ಹೊಸ ಮಾರುತಿ ಸುಜುಕಿ ಎರ್ಟಿಗಾ ಕಾರು ಬಿಡುಗಡೆಗಾಗಿ ಇನ್ನು ಎರಡೇ ದಿನಗಳು ಬಾಕಿ

ದೇಶಿಯ ವಾಹನ ತಯಾರಕ ಸಂಸ್ಥೆಯಾದ ಮಾರುತಿ ಸುಜುಕಿ, ಇದೇ ನವೆಂಬರ್ 21ರಂದು ತಮ್ಮ ಮುಂದಿನ ತಲೆಮಾರಿನ ಎರ್ಟಿಗಾ ಕಾರನ್ನು ಬಿಡುಗಡೆಗೊಳಿಸುತ್ತಿದ್ದು, ಈ ಕಾರಿನ ಬಗ್ಗೆ ದಿನಕೊಂದು ಮಾಹಿತಿ ಹೊರ ಬರುತ್ತಿದೆ. ಎಂಪಿವಿ ಕಾರು ಪ್ರಿಯರಲ್ಲಿ ಹೆಚ್ಚು ನಿರೀಕ್ಷೆಯನ್ನು ಹುಟ್ಟುಹಾಕಿರುವ ಈ ಕಾರು ಹೊಸದಾಗಿ ಬಿಡುಗಡೆಗೊಂಡ ಮಹೀಂದ್ರಾ ಮರಾಜೊ ಸಂಸ್ಥೆಯ ಮರಾಜೊ ಕಾರಿಗೆ ಪೈಪೋಟಿ ನೀಡಲು ಸಿದ್ಧವಾಗಿದೆ.

ಹೊಸ ಮಾರುತಿ ಸುಜುಕಿ ಎರ್ಟಿಗಾ ಕಾರು ಬಿಡುಗಡೆಗಾಗಿ ಇನ್ನು ಎರಡೇ ದಿನಗಳು ಬಾಕಿ

ಈ ನಿಟ್ಟಿನಲ್ಲಿ ಗ್ರಾಹಕರನ್ನು ಆಕರ್ಷಿಸಲು ಮಾರುತಿ ಸುಜುಕಿ ಸಂಸ್ಥೆ ಇದೀಗ ಮುಂದಿನ ತಲೆಮಾರಿನ ಎರ್ಟಿಗಾ ಕಾರಿನ ಟೀಸರ್ ಒಂದನ್ನು ಬಿಡುಗಡೆ ಮಾಡಿದೆ. ಇಷ್ಟೆ ಅಲ್ಲದೇ ಹೊಸ ಎರ್ತಿಗಾ ಎಂಪಿವಿ ಕಾರಿನ ಖರೀದಿಗಾಗಿ ಅಸಕ್ತ ಗ್ರಾಹಕರು ನಿಮ್ಮ ಸಮೀಪದಲ್ಲಿನ ಮಾರುತಿ ಸುಜುಕಿ ಡೀಲರ್‍‍ನ ಬಳಿ ರೂ. 11,000 ಮುಂಗಡವಾಗಿ ಪಾವತಿಸಿ ಪ್ರೀ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ.

ಹೊಸ ವಿನ್ಯಾಸ

ಎರ್ಟಿಗಾ ಎಮ್‍‍ಪಿವಿ ಕಾರು ಈ ಬಾರಿ ಹೊಸ ವಿನ್ಯಾಸವನ್ನು ಪಡೆದುಕೊಂಡಿರಲಿದೆ. ಕಾರಿನ ಮುಂಭಾಗದಲ್ಲಿ ಕ್ರೋಮ್ ಸ್ಟ್ರಿಪ್‍‍ನೊಂದಿಗೆ ಜೋಡಿಸಲಾದ ಹೊಸ ಗ್ರಿಲ್ ಮತ್ತು ಪ್ರೊಜೆಕ್ಟರ್ ಹೆಡ್‍‍ಲ್ಯಾಂಪ್‍‍ಗಳನ್ನು ಪಡೆದುಕೊಂಡಿರಲಿದೆ. ಕಾರಿನ ಸೈಡ್‍‍ನಲ್ಲಿ ಫ್ಲೋಟಿಂಗ್ ರೂಫ್ ವಿನ್ಯಾಸ ಮತ್ತು 15 ಇಂಚಿನ ಅಲಾಯ್ ಚಕ್ರಗಳನ್ನು ನೀಡಲಾಗಿದೆ. ಇನ್ನು ಕಾರಿನ ಹಿಂಭಾಗದಲ್ಲಿ 'ಎಲ್' ಆಕಾರದ ಟೈಲ್ ಲೈಟ್ ಅನ್ನು ಪಡೆದಿದ್ದು, ಒಟ್ಟಾರೆಯಾಗಿ ಈ ಕಾರು ಎಮ್‍‍ಪಿವಿ ಕಾರಿಗಿಂತಲೂ ಎಸ್‍‍ಯುವಿ ಮಾದರಿಯ ವಿನ್ಯಾಸವನ್ನು ಪಡೆದಿರಲಿದೆ.

ಹೊಸ ಮಾರುತಿ ಸುಜುಕಿ ಎರ್ಟಿಗಾ ಕಾರು ಬಿಡುಗಡೆಗಾಗಿ ಇನ್ನು ಎರಡೇ ದಿನಗಳು ಬಾಕಿ

ಹೊಸ ಇಂಟೀರಿಯರ್

ಎರ್ಟಿಗಾ ಕಾರಿನಲ್ಲಿ ಈ ಬಾರಿ ಮರುವಿನ್ಯಾಸಗೊಳಿಸಲಾದ ಡ್ಯಾಶ್‍‍ಬೋರ್ಡ್ ಅನ್ನು ಅಳವಡಿಸಲಾಗಿದ್ದು, ಹೊಸ ಸಿಯಾಜ್ ಕಾರಿನಲ್ಲಿ ಒದಗಿಸಲಾಗಿರುವ ಡ್ಯುಯಲ್ ಟೋನ್ ಡ್ಯಾಶ್‍ಬೋರ್ಡ್ ಮತ್ತು ವುಡನ್ ಟ್ರಿಮ್ ಅನ್ನು ನೀಡಲಾಗಿದೆ. ಇನ್ನು ಕಾರಿನ ಟಾಪ್ ಎಂಡ್ ಟ್ರಿಮ್‍‍ನಲ್ಲಿ ಲೆಧರ್ ಸೀಟ್‍‍ಗಳನ್ನು ನೀಡುವ ಭರವಸೆ ಇದೆ ಎನ್ನಲಾಗಿದೆ.

ಹೊಸ ಮಾರುತಿ ಸುಜುಕಿ ಎರ್ಟಿಗಾ ಕಾರು ಬಿಡುಗಡೆಗಾಗಿ ಇನ್ನು ಎರಡೇ ದಿನಗಳು ಬಾಕಿ

ಉಪಕರಣಗಳು

ಕಳೆದ ದಿನಗಳ ಹಿಂದೆ ಬಿಡುಗಡೆಗೊಂಡ ಡಿಜೈರ್ ಕಾರಿನಲ್ಲಿ ಬಳಸಲಾದ 7 ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಅನ್ನು ಪಡೆದುಕೊಂಡಿರಲಿದೆ. ಈ ಉಪಕರಣವು ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ ಮತ್ತು ಬ್ಲೂತೂತ್ ಕನೆಕ್ಟಿವಿಟಿಯನ್ನು ಸಪೋರ್ಟ್ ಮಾಡುತ್ತದೆ. ಇದಲ್ಲದೇ ಕಪ್ ಹೋಲ್ಡರ್ಸ್ ಅನ್ನೂ ಕೂಡಾ ನೀಡಲಾಗುತ್ತಿದ್ದು, ಇನ್ಫೋಟೈನ್ಮೆಂಟ್ ಸಿಸ್ಟಮ್‍‍‍ಗೆ ಸಹಾಯವಾಗುವ ಹಲವಾರು ಬಟನ್‍‍ಗಳುಳ್ಳ ಲೆಧರ್‍‍ನಿಂದ ಸಜ್ಜುಗೊಂಡ ಸ್ಟೀರಿಂಗ್ ವ್ಹೀಲ್ ಅನ್ನು ಜೋಡಿಸಲಾಗಿದೆ.

ಹೊಸ ಮಾರುತಿ ಸುಜುಕಿ ಎರ್ಟಿಗಾ ಕಾರು ಬಿಡುಗಡೆಗಾಗಿ ಇನ್ನು ಎರಡೇ ದಿನಗಳು ಬಾಕಿ

ಸುರಕ್ಷಾ ವೈಶಿಷ್ಟ್ಯತೆಗಳು

ಹೊಸ ಎರ್ಟಿಗಾ ಎಮ್‍‍ಪಿ ಕಾರಿನಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಈ ಬಾರಿ ಎಬಿಎಸ್, ಇಬಿಡಿ, ಐಎಸ್‍ಓಫಿಕ್ಸ್ ಚೈಲ್ಡ್ ಸೀಟ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಕಾರಿನ ಎಲ್ಲಾ ಮಾದರಿಗಳಲ್ಲಿ ನೀಡಲಾಗಿದೆ. ಇದಲ್ಲದೆ ಸೇಫ್ಟಿ ಸೀಟ್ ಬೆಲ್ಟ್ ರಿಮೈಂಡರ್, ಸ್ಪೀಡ್ ವಾರ್ನಿಂಗ್ ಮತ್ತು ರಿಯರ್ ಪಾರ್ಕಿಂಗ್ ಸೆನ್ಸಾರ್ಸ್ ಅನ್ನು ಒದಗಿಸಲಾಗಿದೆ.

ಎಂಜಿನ್ ಸಾಮರ್ಥ್ಯ

ಮಾಹಿತಿಗಳ ಪ್ರಕಾರ ಬಿಡುಗಡೆಗೊಳ್ಳಲಿರುವ ಎರ್ಟಿಗಾ ಕಾರು ಹಳೆಯ ಮಾದರಿಯಲ್ಲಿನ 1.3 ಲೀಟರ್ ಮಲ್ಟಿ ಜೆಟ್ ಎಂಜಿನ್‍‍ನ ಜಾಗದಲ್ಲಿ ಹೊಸ 1.5 ಲೀಟರ್ ಡೀಸೆಲ್ ಎಂಜಿನ್ ಅನ್ನು ನೀಡಲಿದೆ ಎಂಬ ಸುದ್ದಿ ಕೇಳಿಬರುತ್ತಿದೆ. ಹೊಸ ಎಂಜಿನ್ ಅನ್ನು ಹೊರತು ಪಡಿಸಿ, ಸಿಯಾಜ್ ಕಾರಿನಲ್ಲಿ ಬಳಸಲಾದ 103 ಬಿಹೆಚ್‍‍ಪಿ ಮತ್ತು 138ಎನ್ಎಮ್ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಹೊಂದಿರುವ 1.5 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಪಡೆಯಲಿದೆ. ಜೊತೆಗೆ ಎರಡು ಎಂಜಿನ್‍‍ನ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಎಸ್‍‍ಹೆಚ್‍‍ವಿಎಸ್ ಹೈಬ್ರಿಡ್ ಸಿಸ್ಟಮ್ ಅನ್ನು ಒದಗಿಸಲಾಗಿದೆ.

ಹೊಸ ಮಾರುತಿ ಸುಜುಕಿ ಎರ್ಟಿಗಾ ಕಾರು ಬಿಡುಗಡೆಗಾಗಿ ಇನ್ನು ಎರಡೇ ದಿನಗಳು ಬಾಕಿ

ಗೇರ್ ಬಾಕ್ಸ್

ಸ್ಪೈ ಚಿತ್ರಗಳಲ್ಲಿ ಗಮಸಿದ್ದಲ್ಲಿ ಈ ಕಾರು 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದ್ದು, ಇದು ಕೇವಲ ಡಿಸೆಲ್ ಮಾದರಿಯ ಕಾರಿನಲ್ಲಿ ಮಾತ್ರ ಈ ಆಯ್ಕೆಯು ಲಭ್ಯವಿರಲಿದೆ ಎನ್ನಲಾಗಿದೆ. ಆದರೆ ಪೆಟ್ರೋಲ್ ಎಂಜಿನ್ ಅನ್ನು 5 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಹೊಸ ಮಾರುತಿ ಸುಜುಕಿ ಎರ್ಟಿಗಾ ಕಾರು ಬಿಡುಗಡೆಗಾಗಿ ಇನ್ನು ಎರಡೇ ದಿನಗಳು ಬಾಕಿ

ಹೊಸ ಕಾರಿನ ಬೆಲೆ (ಅಂದಾಜು)

ಬಿಡುಗಡೆಗೊಳ್ಳಲಿರುವ ಹೊಸ ಎರ್ಟೀಗಾ ಎಮ್‍‍ಪಿವಿ ಕಾರುಗಳು ದೆಹಲಿಯ ಎಕ್ಸ್ ಶೋರಂ ಪ್ರಕಾರ ರೂ. 7 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆಯಲಿದೆ ಎಂದು ಅಂದಾಜಿಸಲಾಗಿದ್ದು, ಮಾರುಕಟ್ಟೆಯಲ್ಲಿ ಮಹೀಂದ್ರಾ ಮರಾಜೊ ಎಮ್‍‍ಪಿವಿ, ಇನೊವಾ ಕ್ರಿಸ್ಟಾ ಕಾರುಗಳಿಗೆ ಪೈಪೋಟಿ ನೀಡಲಿದೆ.

ಪ್ರಸ್ಥುತ ಎಂಪಿವಿ ಮಾರುಕಟ್ಟೆಯಲ್ಲಿ ಅಧಿಕವಾಗಿ ಮಾರಾಟಗೊಳ್ಳುತ್ತಿರುವ ಮಾರಿತು ಸುಜುಕಿ ಎರ್ಟಿಗಾ ಕಾರಿನ ಎದುರಾಳಿ ಮಹೀಂದ್ರಾ ಮಾರಾಜೊ ಕಾರಿನ ಚಿತ್ರಗಳು ಇಲ್ಲಿವೆ ನೋಡಿ..

Kannada
English summary
All-New Maruti Ertiga Teaser Videos Released Ahead Of Launch — To Rival The Mahindra Marazzo.
Story first published: Monday, November 19, 2018, 18:00 [IST]
X

ತಕ್ಷಣದ ಆಟೊ ಸುದ್ದಿಗಳನ್ನು ಡ್ರೈವ್ಸ್ಪಾರ್ಕ್ನಲ್ಲಿ ಪಡೆದುಕೊಳ್ಳಿ- Kannada DriveSpark

We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more