ಹೊಸ ಎರ್ಟಿಗಾಗೆ ಡಿಮ್ಯಾಂಡ್ - ಖರೀದಿಸಲು ಇಷ್ಟು ದಿನ ಕಾಯಬೇಕಂತೆ.!

ದೇಶಿಯ ವಾಹನ ತಯಾರಕ ಸಂಸ್ಥೆಯಾದ ಮಾರುತಿ ಸುಜುಕಿ ಕೆಲ ದಿನಗಳ ಹಿಂದಷ್ಟೆ ತಮ್ಮ ಹೊಸ ತಲೆಮಾರಿನ ಎರ್ಟಿಗಾ ಎಂಪಿವಿ ಕಾರನ್ನು ಬಿಡುಗಡೆಗೊಳಿಸಿದ್ದು, ಇದೀಗ ಗ್ರಾಹಕರು ಈ ಕಾರನ್ನು ಕೊಳ್ಳಲು ಮುಗಿಬೀಳುತ್ತಿದ್ದಾರೆ.

ಹೊಸ ಎರ್ಟಿಗಾಗೆ ಡಿಮ್ಯಾಂಡ್ - ಖರೀದಿಸಲು ಇಷ್ಟು ದಿನ ಕಾಯಬೇಕಂತೆ

ಈ ನಿಟ್ಟಿನಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಬಿಡುಗಡೆಗೊಂಡ ಹೊಸ ಎರ್ಟಿಗಾ ಕಾರು ಹೆಚ್ಚು ಬುಕ್ಕಿಂಗ್ ಅನ್ನು ಪಡೆದುಕೊಳ್ಳುತ್ತಿದೆ. ರೂ.7.44 ಲಕ್ಷದ ಪ್ರಾರಂಭಿಕ ಬೆಲೆಯನ್ನು ಹೊಂದಿರುವ ಹೊಸ ಎರ್ಟಿಗಾ ಕಾರನ್ನು ಇಲ್ಲಿಯ ವರೆಗು ಸುಮಾರು 10,000 ಮಂದಿ ಬುಕ್ಕಿಂಗ್ ಮಾಡಿಕೊಂಡಿದ್ದಾರೆ.

ಹೊಸ ಎರ್ಟಿಗಾಗೆ ಡಿಮ್ಯಾಂಡ್ - ಖರೀದಿಸಲು ಇಷ್ಟು ದಿನ ಕಾಯಬೇಕಂತೆ

ಬೇಡಿಕೆಯು ಹೆಚ್ಚುತ್ತಿರುವ ಕಾರಣ ಹೊಸ ಎರ್ಟಿಗಾ ಕಾರನ್ನು ಬುಕ್ಕಿಂಗ್ ಮಾಡಿಕೊಂಡ ಗ್ರಾಹಕರು ತಮ್ಮ ಕೈಗೆ ವಾಹನ ಸೇರಲು ನಾಲ್ಕು ವಾರಗಳು ಕಾಯಲೇಬೇಕಾಗಿದ್ದು, ನೀವು ಆಯ್ಕೆ ಮಾಡಲಾದ ಬಣ್ಣಗಳ ಆಧಾರದ ಮೇಲೆ ವೇಟಿಂಗ್ ಪೀರಿಯಡ್ ಹೆಚ್ಚುತ್ತದೆ ಎಂದು ಡೀಲರ್‍‍ಗಳು ಮಾಹಿತಿ ನೀಡಿದ್ದಾರೆ.

ಹೊಸ ಎರ್ಟಿಗಾಗೆ ಡಿಮ್ಯಾಂಡ್ - ಖರೀದಿಸಲು ಇಷ್ಟು ದಿನ ಕಾಯಬೇಕಂತೆ

ಇನ್ನು ಹೊಸ ಎರ್ಟಿಗಾ ಕಾರು ದೆಹಲಿಯ ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.44 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ.10.90 ಲಕ್ಷ ಬೆಲೆ ಹೊಂದಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ಒಟ್ಟು 10 ವೆರಿಯೆಂಟ್‌ಗಳಲ್ಲಿ ಎರ್ಟಿಗಾ ಕಾರುಗಳನ್ನು ಆಯ್ಕೆ ಮಾಡಬಹುದಾಗಿದೆ.

ಹೊಸ ಎರ್ಟಿಗಾಗೆ ಡಿಮ್ಯಾಂಡ್ - ಖರೀದಿಸಲು ಇಷ್ಟು ದಿನ ಕಾಯಬೇಕಂತೆ

ನೆಕ್ಸ್ಟ್ ಜನರೇಷನ್ ಮಾರುತಿ ಸುಜುಕಿ ಎರ್ಟಿಗಾ ಕಾರು ವಿಶ್ವದರ್ಜೆ ಕಾರು ಉತ್ಪಾದನಾ ಮಾದರಿಯಾದ 'ಹಾರ್ಟ್‍ಟೆಕ್ಟ್' ಪ್ಲಾಟ್‍‍ಫಾರ್ಮ್‍ನ ಅಡಿಯಲ್ಲಿ ವಿನ್ಯಾಸ ಮಾಡಲಾಗಿದ್ದು, ಮೂರನೇ ಸಾಲಿನಲ್ಲಿ ಕೂರುವ ಪ್ರಯಾಣಿಕರ ಆಸನ ವಿನ್ಯಾಸವನ್ನು ಈ ಬಾರಿ ತುಸು ವಿಸ್ತರಿಸಲಾಗಿದೆ.

ಹೊಸ ಎರ್ಟಿಗಾಗೆ ಡಿಮ್ಯಾಂಡ್ - ಖರೀದಿಸಲು ಇಷ್ಟು ದಿನ ಕಾಯಬೇಕಂತೆ

ನೆಕ್ಸ್ಟ್ ಜನರೇಷನ್ ಎರ್ಟಿಗಾ ಎಂ‍ಪಿವಿ ಕಾರಿನ ಮುಂಭಾಗದಲ್ಲಿ ಕ್ರೋಮ್ ಸ್ಟ್ರಿಪ್‍‍ನೊಂದಿಗೆ ಜೋಡಿಸಲಾದ ಹೊಸ ಗ್ರಿಲ್ ಮತ್ತು ಪ್ರೊಜೆಕ್ಟರ್ ಹೆಡ್‍‍ಲ್ಯಾಂಪ್‍‍ಗಳನ್ನು ಪಡೆದುಕೊಂಡಿದ್ದು, ಹಾಗೆಯೇ ಕಾರಿನ ಸೈಡ್‍‍ನಲ್ಲಿ ಫ್ಲೋಟಿಂಗ್ ರೂಫ್ ವಿನ್ಯಾಸ, 15-ಇಂಚಿನ ಅಲಾಯ್ ಚಕ್ರಗಳು ಮತ್ತು ಕಾರಿನ ಹಿಂಭಾಗದಲ್ಲಿ 'ಎಲ್' ಆಕಾರದ ಟೈಲ್ ಲೈಟ್ ಅನ್ನು ಪಡೆದಿದೆ.

ಹೊಸ ಎರ್ಟಿಗಾಗೆ ಡಿಮ್ಯಾಂಡ್ - ಖರೀದಿಸಲು ಇಷ್ಟು ದಿನ ಕಾಯಬೇಕಂತೆ

ತಾಂತ್ರಿಕ ವೈಶಿಷ್ಟ್ಯತೆಗಳು

ಮಾರುತಿ ಸುಜುಕಿ ಡಿಜೈರ್ ಕಾರಿನಲ್ಲಿರುವ 7-ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಅನ್ನು ಹೊಸ ಎರ್ಟಿಗಾದಲ್ಲೂ ಬಳಕೆ ಮಾಡಲಾಗಿದ್ದು, ಆಂಡ್ರಾಯ್ಡ್ ಆಟೋ, ಆ್ಯಪಲ್ ಕಾರ್ ಪ್ಲೇ ಮತ್ತು ಬ್ಲೂಟೂಥ್ ಕನೆಕ್ಟಿವಿಟಿಯನ್ನು ಸಪೋರ್ಟ್ ಮಾಡುತ್ತದೆ. ಇದಲ್ಲದೇ ಕಪ್ ಹೋಲ್ಡರ್ಸ್ ಅನ್ನೂ ಕೂಡಾ ನೀಡಲಾಗುತ್ತಿದ್ದು, ಇನ್ಫೋಟೈನ್ಮೆಂಟ್ ಸಿಸ್ಟಮ್‍‍‍ಗೆ ಸಹಾಯವಾಗುವ ಹಲವಾರು ಬಟನ್‍‍ಗಳೊಂದಿಗೆ ಲೆದರ್‍ ಹೊದಿಕೆಯಿಂದ ಸಜ್ಜುಗೊಂಡ ಸ್ಟೀರಿಂಗ್ ವ್ಹೀಲ್ ಜೋಡಿಸಲಾಗಿದೆ.

ಹೊಸ ಎರ್ಟಿಗಾಗೆ ಡಿಮ್ಯಾಂಡ್ - ಖರೀದಿಸಲು ಇಷ್ಟು ದಿನ ಕಾಯಬೇಕಂತೆ

ಸುರಕ್ಷಾ ವೈಶಿಷ್ಟ್ಯತೆಗಳು

ಹೊಸ ಎರ್ಟಿಗಾ ಕಾರಿನಲ್ಲಿ ಈ ಬಾರಿ ಪ್ರಯಾಣಿಕರ ಸುರಕ್ಷತೆಗಾಗಿ ಹೆಚ್ಚಿನ ಒತ್ತು ನೀಡಲಾಗಿದ್ದು, ಎಬಿಎಸ್, ಇಬಿಡಿ, ಐಎಸ್‍ಓಫಿಕ್ಸ್ ಚೈಲ್ಡ್ ಸೀಟ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಕಾರಿನ ಎಲ್ಲಾ ಮಾದರಿಗಳಲ್ಲಿ ನೀಡಲಾಗಿದೆ. ಇದಲ್ಲದೆ ಹೈ ಎಂಡ್ ಮಾದರಿಗಳಲ್ಲಿ ಸೇಫ್ಟಿ ಸೀಟ್ ಬೆಲ್ಟ್ ರಿಮೈಂಡರ್, ಸ್ಪೀಡ್ ವಾರ್ನಿಂಗ್ ಮತ್ತು ರಿಯರ್ ಪಾರ್ಕಿಂಗ್ ಸೆನ್ಸಾರ್ ಅನ್ನು ಒದಗಿಸಲಾಗಿದೆ.

ಹೊಸ ಎರ್ಟಿಗಾಗೆ ಡಿಮ್ಯಾಂಡ್ - ಖರೀದಿಸಲು ಇಷ್ಟು ದಿನ ಕಾಯಬೇಕಂತೆ

ಎಂಜಿನ್ ಸಾಮರ್ಥ್ಯ

ಹೊಸ ಎರ್ಟಿಗಾ ಕಾರಿನಲ್ಲಿ ಪ್ರಮುಖ ಎರಡು ಎಂಜಿನ್ ಆಯ್ಕೆಗಳನ್ನು ನೀಡಲಾಗಿದ್ದು, ಈ ಹಿಂದಿನ 1.4-ಲೀಟರ್ ಪೆಟ್ರೋಲ್ ಎಂಜಿನ್ ಬದಲಾಗಿ 1.5-ಲೀಟರ್ ಕೆ-ಸೀರಿಸ್ ಪೆಟ್ರೋಲ್ ಎಂಜಿನ್ ಜೋಡಿಸಲಾಗಿದೆ. ಹಾಗೆಯೇ ಡೀಸೆಲ್ ಕಾರು 1.3-ಲೀಟರ್ ಎಂಜಿನ್ ಪಡೆದಿದ್ದು, ಇಂಧನ ದಕ್ಷತೆ ಹೆಚ್ಚಿಸಲು ಎಸ್‍‍ಹೆಚ್‍‍ವಿಎಸ್ ಮೈಲ್ಡ್-ಹೈಬ್ರಿಡ್ ಟೆಕ್ನಾಲಜಿ ಬಳಕೆ ಮಾಡಲಾಗಿದೆ. ಜೊತೆಗೆ ಬೇಡಿಕೆಗೆ ಅನುಗುಣವಾಗಿ 4-ಸ್ಪೀಡ್ ಆಟೋಮ್ಯಾಟಿಕ್ ಮತ್ತು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಪಡೆದಿದೆ.

ಹೊಸ ಎರ್ಟಿಗಾಗೆ ಡಿಮ್ಯಾಂಡ್ - ಖರೀದಿಸಲು ಇಷ್ಟು ದಿನ ಕಾಯಬೇಕಂತೆ

ಮೈಲೇಜ್

ಮಾರುತಿ ಸುಜುಕಿ ಸಂಸ್ಥೆಯು ಹೇಳಿಕೊಂಡಿರುವ ಪ್ರಕಾರ, ಡಿಸೇಲ್ ವರ್ಷನ್‌ಗಳು ಪ್ರತಿ ಲೀಟರ್‌ಗೆ 25 ಕಿ.ಮಿ ಮೈಲೇಜ್ ನೀಡಿದ್ದಲ್ಲಿ ಪೆಟ್ರೋಲ್ ಮಾದರಿಯ ಮ್ಯಾನುವಲ್ ಆವೃತ್ತಿಯು ಪ್ರತಿ ಲೀಟರ್‌ಗೆ 19 ಕಿ.ಮಿ ಮತ್ತು ಆಟೋಮ್ಯಾಟಿಕ್ ಆವೃತ್ತಿಯು ಪ್ರತಿ ಲೀಟರ್‌ಗೆ 18 ಕಿ.ಮಿ ಮೈಲೇಜ್ ಹಿಂದಿರುಗಿಸಲಿದೆ.

ಹೊಸ ಎರ್ಟಿಗಾಗೆ ಡಿಮ್ಯಾಂಡ್ - ಖರೀದಿಸಲು ಇಷ್ಟು ದಿನ ಕಾಯಬೇಕಂತೆ

ಲಭ್ಯವಿರುವ ಬಣ್ಣಗಳು

ಹೊಸ ಎರ್ಟಿಗಾ ಕಾರುಗಳು ಒಟ್ಟು ಐದು ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದ್ದು, ಪರ್ಲ್ ಮೆಟಾಲಿಕ್ ಔಬರ್ನ್ ರೆಡ್, ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಮೆಟಾಲಿಕ್ ಆಕ್ಸ್ಫಾರ್ಡ್ ಬ್ಲೂ, ಪರ್ಲ್ ಆರ್ಕ್ಟಿಕ್ ವೈಟ್ ಮತ್ತು ಮೆಟಾಲಿಕ್ ಸಿಲ್ಕಿ ಗ್ರೇ ಬಣ್ಣಗಳನ್ನು ಆಯ್ಕೆ ಮಾಡಬಹುದು.

ಹೊಸ ಎರ್ಟಿಗಾಗೆ ಡಿಮ್ಯಾಂಡ್ - ಖರೀದಿಸಲು ಇಷ್ಟು ದಿನ ಕಾಯಬೇಕಂತೆ

ಒಟ್ಟಿನಲ್ಲಿ 7-ಸೀಟರ್ ಮಾದರಿಗಳಲ್ಲಿ ವಿಶೇಷ ಎನ್ನಿಸುವ ಹೊಸ ಎರ್ಟಿಗಾ ಕಾರು 209-ಲೀಟರ್‌ನಷ್ಟು ಬೂಟ್ ಸ್ಪೆಸ್ ಸೌಲಭ್ಯ ಪಡೆದಿದ್ದು, ದೇಶದಲ್ಲಿ ಉತ್ತಮ ಇಂಧನ ದಕ್ಷತೆ ಹೊಂದಿರುವ ಎಂಪಿವಿ ಕಾರುಗಳಲ್ಲಿ ಅಗ್ರಸ್ಥಾನದಲ್ಲಿ ನಿಲ್ಲುತ್ತದೆ. ಹೀಗಾಗಿ ಸದ್ಯ ಮಾರುಕಟ್ಟೆಯಲ್ಲಿರುವ ಮಹೀಂದ್ರಾ ಮರಾಜೊ ಕಾರುಗಳಿಗೆ ಇದು ಸಾಕಷ್ಟು ಪೈಪೋಟಿ ನೀಡಲಿದೆ.

Most Read Articles

Kannada
English summary
New maruti ertiga waiting period four weeks.
Story first published: Wednesday, November 28, 2018, 16:11 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X