ದೇಶದಲ್ಲಿ ಸಾರ್ವಕಾಲಿಕ ಏರಿಕೆ ಕಂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ...

ಕರ್ನಾಟಕ ವಿಧಾನಸಭಾ ಚುನಾವಣೆ ಮುಕ್ತಾಯವಾದ ಬೆನ್ನಲ್ಲೇ ತೈಲ ಕಂಪೆನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಮತ್ತೆ ಹೆಚ್ಚಳ ಮಾಡುವ ಮೂಲಕ ವಾಹನ ಸವಾರರಿಗೆ ಶಾಕ್ ನೀಡಿವೆ.

By Praveen Sannamani

ಕರ್ನಾಟಕ ವಿಧಾನಸಭಾ ಚುನಾವಣೆ ಮುಕ್ತಾಯವಾದ ಬೆನ್ನಲ್ಲೇ ತೈಲ ಕಂಪೆನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಮತ್ತೆ ಹೆಚ್ಚಳ ಮಾಡುವ ಮೂಲಕ ವಾಹನ ಸವಾರರಿಗೆ ಶಾಕ್ ನೀಡಿವೆ. ಪೆಟ್ರೋಲ್ ಬೆಲೆಯಲ್ಲಿ ದಾಖಲೆ ಪ್ರಮಾಣ ಏರಿಕೆಯಾಗಿದ್ದು, ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್ ಬೆಲೆ ಎಷ್ಟು ಎನ್ನುವ ಮಾಹಿತಿ ಇಲ್ಲಿದೆ ನೋಡಿ...

ದೇಶದಲ್ಲಿ ಸಾರ್ವಕಾಲಿಕ ಏರಿಕೆ ಕಂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ...

ಬೆಂಗಳೂರಿನಲ್ಲಿ ಇಂದಿನ ಪೆಟ್ರೋಲ್‌ ದರದಲ್ಲಿ ಪ್ರತಿ ಲೀಟರ್‌ಗೆ 23 ಪೈಸೆ ಹಾಗೂ ಡೀಸೆಲ್‌ ದರದಲ್ಲಿ ಲೀಟರ್‌ಗೆ 23ಪೈಸೆ ಏರಿಕೆಯಾಗಿದ್ದು, ಕ್ರಮವಾಗಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ರೂ.76.54 ಪೈಸೆ ಹಾಗೂ ಡೀಸೆಲ್ ಬೆಲೆ ರೂ.67.94 ಪೈಸೆ ಬೆಲೆ ನಿಗದಿ ಮಾಡಲಾಗಿದೆ.

ದೇಶದಲ್ಲಿ ಸಾರ್ವಕಾಲಿಕ ಏರಿಕೆ ಕಂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ...

ಇದು ನಿನ್ನೆಗಿಂತ ಇಂದಿನ ದರದಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 23 ಪೈಸೆ ಮತ್ತು ಡಿಸೇಲ್ ಬೆಲೆಯಲ್ಲಿ 23 ಪೈಸೆ ಏರಿಕೆಯಾಗಿದ್ದು, ಕಳೆದ ನಾಲ್ಕು ದಿನಗಳಲ್ಲಿ ಪೆಟ್ರೋಲ್ ಬೆಲೆಯು ಪ್ರತಿ ಲೀಟರ್ 64 ಪೈಸೆ ಮತ್ತು ಡಿಸೇಲ್ ಬೆಲೆಯು ಪ್ರತಿ ಲೀಟರ್‌ಗೆ 89 ಪೈಸೆ ಏರಿಕೆಯಾಗಿದೆ.

ದೇಶದಲ್ಲಿ ಸಾರ್ವಕಾಲಿಕ ಏರಿಕೆ ಕಂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ...

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆಯಾಗಿರುವುದರಿಂದ, ಅದರ ಹೊರೆಯನ್ನು ಗ್ರಾಹಕರಿಗೆ ವರ್ಗಾಯಿಸಲು ಸಾರ್ವಜನಿಕ ತೈಲ ಕಂಪನಿಗಳು ಆರಂಭಿಸಿರುವುದೇ ಬೆಲೆ ಏರಿಕೆಗೆ ಪ್ರಮುಖ ಕಾರಣ ಎನ್ನಲಾಗಿದೆ.

ದೇಶದಲ್ಲಿ ಸಾರ್ವಕಾಲಿಕ ಏರಿಕೆ ಕಂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ...

ಅದೇ ರೀತಿಯಾಗಿ ದಿಲ್ಲಿಯಲ್ಲಿ ಪೆಟ್ರೋಲ್‌ ದರ ಲೀಟರ್‌ಗೆ ರೂ.75.32 ಪೈಸೆ ಹಾಗೂ ಡೀಸೆಲ್‌ ದರ ರೂ. 66.79 ಪೈಸೆಗಳಿಗೆ ಪರಿಷ್ಕೃತವಾಗಿದೆ. ಇದರೊಂದಿಗೆ ಡೀಸೆಲ್‌ ದರ ದಾಖಲೆಯ ಗರಿಷ್ಠ ಮಟ್ಟ ಹಾಗೂ ಪೆಟ್ರೋಲ್‌ 56 ತಿಂಗಳಿನಲ್ಲಿಯೇ ಗರಿಷ್ಠ ದರ ದಾಖಲಿಸಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕಳೆದ ಮೂರು ವಾರಗಳಿಂದ ತೈಲ ದರ ಏರಿಕೆ ತಡೆ ಹಿಡಿಯಲಾಗಿತ್ತು.

ದೇಶದಲ್ಲಿ ಸಾರ್ವಕಾಲಿಕ ಏರಿಕೆ ಕಂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ...

ಆದ್ರೆ ಇದೀಗ ದಿನಂಪ್ರತಿ 20 ಪೈಸೆ ಸರಾಸರಿಯಂತೆ ತೈಲ ಬೆಲೆ ಏರಿಕೆಯಾಗುತ್ತಲೇ ಇದ್ದು, ಇದು ವಾಹನ ಸವಾರರನ್ನು ಚಿಂತೆಗಿಡಾಗುವಂತೆ ಮಾಡಿರುವುದು ಮಾತ್ರ ಸುಳ್ಳಲ್ಲ. ಅದರಲ್ಲೂ ಮುಂಬೈನಲ್ಲಿ ಏರಿಕೆಯಾಗುತ್ತಿರುವ ತೈಲ ಬೆಲೆ ಪ್ರಮಾಣ ಸಾರ್ವಕಾಲಿಕ ದಾಖಲೆ ಸೃಷ್ಠಿಸಿದೆ.

ದೇಶದಲ್ಲಿ ಸಾರ್ವಕಾಲಿಕ ಏರಿಕೆ ಕಂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ...

ಮುಂಬೈನಲ್ಲಿ ಇಂದಿನ ಪೆಟ್ರೋಲ್ ಬೆಲೆಯು ಪ್ರತಿ ಲೀಟರ್‌ಗೆ ರೂ. 83.16 ಪೈಸೆ ಮತ್ತು ಡೀಸೆಲ್ ಬೆಲೆಯು ಪ್ರತಿ ಲೀಟರ್‌ಗೆ ರೂ. 71.12 ಪೈಸೆ ಏರಿಕೆಯಾಗಿದ್ದು, ಇದು ನಾಲ್ಕು ದಿನಗಳ ಹಿಂದಷ್ಟೇ ಪ್ರತಿ ಲೀಟರ್ ಪೆಟ್ರೋಲ್‌ಗೆ 82.65 ಪೈಸೆ ಮತ್ತು ಪ್ರತಿ ಲೀಟರ್ ಡೀಸೆಲ್‌‌ಗೆ ರೂ.70.43 ಪೈಸೆ ಇತ್ತು.

ದೇಶದಲ್ಲಿ ಸಾರ್ವಕಾಲಿಕ ಏರಿಕೆ ಕಂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ...

ಕೇವಲ ನಾಲ್ಕು ದಿನಗಳ ಅಂತರದಲ್ಲಿ ಪೆಟ್ರೋಲ್ ಬೆಲೆಯು ಪ್ರತಿ ಲೀಟರ್‌ಗೆ 63 ಪೈಸೆ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ ರೂ. 92 ಪೈಸೆ ಏರಿಕೆ ಕಾಣುವ ಮೂಲಕ ಬೆಲೆ ಏರಿಕೆಯಲ್ಲಿ ದಾಖಲೆ ನಿರ್ಮಿಸಿದೆ.

ದೇಶದಲ್ಲಿ ಸಾರ್ವಕಾಲಿಕ ಏರಿಕೆ ಕಂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ...

ದರ ಹೆಚ್ಚಳಕ್ಕೆ ಬಾಹ್ಯ ಕಾರಣ

ದರ ಹೆಚ್ಚಳವನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್, "ದೇಶದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ದರ ಹೆಚ್ಚಳಕ್ಕೆ ಸ್ಥಳೀಯ ಕಾರಣಗಳಿಲ್ಲ. ಅಂತರರಾಷ್ಟ್ರೀಯ ಮಟ್ಟದ ಕಾರಣಗಳಿಂದ ದರ ಏರಿಕೆಯಾಗಿವೆ ಎಂದಿದ್ದಾರೆ.

ದೇಶದಲ್ಲಿ ಸಾರ್ವಕಾಲಿಕ ಏರಿಕೆ ಕಂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ...

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕುರಿತಾದ ಸಂಪೂರ್ಣ ಮಾಹಿತಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ..

ಇಂದಿನ ಪೆಟ್ರೋಲ್ ದರಗಳು

ಇಂದಿನ ಡೀಸೆಲ್ ದರಗಳು

Most Read Articles

Kannada
Read more on auto news petrol diesel
English summary
Petrol And Diesel Prices Hiked Again.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X