ಮತ್ತೊಂದು ಆಕರ್ಷಕ ಬಣ್ಣದಲ್ಲಿ ಬರಲಿದೆ ಟಾಟಾ ಹ್ಯಾರಿಯರ್ ಕಾರು..

ದೇಶಿಯ ವಾಹನ ತಯಾರಕ ಸಂಸ್ಥೆಯಾದ ಟಾಟಾ ಮೋಟರ್ಸ್ ದೆಹಲಿಯಲ್ಲಿ ನಡೆದ 2018ರ ಆಟೋ ಎಕ್ಸ್ ಪೋ ಮೇಳದಲ್ಲಿ ತಮ್ಮ ಹೊಸ ಹೆಚ್‍5ಎಕ್ಸ್ ಕಾರನ್ನು ಅನಾವರಣಗೊಳಿಸಿದ್ದು, ಕೆಲ ದಿನಗಳ ಹಿಂದಷ್ಟೆ ಈ ಕಾರಿಗೆ ಹ್ಯಾರಿಯರ್ ಎಂಬ ಹೊಸ ಹೆಸರನ್ನು ನೀಡಲಾಗಿದೆ.

By Rahul Ts

ಹೊಸ ಹೆಸರನ್ನು ಪಡೆಯುವುದಲ್ಲದೆ ಹಲವಾರು ಬಾರಿ ಎಂಜಿನ್ ಕಾರ್ಯಕ್ಷಮತೆಗಾಗಿ ದೇಶದ ರಸ್ತೆಗಳಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸುವಾಗ ಕಾಣಿಸಿಕೊಂಡಿದೆ. ಆದರೆ ಈ ಬಾರಿ ಟಾಟಾ ಮೋಟರ್ಸ್‍ನ ಹ್ಯಾರಿಯತ್ ಪ್ರೀಮಿಯಮ್ ಎಸ್‍‍ಯುವಿ ಕಾರು ಹೊಸ ಬಣ್ಣದಲ್ಲಿ ಕಾಣಿಸಿಕೊಂಡಿದ್ದು, ಆರೆಂಜ್‍ ಬಣ್ಣದಲ್ಲಿ ಅಲ್ಲದೇ ಕೆಂಪು ಬಣ್ಣದಲ್ಲಿಯೂ ಬಿಡುಗಡೆಗೊಳ್ಳಲಿದೆ ಎಂಬುದರ ಬಗ್ಗೆ ಸುಳಿವು ನೀಡಿದೆ.

ಮತ್ತೊಂದು ಆಕರ್ಷಕ ಬಣ್ಣದಲ್ಲಿ ಬರಲಿದೆ ಟಾಟಾ ಹ್ಯಾರಿಯರ್ ಕಾರು..

ಇಂಪ್ಯಾಕ್ಟ್ ಡಿಸೈನ್ 2.0 ತಂತ್ರಜ್ಞಾನ ಆಧಾರದ ಮೇಲೆ ಹ್ಯಾರಿಯರ್ ಕಾರುಗಳನ್ನು ನಿರ್ಮಾಣ ಮಾಡಲಾಗಿದ್ದು, ಹೊಸ ಕಾರುಗಳಲ್ಲಿ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್ (OMEGA)" ಆರ್ಕಿಟೆಕ್ಚರ್ ಬಳಕೆ ಮಾಡಿರುವುದೇ ಹೊಸ ವಿನ್ಯಾಸಗಳು ಅದ್ಭುತವಾಗಿವೆ.

ಮತ್ತೊಂದು ಆಕರ್ಷಕ ಬಣ್ಣದಲ್ಲಿ ಬರಲಿದೆ ಟಾಟಾ ಹ್ಯಾರಿಯರ್ ಕಾರು..

ಕಾರಿನ ವೈಶಿಷ್ಟ್ಯತೆಗಳು

ಹೆಚ್5ಎಕ್ಸ್ ಮಾದರಿಗಳು ಸ್ಲಿಕ್ ಆ್ಯಂಗರಲ್ ಎಲ್‌ಇಡಿ ಹೆಡ್ ಲೈಟ್ಸ್‌ಗಳನ್ನು ಹೊಂದಿದ್ದು, ಇಂಪ್ಯಾಕ್ಟ್ ಡಿಸೈನ್ ಗ್ರೀಲ್‌ಗಳು ಕಾರಿನ ಲುಕ್ ಹೆಚ್ಚಿಸಿವೆ. ಜೊತೆಗೆ ಪರಿಕಲ್ಪನೆ ಮಾದರಿಯನ್ನು ಗ್ರೇ ಪೇಟಿಂಗ್ ವಿನ್ಯಾಸಗಳು ಗಮನಸೆಳೆಯುತ್ತಿದ್ದು, ದೊಡ್ಡದಾದ ಚಕ್ರಗಳು, ವಿಸ್ತರಿತ ಬೂಟ್ ಸ್ಪೆಸ್ ಬಳಕೆ ಮಾಡಲಾಗಿದೆ.

ಮತ್ತೊಂದು ಆಕರ್ಷಕ ಬಣ್ಣದಲ್ಲಿ ಬರಲಿದೆ ಟಾಟಾ ಹ್ಯಾರಿಯರ್ ಕಾರು..

ಜೊತೆಗೆ ರೂಫ್ ಮೌಟೆಂಡ್ ಸ್ಪಾಯ್ಲರ್ ಮತ್ತು ಶಾರ್ಪ್ ಮಾದರಿಯ ರಿಯರ್ ವೀಂಡ್ ಸ್ಕ್ರೀನ್‌ಗಳನ್ನು ಅದ್ಭುತವಾಗಿ ಡಿಸೈನ್ ಮಾಡಲಾಗಿದೆ. ಹೀಗಾಗಿ ಸದ್ಯ ಮಾರುಕಟ್ಟೆಯಲ್ಲಿರುವ ನೆಕ್ಸಾನ್ ಆವೃತ್ತಿಗಿಂತ ಹೆಚ್ಚಿನ ಗುಣ ವಿನ್ಯಾಸ ಹೊಂದಿರುವ ಹ್ಯಾರಿಯರ್ ಕಾರುಗಳು ಎಸ್‌ಯುವಿ ಪ್ರಿಯರ ಹಾಟ್ ಫೆವರಿಟ್ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ.

ಮತ್ತೊಂದು ಆಕರ್ಷಕ ಬಣ್ಣದಲ್ಲಿ ಬರಲಿದೆ ಟಾಟಾ ಹ್ಯಾರಿಯರ್ ಕಾರು..

ಎಂಜಿನ್ ಸಾಮರ್ಥ್ಯ

ಹ್ಯಾರಿಯರ್ ಎಸ್‌ಯುವಿ ಮಾದರಿಗಳ ಎಂಜಿನ್ ಬಗೆಗೆ ಟಾಟಾ ಯಾವುದೇ ಅಧಿಕೃತ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲವಾದರೂ ಕೆಲವು ವರದಿಗಳ ಪ್ರಕಾರ 2.0-ಲೀಟರ್ ಪೆಟ್ರೋಲ್ ಎಂಜಿನ್ ಅಥವಾ 2.0-ಲೀಟರ್ ಮಲ್ಟಿ ಜೆಟ್ ಡೀಸೆಲ್ ಎಂಜಿನ್ ಮಾದರಿಯಲ್ಲಿ ಹೊಸ ಕಾರುಗಳು ಅಭಿವೃದ್ಧಿಯಾಗಲಿವೆ.

ಮತ್ತೊಂದು ಆಕರ್ಷಕ ಬಣ್ಣದಲ್ಲಿ ಬರಲಿದೆ ಟಾಟಾ ಹ್ಯಾರಿಯರ್ ಕಾರು..

ಕಾರಿನ ಬೆಲೆಗಳು (ಅಂದಾಜು)

ಟಾಟಾ ಹ್ಯಾರಿಯರ್ ಕಾರುಗಳು 2018ರ ಕೊನೆಯಲ್ಲಿ ಇಲ್ಲವೇ 2019ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಮಾರುಕಟ್ಟೆಗೆ ಲಗ್ಗೆಯಿಡಲಿದ್ದು, ಹೊಸ ಕಾರಿನ ಬೆಲೆಗಳು ರೂ. 12 ಲಕ್ಷದಿಂದ ರೂ. 15 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

ಮತ್ತೊಂದು ಆಕರ್ಷಕ ಬಣ್ಣದಲ್ಲಿ ಬರಲಿದೆ ಟಾಟಾ ಹ್ಯಾರಿಯರ್ ಕಾರು..

ಟಾಟಾ ಸಂಸ್ಥೆಯು ತಮ್ಮ ಎಸ್‍ಯುವಿ ಕಾರುಗಳ ಹೆಚ್ಚು ಮಾರಾಟಕ್ಕಾಗಿ ಹೆಚ್5ಎಕ್ಸ್ ಫ್ಲ್ಯಾಗ್‍ಶಿಫ್ ಎಸ್‍ಯುವಿ ಕಾರನ್ನು ಪರಿಚಯಿಸಲಾಗುತ್ತಿದ್ದು, ಬಿಡುಗಡೆಗೊಂಡ ನಂತರ ಜೀಪ್ ಕಂಪಸ್ ಮತ್ತು ಹ್ಯುಂಡೈ ಟಕ್ಸನ್ ಕಾರುಗಳಿಗೆ ಪೈಪೋಟಿಯನ್ನು ನೀಡಲಿದೆ.

Source : Rushlane

Most Read Articles

Kannada
Read more on tata motors new car suv
English summary
New Tata Harrier H5X seen in Nexon Red colour for the first time before launch.
Story first published: Tuesday, July 31, 2018, 10:24 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X