ಬಿಡುಗಡೆಗಾಗಿ ಸಜ್ಜುಗೊಳ್ಳುತ್ತಿರುವ ನಿಸ್ಸಾನ್ ಕಿಕ್ಸ್ ಎಸ್‍ಯುವಿ
ಹ್ಯುಂಡೈ ಸಂಸ್ಥೆಯ ಜನಪ್ರಿಯ ಕ್ರೆಟಾ ಮತ್ತು ಇನ್ನಿತರೆ ಎಸ್‍ಯುವಿ ಕಾರುಗಳಿಗೆ ಪೈಪೋಟಿ ನೀಡಲು ನಿಸ್ಸಾನ್ ಭಾರತದಲ್ಲಿ ತನ್ನ ಹೊಸ ನಿಸ್ಸಾನ್ ಕಿಕ್ಸ್ ಎಸ್‍ಯುವಿ ಕಾರನ್ನು ಬಿಡುಗಡೆಗೊಳಿಸುವುದಾಗಿ ಹೇಳಿಕೊಂಡಿದ್ದು, ಕೆಲವು ದಿನಗಳ ಹಿಂದಷ್ಟೆ ಭಾರತಕ್ಕೆ ಬರಲಿರುವ ನಿಸ್ಸಾನ್ ಕಿಕ್ಸ್ ಕಾರನ್ನು ಪ್ರದರ್ಶನಗೊಳಿಸಲಾಯಿತು.

ನಿಸ್ಸಾನ್ ಸಂಸ್ಥೆಯಲ್ಲಿನ ರೆನಾಲ್ಟ್ ಡಸ್ಟರ್ ಬಿಂ ಪ್ಲಾಟ್‍ಫಾರ್ಮ್‍ನ ಅಡಿಯಲ್ಲಿ ನಿರ್ಮಿಸಲಾಗಿರುವ ಹೊಸ ಕಿಕ್ಸ್ ಎಸ್‍ಯುವಿ ಕಾರು ಇದೀಗ ಬಿಡುಗಡೆಗಾಗಿ ಸಜ್ಜುಗೊಳ್ಳುತ್ತಿದೆ. ಚೆನ್ನೈ ನಗರದ ರಸ್ತೆಗಳಲ್ಲಿ ಎಂಜಿನ್ ಕಾರ್ಯಕ್ಷಮತೆಯನ್ನು ಪರೀಕ್ಷಿಸಲು ಸ್ಪಾಟ್ ಟೆಸ್ಟಿಂಗ್ ನಡೆಸುವಾಗ ಕಾಣಿಸಿಕೊಂಡಿದ್ದು ನಿಸ್ಸಾನ್ ಕಾರುಗಳ ಪ್ರಿಯರಲ್ಲಿ ಕುತೂಹಲವನ್ನು ಉಂಟು ಮಾಡಿದೆ.

GRAPHENE ಡಿಸೈನ್ ತಂತ್ರಜ್ಞಾನದೊಂದಿಗೆ ಸಿದ್ದವಾಗಿರುವ ಹೊರ ವಿನ್ಯಾಸಗಳು ಕಿಕ್ಸ್‌ಗೆ ಮೆರಗು ತಂದಿದ್ದು, ಮಲ್ಟಿ ಲೇಯರ್ ಡ್ಯುಯಲ್ ಟೋನ್ ಡ್ಯಾಶ್‌ಬೋರ್ಡ್ ವ್ಯವಸ್ಥೆ ಹೊಂದಿದ್ದು, ಲೆದರ್ ಕೊಟಿಂಗ್ ಸೀಟುಗಳು ಮತ್ತು ಪುಶ್ ಡೋರ್ ಟ್ರಿಮ್ ಅನುಕೂಲತೆಯಿದೆ.
Image Courtesy:Power Stroke PS

ಇನ್ನು ವಿನೂತನ ಕಾರಿನಲ್ಲಿ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಹಾಗೂ ಕಾರಿನ ಸುತ್ತ ನೋಡಬಹುದಾದ ವಿವ್ಯೂ ಮಾನಿಟರ್ ವ್ಯವಸ್ಥೆಯಿದ್ದು, ಇದು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾರಾಟವಾಗುತ್ತಿರುವ ಇತರೆ ಸಬ್ ಕಂಪ್ಯಾಕ್ಟ್ ಮಾದರಿಗಳಲ್ಲೇ ವಿಶೇಷ ಕಾರು ಎನ್ನಬಹುದು.

ಹಾಗೆಯೇ ಪ್ರೀಮಿಯಂ ಕಾರುಗಳಲ್ಲಿ ಕಂಡುಬರುವ ವಿ ಮೊಷನ್ ಗ್ರೀಲ್, ಸ್ವೆಪ್ಟ್ ಬ್ಯಾಕ್ ಹೆಡ್‌ಲ್ಯಾಂಪ್, ಎಲ್ಇಡಿ ಡೇ ಟೈಮ್ ರನ್ನಿಂಗ್ ಲೈಟ್, ಎಲ್ಇಡಿ ಫಾಗ್ ಲ್ಯಾಂಪ್, ಸ್ಪೋರ್ಟಿ ಲುಕ್ ನೀಡುವ 17-ಇಂಚಿನ ಫೈವ್ ಸ್ಪೋಕ್ ಅಲಾಯ್ ಚಕ್ರಗಳು ಮತ್ತು ಪ್ಲಾಸ್ಟಿಕ್ ಬಾಡಿ ಕ್ಲ್ಯಾಡಿಂಗ್ ಸೇರಿದಂತೆ ಹಲವು ವಿಶೇಷತೆಗಳನ್ನು ಹೊಂದಿದೆ.

ಸಬ್ ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಯ ಕಿಕ್ಸ್ ಕಾರು ಉತ್ತಮ ಉದ್ದಳತೆ ಹೊಂದಿದ್ದು, 4,384ಎಂಎಂ ಉದ್ದ, 1,813ಎಂಎಂ ಅಗಲವಾಗಿದೆ. ಜೊತೆಗೆ 2,673 ಎಂಎಂ ಎತ್ತರವಾಗಿದ್ದು, ಐದು ಜನ ಆರಾಮದಾಯಕವಾಗಿ ಪ್ರಯಾಣ ಮಾಡಬಹುದಾಗಿದೆ.

ಆದ್ರೆ ಕಾರುಗಳ ಒಳಭಾಗದ ವಿಶೇಷತೆಗಳ ಬಗ್ಗೆ ಹೆಚ್ಚಿನ ಮಾಹಿತಿ ಬಿಟ್ಟುಕೊಡದ ನಿಸ್ಸಾನ್ ಸಂಸ್ಥೆಯು ಕೇವಲ ಹೊರಭಾಗದ ವೈಶಿಷ್ಟ್ಯತೆಗಳನ್ನು ಮಾತ್ರವೇ ಪ್ರದರ್ಶನ ಮಾಡಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಮತ್ತಷ್ಟು ಮಾಹಿತಿಗಳನ್ನು ಹಂಚಿಕೊಳ್ಳಲಿದೆ.

ಎಂಜಿನ್ ಸಾಮರ್ಥ್ಯ
ಹೊಸ ಕಿಕ್ಸ್ ಮಾದರಿಯು 1.5-ಲೀಟರ್ ಹಾಗೂ 1.6-ಲೀಟರ್ ಮಾದರಿಯ ಎರಡು ಡಿಸೇಲ್ ಎಂಜಿನ್ ಆಯ್ಕೆ ಹೊಂದುವ ಸಾಧ್ಯತೆಗಳಿದ್ದು, ಹಾಗೆಯೇ 1.5-ಲೀಟರ್ ಪೆಟ್ರೋಲ್ ಎಂಜಿನ್ ಕೂಡಾ ಲಭ್ಯವಿರಲಿದೆ. ಪ್ರತಿ ಮಾದರಿಯಲ್ಲೂ 6-ಸ್ಪೀಡ್ ಮ್ಯಾನುವಲ್ ಜೊತೆ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ದೊರೆಯಲಿದೆ.

ಕಾರಿನ ಬೆಲೆ ಮತ್ತು ಬಿಡುಗಡೆಯ ಅವಧಿ(ಅಂದಾಜು)
ನಿಸ್ಸಾನ್ ಕಿಕ್ಸ್ ಕಾರುಗಳು 2019ರ ಜನವರಿಯಲ್ಲಿ ಖರೀದಿಗೆ ಲಭ್ಯವಾಗುವುದು ಬಹುತೇಕ ಖಚಿತವಾಗಿದ್ದು, ಕಾರಿನ ಬೆಲೆಗಳು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.11 ಲಕ್ಷದಿಂದ ಟಾಪ್ ಎಂಡ್ ಮಾದರಿಗೆ ರೂ.15 ಲಕ್ಷ ಬೆಲೆ ಇರಬಹುದೆಂದು ಅಂದಾಜಿಸಲಾಗಿದೆ.


Click it and Unblock the Notifications








