ದಿನಂಪ್ರತಿ 689 ಸ್ವಿಫ್ಟ್ ಕಾರುಗಳನ್ನು ಮಾರಾಟ ಮಾಡುತ್ತಿದೆ ಮಾರುತಿ ಸುಜುಕಿ

By Praveen Sannamani

ದೇಶದಲ್ಲಿನ ಕಾರು ಮಾರಾಟದಲ್ಲಿ ನಂ.1 ಸ್ಥಾನ ಕಾಯ್ದುಕೊಂಡಿರುವ ಮಾರುತಿ ಸುಜುಕಿ ಸಂಸ್ಥೆಯ ಜನಪ್ರಿಯತೆಯಲ್ಲಿ ಯಾವತ್ತು ಹಿಂದೆ ಬಿದ್ದಿಲ್ಲ. ಇದಕ್ಕೆ ಹಲವಾರು ಕಾರಣಗಳಿವೆ. ಗ್ರಾಹಕ ಸ್ನೇಹಿ ವಾಹನಗಳ ಉತ್ಪಾದನೆಯಲ್ಲಿ ಉಳಿದ ಸಂಸ್ಥೆಗಳಿಂತ ಒಂದು ಹೆಜ್ಜೆ ಮುಂದೆಯಿರುವ ಮಾರುತಿ ಸುಜುಕಿ ಸಂಸ್ಥೆಯು ಸ್ವಿಫ್ಟ್ ಕಾರಿನ ಮಾರಾಟದಲ್ಲಿ ದಾಖಲೆಯನ್ನೇ ನಿರ್ಮಿಸುತ್ತಿದೆ.

ದಿನಂಪ್ರತಿ 689 ಸ್ವಿಫ್ಟ್ ಕಾರುಗಳನ್ನು ಮಾರಾಟ ಮಾಡುತ್ತಿದೆ ಮಾರುತಿ ಸುಜುಕಿ

ಹೌದು, ಕಳೆದ ಫೆಬ್ರುವರಿಯಲ್ಲಿ ನಡೆದ 2018ರ ಆಟೋ ಎಕ್ಸ್‌ಪೋದಲ್ಲಿ ನ್ಯೂ ಜನರೇಷನ್ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಕಾರುಗಳನ್ನು ಬಿಡುಗಡೆಗೊಳಿಸಿದ್ದ ಮಾರುತಿ ಸುಜುಕಿ ಸಂಸ್ಥೆಯು ಇದೀಗ ಹೊಸ ಕಾರುಗಳ ಮಾರಾಟದಲ್ಲಿ ದಾಖಲೆ ನಿರ್ಮಿಸುತ್ತಿದ್ದು, ಬಿಡುಗಡೆಯಾದ 145 ದಿನಗಳ ಅವಧಿಯಲ್ಲಿ ಬರೋಬ್ಬರಿ 1 ಲಕ್ಷ ಕಾರುಗಳನ್ನು ಮಾರಾಟ ಮಾಡಿದೆ ಎಂದ್ರೆ ನೀವು ನಂಬಲೇಬೇಕು.

ದಿನಂಪ್ರತಿ 689 ಸ್ವಿಫ್ಟ್ ಕಾರುಗಳನ್ನು ಮಾರಾಟ ಮಾಡುತ್ತಿದೆ ಮಾರುತಿ ಸುಜುಕಿ

ಸದ್ಯ ಭಾರೀ ಪ್ರಮಾಣದ ಬುಕ್ಕಿಂಗ್ ಪಡೆದಿರುವ ಸ್ವಿಫ್ಟ್ ಕಾರುಗಳು ಪ್ರತಿ ದಿನ ದೇಶದ ವಿವಿಧ ಡೀಲರ್ಸ್‌ಗಳಲ್ಲಿ ಸರಾಸರಿಯಾಗಿ ದಿನ ಒಂದಕ್ಕೆ 689 ಕಾರುಗಳನ್ನು ವಿತರಣೆ ಮಾಡಲಾಗುತ್ತಿದ್ದು, ಇದು ಮುಂದಿನ ಒಂದು ವರ್ಷದ ಅವಧಿಗೂ ಇದೇ ಬೇಡಿಕೆ ಇರಲಿದೆ ಎನ್ನಲಾಗಿದೆ.

ದಿನಂಪ್ರತಿ 689 ಸ್ವಿಫ್ಟ್ ಕಾರುಗಳನ್ನು ಮಾರಾಟ ಮಾಡುತ್ತಿದೆ ಮಾರುತಿ ಸುಜುಕಿ

ಇನ್ನು ಗ್ರಾಹಕರ ನೀರಿಕ್ಷೆಯಂತೆ 2018ರ ಸ್ವಿಫ್ಟ್ ಕಾರಿನ ಬೆಲೆಗಳನ್ನು ಸಹ ದೆಹಲಿ ಎಕ್ಸ್ ಶೋರಂ ಪ್ರಕಾರ ಆರಂಭಿಕ ಕಾರು ಮಾದರಿಯನ್ನು ರೂ. 4.99 ಲಕ್ಷಕ್ಕೆ ಮತ್ತು ಟಾಪ್ ಕಾರು ಮಾದರಿಯನ್ನು ರೂ. 8.39 ಲಕ್ಷಕ್ಕೆ ನಿಗದಿ ಮಾಡಲಾಗಿದ್ದು, ಥರ್ಡ್ ಜನರೇಷನ್ ವೈಶಿಷ್ಟ್ಯತೆಗಳೊಂದಿಗೆ ಹೊಸ ಕಾರುಗಳನ್ನು ಅಭಿವೃದ್ಧಿ ಮಾಡಿದೆ.

ದಿನಂಪ್ರತಿ 689 ಸ್ವಿಫ್ಟ್ ಕಾರುಗಳನ್ನು ಮಾರಾಟ ಮಾಡುತ್ತಿದೆ ಮಾರುತಿ ಸುಜುಕಿ

ಸುಧಾರಿತ ತಂತ್ರಜ್ಞಾನಗಳ ತಳಹದಿಯಲ್ಲಿ ನಿರ್ಮಾಣವಾಗಿರುವ 2018 ಸ್ವಿಫ್ಟ್ ಕಾರುಗಳು ಭಾರತೀಯ ಕಾರು ವಿಭಾಗದಲ್ಲಿ ಹೊಸ ಕ್ರಾಂತಿಯನ್ನು ಹುಟ್ಟುಹಾಕಿದ್ದು, ಯುವ ಹಾಗೂ ಹಿರಿಯ ವಾಹನ ಪ್ರೇಮಿಗಳು ಒಂದೇ ರೀತಿಯಲ್ಲಿ ಇಷ್ಟಪಡುವ ಕಾರು ಇದಾಗಿದೆ.

ದಿನಂಪ್ರತಿ 689 ಸ್ವಿಫ್ಟ್ ಕಾರುಗಳನ್ನು ಮಾರಾಟ ಮಾಡುತ್ತಿದೆ ಮಾರುತಿ ಸುಜುಕಿ

ಐದನೇ ತಲೆಮಾರಿನ ಹರ್ಟೆಕ್ಟ್ (Heartect) ತಳಹದಿಯಲ್ಲಿ ನೂತನ ಸ್ವಿಫ್ಟ್ ನಿರ್ಮಾಣ ಮಾಡಲಾಗಿದ್ದು, ಇದು ಹೆಚ್ಚು ಶಕ್ತಿಶಾಲಿ, ಬಿಗಿತವನ್ನು ಪಡೆಯಲಿದೆ. ಜೊತೆಗೆ ಅತ್ಯುತ್ತಮ ಚಾಲನಾ ಅನುಭವದೊಂದಿಗೆ ಗರಿಷ್ಠ ಇಂಧನ ಕ್ಷಮತೆಯನ್ನು ಕಾಪಾಡಿಕೊಳ್ಳಲಿದೆ.

ದಿನಂಪ್ರತಿ 689 ಸ್ವಿಫ್ಟ್ ಕಾರುಗಳನ್ನು ಮಾರಾಟ ಮಾಡುತ್ತಿದೆ ಮಾರುತಿ ಸುಜುಕಿ

ಹೀಗಾಗಿಯೇ ಗ್ರಾಹಕರ ಆಯ್ಕೆಗೆ ಅನುಗುಣವಾಗಿ ವಿವಿಧ ಮಾದರಿಗಳನ್ನು ಅಭಿವೃದ್ಧಿ ಮಾಡಲಾಗಿದ್ದು, ಪೆಟ್ರೋಲ್ ಆವೃತ್ತಿಯಲ್ಲಿ 6 ಮತ್ತು ಡೀಸೆಲ್ ಆವೃತ್ತಿಗಳಲ್ಲಿ ವಿವಿಧ 6 ವಿಭಿನ್ನ ಕಾರು ಶೈಲಿಗಳನ್ನು ನಿರ್ಮಾಣ ಮಾಡಲಾಗಿದೆ.

ದಿನಂಪ್ರತಿ 689 ಸ್ವಿಫ್ಟ್ ಕಾರುಗಳನ್ನು ಮಾರಾಟ ಮಾಡುತ್ತಿದೆ ಮಾರುತಿ ಸುಜುಕಿ

ಎಂಜಿನ್ ಸಾಮರ್ಥ್ಯ

ಖರೀದಿಗೆ ಲಭ್ಯವಿರುವ ಸ್ವಿಫ್ಟ್ ವಿನೂತನ ಕಾರುಗಳು 1.2-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 1.3-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದು, ಪೆಟ್ರೋಲ್ ಆವೃತ್ತಿಗಳು 83 ಬಿಎಚ್‌ಪಿ ಮತ್ತು 115ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ ಡೀಸೆಲ್ ಆವೃತ್ತಿಯು 74 ಬಿಎಚ್‌ಪಿ ಮತ್ತು 190 ಎನ್ಎಂ ಟಾರ್ಕ್ ಉತ್ಪಾದಿಸುತ್ತವೆ.

ದಿನಂಪ್ರತಿ 689 ಸ್ವಿಫ್ಟ್ ಕಾರುಗಳನ್ನು ಮಾರಾಟ ಮಾಡುತ್ತಿದೆ ಮಾರುತಿ ಸುಜುಕಿ

ಜೊತಗೆ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಮಾಡಬಹುದಾಗಿದ್ದು, ಡಿಜೈರ್ ಮತ್ತು ಬಲೆನೊ ಕಾರುಗಳಿಂತಲೂ ಹೆಚ್ಚು ಆಕರ್ಷಣೆ ಪಡೆದುಕೊಂಡಿದೆ.

ದಿನಂಪ್ರತಿ 689 ಸ್ವಿಫ್ಟ್ ಕಾರುಗಳನ್ನು ಮಾರಾಟ ಮಾಡುತ್ತಿದೆ ಮಾರುತಿ ಸುಜುಕಿ

ಕಾರಿನ ಒಳ ಮತ್ತು ಹೊರ ವಿನ್ಯಾಸ ಸ್ಪೋರ್ಟಿ ಇಂಟಿರಿಯರ್ ಲುಕ್ ಪಡೆದಿರುವ ಹೊಸ ಸ್ವಿಫ್ಟ್ ಕಾರುಗಳು ಅತ್ಯಾರ್ಷಕ ಹೆಕ್ಷಾಗೊನಲ್ ಗ್ರಿಲ್, ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಎಲ್ಇಡಿ ಡೇ ಟೈಮ್ ರನ್ನಿಂಗ್ ಲೈಟ್ಸ್, ನ್ಯೂ ಫ್ರಂಟ್ ಬಂಪರ್, ಫಾಗ್ ಲ್ಯಾಂಪ್, ಎಲ್‌ಇಡಿ ಸಿಗ್ನಿಚರ್ ಟೈಲ್ ಲೈಟ್ ಕೂಡಾ ನೀಡಲಾಗಿದೆ.

ದಿನಂಪ್ರತಿ 689 ಸ್ವಿಫ್ಟ್ ಕಾರುಗಳನ್ನು ಮಾರಾಟ ಮಾಡುತ್ತಿದೆ ಮಾರುತಿ ಸುಜುಕಿ

ಇನ್ನು ಸ್ಮಾರ್ಟ್ ಕನೆಕ್ಟಿವಿಟಿಗೂ ಹೊಸ ಕಾರುಗಳಲ್ಲಿ ಹೆಚ್ಚಿನ ಒತ್ತು ನೀಡಲಾಗಿದ್ದು, 7 ಇಂಚಿನ ಇನ್ಪೋಟೈನ್‌ಮೆಂಟ್, ಆ್ಯಪಲ್ ಕಾರ್ ಪ್ಲೇ, ಅಂಡ್ರಾಯ್ಡ್ ಆಟೋ, ಮಿರರ್ ಲೀಂಕ್ ಮತ್ತು ಕ್ಲೈಮೆಟ್ ಕಂಟ್ರೋಲರ್ ಸಿಸ್ಟಂ ಒದಗಿಸಲಾಗಿದೆ.

ದಿನಂಪ್ರತಿ 689 ಸ್ವಿಫ್ಟ್ ಕಾರುಗಳನ್ನು ಮಾರಾಟ ಮಾಡುತ್ತಿದೆ ಮಾರುತಿ ಸುಜುಕಿ

ಸುರಕ್ಷಾ ಸಾಧನಗಳು

ಎಂಜಿನ್ ಸ್ಟಾರ್ಟ್ ಆ್ಯಂಡ್ ಸ್ಟಾಪ್ ಬಟನ್ ಒದಗಿಸಲಾಗಿದ್ದು, ಆಟೋ ಹೆಡ್‌ಲ್ಯಾಂಪ್, ಆಟೋ ಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲರ್, ಕೀ ಲೇಸ್ ಎಂಟ್ರಿ, ಎಲೆಕ್ಟ್ರಿಕ್ ಆಪರೇಟಿಂಗ್ ರಿರ್ ವ್ಯೂವ್ ಮಿರರ್, ಎಬಿಎಸ್ ಸೇರಿದಂತೆ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್ ಸೌಲಭ್ಯವಿದೆ.

ದಿನಂಪ್ರತಿ 689 ಸ್ವಿಫ್ಟ್ ಕಾರುಗಳನ್ನು ಮಾರಾಟ ಮಾಡುತ್ತಿದೆ ಮಾರುತಿ ಸುಜುಕಿ

ಈ ಮೂಲಕ ಮಧ್ಯಮ ವರ್ಗದ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿರುವ ಮಾರುತಿ ಸುಜುಕಿ ಸಂಸ್ಥೆಯು ಜನಪ್ರಿಯ ಹ್ಯುಂಡೈ ಗ್ರ್ಯಾಂಡ್ ಐ10, ಫೋರ್ಕ್ಸ್‌ವ್ಯಾಗನ್ ಪೊಲೊ ಮತ್ತು ಫೋರ್ಡ್ ಫಿಗೊ ಕಾರುಗಳಿಗೆ ತ್ರೀವ ಹೊಡೆತ ನೀಡಿದೆ ಎನ್ನಬಹುದು. ಹೊಸ ಕಾರಿನ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಹಂಚಿಕೊಳ್ಳಬಹುದು.

More from DriveSpark

Article Published On: Friday, June 15, 2018, 20:36 [IST]
English summary
New Maruti Swift Sells One Lakh Units In 145 Days — Fastest Selling Car In India.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+