Just In
- 1 hr ago ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- 1 hr ago ಎಲೆಕ್ಟ್ರಿಕ್ ಅವತಾರದಲ್ಲಿ ಬರಲಿದೆ ಹೋಂಡಾ ಆಕ್ಟಿವಾ: ಎಲೆಕ್ಟ್ರಿಕ್ ಸ್ಕೂಟರ್ಗಳ ರಾಜ ಆಗುತ್ತಾ?
- 1 hr ago ಪ್ರೇರಣಾತ್ಮಕ ಕಥೆ: ಮನೆ ಕೆಲಸದಾಕೆಗೆ 'ಸೈಕಲ್' ಖರೀದಿಸಲು ಸಹಾಯ ಮಾಡಿದ ಮಾಲೀಕ.. ವಿಡಿಯೋ ವೈರಲ್
- 3 hrs ago ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
Don't Miss!
- News Neha Hiremath: ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಎಬಿವಿಪಿ ಪ್ರತಿಭಟನೆ
- Movies ರಾಜಕೀಯ ಆಯಾಮ ಬೇಡ, ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದ ರಚಿತಾ ರಾಮ್ ; #JusticeForNeha ಎಂದ ರಿಷಬ್ ಶೆಟ್ಟಿ..!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮುಂದಿನ ತಿಂಗಳು ಬಿಡುಗಡೆಗೊಳ್ಳಲಿರುವ ಮಾರುತಿ ಸುಜುಕಿ ಎರ್ಟಿಗಾ ಫೇಸ್ಲಿಫ್ಟ್ ಕಾರಿನ ವಿಶೇಷತೆ ಏನು.?
ದೇಶಿಯ ವಾಹನ ತಯಾರಕ ಸಂಸ್ಥೆಯಾದ ಮಾರುತಿ ಸುಜುಕಿ ಈ ಹಿಂದೆಯೆ ತಮ್ಮ ಸಿಯಾಜ್ ಸೆಡಾನ್ ಕಾರಿನ ಫೇಸ್ಲಿಫ್ಟ್ ಅನ್ನು ಬಿಡುಗದೆಗೊಳಿಸಿದ್ದು, ಇದೀಗ ಸಂಸ್ಥೆಯು ತಮ್ಮ ಜನಪ್ರಿಯ ಎರ್ಟಿಗಾ ಫೇಸ್ಲಿಫ್ಟ್ ಕಾರನ್ನು ಬಿಡುಗಡೆಗೊಳಿಸಲು ಸಿದ್ದವಾಗಿದೆ. ಮಾ
ದೇಶಿಯ ವಾಹನ ತಯಾರಕ ಸಂಸ್ಥೆಯಾದ ಮಾರುತಿ ಸುಜುಕಿ ಈ ಹಿಂದೆಯೆ ತಮ್ಮ ಸಿಯಾಜ್ ಸೆಡಾನ್ ಕಾರಿನ ಫೇಸ್ಲಿಫ್ಟ್ ಅನ್ನು ಬಿಡುಗದೆಗೊಳಿಸಿದ್ದು, ಇದೀಗ ಸಂಸ್ಥೆಯು ತಮ್ಮ ಜನಪ್ರಿಯ ಎರ್ಟಿಗಾ ಫೇಸ್ಲಿಫ್ಟ್ ಕಾರನ್ನು ಬಿಡುಗಡೆಗೊಳಿಸಲು ಸಿದ್ದವಾಗಿದೆ. ಮಾಹಿತಿಗಳ ಪ್ರಕಾರ ಮಾರುತಿ ಸುಜುಕಿ ಎರ್ಟಿಗಾ ಫೇಸ್ಲಿಫ್ಟ್ ಕಾರುಗಳು ಅಕ್ಟೋಬರ್ ತಿಂಗಳಿನ ಕೊನೆಯ ವಾರದಲ್ಲಿ ಬಿಡುಗಡೆಗೊಳ್ಳಲಿದೆ ಎನ್ನಲಾಗಿದೆ.
ಈಗಾಗಲೆ ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾರುತಿ ಸುಜುಕಿ ಎರ್ಟಿಗಾ ಫೇಸ್ಲಿಫ್ಟ್ ಕಾರು ಮಾರಾಟಗೊಳ್ಳುತ್ತಿದ್ದು, ಇದೀಗ ಭಾರತದಲ್ಲಿ ದಸರಾ ಹಾಗು ದೀಪಾವಳಿ ಹಬ್ಬದ ಸಮಯದಲ್ಲಿ ಹೊಸ ವಾಹನವನ್ನು ಖರೀದಿಸಲು ಇಚ್ಛಿಸುವ ಗ್ರಾಹಕರಿಗಾಗಿ ಬಿಡುಗಡೆಗೊಳಿಸಲಿದೆ.
ನೆಕ್ಸಾ ಶೋರಂನಲ್ಲಿ ಮಾತ್ರ ಲಭ್ಯ
ಬಿಡುಗಡೆಗೊಳ್ಳಲಿರುವ ಹೊಸ ಎರ್ಟಿಗಾ ಎಮ್ಪಿವಿ ಕಾರುಗಳು ನೆಕ್ಸಾ ಶೋರಂನಲ್ಲಿ ಮಾತ್ರ ಖರೀದಿಗೆ ಲಭ್ಯವಿರಲಿದ್ದು, ಇಗ್ನಿಸ್, ಬಲೆನೊ, ಬಲೆನೊ ಆರ್ಎಸ್, ಎಸ್-ಕ್ರಾಸ್ ಮತ್ತು ಸಿಯಾಜ್ ಕಾರುಗಳ ಜೊತೆಗೆ ಮಾರಾಟಗೊಳ್ಳಲಿದೆ. ಹಿಂದಿನ ತಲೆಮಾರಿನ ಎರ್ಟಿಗಾ ಕಾರುಗಳನ್ನು ಗ್ರಾಹಕರು ಸಂಸ್ಥೆಯ ಅಧಿಕೃತ ಡೀಲರ್ಗಳ ಬಳಿ ಖರೀದಿಸಬಹುದಾಗಿದೆ.
ಹೊಸ ವಿನ್ಯಾಸ
ಎರ್ಟಿಗಾ ಎಮ್ಪಿವಿ ಕಾರು ಈ ಬಾರಿ ಹೊಸ ವಿನ್ಯಾಸವನ್ನು ಪಡೆದುಕೊಂಡಿರಲಿದೆ. ಕಾರಿನ ಮುಂಭಾಗದಲ್ಲಿ ಕ್ರೋಮ್ ಸ್ಟ್ರಿಪ್ನೊಂದಿಗೆ ಜೋಡಿಸಲಾದ ಹೊಸ ಗ್ರಿಲ್ ಮತ್ತು ಪ್ರೊಜೆಕ್ಟರ್ ಹೆಡ್ಲ್ಯಾಂಪ್ಗಳನ್ನು ಪಡೆದುಕೊಂಡಿರಲಿದೆ. ಕಾರಿನ ಸೈಡ್ನಲ್ಲಿ ಫ್ಲೋಟಿಂಗ್ ರೂಫ್ ವಿನ್ಯಾಸ ಮತ್ತು 15 ಇಂಚಿನ ಅಲಾಯ್ ಚಕ್ರಗಳನ್ನು ನೀಡಲಾಗಿದೆ. ಇನ್ನು ಕಾರಿನ ಹಿಂಭಾಗದಲ್ಲಿ 'ಎಲ್' ಆಕಾರದ ಟೈಲ್ ಲೈಟ್ ಅನ್ನು ಪಡೆದಿದ್ದು, ಒಟ್ಟಾರೆಯಾಗಿ ಈ ಕಾರು ಎಮ್ಪಿವಿ ಕಾರಿಗಿಂತಲೂ ಎಸ್ಯುವಿ ಮಾದರಿಯ ವಿನ್ಯಾಸವನ್ನು ಪಡೆದಿರಲಿದೆ.
ವಿಶಾಲವಾದ ಆಕಾರ
ಹಳೆಯ ಮಾಡೆಲ್ ಎರ್ಟಿಗಾ ಕಾರಿಗೆ ಹೋಲಿಸಿದರೆ ಬಿಡುಗಡೆಗೊಳ್ಳಲಿರುವ ಹೊಸ ಎರ್ಟಿಗಾ ಕಾರು 110ಎಮ್ಎಮ್ ಉದ್ದ, 50ಎಮ್ಎಮ್ ಅಗಲ ಮತ್ತು 5ಎಮ್ಎಮ್ ಎತ್ತರ ಅಧಿಕವಾದ ಸುತ್ತಳತೆಯನ್ನು ಪಡೆದುಕೊಂಡಿರಲಿದೆ. ಈ ಬದಲಾವಣೆಯು ಮೂರನೆಯ ಸಾಲಿನಲ್ಲಿ ಕೂರುವ ಪ್ರಯಾಣಿಕರು ಆರಾಮವಾಗಿ ಕೂರಬಹುದು.
MOST READ: ಆರ್ಇಯಿಂದ ಮೋಸದ ವ್ಯಾಪಾರ- ದುಬಾರಿ ಬೆಲೆಯ ಪೆಗಾಸಸ್ ಬೈಕ್ ತಿಪ್ಪೆಗೆ ಎಸೆದ ಬೈಕ್ ಮಾಲೀಕ
ಹೊಸ ಇಂಟೀರಿಯರ್
ಎರ್ಟಿಗಾ ಕಾರಿನಲ್ಲಿ ಈ ಬಾರಿ ಮರುವಿನ್ಯಾಸಗೊಳಿಸಲಾದ ಡ್ಯಾಶ್ಬೋರ್ಡ್ ಅನ್ನು ಅಳವಡಿಸಲಾಗಿದ್ದು, ಹೊಸ ಸಿಯಾಜ್ ಕಾರಿನಲ್ಲಿ ಒದಗಿಸಲಾಗಿರುವ ಡ್ಯುಯಲ್ ಟೋನ್ ಡ್ಯಾಶ್ಬೋರ್ಡ್ ಮತ್ತು ವುಡನ್ ಟ್ರಿಮ್ ಅನ್ನು ನೀಡಲಾಗಿದೆ. ಇನ್ನು ಕಾರಿನ ಟಾಪ್ ಎಂಡ್ ಟ್ರಿಮ್ನಲ್ಲಿ ಲೆಧರ್ ಸೀಟ್ಗಳನ್ನು ನೀಡುವ ಭರವಸೆ ಇದೆ ಎನ್ನಲಾಗಿದೆ.
ಉಪಕರಣಗಳು
ಕಳೆದ ದಿನಗಳ ಹಿಂದೆ ಬಿಡುಗಡೆಗೊಂಡ ಡಿಜೈರ್ ಕಾರಿನಲ್ಲಿ ಬಳಸಲಾದ 7 ಇಂಚಿನ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಅನ್ನು ಪಡೆದುಕೊಂಡಿರಲಿದೆ. ಈ ಉಪಕರಣವು ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ ಮತ್ತು ಬ್ಲೂತೂತ್ ಕನೆಕ್ಟಿವಿಟಿಯನ್ನು ಸಪೋರ್ಟ್ ಮಾಡುತ್ತದೆ. ಇದಲ್ಲದೇ ಕಪ್ ಹೋಲ್ಡರ್ಸ್ ಅನ್ನೂ ಕೂಡಾ ನೀಡಲಾಗುತ್ತಿದ್ದು, ಇನ್ಫೋಟೈನ್ಮೆಂಟ್ ಸಿಸ್ಟಮ್ಗೆ ಸಹಾಯವಾಗುವ ಹಲವಾರು ಬಟನ್ಗಳುಳ್ಳ ಲೆಧರ್ನಿಂದ ಸಜ್ಜುಗೊಂಡ ಸ್ಟೀರಿಂಗ್ ವ್ಹೀಲ್ ಅನ್ನು ಜೋಡಿಸಲಾಗಿದೆ.
ಸುರಕ್ಷಾ ವೈಶಿಷ್ಟ್ಯತೆಗಳು
ಹೊಸ ಎರ್ಟಿಗಾ ಎಮ್ಪಿ ಕಾರಿನಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಈ ಬಾರಿ ಎಬಿಎಸ್, ಇಬಿಡಿ, ಐಎಸ್ಓಫಿಕ್ಸ್ ಚೈಲ್ಡ್ ಸೀಟ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಕಾರಿನ ಎಲ್ಲಾ ಮಾದರಿಗಳಲ್ಲಿ ನೀಡಲಾಗಿದೆ. ಇದಲ್ಲದೆ ಸೇಫ್ಟಿ ಸೀಟ್ ಬೆಲ್ಟ್ ರಿಮೈಂಡರ್, ಸ್ಪೀಡ್ ವಾರ್ನಿಂಗ್ ಮತ್ತು ರಿಯರ್ ಪಾರ್ಕಿಂಗ್ ಸೆನ್ಸಾರ್ಸ್ ಅನ್ನು ಒದಗಿಸಲಾಗಿದೆ.
ಎಂಜಿನ್ ಸಾಮರ್ಥ್ಯ
ಮಾಹಿತಿಗಳ ಪ್ರಕಾರ ಬಿಡುಗಡೆಗೊಳ್ಳಲಿರುವ ಎರ್ಟಿಗಾ ಕಾರು ಹಳೆಯ ಮಾದರಿಯಲ್ಲಿನ 1.3 ಲೀಟರ್ ಮಲ್ಟಿ ಜೆಟ್ ಎಂಜಿನ್ನ ಜಾಗದಲ್ಲಿ ಹೊಸ 1.5 ಲೀಟರ್ ಡೀಸೆಲ್ ಎಂಜಿನ್ ಅನ್ನು ನೀಡಲಿದೆ ಎಂಬ ಸುದ್ದಿ ಕೇಳಿಬರುತ್ತಿದೆ. ಹೊಸ ಎಂಜಿನ್ ಅನ್ನು ಹೊರತು ಪಡಿಸಿ, ಸಿಯಾಜ್ ಕಾರಿನಲ್ಲಿ ಬಳಸಲಾದ 103 ಬಿಹೆಚ್ಪಿ ಮತ್ತು 138ಎನ್ಎಮ್ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಹೊಂದಿರುವ 1.5 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಪಡೆಯಲಿದೆ. ಜೊತೆಗೆ ಎರಡು ಎಂಜಿನ್ನ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಎಸ್ಹೆಚ್ವಿಎಸ್ ಹೈಬ್ರಿಡ್ ಸಿಸ್ಟಮ್ ಅನ್ನು ಒದಗಿಸಲಾಗಿದೆ.
MOST READ: ಕಾರು ರಿಪೇರಿಗೆ ಹೋದ ಸ್ಕೋಡಾ ಮಾಲಕಿಗೆ ಡೀಲರ್ಸ್ ಹೀಗಾ ಮಾಡೋದು.?
ಗೇರ್ ಬಾಕ್ಸ್
ಸ್ಪೈ ಚಿತ್ರಗಳಲ್ಲಿ ಗಮಸಿದ್ದಲ್ಲಿ ಈ ಕಾರು 6 ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಅನ್ನು ಅಳವಡಿಸಲಾಗಿದ್ದು, ಇದು ಕೇವಲ ಡಿಸೆಲ್ ಮಾದರಿಯ ಕಾರಿನಲ್ಲಿ ಮಾತ್ರ ಈ ಆಯ್ಕೆಯು ಲಭ್ಯವಿರಲಿದೆ ಎನ್ನಲಾಗಿದೆ. ಆದರೆ ಪೆಟ್ರೋಲ್ ಎಂಜಿನ್ ಅನ್ನು 5 ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಅನ್ನು ಅಳವಡಿಸಲಾಗಿದೆ.
ಹೊಸ ಕಾರಿನ ಬೆಲೆ (ಅಂದಾಜು)
ಬಿಡುಗಡೆಗೊಳ್ಳಲಿರುವ ಹೊಸ ಎರ್ಟೀಗಾ ಎಮ್ಪಿವಿ ಕಾರುಗಳು ದೆಹಲಿಯ ಎಕ್ಸ್ ಶೋರಂ ಪ್ರಕಾರ ರೂ. 7 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆಯಲಿದೆ ಎಂದು ಅಂದಾಜಿಸಲಾಗಿದ್ದು, ಮಾರುಕಟ್ಟೆಯಲ್ಲಿ ಮಹೀಂದ್ರಾ ಮರಾಜೊ ಎಮ್ಪಿವಿ, ಇನೊವಾ ಕ್ರಿಸ್ಟಾ ಕಾರುಗಳಿಗೆ ಪೈಪೋಟಿ ನೀಡಲಿದೆ.