ಬಿಡುಗಡೆಗೆ ಸಿದ್ದವಾದ ಕಿಕ್ಸ್ ಎಸ್‌ಯುವಿ ಕಾರಿನ ಮಾಹಿತಿ ಬಿಚ್ಚಿಟ್ಟ ನಿಸ್ಸಾನ್

ನಿಸ್ಸಾನ್ ಇಂಡಿಯಾ ಸಂಸ್ಥೆಯು ಮುಂಬರುವ 2019ರ ಜನವರಿ ಆರಂಭದಲ್ಲಿ ಕಿಕ್ಸ್ ಎನ್ನುವ ವಿನೂತನ ಮಾದರಿಯ ಹೊಚ್ಚ ಹೊಸ ಎಸ್‌ಯುವಿ ಮಾದರಿಯೊಂದನ್ನು ಬಿಡುಗಡೆಗೊಳಿಸುತ್ತಿದ್ದು, ಇದಕ್ಕೂ ಮುನ್ನ ಹೊಸ ಕಾರಿನ ತಾಂತ್ರಿಕ ಅಂಶಗಳ ಕುರಿತು ಸಂಪೂರ್ಣ ಮಾಹಿತಿ ಬಿಚ್ಚಿಟ್ಟಿದೆ.

ಬಿಡುಗಡೆಗೆ ಸಿದ್ದವಾದ ಕಿಕ್ಸ್ ಎಸ್‌ಯುವಿ ಕಾರಿನ ಮಾಹಿತಿ ಬಿಚ್ಚಿಟ್ಟ ನಿಸ್ಸಾನ್

ಈ ಹಿಂದೆ 2016ರಲ್ಲಿ ಬ್ರೆಜಿಲ್ ಮಾರುಕಟ್ಟೆಯಲ್ಲಿ ಕಿಕ್ಸ್ ಕಾರು ಮಾದರಿಯನ್ನು ಬಿಡುಗಡೆಗೊಳಿಸಿರುವ ನಿಸ್ಸಾನ್ ಸಂಸ್ಥೆಯು ಈ ಬಾರಿ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಜನಪ್ರಿಯ ಕಿಕ್ಸ್ ಕಾರು ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ರೆನಾಲ್ಟ್ ಡಸ್ಟರ್ ಬಿ0 ಪ್ಲಾಟ್‍‍ಫಾರ್ಮ್ ಅನ್ನು ಆಧರಿಸಿ ಅಭಿವೃದ್ಧಿಗೊಂಡಿರುವುದು ಭಾರೀ ಆಕರ್ಷಣೆಗೆ ಕಾರಣವಾಗಿದೆ.

ಬಿಡುಗಡೆಗೆ ಸಿದ್ದವಾದ ಕಿಕ್ಸ್ ಎಸ್‌ಯುವಿ ಕಾರಿನ ಮಾಹಿತಿ ಬಿಚ್ಚಿಟ್ಟ ನಿಸ್ಸಾನ್

ರೆನಾಲ್ಟ್ ಕ್ಯಾಪ್ಚರ್‌ಗಿಂತಲೂ ಹೆಚ್ಚಿನ ಗುಣಮಟ್ಟದ ವಿನ್ಯಾಸಗಳನ್ನು ಪಡೆದುಕೊಂಡಿದ್ದು, ಹಾಗೆಯೇ ಡಸ್ಟರ್ ಮತ್ತು ಟೆರಾನೋ ಮಾದರಿಗಳಿಂತ ಹೆಚ್ಚು ಆಕರ್ಷಣೆ ಪಡೆದಿದೆ. ಹೀಗಾಗಿ ಹೊಸ ಕಾರು ಭಾರೀ ಪ್ರಮಾಣದ ಮಾರಾಟ ನೀರಿಕ್ಷೆಯಿದ್ದು, ಎಸ್‌ಯುವಿ ಪ್ರಿಯರಿಗೆ ಇಷ್ಟವಾಗುವ ಬಹುತೇಕ ಅಂಶಗಳು ಇದರಲ್ಲಿವೆ.

ಬಿಡುಗಡೆಗೆ ಸಿದ್ದವಾದ ಕಿಕ್ಸ್ ಎಸ್‌ಯುವಿ ಕಾರಿನ ಮಾಹಿತಿ ಬಿಚ್ಚಿಟ್ಟ ನಿಸ್ಸಾನ್

GRAPHENE ಡಿಸೈನ್ ತಂತ್ರಜ್ಞಾನದೊಂದಿಗೆ ಸಿದ್ದವಾಗಿರುವ ಹೊರ ವಿನ್ಯಾಸಗಳು ಕಿಕ್ಸ್‌ಗೆ ಪ್ರೀಮಿಯಂ ಮೆರಗು ತಂದಿದ್ದು, ಮಲ್ಟಿ ಲೇಯರ್ ಡ್ಯುಯಲ್ ಟೋನ್ ಡ್ಯಾಶ್‌ಬೋರ್ಡ್ ವ್ಯವಸ್ಥೆ ಹೊಂದಿದ್ದು, ಲೆದರ್ ಕೊಟಿಂಗ್ ಸೀಟುಗಳು ಮತ್ತು ಪುಶ್ ಡೋರ್ ಟ್ರಿಮ್ ಅನುಕೂಲತೆಯಿದೆ.

ಬಿಡುಗಡೆಗೆ ಸಿದ್ದವಾದ ಕಿಕ್ಸ್ ಎಸ್‌ಯುವಿ ಕಾರಿನ ಮಾಹಿತಿ ಬಿಚ್ಚಿಟ್ಟ ನಿಸ್ಸಾನ್

ಇನ್ನು ವಿನೂತನ ಕಾರಿನಲ್ಲಿ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋ‌ಟೈನ್‌ಮೆಂಟ್ ಹಾಗೂ ಕಾರಿನ ಸುತ್ತ ನೋಡಬಹುದಾದ 360 ವಿವ್ಯೂ ಮಾನಿಟರ್ ವ್ಯವಸ್ಥೆಯಿದ್ದು, ಇದು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾರಾಟವಾಗುತ್ತಿರುವ ಇತರೆ ಸಬ್ ಕಂಪ್ಯಾಕ್ಟ್ ಮಾದರಿಗಳಲ್ಲೇ ವಿಶೇಷ ಕಾರು ಎನ್ನಬಹುದು.

ಬಿಡುಗಡೆಗೆ ಸಿದ್ದವಾದ ಕಿಕ್ಸ್ ಎಸ್‌ಯುವಿ ಕಾರಿನ ಮಾಹಿತಿ ಬಿಚ್ಚಿಟ್ಟ ನಿಸ್ಸಾನ್

ಹಾಗೆಯೇ ಪ್ರೀಮಿಯಂ ಕಾರುಗಳಲ್ಲಿ ಕಂಡುಬರುವ ವಿ ಮೊಷನ್ ಗ್ರೀಲ್, ಫಾಲೋ ಮಿ ಹೆಡ್‌ಲ್ಯಾಂಪ್, ಎಲ್ಇಡಿ ಡೇ ಟೈಮ್ ರನ್ನಿಂಗ್ ಲೈಟ್, ಎಲ್ಇಡಿ ಫಾಗ್ ಲ್ಯಾಂಪ್, ಸ್ಪೋರ್ಟಿ ಲುಕ್ ನೀಡುವ 17-ಇಂಚಿನ ಫೈವ್ ಸ್ಪೋಕ್ ಅಲಾಯ್ ಚಕ್ರಗಳು ಮತ್ತು ಪ್ಲಾಸ್ಟಿಕ್ ಬಾಡಿ ಕ್ಲ್ಯಾಡಿಂಗ್ ಸೇರಿದಂತೆ ಹಲವು ವಿಶೇಷತೆಗಳನ್ನು ಹೊಂದಿದೆ.

ಬಿಡುಗಡೆಗೆ ಸಿದ್ದವಾದ ಕಿಕ್ಸ್ ಎಸ್‌ಯುವಿ ಕಾರಿನ ಮಾಹಿತಿ ಬಿಚ್ಚಿಟ್ಟ ನಿಸ್ಸಾನ್

ಸಬ್ ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಯ ಕಿಕ್ಸ್ ಕಾರು ಉತ್ತಮ ಉದ್ದಳತೆ ಹೊಂದಿದ್ದು, 4,384ಎಂಎಂ ಉದ್ದ, 1,813ಎಂಎಂ ಅಗಲವಾಗಿದೆ. ಜೊತೆಗೆ 2,673 ಎಂಎಂ ಎತ್ತರವಾಗಿದ್ದು, ಐದು ಜನ ಆರಾಮದಾಯಕವಾಗಿ ಪ್ರಯಾಣ ಮಾಡಬಹುದಾಗಿದೆ.

ಬಿಡುಗಡೆಗೆ ಸಿದ್ದವಾದ ಕಿಕ್ಸ್ ಎಸ್‌ಯುವಿ ಕಾರಿನ ಮಾಹಿತಿ ಬಿಚ್ಚಿಟ್ಟ ನಿಸ್ಸಾನ್

ಇನ್ನುಳಿದಂತೆ ಆರಾಮದಾಯಕ ಪ್ರಯಾಣಕ್ಕೆ ಸಹಕಾರಿಯಾಗುವ ಅಂಡ್ರಾಯಿಡ್ ಆಟೋ ಪ್ಲೇ, ಆ್ಯಪಲ್ ಕಾರ್ ಪ್ಲೇ, ಯುಎಸ್‌ಬಿ ಪೋರ್ಟ್, ಚಾಲಕ ಮತ್ತು ಮುಂಭಾಗದ ಪ್ರಯಾಣಿಕರಿಗೆ ಆರ್ಮ್ ರೆಸ್ಟ್, ಹಿಂಬದಿಯಲ್ಲಿ ಎಸಿ ವೆಂಟ್ಸ್, ಸ್ಪೀಡ್ ಸೆನ್ಸಾರ್ ಡೋರ್ ಲಾಕ್/ಅನ್‌ಲಾಕ್ ಸೌಲಭ್ಯ, ರಿಯರ್ ಪಾರ್ಕಿಂಗ್ ವ್ಯವಸ್ಥೆಯಿರಲಿದೆ.

ಬಿಡುಗಡೆಗೆ ಸಿದ್ದವಾದ ಕಿಕ್ಸ್ ಎಸ್‌ಯುವಿ ಕಾರಿನ ಮಾಹಿತಿ ಬಿಚ್ಚಿಟ್ಟ ನಿಸ್ಸಾನ್

ಎಂಜಿನ್ ಸಾಮರ್ಥ್ಯ

ಹೊಸ ಕಿಕ್ಸ್ ಮಾದರಿಯು 1.5-ಲೀಟರ್ ಪೆಟ್ರೋಲ್ ಹಾಗೂ 1.5-ಲೀಟರ್ ಡಿಸೇಲ್ ಎಂಜಿನ್ ಆಯ್ಕೆ ಹೊಂದಿದ್ದು, ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 106-ಬಿಎಚ್‌ಪಿ ಉತ್ಪಾದಿಸಿದ್ದಲ್ಲಿ ಡೀಸೆಲ್ ಕಾರು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 110-ಬಿಎಚ್‌ಪಿ ಉತ್ಪಾದಿಸುತ್ತೆ.

ಬಿಡುಗಡೆಗೆ ಸಿದ್ದವಾದ ಕಿಕ್ಸ್ ಎಸ್‌ಯುವಿ ಕಾರಿನ ಮಾಹಿತಿ ಬಿಚ್ಚಿಟ್ಟ ನಿಸ್ಸಾನ್

ಇನ್ನು ಹೊಸ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ವೆಹಿಕಲ್ ಡೈನಾಮಿಕ್ ಕಂಟ್ರೋಲ್, ಟ್ರಾಕ್ಷನ್ ಕಂಟ್ರೋಲ್, ಹಿಲ್ ಸ್ಟಾರ್ಟ್ ಅಸಿಸ್ಟ್, ಮೂರು ಏರ್‌ಬ್ಯಾಗ್, ಎಬಿಎಸ್, ಇಕೋ ಮೂಡ್ ಮತ್ತು ಕ್ರೂಸ್ ಕಂಟ್ರೋಲ್ ಸೌಲಭ್ಯವಿದೆ.

MOST READ: ದೇಶದಲ್ಲಿ ನಿರ್ಮಾಣವಾಗಲಿದೆ ವಿಶ್ವದ ಅತಿ ಉದ್ದದ ಜಲಾಂತರ್ಗಾಮಿ ರೈಲ್ವೆ ಯೋಜನೆ..

ಬಿಡುಗಡೆಗೆ ಸಿದ್ದವಾದ ಕಿಕ್ಸ್ ಎಸ್‌ಯುವಿ ಕಾರಿನ ಮಾಹಿತಿ ಬಿಚ್ಚಿಟ್ಟ ನಿಸ್ಸಾನ್

ಕಾರಿನ ಬೆಲೆ ಮತ್ತು ಬಿಡುಗಡೆಯ ಅವಧಿ(ಅಂದಾಜು)

ನಿಸ್ಸಾನ್ ಕಿಕ್ಸ್ ಕಾರುಗಳು 2019ರ ಜನವರಿಯಲ್ಲಿ ಖರೀದಿಗೆ ಲಭ್ಯವಾಗುವುದು ಬಹುತೇಕ ಖಚಿತವಾಗಿದ್ದು, ಕಾರಿನ ಬೆಲೆಗಳು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.11 ಲಕ್ಷದಿಂದ ಟಾಪ್ ಎಂಡ್ ಮಾದರಿಗೆ ರೂ.15 ಲಕ್ಷ ಬೆಲೆ ಇರಬಹುದೆಂದು ಅಂದಾಜಿಸಲಾಗಿದೆ.

ಬಿಡುಗಡೆಗೆ ಸಿದ್ದವಾದ ಕಿಕ್ಸ್ ಎಸ್‌ಯುವಿ ಕಾರಿನ ಮಾಹಿತಿ ಬಿಚ್ಚಿಟ್ಟ ನಿಸ್ಸಾನ್

ಈ ಹಿನ್ನೆಲೆಯಲ್ಲಿ ಕಿಕ್ಸ್ ಕಾರುಗಳ ಖರೀದಿಗಾಗಿ ಕೆಲವು ನಿಸ್ಸಾನ್ ಡೀಲರ್ಸ್‌ಗಳು ರೂ.50 ಸಾವಿರ ಮುಂಗಡದೊಂದಿಗೆ ಬುಕ್ಕಿಂಗ್ ಪ್ರಕ್ರಿಯೆ ಆರಂಭ ಮಾಡಿದ್ದು, ಇದೇ ತಿಂಗಳು 14ಕ್ಕೆ ನಿಸ್ಸಾನ್ ಸಂಸ್ಥೆಯೇ ಬುಕ್ಕಿಂಗ್ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡುವುದು ಸ್ಪಷ್ಟವಾಗಿದೆ.

MOST READ: ಭಾರತದಲ್ಲಿ ಬಿಡುಗಡೆಯಾಗಲಿರುವ ಈ ಕಿಯಾ ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?

ಬಿಡುಗಡೆಗೆ ಸಿದ್ದವಾದ ಕಿಕ್ಸ್ ಎಸ್‌ಯುವಿ ಕಾರಿನ ಮಾಹಿತಿ ಬಿಚ್ಚಿಟ್ಟ ನಿಸ್ಸಾನ್

ಹೀಗಾಗಿ ಹೊಸ ಕಿಕ್ಸ್ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ಬ್ರೆಝಾ, ಹ್ಯುಂಡೈ ಕ್ರೇಟಾ, ಮಹೀಂದ್ರಾ ಎಕ್ಸ್‌ಯುವಿ 500 ಮತ್ತು ಬಿಡುಗಡೆಯಾಗಲಿರುವ ಟಾಟಾ ಹ್ಯಾರಿಯರ್ ಕಾರುಗಳಿಗೆ ತೀವ್ರ ಪೈಪೋಟಿ ನೀಡುವ ಗುಣಲಕ್ಷಣಗಳನ್ನು ಹೊಂದಿದ್ದು, ಗುಣಮಟ್ಟದಲ್ಲಿ ಇತರೆ ಸಬ್ ಕಂಪ್ಯಾಕ್ಟ್ ಎಸ್‌ಯುವಿಗಳಿಂತಲೂ ವಿಶೇಷ ಎನ್ನಿಸಲಿವೆ.

Article Published On: Tuesday, December 11, 2018, 14:57 [IST]
English summary
Nissan Kicks Interiors Revealed. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+