ಬಿಡುಗಡೆ ಸಜ್ಜುಗೊಳ್ಳುತ್ತಿರುವ ಟಾಟಾ ಮೋಟರ್ಸ್‍‍ನ ಹೊಸ ಕಾರು..

ಟಾಟಾ ಮೋಟಾರ್ಸ್ ಸಂಸ್ಥೆಯು ಪ್ರಿಯಿಯಂ ಹ್ಯಾಚ್‌ಬ್ಯಾಕ್ ವಿಭಾಗದಲ್ಲಿ ಬಹುದೊಡ್ಡ ಬದಲಾವಣೆ ತರುತ್ತಿದ್ದು, ಭಾರತೀಯ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಸದ್ಯದಲ್ಲೇ 45ಎಕ್ಸ್ ಕಾನ್ಸೆಪ್ಟ್ ಮಾದರಿಯನ್ನು ಅಭಿವೃದ್ದಿಗೊಳಿಸುವ ಯೋಜನೆ ಚಾಲನೆ ನೀಡಲಿದೆ.

By Rahul Ts

ಟಾಟಾ ಮೋಟಾರ್ಸ್ ಸಂಸ್ಥೆಯು ಪ್ರಿಯಿಯಂ ಹ್ಯಾಚ್‌ಬ್ಯಾಕ್ ವಿಭಾಗದಲ್ಲಿ ಬಹುದೊಡ್ಡ ಬದಲಾವಣೆ ತರುತ್ತಿದ್ದು, ಭಾರತೀಯ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಸದ್ಯದಲ್ಲೇ 45ಎಕ್ಸ್ ಕಾನ್ಸೆಪ್ಟ್ ಮಾದರಿಯನ್ನು ಅಭಿವೃದ್ದಿಗೊಳಿಸುವ ಯೋಜನೆ ಚಾಲನೆ ನೀಡಲಿದೆ. ಹೀಗಾಗಿ ಹೊಸ ಮಾದರಿಯ ಕಾರು 2018ರ ಕೊನೆಯಲ್ಲಿ ಇಲ್ಲವೇ 2019ರ ಮೊದಲಾರ್ಧದಲ್ಲೇ ಬಿಡುಗಡೆಗೊಳ್ಳುವ ಸಾಧ್ಯತೆಗಳಿವೆ.

ಬಿಡುಗಡೆ ಸಜ್ಜುಗೊಳ್ಳುತ್ತಿರುವ ಟಾಟಾ ಮೋಟರ್ಸ್‍‍ನ ಹೊಸ ಕಾರು..

ಈ ಕಾರಿನ ಎದುರಾಳಿಯಾದ ಮಾರುತಿ ಬಲೆನೊ ಮತ್ತು ಹ್ಯುಂಡೈ ಐ20 ಕಾರುಗಳು ಪ್ರತೀ ತಿಂಗಳು 30,000 ಯೂನಿಟ್ ಮಾರಾಟವಾಗುತ್ತಿದ್ದು, ಟಾಟಾ ಮೋಟರ್ಸ್ ತಮ್ಮ ಮಾರಾಟದ ಸಂಖ್ಯೆಯನ್ನು ಹೆಚ್ಚಿಸಲು ವಿಶಾಲವಾದ ಜಾಗ, ಹಲವಾರು ವೈಶಿಷ್ಟ್ಯತೆ ಮತ್ತು ಅತ್ಯುತ್ತಮ ಎಂಜಿನ್ ಅನ್ನು ಪಡೆದುಕೊಂಡಿರಲಿದೆ.

ಬಿಡುಗಡೆ ಸಜ್ಜುಗೊಳ್ಳುತ್ತಿರುವ ಟಾಟಾ ಮೋಟರ್ಸ್‍‍ನ ಹೊಸ ಕಾರು..

ಮುಂದಿನ ವರ್ಷ ಬಿಡುಗಡೆಗೊಳ್ಳಲಿರುವ ಟಾಟಾ 45ಎಕ್ಸ್ ಕಾರು ಇದೀಗ ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡಿದ್ದು, ಹೊಸ ವಿಚಾರಗಳು ಬಹಿರಂಗಗೊಂಡಿದೆ. ಟಾಟಾ ಮೋಟರ್ಸ್‍ನ ಎಎಮ್‍ಪಿ ಪ್ಲಾಟ್‍‍ಫಾರ್ಮ್‍ನ ಅಡಿಯಲ್ಲಿ ನಿರ್ಮಿಸಲಾಗಿರುವ ಈ ಕಾರು ಸ್ಲಾಪಿಂಗ್ ರೂಫ್‍‍ಲೈನ್, ರೈಸ್ಡ್ ಹೆಮ್‍‍ಲೈನ್, ಹನಿ ಮೆಷ್ ಬಣ್ಣ ಮತ್ತು ಪರಿಕ್ಷಾ ಕಾರ್ಯಕಾಗಿ ಹೆಡ್‍‍ಲ್ಯಾಂಪ್‍‍ನ ಮೇಲೆ ಬೋಲ್ಟ್ ಅನ್ನು ಅಳವಡಿಸಲಾಗಿದೆ.

ಬಿಡುಗಡೆ ಸಜ್ಜುಗೊಳ್ಳುತ್ತಿರುವ ಟಾಟಾ ಮೋಟರ್ಸ್‍‍ನ ಹೊಸ ಕಾರು..

ಕಳೆದ ಫೆಬ್ರುವರಿಯಲ್ಲಿ ನಡೆದಿದ್ದ 2018ರ ಆಟೋ ಎಕ್ಸ್ ಪೋದಲ್ಲಿ ವಿನೂತನ 45ಎಕ್ಸ್ ಮಾದರಿಯನ್ನು ಪ್ರದರ್ಶನ ಮಾಡಿರುವ ಟಾಟಾ ಮೋಟಾರ್ಸ್ ಇದೀಗ ಬಿಡುಗಡೆಯ ಸುಳಿವು ನೀಡಿದ್ದು, ಹೊಸ ಕಾರಿನ ವಿನ್ಯಾಸಗಳು ಇಂಪ್ಯಾಕ್ಟ್ ಡಿಸೈನ್ 2.0 ಸಿದ್ದಾಂತ ಆಧರಿತ ಅಡ್ವಾನ್ಸ್ ಆಕ್ಟಿಟೆಕ್ಕರ್ ವಿನ್ಯಾಸದೊಂದಿಗೆ ಸಿದ್ದವಾಗಿರುವುದು ಹ್ಯಾಚ್‌ಬ್ಯಾಕ್ ಪ್ರಿಯರ ಆಕರ್ಷಣೆಗೆ ಕಾರಣವಾಗಿದೆ.

ಬಿಡುಗಡೆ ಸಜ್ಜುಗೊಳ್ಳುತ್ತಿರುವ ಟಾಟಾ ಮೋಟರ್ಸ್‍‍ನ ಹೊಸ ಕಾರು..

ಹೀಗಾಗಿ ಮಾರುಕಟ್ಟೆಯಲ್ಲಿ ಸದ್ಯ ಮಾರಾಟವಾಗುತ್ತಿರುವ ನೆಕ್ಸಾನ್ ಎಸ್‌ಯುವಿ ಮಾದರಿಗಳಿಂತಲೂ ವಿಶೇಷ ಹೊರ ವಿನ್ಯಾಸಗಳನ್ನು ಪಡೆದುಕೊಂಡಿರುವ 45ಎಕ್ಸ್ ಪ್ರಿಮಿಯಂ ಹ್ಯಾಚ್‌ಬ್ಯಾಕ್ ಕಾರುಗಳು ಶಾರ್ಪ್ ಎಡ್ಜ್‌ ಮತ್ತು ಸ್ಪೋರ್ಟಿ ಲುಕ್ ಕಾರಿನ ಹೊರ ನೋಟವನ್ನು ಮತ್ತಷ್ಟು ಹೆಚ್ಚಿಸಿವೆ.

ಬಿಡುಗಡೆ ಸಜ್ಜುಗೊಳ್ಳುತ್ತಿರುವ ಟಾಟಾ ಮೋಟರ್ಸ್‍‍ನ ಹೊಸ ಕಾರು..

ಆದರೇ ಕಾರಿನ ಒಳವಿನ್ಯಾಸಗಳ ಬಗ್ಗೆ ಯಾವುದೇ ತಾಂತ್ರಿಕ ಮಾಹಿತಿಗಳನ್ನು ಬಿಟ್ಟುಕೊಡದ ಟಾಟಾ ಮೋಟಾರ್ಸ್ ಸಂಸ್ಥೆಯು ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಯಲ್ಲೂ ಹೊಸ ಕಾರುಗಳನ್ನು ಹೊರತರುವ ಯೋಜನೆ ಹೊಂದಿದೆ.

ಬಿಡುಗಡೆ ಸಜ್ಜುಗೊಳ್ಳುತ್ತಿರುವ ಟಾಟಾ ಮೋಟರ್ಸ್‍‍ನ ಹೊಸ ಕಾರು..

ಎಂಜಿನ್ ಸಾಮರ್ಥ್ಯ

ಪೆಟ್ರೋಲ್ ಕಾರುಗಳು 1.2-ಲೀಟರ್ ಟರ್ಬೋಚಾಜ್ಡ್ ಎಂಜಿನ್ ಜೊತೆಗೆ 108-ಬಿಎಚ್‌ಪಿ, 170ಎನ್ಎಂ ಟಾರ್ಕ್ ಉತ್ಪಾದನಾ ಶಕ್ತಿಯನ್ನು ಹೊಂದಿದ್ದರೆ, 1.5-ಲೀಟರ್ ಡೀಸೆಲ್ ಎಂಜಿನ್ ಸಹ 108-ಬಿಎಚ್‌ಪಿ ಮತ್ತು 260-ಎನ್ಎಂ ಟಾರ್ಕ್ ಉತ್ಪಾದನಾ ಶಕ್ತಿಯನ್ನು ಹೊಂದಿದೆ.

ಬಿಡುಗಡೆ ಸಜ್ಜುಗೊಳ್ಳುತ್ತಿರುವ ಟಾಟಾ ಮೋಟರ್ಸ್‍‍ನ ಹೊಸ ಕಾರು..

ಇನ್ನು ಹೊಸ ಕಾರಿನ ಬ್ಯಾನೆಟ್ ಹಾಗೂ ಹಿಂಭಾಗದ ವಿಂಡೋಗಳು ಕೂಡಾ ವಿಭಿನ್ನ ರಚನೆ ಹೊಂದಿದ್ದು, ಸ್ಲಿಕ್ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್ ಲೈಟ್ಸ್, ಫಾಗ್ ಲ್ಯಾಂಪ್ ಮತ್ತು ವಿನೂತನ ಗ್ರೀಲ್‌ಗಳು ಈ ಕಾರಿಗೆ ಮತ್ತಷ್ಟು ಮೆರಗು ತಂದಿವೆ.

ಬಿಡುಗಡೆ ಸಜ್ಜುಗೊಳ್ಳುತ್ತಿರುವ ಟಾಟಾ ಮೋಟರ್ಸ್‍‍ನ ಹೊಸ ಕಾರು..

ಬೆಲೆ ಮತ್ತು ಬಿಡುಗಡೆ ದಿನಾಂಕ(ಅಂದಾಜು)

ಟಾಟಾ ಸಂಸ್ಥೆಯು ಬಿಡುಗಡೆ ಮಾಡಲು ಯೋಜಿಸಿರುವ ವಿನೂತನ 45ಎಕ್ಸ್ ಕಾನ್ಸೆಪ್ಟ್ ಮಾದರಿಯು ಇಲ್ಲವೇ 2019ರ ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಕಾರಿನ ಬೆಲೆಯು 9 ರಿಂದ 12 ಲಕ್ಷ ಬೆಲೆ ಇರಬಹುದೆಂದು ನೀರಿಕ್ಷಿಸಲಾಗಿದೆ.

ಬಿಡುಗಡೆ ಸಜ್ಜುಗೊಳ್ಳುತ್ತಿರುವ ಟಾಟಾ ಮೋಟರ್ಸ್‍‍ನ ಹೊಸ ಕಾರು..

ಇದರೊಂದಿಗೆ ಟಾಟಾ ಹೊಸ ಕಾರುಗಳು ಗೇಮ್‌ಚೆಂಜರ್ ಮಾದರಿಯಾಗಿ ಮಾರುಕಟ್ಟೆ ಪ್ರವೇಶ ಪಡೆಯಲಿದ್ದು, ಹ್ಯುಂಡೈ ಐ20 ಮತ್ತು ಮಾರುತಿ ಸುಜುಕಿ ಬಲೆನೊ ಪ್ರಿಮಿಯಂ ಹ್ಯಾಚ್‌ಬ್ಯಾಕ್ ಕಾರುಗಳಿಗೆ ತ್ರೀವ ಪೈಪೋಟಿ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.

Most Read Articles

Kannada
Read more on tata motors hatchback
English summary
New Tata car spied on test – Bigger than Tiago, gets Nexon style touchscreen.
Story first published: Friday, August 10, 2018, 10:44 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X