ಮತ್ತೆ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಬಿಡುಗಡೆಗೊಂಡ ಮಾರುತಿ ಸುಜುಕಿ ಹೊಸ ಎರ್ಟಿಗಾ

ದೇಶಿಯ ಮಾರುಕಟ್ಟೆಯಲ್ಲಿ ಎಂಪಿವಿ ಕಾರುಗಳ ಬೇಡಿಕೆಯು ಹೆಚ್ಚುತ್ತಿರುವ ಕಾರಣ ಮಹೀಂದ್ರಾ ಸಂಸ್ಥೆಯು ಕೆಲ ದಿನಗಳ ಹಿಂದಷ್ಟೆ ತಮ್ಮ ಮರಾಜೊ ಕಾರನ್ನು ಬಿಡುಗಡೆಗೊಳಿಸಿ ಅಧಿಕ ಬುಕ್ಕಿಂಗ್ ಅನ್ನು ಪದೆದುಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಎಂಪಿವಿ ಕಾರುಗಳಲ್ಲಿ ಮೊದಲಿನಿಂದಲೂ ಹೆಚ್ಚು ಜನಪ್ರಿಯತೆಯನ್ನು ಪಡೆದುಬಂದ ಮಾರುತಿ ಸುಜುಕಿ ಕಾರು ಈ ಬಾರಿ ಮತ್ತೊಮ್ಮೆ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಬಿಡುಗಡೆಗೊಂಡಿದೆ.

ಮತ್ತೆ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಬಿಡುಗಡೆಗೊಂಡ ಮಾರುತಿ ಸುಜುಕಿ ಎರ್ಟಿಗಾ

ಮಾರುಕಟ್ಟೆಗೆ ಲಗ್ಗೆಯಿಟ್ಟ ಹೊಸ ತಲೆಮಾರಿನ ಮಾರುತಿ ಸುಜುಕಿ ಎರ್ಟಿಗಾ ಕಾರು ದೆಹಲಿಯ ಎಕ್ಸ್ ಶೋರಂ ಪ್ರಕಾರ ರೂ. 7.44 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದ್ದು, ಕಳೆದ ವಾರವಷ್ಟೆ ಹೊಸ ಎರ್ಟಿಗಾ ಕಾರಿನ ಖರೀದಿಗಾಗಿ ಬುಕ್ಕಿಂಗ್ ಪ್ರಕ್ರಿಯೆಯನ್ನು ಸಹ ಆರಂಭಿಸಲಾಗಿದೆ.

ಮತ್ತೆ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಬಿಡುಗಡೆಗೊಂಡ ಮಾರುತಿ ಸುಜುಕಿ ಎರ್ಟಿಗಾ

ಹೊಸ ಎರ್ಟಿಗಾ ವೇರಿಯಂಟ್ಸ್

ಹೊಸ ಮಾರುತಿ ಸುಜುಕಿ ಎರ್ಟಿಗಾ ಎಂಪಿವಿ ಕಾರು (ಎಲ್ಎಕ್ಸ್ಐ, ವಿಎಕ್ಸ್ಐ, ಜೆಡ್ಎಕ್ಸ್ಐ ಮತ್ತು ಜೆಡ್ಎಕ್ಸ್ಐ+) ಎಂಬ ನಾಲ್ಕು ಪೆಟ್ರೋಲ್ ವೇರಿಯಂಟ್ (ಎಲ್‍ಡಿಐ, ವಿಡಿಐ, ಜೆಡ್‍ಡಿಐ ಮತ್ತು ಜೆಡ್‍ಡಿಐ+) ಎಂಬ ನಾಲ್ಕು ಡೀಸೆಲ್ ವೇರಿಯಂಟ್ ಮತ್ತು ವಿಎಕ್ಸ್ಐ ಎಟಿ ಹಾಗು ಜೆಡ್ಎಕ್ಸ್ಐ ಎಟಿ ಎಂಬ ಒಟ್ಟು ಹತ್ತು ವೇರಿಯಂಟ್‍ಗಳಲ್ಲಿ ಖರೀದಿಗೆ ಲಭ್ಯವಿದೆ.

ಮತ್ತೆ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಬಿಡುಗಡೆಗೊಂಡ ಮಾರುತಿ ಸುಜುಕಿ ಎರ್ಟಿಗಾ

ಎರ್ಟಿಗಾ ಕಾರಿನ ಆಕಾರ

ಹೊಸ ತಲೆಮಾರಿನ ಮಾರುತಿ ಸುಜುಕಿ ಎರ್ಟಿಗಾ ಕಾರನ್ನು ಸಂಸ್ಥೆಯ 'ಹಾರ್ಟ್‍ಟೆಕ್ಟ್' ಪ್ಲಾಟ್‍‍ಫಾರ್ಮ್‍ನ ಅಡಿಯಲ್ಲಿ ವಿನ್ಯಾಸಮಾಡಲಾಗಿದ್ದು, ಹಿಂದಿನ ತಲೆಮಾರಿನ ಎರ್ಟಿಗಾ ಕಾರುಗಳಿಗಿಂತಾ ದೊಡ್ಡ ಆಕಾರವನ್ನು ಪಡೆದುಕೊಂಡಿದೆ.

ಮತ್ತೆ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಬಿಡುಗಡೆಗೊಂಡ ಮಾರುತಿ ಸುಜುಕಿ ಎರ್ಟಿಗಾ

ಹಳೆಯ ಮಾಡೆಲ್ ಎರ್ಟಿಗಾ ಕಾರಿಗೆ ಹೋಲಿಸಿದರೆ ಬಿಡುಗಡೆಗೊಳ್ಳಲಿರುವ ಹೊಸ ಎರ್ಟಿಗಾ ಕಾರು 110ಎಮ್ಎಮ್ ಉದ್ದ, 50ಎಮ್ಎಮ್ ಅಗಲ ಮತ್ತು 5ಎಮ್ಎಮ್ ಎತ್ತರ ಅಧಿಕವಾದ ಸುತ್ತಳತೆಯನ್ನು ಪಡೆದುಕೊಂಡಿರಲಿದೆ. ಈ ಬದಲಾವಣೆಯು ಮೂರನೆಯ ಸಾಲಿನಲ್ಲಿ ಕೂರುವ ಪ್ರಯಾಣಿಕರು ಆರಾಮವಾಗಿ ಕೂರಬಹುದು.

ಮತ್ತೆ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಬಿಡುಗಡೆಗೊಂಡ ಮಾರುತಿ ಸುಜುಕಿ ಎರ್ಟಿಗಾ

ಹೊಸ ವಿನ್ಯಾಸ

ಎರ್ಟಿಗಾ ಎಮ್‍‍ಪಿವಿ ಕಾರಿನ ಮುಂಭಾಗದಲ್ಲಿ ಕ್ರೋಮ್ ಸ್ಟ್ರಿಪ್‍‍ನೊಂದಿಗೆ ಜೋಡಿಸಲಾದ ಹೊಸ ಗ್ರಿಲ್ ಮತ್ತು ಪ್ರೊಜೆಕ್ಟರ್ ಹೆಡ್‍‍ಲ್ಯಾಂಪ್‍‍ಗಳನ್ನು ಪಡೆದುಕೊಂಡಿರಲಿದೆ. ಕಾರಿನ ಸೈಡ್‍‍ನಲ್ಲಿ ಫ್ಲೋಟಿಂಗ್ ರೂಫ್ ವಿನ್ಯಾಸ ಮತ್ತು 15 ಇಂಚಿನ ಅಲಾಯ್ ಚಕ್ರಗಳನ್ನು ನೀಡಲಾಗಿದೆ. ಇನ್ನು ಕಾರಿನ ಹಿಂಭಾಗದಲ್ಲಿ 'ಎಲ್' ಆಕಾರದ ಟೈಲ್ ಲೈಟ್ ಅನ್ನು ಪಡೆದಿದೆ.

ಮತ್ತೆ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಬಿಡುಗಡೆಗೊಂಡ ಮಾರುತಿ ಸುಜುಕಿ ಎರ್ಟಿಗಾ

ಹೊಸ ಇಂಟೀರಿಯರ್

ಎರ್ಟಿಗಾ ಕಾರಿನಲ್ಲಿ ಈ ಬಾರಿ ಮರುವಿನ್ಯಾಸಗೊಳಿಸಲಾದ ಡ್ಯಾಶ್‍‍ಬೋರ್ಡ್ ಅನ್ನು ಅಳವಡಿಸಲಾಗಿದ್ದು, ಹೊಸ ಸಿಯಾಜ್ ಕಾರಿನಲ್ಲಿ ಒದಗಿಸಲಾಗಿರುವ ಡ್ಯುಯಲ್ ಟೋನ್ ಡ್ಯಾಶ್‍ಬೋರ್ಡ್ ಮತ್ತು ವುಡನ್ ಟ್ರಿಮ್ ಅನ್ನು ನೀಡಲಾಗಿದೆ.

ಮತ್ತೆ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಬಿಡುಗಡೆಗೊಂಡ ಮಾರುತಿ ಸುಜುಕಿ ಎರ್ಟಿಗಾ

ವೈಶಿಷ್ಟ್ಯತೆಗಳು

ಮಾರುತಿ ಸುಜುಕಿ ಡಿಜೈರ್ ಕಾರಿನಲ್ಲಿ ಬಳಸಲಾದ 7 ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಅನ್ನು ಪಡೆದುಕೊಂಡಿರಲಿದೆ. ಈ ಉಪಕರಣವು ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ ಮತ್ತು ಬ್ಲೂತೂತ್ ಕನೆಕ್ಟಿವಿಟಿಯನ್ನು ಸಪೋರ್ಟ್ ಮಾಡುತ್ತದೆ. ಇದಲ್ಲದೇ ಕಪ್ ಹೋಲ್ಡರ್ಸ್ ಅನ್ನೂ ಕೂಡಾ ನೀಡಲಾಗುತ್ತಿದ್ದು, ಇನ್ಫೋಟೈನ್ಮೆಂಟ್ ಸಿಸ್ಟಮ್‍‍‍ಗೆ ಸಹಾಯವಾಗುವ ಹಲವಾರು ಬಟನ್‍‍ಗಳುಳ್ಳ ಲೆಧರ್‍‍ನಿಂದ ಸಜ್ಜುಗೊಂಡ ಸ್ಟೀರಿಂಗ್ ವ್ಹೀಲ್ ಅನ್ನು ಜೋಡಿಸಲಾಗಿದೆ.

ಮತ್ತೆ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಬಿಡುಗಡೆಗೊಂಡ ಮಾರುತಿ ಸುಜುಕಿ ಎರ್ಟಿಗಾ

ಸುರಕ್ಷಾ ವೈಶಿಷ್ಟ್ಯತೆಗಳು

ಹೊಸ ಎರ್ಟಿಗಾ ಎಮ್‍‍ಪಿ ಕಾರಿನಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಈ ಬಾರಿ ಎಬಿಎಸ್, ಇಬಿಡಿ, ಐಎಸ್‍ಓಫಿಕ್ಸ್ ಚೈಲ್ಡ್ ಸೀಟ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಕಾರಿನ ಎಲ್ಲಾ ಮಾದರಿಗಳಲ್ಲಿ ನೀಡಲಾಗಿದೆ. ಇದಲ್ಲದೆ ಸೇಫ್ಟಿ ಸೀಟ್ ಬೆಲ್ಟ್ ರಿಮೈಂಡರ್, ಸ್ಪೀಡ್ ವಾರ್ನಿಂಗ್ ಮತ್ತು ರಿಯರ್ ಪಾರ್ಕಿಂಗ್ ಸೆನ್ಸಾರ್ಸ್ ಅನ್ನು ಒದಗಿಸಲಾಗಿದೆ.

ಮತ್ತೆ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಬಿಡುಗಡೆಗೊಂಡ ಮಾರುತಿ ಸುಜುಕಿ ಎರ್ಟಿಗಾ

ಎಂಜಿನ್ ಸಾಮರ್ಥ್ಯ

ಎರ್ಟಿಗಾ ಕಾರು ಹಳೆಯ ಮಾದರಿಯಲ್ಲಿನ 1.3 ಲೀಟರ್ ಮಲ್ಟಿ ಜೆಟ್ ಎಂಜಿನ್‍‍ನ ಜಾಗದಲ್ಲಿ ಹೊಸ 1.5 ಲೀಟರ್ ಡೀಸೆಲ್ ಎಂಜಿನ್ ಅನ್ನು ನೀಡಲಿದೆ ಎಂಬ ಸುದ್ದಿ ಕೇಳಿಬರುತ್ತಿದೆ. ಹೊಸ ಎಂಜಿನ್ ಅನ್ನು ಹೊರತು ಪಡಿಸಿ, ಸಿಯಾಜ್ ಕಾರಿನಲ್ಲಿ ಬಳಸಲಾದ 103 ಬಿಹೆಚ್‍‍ಪಿ ಮತ್ತು 138ಎನ್ಎಮ್ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಹೊಂದಿರುವ 1.5 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಪಡೆಯಲಿದೆ. ಜೊತೆಗೆ ಎರಡು ಎಂಜಿನ್‍‍ನ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಎಸ್‍‍ಹೆಚ್‍‍ವಿಎಸ್ ಹೈಬ್ರೀಡ್ ಸಿಸ್ಟಮ್ ಅನ್ನು ಒದಗಿಸಲಾಗಿದೆ.

ಮತ್ತೆ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಬಿಡುಗಡೆಗೊಂಡ ಮಾರುತಿ ಸುಜುಕಿ ಎರ್ಟಿಗಾ

ಗೇರ್ ಬಾಕ್ಸ್

ಮಾರುತಿ ಸುಜುಕಿ ಎರ್ಟಿಗಾ ಕಾರು 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದ್ದು, ಇದು ಕೇವಲ ಡಿಸೆಲ್ ಮಾದರಿಯ ಕಾರಿನಲ್ಲಿ ಮಾತ್ರ ಈ ಆಯ್ಕೆಯು ಲಭ್ಯವಿರಲಿದೆ ಎನ್ನಲಾಗಿದೆ. ಆದರೆ ಪೆಟ್ರೋಲ್ ಎಂಜಿನ್ ಅನ್ನು 5 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಮತ್ತೆ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಬಿಡುಗಡೆಗೊಂಡ ಮಾರುತಿ ಸುಜುಕಿ ಎರ್ಟಿಗಾ

ಲಭ್ಯವಿರುವ ಬಣ್ಣಗಳು

ಹೊಸ ತಲೆಮಾರಿನ ಮಾರುತಿ ಸುಜುಕಿ ಎರ್ಟಿಗಾ ಕಾರುಗಳು ಪರ್ಲ್ ಮೆಟಾಲಿಕ್ ಔಬರ್ನ್ ರೆಡ್, ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಮೆಟಾಲಿಕ್ ಆಕ್ಸ್ಫಾರ್ಡ್ ಬ್ಲೂ, ಪರ್ಲ್ ಆರ್ಕ್ಟಿಕ್ ವೈಟ್ ಮತ್ತು ಮೆಟಾಲಿಕ್ ಸಿಲ್ಕಿ ಗ್ರೇ ಎಂಬ ಐದು ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ.

ಮತ್ತೆ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಬಿಡುಗಡೆಗೊಂಡ ಮಾರುತಿ ಸುಜುಕಿ ಎರ್ಟಿಗಾ

ಬುಕ್ಕಿಂಗ್ ಹೇಗೆ?

ಬಿಡುಗಡೆಗೊಂಡ ಮಾರುತಿ ಸುಜುಕಿ ಎರ್ಟಿಗಾ ಕಾರುಗಳನ್ನು ಖರೀದಿಸಲು ಇಚ್ಛಿಸುವ ಗ್ರಾಹಕ್ರು ನಿಮ್ಮ ಹತ್ತಿರದ ಅಧಿಕೃತ ಮಾರುತಿ ಸುಜುಕಿ ಡೀಲರ್‍‍ನ ಬಳಿ ರೂ. 11,000 ಮುಂಗಡವಾಗಿ ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ.

ಮತ್ತೆ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಬಿಡುಗಡೆಗೊಂಡ ಮಾರುತಿ ಸುಜುಕಿ ಎರ್ಟಿಗಾ

ಡ್ರೈವ್‍ಸ್ಪಾರ್ಕ್ ಕನ್ನಡ ಅಭಿಪ್ರಾಯ

ಮಾರುತಿ ಸುಜುಕಿ ಸಂಸ್ಥೆಯು ಇದೀಗ ಮತ್ತೆ ಎಂಪಿವಿ ಮಾರಾಟದಲ್ಲಿ ಸದ್ದು ಮಾಡಲು ತಮ ಹೊಸ ತಲೆಮಾರಿನ ಎರ್ಟಿಗಾ ಕಾರನ್ನು ಬಿಡುಗಡೆಗೊಳಿಸಿದ್ದು, ಇದೀಗ ಮಾರುಕಟ್ಟೆಯಲ್ಲಿ ಈಗಾಗಲೆ ಲಭ್ಯವಿರುವ ಮಹೀಂದ್ರಾ ಮರಾಜೊ ಮತ್ತು ಟೊಯೊಟಾ ಇನೊವಾ ಕ್ರಿಸ್ಟಾ ಕಾರುಗಳಿಗೆ ಪೈಪೋಟಿ ನೀಡಲಿದೆ.

ಮಾರುಕಟ್ಟೆಯಲ್ಲಿ ಈಗಾಗಲೆ ಮಾರುತಿ ಸುಜುಕಿ ಎರ್ಟಿಗಾ ಕಾರುಗಳಿಗೆ ಪೈಪೋಟಿ ನೀಡುತ್ತಿರುವ ಮಹೀಂದ್ರಾ ಮಾರಾಜೊ ಕಾರಿನ ಚಿತ್ರಗಳು ಇಲ್ಲಿವೆ ನೋಡಿ.

Most Read Articles

Kannada
English summary
New Maruti Ertiga 2018 Launched In India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X