಲ್ಟ್ ರಿಮೈಂಡರ್, ಸ್ಪೀಡ್ ವಾರ್ನಿಂಗ್ ಮತ್ತು ರಿಯರ್ ಪಾರ್ಕಿಂಗ್ ಸೆನ್ಸಾರ್ ಅನ್ನು ಒದಗಿಸಲಾಗಿದೆ.
ಎಂಜಿನ್ ಸಾಮರ್ಥ್ಯ
ಹೊಸ ಎರ್ಟಿಗಾ ಕಾರಿನಲ್ಲಿ ಪ್ರಮುಖ ಎರಡು ಎಂಜಿನ್ ಆಯ್ಕೆಗಳನ್ನು ನೀಡಲಾಗಿದ್ದು, ಈ ಹಿಂದಿನ 1.4-ಲೀಟರ್ ಪೆಟ್ರೋಲ್ ಎಂಜಿನ್ ಬದಲಾಗಿ 1.5-ಲೀಟರ್ ಕೆ-ಸೀರಿಸ್ ಪೆಟ್ರೋಲ್ ಎಂಜಿನ್ ಜೋಡಿಸಲಾಗಿದೆ. ಹಾಗೆಯೇ ಡೀಸೆಲ್ ಕಾರು 1.3-ಲೀಟರ್ ಎಂಜಿನ್ ಪಡೆದಿದ್ದು, ಇಂಧನ ದಕ್ಷತೆ ಹೆಚ್ಚಿಸಲು ಎಸ್ಹೆಚ್ವಿಎಸ್ ಮೈಲ್ಡ್-ಹೈಬ್ರಿಡ್ ಟೆಕ್ನಾಲಜಿ ಬಳಕೆ ಮಾಡಲಾಗಿದೆ. ಜೊತೆಗೆ ಬೇಡಿಕೆಗೆ ಅನುಗುಣವಾಗಿ 4-ಸ್ಪೀಡ್ ಆಟೋಮ್ಯಾಟಿಕ್ ಮತ್ತು 5-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಪಡೆದಿದೆ.
MOST READ: ಫ್ಯಾನ್ಸ್ ಅಸಮಾಧಾನಕ್ಕೆ ಕಾರಣವಾಯ್ತು ಜಾವಾ ಹೊಸ ಬೈಕಿನ ತಾಂತ್ರಿಕ ಅಂಶಗಳ ಕೊರತೆ
ಮೈಲೇಜ್
ಮಾರುತಿ ಸುಜುಕಿ ಸಂಸ್ಥೆಯು ಹೇಳಿಕೊಂಡಿರುವ ಪ್ರಕಾರ, ಡಿಸೇಲ್ ವರ್ಷನ್ಗಳು ಪ್ರತಿ ಲೀಟರ್ಗೆ 25 ಕಿ.ಮಿ ಮೈಲೇಜ್ ನೀಡಿದ್ದಲ್ಲಿ ಪೆಟ್ರೋಲ್ ಮಾದರಿಯ ಮ್ಯಾನುವಲ್ ಆವೃತ್ತಿಯು ಪ್ರತಿ ಲೀಟರ್ಗೆ 19 ಕಿ.ಮಿ ಮತ್ತು ಆಟೋಮ್ಯಾಟಿಕ್ ಆವೃತ್ತಿಯು ಪ್ರತಿ ಲೀಟರ್ಗೆ 18 ಕಿ.ಮಿ ಮೈಲೇಜ್ ಹಿಂದಿರುಗಿಸಲಿದೆ.
ಲಭ್ಯವಿರುವ ಬಣ್ಣಗಳು
ಹೊಸ ಎರ್ಟಿಗಾ ಕಾರುಗಳು ಒಟ್ಟು ಐದು ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದ್ದು, ಪರ್ಲ್ ಮೆಟಾಲಿಕ್ ಔಬರ್ನ್ ರೆಡ್, ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಮೆಟಾಲಿಕ್ ಆಕ್ಸ್ಫಾರ್ಡ್ ಬ್ಲೂ, ಪರ್ಲ್ ಆರ್ಕ್ಟಿಕ್ ವೈಟ್ ಮತ್ತು ಮೆಟಾಲಿಕ್ ಸಿಲ್ಕಿ ಗ್ರೇ ಬಣ್ಣಗಳನ್ನು ಆಯ್ಕೆ ಮಾಡಬಹುದು.
MOST READ: ವಾಹನ ಚಾಲನೆ ವೇಳೆ ಹೀಗೆಲ್ಲಾ ಮಾಡಿದ್ರೆ 3 ತಿಂಗಳು ಕಾಲ ಡಿಎಲ್ ರದ್ದಾಗುತ್ತೆ.!
ಒಟ್ಟಿನಲ್ಲಿ 7-ಸೀಟರ್ ಮಾದರಿಗಳಲ್ಲಿ ವಿಶೇಷ ಎನ್ನಿಸುವ ಹೊಸ ಎರ್ಟಿಗಾ ಕಾರು 209-ಲೀಟರ್ನಷ್ಟು ಬೂಟ್ ಸ್ಪೆಸ್ ಸೌಲಭ್ಯ ಪಡೆದಿದ್ದು, ದೇಶದಲ್ಲಿ ಉತ್ತಮ ಇಂಧನ ದಕ್ಷತೆ ಹೊಂದಿರುವ ಎಂಪಿವಿ ಕಾರುಗಳಲ್ಲಿ ಅಗ್ರಸ್ಥಾನದಲ್ಲಿ ನಿಲ್ಲುತ್ತದೆ. ಹೀಗಾಗಿ ಸದ್ಯ ಮಾರುಕಟ್ಟೆಯಲ್ಲಿರುವ ಮಹೀಂದ್ರಾ ಮರಾಜೊ ಕಾರುಗಳಿಗೆ ಇದು ಸಾಕಷ್ಟು ಪೈಪೋಟಿ ನೀಡಲಿದೆ.