ಹಳೆಯ ಮಾದರಿಯ ಸಿಯಾಜ್ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಿದ ಮಾರುತಿ ಸುಜುಕಿ..

ದೇಶಿಯ ವಾಹನ ತಯಾರಕ ಸಂಸ್ಥೆಯಾದ ಮಾರುತಿ ಸುಜುಕಿ ತಮ್ಮ ಹಳೆಯ ಮಾದರಿಯ ಸಿಯಾಜ್ ಸೆಡಾನ್ ಕಾರುಗಳ ಉತ್ಪಾದನೆಯನ್ನು ಸ್ಥಗಿತಗೊಳಿಸಿಲಿದೆ.

By Rahul Ts

ದೇಶಿಯ ವಾಹನ ತಯಾರಕ ಸಂಸ್ಥೆಯಾದ ಮಾರುತಿ ಸುಜುಕಿ ತಮ್ಮ ಹಳೆಯ ಮಾದರಿಯ ಸಿಯಾಜ್ ಸೆಡಾನ್ ಕಾರುಗಳ ಉತ್ಪಾದನೆಯನ್ನು ಸ್ಥಗಿತಗೊಳಿಸಿಲಿದೆ. ಪ್ರತೀ ತಿಂಗಳು ಸುಮಾರು 5,000 ಯೂನಿಟ್‍ ಕಾರುಗಳು ಮಾರಾಟಗೊಳುತಿದ್ದ ಸಿಯಾಜ್ ಕಾರುಗಳು 2018ರ ಜೂನ್ ತಿಂಗಳಿನಲ್ಲಿ ಕೇವಲ 1,579 ಯೂನಿಟ್ ಕಾರುಗಳು ಮಾತ್ರ ಮಾರಾಟವಾಗಿದೆ.

ಹಳೆಯ ಮಾದರಿಯ ಸಿಯಾಜ್ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಿದ ಮಾರುತಿ ಸುಜುಕಿ..

ಸಂಸ್ಥೆಯು ಸಿಯಾಜ್ ಕಾರುಗಳ ಉತ್ಪಾದನೆಯನ್ನು ಕಳಪೆ ಮಾರಾಟದ ಕಾರಣದಿಂದಾಗಿ ಸ್ಥಗಿತಗೊಳಿಸುತ್ತಿಲ್ಲ, ಬದಲಾಗಿ ಸಂಸ್ಥೆಯು ಶೀಘ್ರದಲ್ಲೆ ಬಿಡುಗಡೆಗೊಳಿಸುತ್ತಿರುವ ಸಿಯಾಜ್ ಫೇಸ್‍‍ಲಿಫ್ಟ್ ಕಾರುಗಳ ಉತ್ಪಾದನೆಯ ಕಾರ್ಯದಲ್ಲಿದೆ.

ಹಳೆಯ ಮಾದರಿಯ ಸಿಯಾಜ್ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಿದ ಮಾರುತಿ ಸುಜುಕಿ..

ಹೌದು, ಮಾರುತಿ ಸುಜುಕಿ ಸಂಸ್ಥೆಯು 2018ರ ಆಗಸ್ಟ್ 8ರಂದು ತಮ್ಮ ಸಿಯಾಜ್ ಫೇಸ್‍ಲಿಫ್ಟ್ ಕಾರುಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದ್ದು, ಈಗಾಗಲೆ ಫೇಸ್‍‍ಲಿಫ್ಟ್ ಕಾರುಗಳನ್ನು ಸಂಸ್ಥೆಯ ಪ್ರೀಮಿಯಮ್ ನೆಕ್ಸಾ ಡೀಲರ್‍‍‍ಗಳ ಕೈ ತಲುಪಿಸಿವೆ.

ಹಳೆಯ ಮಾದರಿಯ ಸಿಯಾಜ್ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಿದ ಮಾರುತಿ ಸುಜುಕಿ..

ಕೆಲ ಡೀಲರ್‍‍ಗಳು ಹೊಸ ಸಿಯಾಜ್ ಫೇಸ್‍‍ಲಿಫ್ಟ್ ಕಾರಿನ ಖರೀದಿಗಾಗಿ ಬುಕ್ಕಿಂಗ್ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದು, ಹೊಸ ಕಾರಿನ ಖರೀದಿಗಾಗಿ ಡೀಲರ್‍‍ಶಿಪ್‍‍ನ ಆಧಾರದ ಮೇಲೆ ಸುಮಾರು ರೂ.5,000 ಇಂದ 20,000 ಸಾವಿರದಷ್ಟು ಮೊತ್ತದಲ್ಲಿ ಬುಕ್ಕಿಂಗ್ ಮಾಡಿಸಿಕೊಳ್ಳುತ್ತಿದ್ದಾರೆ.

ಹಳೆಯ ಮಾದರಿಯ ಸಿಯಾಜ್ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಿದ ಮಾರುತಿ ಸುಜುಕಿ..

ಹೊಸ ಸಿಯಾಜ್ ಫೇಸ್‍‍ಲಿಫ್ಟ್ ಕಾರಿನ ಮುಂಭಾಗದಲ್ಲಿ ಮರಿ ವಿನ್ಯಾಸಗೊಳಿಸಲಾದ ಗ್ರಿಲ್, ಹೊಸದಾಗಿ ವಿನ್ಯಾಸಗೊಳಿಸಿದ ಎಲ್ಇಡಿ ಡಿಆರ್‍ಎಲ್ ಹೆಡ್‍‍ಲ್ಯಾಂಪ್ಸ್, ಸೆಂಟ್ರಲ್ ಏರ್ ಡ್ಯಾಮ್‍ ನೊಂದಿಗೆ ರಿವ್ಯಾಂಪ್ಡ್ ಫ್ರಂಟ್ ಬಂಪರ್ ಮತ್ತು ಸಿ-ಆಕಾರದ ಕ್ರೋಮ್ ಅನ್ನು ಫಾಗ್ ಲ್ಯಾಂಪ್‍‍ನಲ್ಲಿ ಅಳವಡಿಸಲಾಗಿದೆ.

ಹಳೆಯ ಮಾದರಿಯ ಸಿಯಾಜ್ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಿದ ಮಾರುತಿ ಸುಜುಕಿ..

ಇದಲ್ಲದೆ ಸಿಯಾಜ್ ಫೇಸ್‍‍ಲಿಫ್ಟ್ ಮಲ್ಟಿ ಸ್ಪೋಕ್ ಅಲಾಯ್ ವ್ಹೀಲ್ಸ್, ಕ್ರೋಮ್ ಡೋರ್ ಹ್ಯಾಂಡಲ್ಸ್ ಮತ್ತು ಒಆರ್‍‍ವಿಎಮ್ ಅನ್ನು ಇಂಟಿಗ್ರೇಟೆಡ್ ಟರ್ನ್ ಇಂಡಿಕೇಟರ್ಸ್ ಅನ್ನು ಪ್ರಸ್ಥುತ ಮಾರಾಟಗೊಳ್ಳುತ್ತಿರುವ ಸಿಯಾಜ್ ಕಾರಿನಿಂದ ಆದರಿಸಿದೆ. ಹಾಗೆಯೆ ಮರು ವಿನ್ಯಾಸಗೊಳಿಸಲಾದ ಹಿಂಭಾಗದ ಬಂಪರ್ ಅನ್ನು ಕೂಡ ಅಳವಡಿಸಲಾಗಿದೆ.

ಹಳೆಯ ಮಾದರಿಯ ಸಿಯಾಜ್ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಿದ ಮಾರುತಿ ಸುಜುಕಿ..

ಮಾರುತಿ ಸಿಯಾಜ್ ಫೇಸ್‍‍ಲಿಫ್ಟ್ ಕಾರು ಹೊಸದಾಗಿ 1.5 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಪಡೆದಿದ್ದು, ಪ್ರಸ್ಥುತ ಇರುವ 1.4 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಭರ್ತಿ ಮಾಡಲಿದೆ. ಇದಲ್ಲದೆ ಡೀಸೆಲ್ ವೇರಿಯಂಟ್ ಕಾರುಗಳು 1.3 ಲೀಟರ್ ಸ್ಮಾರ್ಟ್ ಹೈಬ್ರಿಡ್ ವೆಹಿಕಲ್ ಟೆಕ್ನಾಲಜಿ ಎಂಜಿನ್ ಅನ್ನು ಪಡೆದುಕೊಂಡಿದೆ.

ಹಳೆಯ ಮಾದರಿಯ ಸಿಯಾಜ್ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಿದ ಮಾರುತಿ ಸುಜುಕಿ..

ಇನ್ನು ಟ್ರಾನ್ಸ್ ಮಿಷನ್ ಬಗ್ಗೆ ಹೇಳುವುದಾದರೆ ಎಂಜಿನ್ ಅನ್ನು 5 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ನೊಂದಿಗೆ ಜೋಡಿಸಲಾಗಿದ್ದು, ಇದು ಪ್ರಸ್ಥುತ ಇರುವ 4 ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಭರ್ತಿ ಮಾಡಲಿದೆ.

ಹಳೆಯ ಮಾದರಿಯ ಸಿಯಾಜ್ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಿದ ಮಾರುತಿ ಸುಜುಕಿ..

ಸಿಯಾಜ್ ಫೇಸ್‍ಲಿಫ್ಟ್ ಕಾರಿನ ಒಳಭಾಗದಲ್ಲಿ ಅಪ್‍‍ಮಾರ್ಕೆಟ್ ಡ್ಯಾಶ್‍‍ಬೋರ್ಡ್, ಸೀಟ್ ಮತ್ತು ಹೊಸ ವೈಶಿಷ್ಟ್ಯತೆಗಳನ್ನು ಪಡೆದಿರಲಿದೆ ಎನ್ನಲಾಗಿದ್ದು, ಇನ್ನು ಹೊಸದಾಗಿ ಬಿಡುಗಡೆಗೊಳ್ಳುವ ಕಾರುಗಳು ಎಲೆಕ್ಟ್ರಿಕ್ ಸನ್‍ರೂಫ್, ಅಡಿಶನಲ್ ಸೇಫ್ಟಿ ಫೀಚರ್ಸ್ ಹಾಗು ಇನ್ನಿತರೆ ಆಯ್ಕೆಗಳನ್ನು ಪಡೆಯಲಿದೆ.

ಹಳೆಯ ಮಾದರಿಯ ಸಿಯಾಜ್ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಿದ ಮಾರುತಿ ಸುಜುಕಿ..

ಇನ್ನು ಕಾರಿನ ಬೆಲೆಯ ಬಗ್ಗೆ ಯಾವುದೆ ಖಚಿತ ಮಾಹಿತಿಯು ಲಭ್ಯವಾಗಿಲ್ಲವಾದರು ದೆಹಲಿಯ ಎಕ್ಸ್ ಶೋರಂ ಪ್ರಕಾರ ರೂ 8 ರಿಂದ 12 ಲಕ್ಷದ ವರೆಗು ಇರಬಹುದೆಂದು ಎಂದಾಜಿಸಲಾಗಿದ್ದು, ಹೋಂಡಾ ಸಿಟಿ, ಹ್ಯುಂಡೈ ವರ್ನಾ, ವೋಲ್ಕ್ಸ್ ವ್ಯಾಗನ್ ವೆಂಟೊ ಮತ್ತು ಸ್ಕೋಡಾ ರ್‍ಯಾಪಿಡ್ ಕಾರುಗಳಿಗೆ ಪೈಪೋಟಿಯನ್ನು ನೀಡಲಿದೆ.

More from DriveSpark

Article Published On: Saturday, July 14, 2018, 10:14 [IST]
English summary
Old Maruti Ciaz production ends.
Read more on maruti suzuki new car sedan
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+