ನವೆಂಬರ್ ಅಂತ್ಯಕ್ಕೆ ಹೊಸ ಎರ್ಟಿಗಾ ಕಾರು ಬಿಡುಗಡೆಯಾಗುವುದು ಪಕ್ಕಾ..!

ದೇಶದ ಜನಪ್ರಿಯ ವಾಹನ ತಯಾರಕ ಸಂಸ್ಥೆಯಾದ ಮಾರುತಿ ಸುಜುಕಿ ಸಂಸ್ಥೆಯು ಕಳೆದ ತಿಂಗಳ ಹಿಂದಷ್ಟೇ ಸಿಯಾಜ್ ಸೆಡಾನ್ ಫೇಸ್‍‍ಲಿಫ್ಟ್ ಬಿಡುಗಡೆಗೊಳಿಸಿದ್ದು, ಇದೀಗ ಎರ್ಟಿಗಾ ಫೇಸ್‍‍ಲಿಫ್ಟ್ ಕಾರನ್ನು ಬಿಡುಗಡೆಗೊಳಿಸಲು ಸಿದ್ದವಾಗಿದೆ. ಮಾಹಿತಿಗಳ ಪ್ರಕಾರ, ಎರ್ಟಿಗಾ ಹೊಸ ಕಾರು ನವೆಂಬರ್ 21ಕ್ಕೆ ಬಿಡುಗಡೆಯಾಗುವುದು ಖಚಿತವಾಗಿದ್ದು, ವಿನೂತನ ವಿನ್ಯಾಸಗಳನ್ನು ಹೊತ್ತು ಬರುತ್ತಿರುವ ಹೊಸ ಕಾರು ಭಾರೀ ನೀರಿಕ್ಷೆ ಹುಟ್ಟುಹಾಕಿದೆ.

ನವೆಂಬರ್ ಅಂತ್ಯಕ್ಕೆ ಹೊಸ ಎರ್ಟಿಗಾ ಕಾರು ಬಿಡುಗಡೆಯಾಗುವುದು ಪಕ್ಕಾ..!

ಸುಜಕಿ ಎರ್ಟಿಗಾ ಫೇಸ್‌ಲಿಫ್ಟ್ ಕಾರು ಈಗಾಗಲೇ ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಬಿಡುಗಡೆಗೊಂಡು ಭರ್ಜರಿಯಾಗಿ ಮಾರಾಟಗೊಳ್ಳುತ್ತಿದ್ದು, ಇದೀಗ ಭಾರತದಲ್ಲೂ ಬಿಡುಗಡೆಗೆ ಸಿದ್ದವಾಗಿದ್ದು, ನವೆಂಬರ್ 21ರಂದು ಹೊಸ ಕಾರು ಬಿಡುಗಡೆಗೊಳಿಸುವ ಬಗ್ಗೆ ಮಾರುತಿ ಸುಜುಕಿ ಸಂಸ್ಥೆಯೇ ಅಧಿಕೃತ ಮಾಹಿತಿ ಹಂಚಿಕೊಂಡಿದೆ. ಹೀಗಾಗಿ ಹೊಸ ಎರ್ಟಿಗಾ ಕಾರು ಎಂಪಿವಿ ಕಾರು ಪ್ರಿಯರಲ್ಲಿ ಕುತೂಹಲ ಹುಟ್ಟುಹಾಕಿದ್ದು, ಹೊಸ ಕಾರಿನ ವಿಶೇಷತೆಗಳ ಕುರಿತು ಒಂದಿಷ್ಟು ಮಾಹಿತಿ ಇಲ್ಲಿದೆ.

ನವೆಂಬರ್ ಅಂತ್ಯಕ್ಕೆ ಹೊಸ ಎರ್ಟಿಗಾ ಕಾರು ಬಿಡುಗಡೆಯಾಗುವುದು ಪಕ್ಕಾ..!

ನೆಕ್ಸಾ ಶೋರಂ‍ನಲ್ಲಿ ಮಾತ್ರ ಲಭ್ಯ

ಬಿಡುಗಡೆಗೊಳ್ಳಲಿರುವ ಹೊಸ ಎರ್ಟಿಗಾ ಎಂಪಿವಿ ಕಾರು ನೆಕ್ಸಾ ಶೋರಂನಲ್ಲಿ ಮಾತ್ರ ಖರೀದಿಗೆ ಲಭ್ಯವಿರಲಿದ್ದು, ಇಗ್ನಿಸ್, ಬಲೆನೊ, ಬಲೆನೊ ಆರ್‍‍ಎಸ್, ಎಸ್ ಕ್ರಾಸ್ ಮತ್ತು ಸಿಯಾಜ್ ಕಾರುಗಳ ಜೊತೆಗೆ ಮಾರಾಟಗೊಳ್ಳಲಿದೆ. ಈ ಹಿಂದಿನ ತಲೆಮಾರಿನ ಎರ್ಟಿಗಾ ಕಾರುಗಳನ್ನು ಗ್ರಾಹಕರು ಸಂಸ್ಥೆಯ ಅಧಿಕೃತ ಡೀಲರ್‍‍ಗಳ ಬಳಿ ಖರೀದಿಸಬಹುದಾಗಿದೆ.

ನವೆಂಬರ್ ಅಂತ್ಯಕ್ಕೆ ಹೊಸ ಎರ್ಟಿಗಾ ಕಾರು ಬಿಡುಗಡೆಯಾಗುವುದು ಪಕ್ಕಾ..!

ಹೊಸ ವಿನ್ಯಾಸ

ಎರ್ಟಿಗಾ ಕಾರು ಈ ಬಾರಿ ಹಲವು ಹೊಸ ವಿನ್ಯಾಸವನ್ನು ಪಡೆದುಕೊಂಡಿದ್ದು, ಕಾರಿನ ಮುಂಭಾಗದಲ್ಲಿ ಕ್ರೋಮ್ ಸ್ಟ್ರಿಪ್‍‍ನೊಂದಿಗೆ ಜೋಡಿಸಲಾದ ಹೊಸ ಗ್ರಿಲ್ ಮತ್ತು ಪ್ರೊಜೆಕ್ಟರ್ ಹೆಡ್‍‍ಲ್ಯಾಂಪ್‍‍ಗಳನ್ನು ಪಡೆದುಕೊಂಡಿರಲಿದೆ.

ನವೆಂಬರ್ ಅಂತ್ಯಕ್ಕೆ ಹೊಸ ಎರ್ಟಿಗಾ ಕಾರು ಬಿಡುಗಡೆಯಾಗುವುದು ಪಕ್ಕಾ..!

ಕಾರಿನ ಸೈಡ್‍ ಪ್ರೋಫೈಲ್‌ನಲ್ಲಿ ಫ್ಲೋಟಿಂಗ್ ರೂಫ್ ವಿನ್ಯಾಸ ಮತ್ತು 15 ಇಂಚಿನ ಅಲಾಯ್ ಚಕ್ರಗಳನ್ನು ನೀಡಲಾಗಿದೆ. ಇನ್ನು ಕಾರಿನ ಹಿಂಭಾಗದಲ್ಲಿ 'ಎಲ್' ಆಕಾರದ ಟೈಲ್ ಲೈಟ್ ಅನ್ನು ಪಡೆದಿದ್ದು, ಒಟ್ಟಾರೆಯಾಗಿ ಈ ಕಾರು ಎಂಪಿವಿ ಕಾರಿಗಿಂತಲೂ ಎಸ್‍‍ಯುವಿ ಮಾದರಿಯ ವಿನ್ಯಾಸವನ್ನು ಪಡೆದಿರಲಿದೆ.

ನವೆಂಬರ್ ಅಂತ್ಯಕ್ಕೆ ಹೊಸ ಎರ್ಟಿಗಾ ಕಾರು ಬಿಡುಗಡೆಯಾಗುವುದು ಪಕ್ಕಾ..!

ವಿಶಾಲವಾದ ಆಕಾರ

ಹಳೆಯ ಮಾದರಿಯ ಎರ್ಟಿಗಾ ಕಾರಿಗೆ ಹೋಲಿಕೆ ಮಾಡಿದ್ದಲ್ಲಿ ಬಿಡುಗಡೆಗೊಳ್ಳಲಿರುವ ಹೊಸ ಎರ್ಟಿಗಾ ಕಾರು 110ಎಂಎಂ ಉದ್ದ, 50ಎಂಎಂ ಅಗಲ ಮತ್ತು 5ಎಂಎಂ ಎತ್ತರ ಅಧಿಕವಾದ ಸುತ್ತಳತೆಯನ್ನು ಪಡೆದುಕೊಂಡಿದ್ದು, ಈ ಬದಲಾವಣೆಯು ಮೂರನೆಯ ಸಾಲಿನಲ್ಲಿ ಕೂರುವ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲಕರವಾಗಲಿದೆ.

ನವೆಂಬರ್ ಅಂತ್ಯಕ್ಕೆ ಹೊಸ ಎರ್ಟಿಗಾ ಕಾರು ಬಿಡುಗಡೆಯಾಗುವುದು ಪಕ್ಕಾ..!

ಹೊಸ ಇಂಟೀರಿಯರ್

ಎರ್ಟಿಗಾ ಕಾರಿನಲ್ಲಿ ಈ ಬಾರಿ ಮರುವಿನ್ಯಾಸಗೊಳಿಸಲಾದ ಡ್ಯಾಶ್‍‍ಬೋರ್ಡ್ ಅನ್ನು ಅಳವಡಿಸಲಾಗಿದ್ದು, ಹೊಸ ಸಿಯಾಜ್ ಕಾರಿನಲ್ಲಿ ಒದಗಿಸಲಾಗಿರುವ ಡ್ಯುಯಲ್ ಟೋನ್ ಡ್ಯಾಶ್‍ಬೋರ್ಡ್ ಮತ್ತು ವುಡನ್ ಟ್ರಿಮ್ ಅನ್ನು ನೀಡಲಾಗಿದೆ. ಇನ್ನು ಕಾರಿನ ಟಾಪ್ ಎಂಡ್ ಟ್ರಿಮ್‍‍ನಲ್ಲಿ ಲೆದರ್ ಸೀಟ್‍‍ಗಳನ್ನು ನೀಡುವ ಭರವಸೆ ಇದೆ ಎನ್ನಲಾಗಿದೆ.

ನವೆಂಬರ್ ಅಂತ್ಯಕ್ಕೆ ಹೊಸ ಎರ್ಟಿಗಾ ಕಾರು ಬಿಡುಗಡೆಯಾಗುವುದು ಪಕ್ಕಾ..!

ಕಾರಿನ ಉಪಕರಣಗಳು

ಈ ಹಿಂದೆ ಬಿಡುಗಡೆಗೊಂಡಿದ್ದ ಡಿಜೈರ್ ಕಾರಿನಲ್ಲಿ ಬಳಸಲಾದ 6.8-ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ಹೊಸ ಎರ್ಟಿಗಾ ಕೂಡಾ ಪಡೆದಿದ್ದು, ಅಂಡ್ರಾಯ್ಡ್ ಆಟೋ, ಆ್ಯಪಲ್ ಕಾರ್ ಪ್ಲೇ ಮತ್ತು ಬ್ಲೂಟೂಥ್ ಕನೆಕ್ಟಿವಿಟಿಯನ್ನು ಸಪೋರ್ಟ್ ಮಾಡುತ್ತದೆ.

MOST READ: ಇನ್ಮುಂದೆ ಬೇರೆಯವರ ಕೈಗೆ ನಿಮ್ಮ ವಾಹನಗಳನ್ನು ನೀಡುವುದಕ್ಕೂ ಮುನ್ನ ಹತ್ತು ಬಾರಿ ಯೋಚಿಸಿ..!

ನವೆಂಬರ್ ಅಂತ್ಯಕ್ಕೆ ಹೊಸ ಎರ್ಟಿಗಾ ಕಾರು ಬಿಡುಗಡೆಯಾಗುವುದು ಪಕ್ಕಾ..!

ಇದಲ್ಲದೇ ಕಪ್ ಹೋಲ್ಡರ್ಸ್ ಅನ್ನೂ ಕೂಡಾ ನೀಡಲಾಗುತ್ತಿದ್ದು, ಇನ್ಫೋಟೈನ್ಮೆಂಟ್ ಸಿಸ್ಟಮ್‍‍‍ಗೆ ಸಹಾಯವಾಗುವ ಹಲವಾರು ಬಟನ್‍‍ಗಳುಳ್ಳ ಲೆದರ್‍‍ನಿಂದ ಸಜ್ಜುಗೊಂಡ ಸ್ಟೀರಿಂಗ್ ವ್ಹೀಲ್ ಅನ್ನು ಜೋಡಿಸಲಾಗಿದೆ.

ನವೆಂಬರ್ ಅಂತ್ಯಕ್ಕೆ ಹೊಸ ಎರ್ಟಿಗಾ ಕಾರು ಬಿಡುಗಡೆಯಾಗುವುದು ಪಕ್ಕಾ..!

ಸುರಕ್ಷಾ ವೈಶಿಷ್ಟ್ಯತೆಗಳು

ಹೊಸ ಎರ್ಟಿಗಾ ಎಂಪಿವಿ ಕಾರಿನಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಈ ಬಾರಿ ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್, ಇಬಿಡಿ, ಐಎಸ್‍ಓಫಿಕ್ಸ್ ಚೈಲ್ಡ್ ಸೀಟ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಸೇಫ್ಟಿ ಸೀಟ್ ಬೆಲ್ಟ್ ರಿಮೈಂಡರ್, ಸ್ಪೀಡ್ ವಾರ್ನಿಂಗ್ ಮತ್ತು ರಿಯರ್ ಪಾರ್ಕಿಂಗ್ ಸೆನ್ಸಾರ್ಸ್ ಅನ್ನು ಒದಗಿಸಲಾಗಿದೆ.

ನವೆಂಬರ್ ಅಂತ್ಯಕ್ಕೆ ಹೊಸ ಎರ್ಟಿಗಾ ಕಾರು ಬಿಡುಗಡೆಯಾಗುವುದು ಪಕ್ಕಾ..!

ಎಂಜಿನ್ ಸಾಮರ್ಥ್ಯ

ಮಾಹಿತಿಗಳ ಪ್ರಕಾರ ಹೊಸ ಎರ್ಟಿಗಾ ಕಾರುಗಳಲ್ಲಿ ಈ ಹಿಂದಿನ 1.3-ಲೀಟರ್ ಡೀಸೆಲ್ ಎಂಜಿನ್ ಬದಲಾಗಿ 1.5-ಲೀಟರ್ ಡೀಸೆಲ್ ಎಂಜಿನ್ ಅನ್ನು ನೀಡಲಿದೆ ಎಂಬ ಸುದ್ದಿ ಕೇಳಿಬರುತ್ತಿದ್ದು, ಹಾಗೆಯೇ 1.5-ಲೀಟರ್ ಪೆಟ್ರೋಲ್ ಎಂಜಿನ್ ಕೂಡಾ ಖರೀದಿಗೆ ಲಭ್ಯವಿರಲಿದೆ. ವಿಶೇಷ ಅಂದ್ರೆ, ಎರಡು ಮಾದರಿಯ ಎಂಜಿನ್‍ಗಳನ್ನು ಸಹ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಎಸ್‍‍ಹೆಚ್‍‍ವಿಎಸ್ ಹೈಬ್ರಿಡ್ ಸಿಸ್ಟಮ್ ಅನ್ನು ಒದಗಿಸುವುದು ಖಚಿತವಾಗಿದೆ.

ನವೆಂಬರ್ ಅಂತ್ಯಕ್ಕೆ ಹೊಸ ಎರ್ಟಿಗಾ ಕಾರು ಬಿಡುಗಡೆಯಾಗುವುದು ಪಕ್ಕಾ..!

ಗೇರ್ ಬಾಕ್ಸ್

ಸ್ಪೈ ಚಿತ್ರಗಳಲ್ಲಿ ಗಮಸಿದ್ದಲ್ಲಿ ಹೊಸ ಕಾರು 5-ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದ್ದು, ಇದು ಕೇವಲ ಡಿಸೆಲ್ ಮಾದರಿಯ ಕಾರಿನಲ್ಲಿ ಮಾತ್ರ ಈ ಆಯ್ಕೆಯು ಲಭ್ಯವಿರಲಿದೆ ಎನ್ನಲಾಗಿದೆ. ಆದರೆ ಪೆಟ್ರೋಲ್ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಮತ್ತು 4-ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಪಡೆದುಕೊಳ್ಳಲಿದೆ.

MOST READ: ಹೊಸ ಸ್ಯಾಂಟ್ರೋ ಕಾರು ಖರೀದಿಗೆ ಬುಕ್ಕಿಂಗ್ ಆರಂಭ- ಬೆಲೆ ಎಷ್ಟಿರಲಿದೆ ಗೊತ್ತಾ?

ನವೆಂಬರ್ ಅಂತ್ಯಕ್ಕೆ ಹೊಸ ಎರ್ಟಿಗಾ ಕಾರು ಬಿಡುಗಡೆಯಾಗುವುದು ಪಕ್ಕಾ..!

ಹೊಸ ಕಾರಿನ ಬೆಲೆ (ಅಂದಾಜು)

ಹೊಸ ಎರ್ಟಿಗಾ ಎಂ‍ಪಿವಿ ಕಾರುಗಳು ದೆಹಲಿಯ ಎಕ್ಸ್ ಶೋರಂ ಪ್ರಕಾರ ರೂ. 7 ಲಕ್ಷಕ್ಕೆ ಆರಂಭಿಕ ಬೆಲೆ ಹಾಗೂ ಟಾಪ್ ಎಂಡ್ ಮಾದರಿಯು ರೂ. 9.99 ಲಕ್ಷ ಬೆಲೆಯನ್ನು ಪಡೆಯಲಿದೆ ಎಂದು ಅಂದಾಜಿಸಲಾಗಿದ್ದು, ಸದ್ಯ ಹೊಸಗಾಗಿ ಮಾರುಕಟ್ಟೆಗೆ ಬಂದಿರುವ ಮಹೀಂದ್ರಾ ಮರಾಜೊ ಎಂಪಿವಿ ಕಾರಿಗೆ ಇದು ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

Most Read Articles

Kannada
Read more on maruti suzuki mpv
English summary
New Maruti Ertiga 2018 Launch Date Revealed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X