ಫೋಕ್ಸ್‌ವ್ಯಾಗನ್ ಜೊತೆಗೂಡಿ ಹೊಸ ಎಸ್‌ಯುವಿ ಬಿಡುಗಡೆ ಮಾಡಲಿದೆ ಸ್ಕೋಡಾ..!
ಫೋಕ್ಸ್‌ವ್ಯಾಗನ್ ಗ್ರೂಪ್‌ನ ಅಂಗಸಂಸ್ಥೆಯಾದ ಸ್ಕೋಡಾ ಸಂಸ್ಥೆಯು ಭಾರತದಲ್ಲಿ ಹೊಸ ಯೋಜನೆಯೊಂದಕ್ಕೆ ಒಪ್ಪಿಗೆ ಸೂಚಿಸಿದ್ದು, ಹೊಸ ಯೋಜನೆಯ ಮಾರ್ಗಸೂಚಿಯೆಂತೆ ಸ್ಕೋಡಾ ಸಂಸ್ಥೆಯೇ ಫೋಕ್ಸ್‌ವ್ಯಾಗನ್ ಕಾರುಗಳನ್ನು ಅಭಿವೃದ್ಧಿ ಮಾಡುವ ಹೊಣೆ ಹೊತ್ತಿದೆ.

ಫೋಕ್ಸ್‌ವ್ಯಾಗನ್ ಸಂಸ್ಥೆಯು ಭಾರತೀಯ ಮಾರುಕಟ್ಟೆ ಸೇರಿದಂತೆ ವಿಶ್ವದ ಪ್ರಮುಖ ಮಾರುಕಟ್ಟೆಗಳಿಗಾಗಿ ವಿವಿಧ ಕಾರು ಮಾದರಿಗಳನ್ನು ಪರಿಚಯಿಸುವ ಇರಾದೆಯಲ್ಲಿದ್ದು, 'ಇಂಡಿಯಾ 2.0 ಪ್ರೋಜೆಕ್ಟ್' ಎನ್ನುವ ಬೃಹತ್ ಯೋಜನೆ ಒಂದನ್ನು ಸಿದ್ದಪಡಿಸಿದೆ. ಇದರ ಜವಾಬ್ದಾರಿಯನ್ನು ಸ್ಕೋಡಾ ಸಂಸ್ಥೆಗೆ ವಹಿಸಿಕೊಟ್ಟಿದ್ದು, ಮುಂಬರುವ ಫೋಕ್ಸ್‌ವ್ಯಾಗನ್ ಸಂಸ್ಥೆಯ ಪ್ರತಿಯೊಂದು ಕಾರು ಮಾದರಿಯು ಸಹ ಸ್ಕೋಡಾ ತಂತ್ರಜ್ಞಾನ ಪ್ರೇರಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿವೆ.

ಸ್ಕೋಡಾ ಸಂಸ್ಥೆಯು ಭಾರತದಲ್ಲಿ ತನ್ನ ಕಾರು ಉತ್ಪನ್ನಗಳ ಬೆಲೆ ತಗ್ಗಿಸಿ ಮಾರಾಟ ಹೆಚ್ಚಿಸುವ ಉದ್ದೇಶದಿಂದ MQB ಎನ್ನುವ ಪ್ಯಾಟ್‌ಫಾರ್ಮ್ ಒಂದನ್ನು ತೆರಿದಿದ್ದು, ಇಲ್ಲಿ ನಿರ್ಮಾಣವಾಗುವ ಕಾರುಗಳು ಸದ್ಯ ಮಾರುಕಟ್ಟೆಯಲ್ಲಿರುವ ಕಾರುಗಳಿಂತ ಕಡಿಮೆ ಬೆಲೆ ಮತ್ತು ಗುಣಮಟ್ಟದ ಉತ್ಪನ್ನಗಳ ತಯಾರಿಕೆಗೆ ಸಹಕಾರಿಯಾಗಲಿದೆ.

ಇದೇ ಕಾರಣಕ್ಕೆ ಸ್ಕೋಡಾ ಸಂಸ್ಥೆಗೆ ತನ್ನ ಹೊಸ ಕಾರು ಮಾದರಿಗಳ ಅಭಿವೃದ್ಧಿ ಯೋಜನೆಯನ್ನು ವಹಿಸಿರುವ ಫೋಕ್ಸ್‌ವ್ಯಾಗನ್ ಸಂಸ್ಥೆಯು ಕಡಿಮೆ ಬೆಲೆಯಲ್ಲಿ ಕಾರುಗಳನ್ನು ತಯಾರಿಸಿ ಭಾರೀ ಪ್ರಮಾಣದ ಆದಾಯ ಗಳಿಕೆಯ ತವಕದಲ್ಲಿದ್ದು, ಇದು ಸ್ಕೋಡಾ ಸಂಸ್ಥೆಗೂ ಸಾಕಷ್ಟು ಮನ್ನಣೆ ಸಿಗಲಿದೆ.

ಇದಲ್ಲದೇ ಮಧ್ಯಮ ವರ್ಗಗಳ ಗ್ರಾಹಕರನ್ನು ಸೆಳೆಯುವ ನಿಟ್ಟಿನಲ್ಲಿ ವಿಶೇಷ ಯೋಜನೆ ರೂಪಿಸಿರುವ ಸ್ಕೋಡಾ ಇಂಡಿಯಾ ಸಂಸ್ಥೆಯು ಮುಂಬರುವ ದಿನಗಳಲ್ಲಿ ಹೊಸ ಮಾದರಿಯ ಕಾರುಗಳನ್ನು ಸ್ಥಳೀಯವಾಗಿಯೇ ಅಭಿವೃದ್ಧಿ ಮಾಡಿ ಬಿಡುಗಡೆಗೊಳಿಸುವ ಬಗ್ಗೆ ಸುಳಿವು ನೀಡಿದೆ.

ಈಗಾಗಲೇ ಮಧ್ಯಮ ಕ್ರಮಾಂಕದ ಐಷಾರಾಮಿ ಕಾರುಗಳ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಸ್ಕೋಡಾ ಇಂಡಿಯಾ ಸಂಸ್ಥೆಯು ಆರಂಭಿಕ ಕಾರು ಆವೃತ್ತಿಗಳನ್ನು ಸಣ್ಣ ಗಾತ್ರದಲ್ಲಿ ಬಿಡುಗಡೆಗೊಳಿಸುವ ಬಗ್ಗೆ ಚಿಂತನೆ ನಡೆಸಿದ್ದು, ಇದಕ್ಕಾಗಿ ಟಾಟಾ ಮೋಟಾರ್ಸ್ ಜೊತೆಗೂ ಸಹ ಕೈ ಜೋಡಿಸಿದೆ.

ಭಾರತದಲ್ಲಿ ಜನಪ್ರಿಯವಾಗುತ್ತಿರುವ ಹ್ಯುಂಡೈ ಕ್ರೇಟಾಗೆ ಪ್ರತಿಸ್ಪರ್ಧಿಯಾಗಿ ವಿಷನ್ ಎಕ್ಸ್ ಮಾದರಿಯನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದು, ಮುಂಬರುವ ದಿನಗಳಲ್ಲಿ ಈ ಬಗ್ಗೆ ಸ್ಕೋಡಾ ಇಂಡಿಯಾ ಮತ್ತಷ್ಟು ಮಾಹಿತಿ ಬಿಡುಗಡೆ ಮಾಡಲಿದೆ.

ಟಾಟಾ ಮೋಟಾರ್ಸ್‌ನ ಚಾಕನ್ ಕಾರು ಉತ್ಪಾದನಾ ಘಟಕದಲ್ಲೇ ಸಣ್ಣ ಕಾರುಗಳ ಉತ್ಪಾದನೆಗೆ ಅವಕಾಶ ಮಾಡಿಕೊಡಲಾಗುತ್ತಿದ್ದು, ಹೊಸ ಯೋಜನೆ ಫಲಪ್ರದವಾದಲ್ಲಿ ಮುಂದಿನ 2019ರ ಅಂತ್ಯದಲ್ಲಿ ಹೊಸ ಮಾದರಿಯ ಸಣ್ಣಗಾತ್ರದ ಐಷಾರಾಮಿ ಕಾರುಗಳು ರಸ್ತೆಗಿಳಿಯಲಿವೆ.

ಅತ್ತ ಫೋಕ್ಸ್‌ವ್ಯಾಗನ್ ಜೊತೆಗಿನ 'ಇಂಡಿಯಾ 2.0 ಪ್ರೋಜೆಕ್ಟ್' ಸಹ ಭಾರತೀಯ ಗ್ರಾಹಕರನ್ನು ಗುರಿಯಾಗಿಸಿ ಅಗ್ಗದ ಬೆಲೆಯ ಕಾರುಗಳನ್ನು ಅಭಿವೃದ್ಧಿ ಮಾಡಲು ಒಪ್ಪಿಗೆ ಸೂಚಿಸಿರುವ ಸ್ಕೋಡಾ, ಪ್ರಮುಖ ಕಾರು ಉತ್ಪಾದನಾ ಸಂಸ್ಥೆಗಳಿಗೆ MQB ಪ್ಯಾಟ್‌ಫಾರ್ಮ್ ಆಧರಿಸಿ ಕಾರು ಅಭಿವೃದ್ಧಿ ಮಾಡುತ್ತಿರುವ ಉತ್ತಮ ಬೆಳವಣಿಗೆ ಎನ್ನಬಹುದು.
MOST READ: ಇನ್ಮುಂದೆ ಬೇರೆಯವರ ಕೈಗೆ ನಿಮ್ಮ ವಾಹನಗಳನ್ನು ನೀಡುವುದಕ್ಕೂ ಮುನ್ನ ಹತ್ತು ಬಾರಿ ಯೋಚಿಸಿ..!

ಡ್ರೈವ್ ಸ್ಪಾರ್ಕ್ ಅಭಿಪ್ರಾಯ
ಹೊಸ ತಂತ್ರಜ್ಞಾನಗಳನ್ನು ಹೊಂದಿರುವ ಸುಧಾರಿತ ಸಣ್ಣ ಕಾರುಗಳ ಉತ್ಪಾದನೆಗೆ MQB ಪ್ಯಾಟ್‌ಫಾರ್ಮ್ ಸಿದ್ದಪಡಿಸಿರುವ ಸ್ಕೋಡಾ ಯೋಜನೆಯು ಸಫಲಗೊಳ್ಳುವ ಎಲ್ಲಾ ಲಕ್ಷಣಗಳಿದ್ದು, ಬೃಹತ್ ಮಾರುಕಟ್ಟೆಗಾಗಿ ಫೋಕ್ಸ್‌ವ್ಯಾಗನ್ ಮತ್ತು ಟಾಟಾ ಮೋಟಾರ್ಸ್ ಜೊತೆ ಕೈ ಜೋಡಿಸಿರುವುದು ಮತ್ತೊಂದು ವಿಶೇಷ.


Click it and Unblock the Notifications








