ಕ್ರೇಟಾ ಪ್ರತಿಸ್ಪರ್ಧಿ ಕಿಕ್ಸ್ ಸಬ್ ಕಂಪ್ಯಾಕ್ಟ್ ಎಸ್‌ಯುವಿ ಅನಾವರಣಗೊಳಿಸಿದ ನಿಸ್ಸಾನ್

ಜನಪ್ರಿಯ ಕಾರು ಉತ್ಪಾದನಾ ಸಂಸ್ಥೆಯಾದ ನಿಸ್ಸಾನ್ ಭಾರತದಲ್ಲಿ ತನ್ನ ಹೊಸ ಉತ್ಪನ್ನಗಳ ಬಿಡುಗಡೆಯಾಗಿ ಬೃಹತ್ ಯೋಜನೆ ರೂಪಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಸಬ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಾದ ಕಿಕ್ಸ್ ಕಾರನ್ನು ಅನಾವರಣಗೊಳಿಸುವ ಮೂಲಕ ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡುವ ಸುಳಿವು ನೀಡಿದೆ.

ಕ್ರೇಟಾ ಪ್ರತಿಸ್ಪರ್ಧಿ ಕಿಕ್ಸ್ ಸಬ್ ಕಂಪ್ಯಾಕ್ಟ್ ಎಸ್‌ಯುವಿ ಅನಾವರಣಗೊಳಿಸಿದ ನಿಸ್ಸಾನ್

2016ರಲ್ಲೇ ಬ್ರೆಜಿಲ್ ಮಾರುಕಟ್ಟೆಯಲ್ಲಿ ಕಿಕ್ಸ್ ಕಾರು ಮಾದರಿಯನ್ನು ಬಿಡುಗೆಡೆಗೊಳಿಸಿದ್ದ ನಿಸ್ಸಾನ್ ಸಂಸ್ಥೆಯು ಈ ಬಾರಿ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಜನಪ್ರಿಯ ಕಿಕ್ಸ್ ಕಾರುಗಳನ್ನು ಬಿಡುಗಡೆಗಾಗಿ ಸಜ್ಜಾಗುತ್ತಿದ್ದು, ಕಿಕ್ಸ್ ಹೊಸ ಕಾರುಗಳನ್ನು ರೆನಾಲ್ಟ್ ಡಸ್ಟರ್ ಬಿ0 ಪ್ಲಾಟ್‍‍ಫಾರ್ಮ್ ಅನ್ನು ಆಧರಿಸಿ ಅಭಿವೃದ್ಧಿಗೊಳ್ಳುವುದು ಖಚಿತವಾಗಿದೆ.

ಕ್ರೇಟಾ ಪ್ರತಿಸ್ಪರ್ಧಿ ಕಿಕ್ಸ್ ಸಬ್ ಕಂಪ್ಯಾಕ್ಟ್ ಎಸ್‌ಯುವಿ ಅನಾವರಣಗೊಳಿಸಿದ ನಿಸ್ಸಾನ್

ಜೊತೆಗೆ ರೆನಾಲ್ಟ್ ಕ್ಯಾಪ್ಚರ್‌ಗಿಂತಲೂ ಹೆಚ್ಚಿನ ಗುಣಮಟ್ಟದ ವಿನ್ಯಾಸಗಳನ್ನು ಪಡೆದುಕೊಂಡಿದ್ದು, ಡಸ್ಟರ್ ಮತ್ತು ಲೊಡ್ಜಿ ಮಾದರಿಗಳಿಂತ ಹೆಚ್ಚು ಆಕರ್ಷಣೆ ಪಡೆದಿದೆ. ಹೀಗಾಗಿ ಭಾರೀ ಪ್ರಮಾಣದ ಮಾರಾಟ ನೀರಿಕ್ಷೆಯಿದೆ.

ಕ್ರೇಟಾ ಪ್ರತಿಸ್ಪರ್ಧಿ ಕಿಕ್ಸ್ ಸಬ್ ಕಂಪ್ಯಾಕ್ಟ್ ಎಸ್‌ಯುವಿ ಅನಾವರಣಗೊಳಿಸಿದ ನಿಸ್ಸಾನ್

ಇನ್ನುGRAPHENE ಡಿಸೈನ್ ತಂತ್ರಜ್ಞಾನದೊಂದಿಗೆ ಸಿದ್ದವಾಗಿರುವ ಹೊರ ವಿನ್ಯಾಸಗಳು ಕಿಕ್ಸ್‌ಗೆ ಮೆರಗು ತಂದಿದ್ದು, ಮಲ್ಟಿ ಲೇಯರ್ ಡ್ಯುಯಲ್ ಟೋನ್ ಡ್ಯಾಶ್‌ಬೋರ್ಡ್ ವ್ಯವಸ್ಥೆ ಹೊಂದಿದೆ. ಜೊತೆಗೆ ಲೆದರ್ ಕೊಟಿಂಗ್ ಸೀಟುಗಳ ವ್ಯವಸ್ಥೆಯಿದ್ದು, ಪುಶ್ ಡೋರ್ ಟ್ರಿಮ್ ಅನುಕೂಲತೆಯಿದೆ.

ಕ್ರೇಟಾ ಪ್ರತಿಸ್ಪರ್ಧಿ ಕಿಕ್ಸ್ ಸಬ್ ಕಂಪ್ಯಾಕ್ಟ್ ಎಸ್‌ಯುವಿ ಅನಾವರಣಗೊಳಿಸಿದ ನಿಸ್ಸಾನ್

ವಿನೂತನ ಕಾರಿನಲ್ಲಿ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋ‌ಟೈನ್‌ಮೆಂಟ್ ಹಾಗೂ ಕಾರಿನ ಸುತ್ತ ನೋಡಬಹುದಾದ ವಿವ್ಯೂ ಮಾನಿಟರ್ ವ್ಯವಸ್ಥೆಯಿದೆ. ಅಲ್ಲದೇ ಪ್ರಸ್ತುತ ಮಾದರಿಯ ಹಲವು ವಿಶೇಷತೆಗಳು ಈ ಕಾರಿನಲ್ಲಿವೆ.

ಕ್ರೇಟಾ ಪ್ರತಿಸ್ಪರ್ಧಿ ಕಿಕ್ಸ್ ಸಬ್ ಕಂಪ್ಯಾಕ್ಟ್ ಎಸ್‌ಯುವಿ ಅನಾವರಣಗೊಳಿಸಿದ ನಿಸ್ಸಾನ್

ಜೊತೆಗೆ ಪ್ರೀಮಿಯಂ ಕಾರುಗಳಲ್ಲಿ ಕಂಡುಬರುವ ವಿ ಮೊಷನ್ ಗ್ರೀಲ್, ಸ್ವೆಪ್ಟ್ ಬ್ಯಾಕ್ ಹೆಡ್‌ಲ್ಯಾಂಪ್, ಎಲ್ಇಡಿ ಡೇ ಟೈಮ್ ರನ್ನಿಂಗ್ ಲೈಟ್, ಎಲ್ಇಡಿ ಫಾಗ್ ಲ್ಯಾಂಪ್, ಸ್ಪೋರ್ಟಿ ಲುಕ್ ನೀಡುವ 17-ಇಂಚಿನ ಫೈವ್ ಸ್ಪೋಕ್ ಅಲಾಯ್ ಚಕ್ರಗಳು ಮತ್ತು ಪ್ಲಾಸ್ಟಿಕ್ ಬಾಡಿ ಕ್ಲ್ಯಾಡಿಂಗ್ ಸೇರಿದಂತೆ ಹಲವು ವಿಶೇಷತೆಗಳನ್ನು ಹೊಂದಿದೆ.

ಕ್ರೇಟಾ ಪ್ರತಿಸ್ಪರ್ಧಿ ಕಿಕ್ಸ್ ಸಬ್ ಕಂಪ್ಯಾಕ್ಟ್ ಎಸ್‌ಯುವಿ ಅನಾವರಣಗೊಳಿಸಿದ ನಿಸ್ಸಾನ್

ಸಬ್ ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಯ ಕಿಕ್ಸ್ ಕಾರುಗಳು ಉತ್ತಮ ಉದ್ದಳತೆ ಹೊಂದಿದ್ದು, 4,384ಎಂಎಂ ಉದ್ದ, 1,813ಎಂಎಂ ಅಗಲವಾಗಿದೆ. ಜೊತೆಗೆ 2,673 ಎಂಎಂ ಎತ್ತರವಾಗಿದ್ದು, ಐದು ಜನ ಆರಾಮದಾಯಕವಾಗಿ ಪ್ರಯಾಣ ಮಾಡಬಹುದಾಗಿದೆ.

ಕ್ರೇಟಾ ಪ್ರತಿಸ್ಪರ್ಧಿ ಕಿಕ್ಸ್ ಸಬ್ ಕಂಪ್ಯಾಕ್ಟ್ ಎಸ್‌ಯುವಿ ಅನಾವರಣಗೊಳಿಸಿದ ನಿಸ್ಸಾನ್

ಆದ್ರೆ ಕಾರುಗಳ ಒಳಭಾಗದ ವಿಶೇಷತೆಗಳ ಬಗ್ಗೆ ಹೆಚ್ಚಿನ ಮಾಹಿತಿ ಬಿಟ್ಟುಕೊಡದ ನಿಸ್ಸಾನ್ ಸಂಸ್ಥೆಯು ಕೇವಲ ಹೊರಭಾಗದ ವೈಶಿಷ್ಟ್ಯತೆಗಳನ್ನು ಮಾತ್ರವೇ ಪ್ರದರ್ಶನ ಮಾಡಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಮತ್ತಷ್ಟು ಮಾಹಿತಿಗಳನ್ನು ಹಂಚಿಕೊಳ್ಳಲಿದೆ.

MOST READ: ಬಿಡುಗಡೆಗೂ ಮುನ್ನವೇ ಹೊಸ ಸ್ಯಾಂಟ್ರೋ ಕಾರಿನ ಬೆಲೆ ಪಟ್ಟಿ ಬಹಿರಂಗ- ಬೆಲೆ ಎಷ್ಟು ಗೊತ್ತಾ?

ಕ್ರೇಟಾ ಪ್ರತಿಸ್ಪರ್ಧಿ ಕಿಕ್ಸ್ ಸಬ್ ಕಂಪ್ಯಾಕ್ಟ್ ಎಸ್‌ಯುವಿ ಅನಾವರಣಗೊಳಿಸಿದ ನಿಸ್ಸಾನ್

ಎಂಜಿನ್ ಸಾಮರ್ಥ್ಯ

ಹೊಸ ಕಿಕ್ಸ್ ಮಾದರಿಯು 1.5-ಲೀಟರ್ ಹಾಗೂ 1.6-ಲೀಟರ್ ಮಾದರಿಯ ಎರಡು ಡಿಸೇಲ್ ಎಂಜಿನ್ ಆಯ್ಕೆ ಹೊಂದುವ ಸಾಧ್ಯತೆಗಳಿದ್ದು, ಹಾಗೆಯೇ 1.5-ಲೀಟರ್ ಪೆಟ್ರೋಲ್ ಎಂಜಿನ್ ಕೂಡಾ ಲಭ್ಯವಿರಲಿದೆ. ಪ್ರತಿ ಮಾದರಿಯಲ್ಲೂ 6-ಸ್ಪೀಡ್ ಮ್ಯಾನುವಲ್ ಜೊತೆ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ ಆಯ್ಕೆ ದೊರೆಯಲಿದೆ.

ಕ್ರೇಟಾ ಪ್ರತಿಸ್ಪರ್ಧಿ ಕಿಕ್ಸ್ ಸಬ್ ಕಂಪ್ಯಾಕ್ಟ್ ಎಸ್‌ಯುವಿ ಅನಾವರಣಗೊಳಿಸಿದ ನಿಸ್ಸಾನ್

ಕಾರಿನ ಬೆಲೆ ಮತ್ತು ಬಿಡುಗಡೆಯ ಅವಧಿ(ಅಂದಾಜು)

ನಿಸ್ಸಾನ್ ಕಿಕ್ಸ್ ಕಾರುಗಳು 2019ರ ಜನವರಿಯಲ್ಲಿ ಖರೀದಿಗೆ ಲಭ್ಯವಾಗುವುದು ಬಹುತೇಕ ಖಚಿತವಾಗಿದ್ದು, ಕಾರಿನ ಬೆಲೆಗಳು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.11 ಲಕ್ಷದಿಂದ ಟಾಪ್ ಎಂಡ್ ಮಾದರಿಗೆ ರೂ.15 ಲಕ್ಷ ಬೆಲೆ ಅಂದಾಜಿಸಲಾಗಿದೆ.

MOST READ: ವಾಹನ ಚಾಲನೆ ವೇಳೆ ಈ ತಪ್ಪುಗಳನ್ನು ಮಾಡಿದ್ರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದಾಗುತ್ತೆ..!

ಕ್ರೇಟಾ ಪ್ರತಿಸ್ಪರ್ಧಿ ಕಿಕ್ಸ್ ಸಬ್ ಕಂಪ್ಯಾಕ್ಟ್ ಎಸ್‌ಯುವಿ ಅನಾವರಣಗೊಳಿಸಿದ ನಿಸ್ಸಾನ್

ಹೀಗಾಗಿ ನಿಸ್ಸಾನ್ ಕಿಕ್ಸ್ ಕಾರುಗಳು ಹುಂಡೈ ಕ್ರೇಟಾ, ರೆನಾಲ್ಟ್ ಡಸ್ಟರ್, ಮಹೀಂದ್ರಾ ಎಕ್ಸ್‌ಯುವಿ 500, ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಟಾಟಾ ಹ್ಯಾರಿಯರ್ ಮತ್ತು ಹೋಂಡಾ ಬಿಆರ್-ವಿ ಮಾದರಿಗಳಿಗೆ ಹೆಚ್ಚು ಪೈಪೋಟಿ ನೀಡುವ ನೀರಿಕ್ಷೆಯಿದೆ.

More from DriveSpark

Article Published On: Thursday, October 18, 2018, 17:35 [IST]
English summary
Nissan Kicks Unveiled In India — Launch In 2019
Read more on nissan suv new car
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+