ಸ್ಪಾಟ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ..

ಇದೇ ವರ್ಷ ಬಿಡುಗಡೆಗೊಳ್ಳಲಿರುವ ಹ್ಯುಂಡೈ ಇಂಡಿಯಾ ನಿರ್ಮಾಣದ ನೆಕ್ಸ್ಟ್ ಜನರೇಷನ್ ಸ್ಯಾಂಟ್ರೊ ಕಾರು ಆವೃತ್ತಿಯು ಸ್ಪಾಟ್ ಟೆಸ್ಟಿಂಗ್‌ ವೇಳೆ ಸೆರೆಸಿಕ್ಕಿದ್ದು, ಹೊಸ ಕಾರಿನ ತಾಂತ್ರಿಕ ಅಂಶಗಳ ಬಗೆಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

By Praveen Sannamani

ಇದೇ ವರ್ಷ ಮೂರನೇ ತ್ರೈಮಾಸಿಕ ಅವಧಿಗೆ ಬಿಡುಗಡೆಗೊಳ್ಳಲಿರುವ ಹ್ಯುಂಡೈ ಇಂಡಿಯಾ ನಿರ್ಮಾಣದ ನೆಕ್ಸ್ಟ್ ಜನರೇಷನ್ ಸ್ಯಾಂಟ್ರೊ ಕಾರು ಆವೃತ್ತಿಯು ಸ್ಪಾಟ್ ಟೆಸ್ಟಿಂಗ್‌ ವೇಳೆ ಸೆರೆಸಿಕ್ಕಿದ್ದು, ಹೊಸ ಕಾರಿನ ತಾಂತ್ರಿಕ ಅಂಶಗಳ ಬಗೆಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

ಸ್ಪಾಟ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ..

ಹ್ಯುಂಡೈ ಇಂಡಿಯಾ ಸಂಸ್ಥೆಯು ನೆಕ್ಸ್ಟ್ ಜನರೇಷನ್ ಸ್ಯಾಂಟ್ರೊ ಕಾರು ಆವೃತ್ತಿಯನ್ನು ಎಹೆಚ್2 ಎಂಬ ಕೋಡ್ ವಲ್ಡ್ ಹೆಸರಿನಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸಲಾಗುತ್ತಿದ್ದು, ದೆಹಲಿ ಹೊರವಲಯದಲ್ಲಿ ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಬಗೆಗೆ ಹಲವು ಸುತ್ತಿನ ಸ್ಪಾಟ್ ಟೆಸ್ಟಿಂಗ್ ಕೈಗೊಳ್ಳಲಾಗಿದೆ.

ಸ್ಪಾಟ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ..

ಸ್ಟಾಟ್ ಟೆಸ್ಟಿಂಗ್ ವೇಳೆ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ ಕಾರುಗಳು ಉತ್ತಮ ಪ್ರದರ್ಶನ ತೊರುತ್ತಿದ್ದು, ಅಧಿಕ ಮೈಲೇಜ್ ಮತ್ತು ಅತ್ಯುತ್ತಮ ಬ್ರೇಕಿಂಗ್ ಸೌಲಭ್ಯಗಳು ಗ್ರಾಹಕರ ನಂಬಿಕೆಗೆ ವಿಶ್ವಾಸರ್ಹವಾಗಲಿವೆ ಎಂಬ ಮಾಹಿತಿಯೂ ದೊರೆತಿದೆ.

ಸ್ಪಾಟ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ..

ಆದ್ರೆ ಸ್ಪಾಟ್ ಟೆಸ್ಟಿಂಗ್‌ನಲ್ಲಿ ಕಾಣಿಸಿಕೊಂಡ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ ಮೇಲೆ ಭಾರೀ ಪ್ರಮಾಣದ ಮುಸುಕು ಹೊದಿಸಿದ ಪರಿಣಾಮ ವಿನ್ಯಾಸಗಳ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಸಾಧ್ಯವಾಗಿಲ್ಲ.

ಸ್ಪಾಟ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ..

ಆದರೆ, ಹೊಸ ಕಾರುಗಳು ಎಎಂಟಿ(ಆಟೋ ಮ್ಯಾಟಿಕ್ ಗೇರ್‌ಬಾಕ್ಸ್) ಕೂಡಾ ಹೊಂದುವ ಸಾಧ್ಯತೆಗಳಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು ಐ10 ಮಾದರಿಯಲ್ಲೇ ಒಳ ವಿನ್ಯಾಸದ ಸೌಲಭ್ಯಗಳನ್ನು ಪಡೆಯಲಿವೆ ಎನ್ನಲಾಗುತ್ತಿದೆ.

ಸ್ಪಾಟ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ..

ಹೀಗಾಗಿ ಮಧ್ಯಮ ವರ್ಗಗಳ ಸ್ನೇಹಿಯಾಗಿರುವ ಉತ್ತಮ ಹ್ಯಾಚ್‌ಬ್ಯಾಕ್ ಕಾರುಗಳ ಪಟ್ಟಿಯಲ್ಲಿ ಸ್ಥಾನ ಪಡೆಯಲು ಶಕ್ತವಾಗಿರುವ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ ಕಾರುಗಳು, 800 ಸಿಸಿ ಪೆಟ್ರೋಲ್ ಎಂಜಿನ್ ಇಲ್ಲವಾದ್ರೆ 1.0-ಲೀಟರ್ ಎಂಜಿನ್ ಪಡೆದುಕೊಳ್ಳಲಿದೆ. ಆದ್ರೆ ಹೊಸ ಕಾರುಗಳಲ್ಲಿ ಡಿಸೇಲ್ ಆವೃತ್ತಿಯನ್ನು ಪರಿಚಯಿಸದಿರಲು ಹ್ಯುಂಡೈ ನಿರ್ಧರಿಸಿದೆ.

ಸ್ಪಾಟ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ..

ಇನ್ನು ಪ್ರಯಾಣಿಕ ಸುರಕ್ಷತೆಗಾಗಿ ಎಬಿಎಸ್ ಮತ್ತು ಡ್ಯುಯಲ್ ಏರ್‌ಬ್ಯಾಗ್ ಸೌಲಭ್ಯಗಳನ್ನು ಸಹ ಆಯ್ಕೆ ರೂಪದಲ್ಲಿ ನೀಡಲಿದ್ದು, ಪಾರ್ಕಿಂಗ್ ಸೆನ್ಸಾರ್, ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಮತ್ತು ವಿಶೇಷ ವಿನ್ಯಾಸದ ಟಾಲಿ ಬಾಯ್ ಡಿಸೈನ್ ಹೊಂದಿರಲಿವೆ.

ಸ್ಪಾಟ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ..

ಡ್ರೈವ್ ಸ್ಪಾರ್ಕ್ ಅಭಿಪ್ರಾಯ

ಹೊಸತನಗಳೊಂದಿಗೆ ಮಾರುಕಟ್ಟೆ ಪ್ರವೇಶ ಪಡೆಯುತ್ತಿರುವ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ ಆವೃತ್ತಿಯು ಸಣ್ಣ ಕಾರುಗಳ ವಿಭಾಗದಲ್ಲಿ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿದ್ದು, ಮಾರುತಿ ಸುಜುಕಿ ಸೆಲೆರಿಯೊ, ಟಾಟಾ ಟಿಯಾಗೋ ಮತ್ತು ರೆನಾಲ್ಟ್ ಕ್ವಿಡ್‌ಗೆ ತೀವ್ರ ಸ್ಪರ್ಧಿಯಾಗಲಿದೆ.

More from DriveSpark

Article Published On: Wednesday, April 11, 2018, 15:11 [IST]
English summary
Next-Gen Hyundai Santro Spotted Again; Expected Launch, Price, Specs And Features.
Read more on hyundai santro
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+