ಕಡಿಮೆ ಅವಧಿಯಲ್ಲಿ ದಾಖಲೆ ಪ್ರಮಾಣದ ಬುಕ್ಕಿಂಗ್ ಪಡೆದ ಮಾರುತಿ ಸುಜುಕಿ ಹೊಸ ಸ್ವಿಫ್ಟ್
ಮಾರುತಿ ಸಂಸ್ಥೆಯು ಕಳೆದು ತಿಂಗಳ ಹಿಂದಷ್ಟೇ ತನ್ನ ಜನಪ್ರಿಯ ಸ್ವಿಫ್ಟ್ 2018ರ ಮಾದರಿಯ ಕಾರುಗಳನ್ನು ಬಿಡುಗಡೆ ಮಾಡಿದ್ದು, ಹೊಸ ಕಾರುಗಳು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ದಾಖಲೆ ಪ್ರಮಾಣದ ಬುಕ್ಕಿಂಗ್ ಪಡೆದಿವೆ.
ದೇಶಿಯ ಮಾರುಕಟ್ಟೆಯ ಕಾರು ಮಾರಾಟದಲ್ಲಿ ಅಗ್ರಗಣ್ಯ ಪಾಲುದಾರಿಕೆ ಹೊಂದಿರು ಮಾರುತಿ ಸಂಸ್ಥೆಯು ಕಳೆದು ತಿಂಗಳ ಹಿಂದಷ್ಟೇ ತನ್ನ ಜನಪ್ರಿಯ ಸ್ವಿಫ್ಟ್ 2018ರ ಮಾದರಿಯ ಕಾರುಗಳನ್ನು ಬಿಡುಗಡೆ ಮಾಡಿದ್ದು, ಹೊಸ ಕಾರುಗಳು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ದಾಖಲೆ ಪ್ರಮಾಣದ ಬುಕ್ಕಿಂಗ್ ಪಡೆದಿವೆ.

ಹೌದು... ಕಳೆದ ತಿಂಗಳು ಮುಕ್ತಾಯಗೊಂಡ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಮಾರುತಿ ಸುಜುಕಿ 2018ರ ಸ್ವಿಫ್ಟ್ ಕಾರುಗಳು ಬಿಡುಗಡೆಗೊಳ್ಳುವ ಮೂಲಕ ಹ್ಯಾಚ್‌ಬ್ಯಾಕ್ ಪ್ರಿಯರಲ್ಲಿ ಕುತೂಹಲ ಹುಟ್ಟುಹಾಕಿದ್ದಲ್ಲದೇ ಬರೊಬ್ಬರಿ 75,000 ಬುಕ್ಕಿಂಗ್ ಪಡೆದಿವೆ ಅಂದ್ರೆ ನೀವು ನಂಬಲೇಬೇಕು.

ಇನ್ನು ದೇಶಿಯಾ ಮರುಕಟ್ಟೆಯಲ್ಲಿ ಹಲವಾರು ದಿನಗಳಿಂದ ಸ್ವಿಫ್ಟ್ ಕಾರು ಜನಪ್ರಿಯತೆಯನ್ನು ಕಂಡಿದ್ದು, ಈ ನಿಟ್ಟಿನಲ್ಲಿ ಸಂಸ್ಥೆಯು ಮೂರನೇ ತಲೆಮಾರಿನ ಸಿಫ್ಟ್ ಕಾರನ್ನು ಬಿಡುಗಡೆಗೊಳಿಸಿರುವುದು ಗ್ರಾಹಕರನ್ನು ಆಕರ್ಷಿಸುತ್ತಿದೆ.

2018ರ ಸ್ವಿಫ್ಟ್ ಕಾರಿನ ಬೆಲೆಗಳನ್ನು ದೆಹಲಿ ಎಕ್ಸ್ ಶೋರಂ ಪ್ರಕಾರ ಆರಂಭಿಕ ಕಾರು ಮಾದರಿಯನ್ನು ರೂ. 4.99 ಲಕ್ಷಕ್ಕೆ ಮತ್ತು ಟಾಪ್ ಕಾರು ಮಾದರಿಯನ್ನು ರೂ. 8.39 ಲಕ್ಷಕ್ಕೆ ನಿಗದಿ ಮಾಡಲಾಗಿದ್ದು, ಥರ್ಡ್ ಜನರೇಷನ್ ವೈಶಿಷ್ಟ್ಯತೆಗಳೊಂದಿಗೆ ಹೊಸ ಕಾರುಗಳನ್ನು ಅಭಿವೃದ್ಧಿ ಮಾಡಿದೆ.

ಗ್ರಾಹಕರ ಆಯ್ಕೆಗೆ ಅನುಗುಣವಾಗಿ ವಿವಿಧ ಮಾದರಿಗಳನ್ನು ಅಭಿವೃದ್ಧಿ ಮಾಡಲಾಗಿದ್ದು, ಪೆಟ್ರೋಲ್ ಆವೃತ್ತಿಯಲ್ಲಿ 6 ಮತ್ತು ಡೀಸೆಲ್ ಆವೃತ್ತಿಗಳಲ್ಲಿ ವಿವಿಧ 6 ವಿಭಿನ್ನ ಕಾರು ಶೈಲಿಗಳನ್ನು ನಿರ್ಮಾಣ ಮಾಡಲಾಗಿದೆ.

ಎಂಜಿನ್ ಸಾಮರ್ಥ್ಯ
ಬಿಡುಗಡೆಯಾಗಿರುವ ಸ್ವಿಫ್ಟ್ ವಿನೂತನ ಕಾರುಗಳು 1.2-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 1.3-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದು, ಪೆಟ್ರೋಲ್ ಆವೃತ್ತಿಗಳು 83 ಬಿಎಚ್‌ಪಿ ಮತ್ತು 115ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ ಡೀಸೆಲ್ ಆವೃತ್ತಿಯು 74 ಬಿಎಚ್‌ಪಿ ಮತ್ತು 190 ಎನ್ಎಂ ಟಾರ್ಕ್ ಉತ್ಪಾದಿಸುತ್ತವೆ.

ಜೊತಗೆ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಮಾಡಬಹುದಾಗಿದ್ದು, ಡಿಜೈರ್ ಮತ್ತು ಬಲೆನೊ ಕಾರುಗಳಿಂತಲೂ ಹೆಚ್ಚು ಆಕರ್ಷಣೆ ಪಡೆದುಕೊಂಡಿದೆ.

ಕಾರಿನ ಒಳ ಮತ್ತು ಹೊರ ವಿನ್ಯಾಸ
ಸ್ಪೋರ್ಟಿ ಇಂಟಿರಿಯರ್ ಲುಕ್ ಪಡೆದಿರುವ ಹೊಸ ಸ್ವಿಫ್ಟ್ ಕಾರುಗಳು ಅತ್ಯಾರ್ಷಕ ಹೆಕ್ಷಾಗೊನಲ್ ಗ್ರಿಲ್, ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಎಲ್ಇಡಿ ಡೇ ಟೈಮ್ ರನ್ನಿಂಗ್ ಲೈಟ್ಸ್, ನ್ಯೂ ಫ್ರಂಟ್ ಬಂಪರ್, ಫಾಗ್ ಲ್ಯಾಂಪ್, ಎಲ್‌ಇಡಿ ಸಿಗ್ನಿಚರ್ ಟೈಲ್ ಲೈಟ್ ಕೂಡಾ ನೀಡಲಾಗಿದೆ.

ಇದಲ್ಲದೇ ಸ್ಮಾರ್ಟ್ ಕನೆಕ್ಟಿವಿಟಿಗೂ ಹೊಸ ಕಾರುಗಳಲ್ಲಿ ಹೆಚ್ಚಿನ ಒತ್ತು ನೀಡಲಾಗಿದ್ದು, 7 ಇಂಚಿನ ಇನ್ಪೋಟೈನ್‌ಮೆಂಟ್, ಆ್ಯಪಲ್ ಕಾರ್ ಪ್ಲೇ, ಅಂಡ್ರಾಯ್ಡ್ ಆಟೋ, ಮಿರರ್ ಲೀಂಕ್ ಮತ್ತು ಕ್ಲೈಮೆಟ್ ಕಂಟ್ರೋಲರ್ ಸಿಸ್ಟಂ ಒದಗಿಸಲಾಗಿದೆ.

ಸುರಕ್ಷಾ ಸಾಧನಗಳು ಎಂಜಿನ್ ಸ್ಟಾರ್ಟ್ ಆ್ಯಂಡ್ ಸ್ಟಾಪ್ ಬಟನ್ ಒದಗಿಸಲಾಗಿದ್ದು, ಆಟೋ ಹೆಡ್‌ಲ್ಯಾಂಪ್, ಆಟೋ ಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲರ್, ಕೀ ಲೇಸ್ ಎಂಟ್ರಿ, ಎಲೆಕ್ಟ್ರಿಕ್ ಆಪರೇಟಿಂಗ್ ರಿರ್ ವ್ಯೂವ್ ಮಿರರ್, ಎಬಿಎಸ್ ಸೇರಿದಂತೆ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್ ಸೌಲಭ್ಯವಿದೆ.

ಮಧ್ಯಮ ವರ್ಗದ ಗ್ರಾಹಕರನ್ನು ತನ್ನತ್ತ ಸೆಳೆಯುವ ತಂತ್ರರೂಪಿಸಿರುವ ಮಾರುತಿ ಸುಜುಕಿ ಸಂಸ್ಥೆಯು ಜನಪ್ರಿಯ ಹ್ಯುಂಡೈ ಗ್ರ್ಯಾಂಡ್ ಐ10, ಫೋರ್ಕ್ಸ್‌ವ್ಯಾಗನ್ ಪೊಲೊ ಮತ್ತು ಫೋರ್ಡ್ ಫಿಗೊ ಕಾರುಗಳಿಗೆ ತ್ರೀವ ಪೈಪೋಟಿಯನ್ನು ನೀಡಿದೆ..


Click it and Unblock the Notifications