ಕಿಕ್ಸ್ ಬಿಡುಗಡೆಗೂ ಮುನ್ನ ಟೀಸರ್ ಬಿಡುಗಡೆ ಮಾಡಿದ ನಿಸ್ಸಾನ್

ಜನಪ್ರಿಯ ಕಾರು ಉತ್ಪಾದನಾ ಸಂಸ್ಥೆಯಾದ ನಿಸ್ಸಾನ್ ಭಾರತದಲ್ಲಿ ತನ್ನ ಹೊಸ ಉತ್ಪನ್ನಗಳ ಬಿಡುಗಡೆಯಾಗಿ ಬೃಹತ್ ಯೋಜನೆ ರೂಪಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಸಬ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಾದ ಕಿಕ್ಸ್ ಕಾರನ್ನು ಅನಾವರಣಗೊಳಿಸುವ ಮೂಲಕ ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡುವ ಸುಳಿವು ನೀಡಿದೆ.

ಕಿಕ್ಸ್ ಬಿಡುಗಡೆಗೂ ಮುನ್ನ ಟೀಸರ್ ಬಿಡುಗಡೆ ಮಾಡಿದ ನಿಸ್ಸಾನ್

2016ರಲ್ಲಿ ಬ್ರೆಜಿಲ್ ಮಾರುಕಟ್ಟೆಯಲ್ಲಿ ಕಿಕ್ಸ್ ಕಾರು ಮಾದರಿಯನ್ನು ಬಿಡುಗಡೆಗೊಳಿಸಿದ್ದ ನಿಸ್ಸಾನ್ ಸಂಸ್ಥೆಯು ಈ ಬಾರಿ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಜನಪ್ರಿಯ ಕಿಕ್ಸ್ ಕಾರುಗಳನ್ನು ಬಿಡುಗಡೆಗಾಗಿ ಸಜ್ಜಾಗುತ್ತಿದ್ದು, ಕಿಕ್ಸ್ ಹೊಸ ಕಾರುಗಳನ್ನು ರೆನಾಲ್ಟ್ ಡಸ್ಟರ್ ಬಿ0 ಪ್ಲಾಟ್‍‍ಫಾರ್ಮ್ ಅನ್ನು ಆಧರಿಸಿ ಅಭಿವೃದ್ಧಿಗೊಳ್ಳುವುದು ಖಚಿತವಾಗಿದೆ.

ಕಿಕ್ಸ್ ಬಿಡುಗಡೆಗೂ ಮುನ್ನ ಟೀಸರ್ ಬಿಡುಗಡೆ ಮಾಡಿದ ನಿಸ್ಸಾನ್

ಜೊತೆಗೆ ರೆನಾಲ್ಟ್ ಕ್ಯಾಪ್ಚರ್‌ಗಿಂತಲೂ ಹೆಚ್ಚಿನ ಗುಣಮಟ್ಟದ ವಿನ್ಯಾಸಗಳನ್ನು ಪಡೆದುಕೊಂಡಿದ್ದು, ಡಸ್ಟರ್ ಮತ್ತು ಲೊಡ್ಜಿ ಮಾದರಿಗಳಿಂತ ಹೆಚ್ಚು ಆಕರ್ಷಣೆ ಪಡೆದಿದೆ. ಹೀಗಾಗಿ ಭಾರೀ ಪ್ರಮಾಣದ ಮಾರಾಟ ನೀರಿಕ್ಷೆಯಿದ್ದು, ಇದೀಗ ಕಾರಿನ ವಿನ್ಸಾಸಗಳ ಕುರಿತಾಗಿ ಟೀಸರ್ ಬಿಡುಗಡೆ ಮಾಡಿದೆ.

ಕಿಕ್ಸ್ ಬಿಡುಗಡೆಗೂ ಮುನ್ನ ಟೀಸರ್ ಬಿಡುಗಡೆ ಮಾಡಿದ ನಿಸ್ಸಾನ್

GRAPHENE ಡಿಸೈನ್ ತಂತ್ರಜ್ಞಾನದೊಂದಿಗೆ ಸಿದ್ದವಾಗಿರುವ ಹೊರ ವಿನ್ಯಾಸಗಳು ಕಿಕ್ಸ್‌ಗೆ ಮೆರಗು ತಂದಿದ್ದು, ಮಲ್ಟಿ ಲೇಯರ್ ಡ್ಯುಯಲ್ ಟೋನ್ ಡ್ಯಾಶ್‌ಬೋರ್ಡ್ ವ್ಯವಸ್ಥೆ ಹೊಂದಿದ್ದು, ಲೆದರ್ ಕೊಟಿಂಗ್ ಸೀಟುಗಳು ಮತ್ತು ಪುಶ್ ಡೋರ್ ಟ್ರಿಮ್ ಅನುಕೂಲತೆಯಿದೆ.

ಕಿಕ್ಸ್ ಬಿಡುಗಡೆಗೂ ಮುನ್ನ ಟೀಸರ್ ಬಿಡುಗಡೆ ಮಾಡಿದ ನಿಸ್ಸಾನ್

ಇನ್ನು ವಿನೂತನ ಕಾರಿನಲ್ಲಿ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋ‌ಟೈನ್‌ಮೆಂಟ್ ಹಾಗೂ ಕಾರಿನ ಸುತ್ತ ನೋಡಬಹುದಾದ ವಿವ್ಯೂ ಮಾನಿಟರ್ ವ್ಯವಸ್ಥೆಯಿದ್ದು, ಇದು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾರಾಟವಾಗುತ್ತಿರುವ ಇತರೆ ಸಬ್ ಕಂಪ್ಯಾಕ್ಟ್ ಮಾದರಿಗಳಲ್ಲೇ ವಿಶೇಷ ಕಾರು ಎನ್ನಬಹುದು.

ಕಿಕ್ಸ್ ಬಿಡುಗಡೆಗೂ ಮುನ್ನ ಟೀಸರ್ ಬಿಡುಗಡೆ ಮಾಡಿದ ನಿಸ್ಸಾನ್

ಹಾಗೆಯೇ ಪ್ರೀಮಿಯಂ ಕಾರುಗಳಲ್ಲಿ ಕಂಡುಬರುವ ವಿ ಮೊಷನ್ ಗ್ರೀಲ್, ಸ್ವೆಪ್ಟ್ ಬ್ಯಾಕ್ ಹೆಡ್‌ಲ್ಯಾಂಪ್, ಎಲ್ಇಡಿ ಡೇ ಟೈಮ್ ರನ್ನಿಂಗ್ ಲೈಟ್, ಎಲ್ಇಡಿ ಫಾಗ್ ಲ್ಯಾಂಪ್, ಸ್ಪೋರ್ಟಿ ಲುಕ್ ನೀಡುವ 17-ಇಂಚಿನ ಫೈವ್ ಸ್ಪೋಕ್ ಅಲಾಯ್ ಚಕ್ರಗಳು ಮತ್ತು ಪ್ಲಾಸ್ಟಿಕ್ ಬಾಡಿ ಕ್ಲ್ಯಾಡಿಂಗ್ ಸೇರಿದಂತೆ ಹಲವು ವಿಶೇಷತೆಗಳನ್ನು ಹೊಂದಿದೆ.

ಕಿಕ್ಸ್ ಬಿಡುಗಡೆಗೂ ಮುನ್ನ ಟೀಸರ್ ಬಿಡುಗಡೆ ಮಾಡಿದ ನಿಸ್ಸಾನ್

ಸಬ್ ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಯ ಕಿಕ್ಸ್ ಕಾರು ಉತ್ತಮ ಉದ್ದಳತೆ ಹೊಂದಿದ್ದು, 4,384ಎಂಎಂ ಉದ್ದ, 1,813ಎಂಎಂ ಅಗಲವಾಗಿದೆ. ಜೊತೆಗೆ 2,673 ಎಂಎಂ ಎತ್ತರವಾಗಿದ್ದು, ಐದು ಜನ ಆರಾಮದಾಯಕವಾಗಿ ಪ್ರಯಾಣ ಮಾಡಬಹುದಾಗಿದೆ.

ಕಿಕ್ಸ್ ಬಿಡುಗಡೆಗೂ ಮುನ್ನ ಟೀಸರ್ ಬಿಡುಗಡೆ ಮಾಡಿದ ನಿಸ್ಸಾನ್

ಆದ್ರೆ ಕಾರುಗಳ ಒಳಭಾಗದ ವಿಶೇಷತೆಗಳ ಬಗ್ಗೆ ಹೆಚ್ಚಿನ ಮಾಹಿತಿ ಬಿಟ್ಟುಕೊಡದ ನಿಸ್ಸಾನ್ ಸಂಸ್ಥೆಯು ಕೇವಲ ಹೊರಭಾಗದ ವೈಶಿಷ್ಟ್ಯತೆಗಳನ್ನು ಮಾತ್ರವೇ ಪ್ರದರ್ಶನ ಮಾಡಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಮತ್ತಷ್ಟು ಮಾಹಿತಿಗಳನ್ನು ಹಂಚಿಕೊಳ್ಳಲಿದೆ.

ಕಿಕ್ಸ್ ಬಿಡುಗಡೆಗೂ ಮುನ್ನ ಟೀಸರ್ ಬಿಡುಗಡೆ ಮಾಡಿದ ನಿಸ್ಸಾನ್

ಎಂಜಿನ್ ಸಾಮರ್ಥ್ಯ

ಹೊಸ ಕಿಕ್ಸ್ ಮಾದರಿಯು 1.5-ಲೀಟರ್ ಹಾಗೂ 1.6-ಲೀಟರ್ ಮಾದರಿಯ ಎರಡು ಡಿಸೇಲ್ ಎಂಜಿನ್ ಆಯ್ಕೆ ಹೊಂದುವ ಸಾಧ್ಯತೆಗಳಿದ್ದು, ಹಾಗೆಯೇ 1.5-ಲೀಟರ್ ಪೆಟ್ರೋಲ್ ಎಂಜಿನ್ ಕೂಡಾ ಲಭ್ಯವಿರಲಿದೆ. ಪ್ರತಿ ಮಾದರಿಯಲ್ಲೂ 6-ಸ್ಪೀಡ್ ಮ್ಯಾನುವಲ್ ಜೊತೆ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ ಆಯ್ಕೆ ದೊರೆಯಲಿದೆ.

ಕಿಕ್ಸ್ ಬಿಡುಗಡೆಗೂ ಮುನ್ನ ಟೀಸರ್ ಬಿಡುಗಡೆ ಮಾಡಿದ ನಿಸ್ಸಾನ್

ಕಾರಿನ ಬೆಲೆ ಮತ್ತು ಬಿಡುಗಡೆಯ ಅವಧಿ(ಅಂದಾಜು)

ನಿಸ್ಸಾನ್ ಕಿಕ್ಸ್ ಕಾರುಗಳು 2019ರ ಜನವರಿಯಲ್ಲಿ ಖರೀದಿಗೆ ಲಭ್ಯವಾಗುವುದು ಬಹುತೇಕ ಖಚಿತವಾಗಿದ್ದು, ಕಾರಿನ ಬೆಲೆಗಳು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.11 ಲಕ್ಷದಿಂದ ಟಾಪ್ ಎಂಡ್ ಮಾದರಿಗೆ ರೂ.15 ಲಕ್ಷ ಬೆಲೆ ಇರಬಹುದೆಂದು ಅಂದಾಜಿಸಲಾಗಿದೆ.

ಹೀಗಾಗಿ ಹೊಸ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ಬ್ರೆಝಾ, ಹ್ಯುಂಡೈ ಕ್ರೇಟಾ ಮತ್ತು ಮಹೀಂದ್ರಾ ಎಕ್ಸ್‌ಯುವಿ 500 ಕಾರುಗಳಿಗೆ ತೀವ್ರ ಪೈಪೋಟಿ ನೀಡುವ ಗುಣಲಕ್ಷಣಗಳನ್ನು ಹೊಂದಿದ್ದು, ಗುಣಮಟ್ಟದಲ್ಲಿ ಇತರೆ ಸಬ್ ಕಂಪ್ಯಾಕ್ಟ್ ಎಸ್‌ಯುವಿಗಳಿಂತಲೂ ವಿಶೇಷ ಎನ್ನಿಸಲಿವೆ.

More from DriveSpark

Article Published On: Monday, November 26, 2018, 10:40 [IST]
English summary
New Nissan Kicks Video Teaser Shows Its Details And Features — Watch Now.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+