7 ಸೀಟರ್ ಮಿನಿ ಎಂಪಿವಿ ಕಾರನ್ನು ಬಿಡುಗಡೆಗೊಳಿಸಲಿದೆ ರೆನಾಲ್ಟ್‌

ರೆನಾಲ್ಟ್ ಸಂಸ್ಥೆಯು ಈ ಬಾರಿ 7 ಸೀಟರ್ ಮಾದರಿಯ ಮಿನಿ ಎಂಪಿವಿ ಕಾರು ಮಾದರಿಯೊಂದನ್ನು ಬಿಡುಗಡೆ ಮಾಡುವ ಇರಾದೆಯಲ್ಲಿದೆ.

By Praveen Sannamani

ಮಧ್ಯಮ ಗಾತ್ರದ ಹಲವು ಕಾರು ಮಾದರಿಗಳನ್ನು ಬಿಡುಗಡೆಗೊಳಿಸಿ ಯಶಸ್ವಿಯಾಗಿರುವ ರೆನಾಲ್ಟ್ ಸಂಸ್ಥೆಯು ಲೊಡ್ಜಿ ಎಂಪಿವಿ ಕಾರುಗಳ ಮಾರಾಟ ಮಾತ್ರ ಹಿನ್ನೆಡೆ ಅನುಭವಿಸಿತ್ತು. ಈ ಹಿನ್ನೆಲೆ ಹೊಸ ಕಾರು ಉತ್ಪನ್ನದೊಂದಿಗೆ ಮತ್ತೊಮ್ಮೆ ಅದೃಷ್ಟದ ಪರೀಕ್ಷೆಗೆ ಇಳಿದಿರುವ ರೆನಾಲ್ಟ್ ಸಂಸ್ಥೆಯು ಈ ಬಾರಿ 7 ಸೀಟರ್ ಮಾದರಿಯ ಮಿನಿ ಎಂಪಿವಿ ಕಾರು ಮಾದರಿಯೊಂದನ್ನು ಬಿಡುಗಡೆ ಮಾಡುವ ಇರಾದೆಯಲ್ಲಿದೆ.

7 ಸೀಟರ್ ಮಿನಿ ಎಂಪಿವಿ ಕಾರನ್ನು ಬಿಡುಗಡೆಗೊಳಿಸಲಿದೆ ರೆನಾಲ್ಟ್‌

ರೆನಾಲ್ಟ್ ಇಂಡಿಯಾ ಸಂಸ್ಥೆಯು ಭಾರತದಲ್ಲಿ ತನ್ನ ಹೊಸ ಎಂಪಿವಿ ಕಾರುನ್ನು ಆರ್‌ಬಿಸಿ ಎನ್ನುವ ಕೋಡ್ ಆಧಾರ ಮೇಲೆ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದು, ಹೊಸ ಕಾರಿನ ತಾಂತ್ರಿಕ ಅಂಶಗಳ ಬಗೆಗೆ ಕೆಲವು ಮಹತ್ವದ ಮಾಹಿತಿಗಳು ಲಭ್ಯವಾಗಿವೆ. ರೆನಾಲ್ಟ್ ಹೊಸ ಕಾರು ಕ್ವಿಡ್‌ ಕಾರಿಗಿಂತ ದೊಡ್ಡದಾಗಿದ್ದು, ಲೊಡ್ಜಿ ಕಾರಿಗಿಂತ ಚಿಕ್ಕದಾದ ಗಾತ್ರದೊಂದಿಗೆ ಉತ್ತಮ ತಾಂತ್ರಿಕ ಅಂಶಗಳೊಂದಿಗೆ ಮಾರುಕಟ್ಟೆ ಪ್ರವೇಶಪಡೆಯುವ ನೀರಿಕ್ಷೆಯಿದೆ.

7 ಸೀಟರ್ ಮಿನಿ ಎಂಪಿವಿ ಕಾರನ್ನು ಬಿಡುಗಡೆಗೊಳಿಸಲಿದೆ ರೆನಾಲ್ಟ್‌

ತಮಿಳುನಾಡಿನ ಪ್ರಮುಖ ಕಡೆಗಳಲ್ಲಿ ರೆನಾಲ್ಟ್ ಹೊಸ ಎಂಪಿವಿ ಕಾರು ಸ್ಪಾಟ್ ಟೆಸ್ಟಿಂಗ್ ನಡೆಸುವಾಗ ಕಂಡುಬಂದಿದ್ದು, ರೆನಾಲ್ಟ್ ಸಂಸ್ಥೆಯ ಸಿಎಂಎಫ್ ಎ ಪ್ಲಸ್ ಪ್ಯಾರ್ಟ್‌ಫಾರ್ಮ್ ಅಡಿಯಲ್ಲಿ ಈ ಹೊಸ ಕಾರನ್ನು ಅಭಿವೃದ್ಧಿ ಮಾಡಲಾಗಿದೆಯೆಂತೆ.

7 ಸೀಟರ್ ಮಿನಿ ಎಂಪಿವಿ ಕಾರನ್ನು ಬಿಡುಗಡೆಗೊಳಿಸಲಿದೆ ರೆನಾಲ್ಟ್‌

ಎಂಪಿವಿ ಮಾದರಿಗಳಲ್ಲೇ ಸಣ್ಣ ಗಾತ್ರದ ಕಾರು ಆವೃತ್ತಿಯಾಗಿರುವ ರೆನಾಲ್ಟ್ ಹೊಸ ಕಾರು ಬೆಲೆ ಮತ್ತು ಎಂಜಿನ್ ಗಾತ್ರದಲ್ಲೂ ತುಸು ಬದಲಾವಣೆಯೊಂದಿಗೆ ಗ್ರಾಹಕರನ್ನು ಸೆಳೆಯುವ ವಿಶ್ವಾಸದಲ್ಲಿದ್ದು, ಲೊಡ್ಜಿ ಕಾರುಗಳ ಮಾರಾಟ ಆದ ಹಿನ್ನಡೆಯನ್ನು ಈ ಕಾರಿನ ಮೂಲಕ ಗ್ರಾಹಕರ ಬೇಡಿಕೆಯನ್ನು ಕಾಯ್ದುಕೊಳ್ಳವು ನೆರವಾಗುವ ನೀರಿಕ್ಷೆಯಿದೆ.

7 ಸೀಟರ್ ಮಿನಿ ಎಂಪಿವಿ ಕಾರನ್ನು ಬಿಡುಗಡೆಗೊಳಿಸಲಿದೆ ರೆನಾಲ್ಟ್‌

ಮೂಲಗಳ ಪ್ರಕಾರ, 7 ಸೀಟರ್ ಸೌಲಭ್ಯವನ್ನು ಹೊಂದಿರುವ ರೆನಾಲ್ಟ್ ಹೊಸ ಎಂಪಿವಿ ಕಾರು ಗುಣಮಟ್ಟ ತಾಂತ್ರಿಕ ಅಂಶಗಳನ್ನು ಪಡೆದುಕೊಂಡಿದ್ದು, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಎಲ್‌ಇಡಿ ಡಿಆರ್‌ಎಸ್ ಸೌಲಭ್ಯಗಳು ಇದರಲ್ಲಿವೆ.

7 ಸೀಟರ್ ಮಿನಿ ಎಂಪಿವಿ ಕಾರನ್ನು ಬಿಡುಗಡೆಗೊಳಿಸಲಿದೆ ರೆನಾಲ್ಟ್‌

ಎಂಜಿನ್ ಸಾಮರ್ಥ್ಯ

ಹೊಸ ಕಾರುಗಳಲ್ಲಿ 1.0-ಲೀಟರ್ ಅಥವಾ 1.2-ಲೀಟರ್ ಪೆಟ್ರೋಲ್ ಎಂಜಿನ್ ಒದಗಿಸುವ ಸಾಧ್ಯತೆಗಳಿವೆ. ಇಲ್ಲಿ ಇನ್ನೊಂದು ಪ್ರಮುಖ ವಿಚಾರ ಅಂದ್ರೆ, ರೆನಾಲ್ಟ್ ಸಂಸ್ಥೆಯು ತನ್ನ ಹೊಸ ಕಾರುಗಳಲ್ಲಿ ಡಿಸೇಲ್ ಎಂಜಿನ್ ಒದಗಿಸದಿರಲು ನಿರ್ಧರಿಸಿದೆಯೆಂತೆ.

7 ಸೀಟರ್ ಮಿನಿ ಎಂಪಿವಿ ಕಾರನ್ನು ಬಿಡುಗಡೆಗೊಳಿಸಲಿದೆ ರೆನಾಲ್ಟ್‌

ಕಾರಿನ ಬೆಲೆ ಮತ್ತು ಬಿಡುಗಡೆ ಮಾಹಿತಿ

ಕಾರಿನ ಗುಣಮಟ್ಟ ಮತ್ತು ಎಂಜಿನ್ ಸಾಮರ್ಥ್ಯವನ್ನು ಪರಿಶೀಲನೆ ಮಾಡಿದಾಗ ಹೊಸ ಕಾರಿನ ಬೆಲೆಯು ರೂ.5.50 ಲಕ್ಷದಿಂದ ರೂ.8 ಲಕ್ಷ ಇರಬಹುದೆಂದು ಅಂದಾಜಿಸಲಾಗಿದ್ದು, ಹೊಸ ಕಾರುಗಳು 2019ರ ಮೊದಲ ತ್ರೈಮಾಸಿಕ ಅವಧಿಗೆ ಖರೀದಿಗೆ ಲಭ್ಯವಾಗುವ ಸಾಧ್ಯತೆಗಳಿವೆ.

7 ಸೀಟರ್ ಮಿನಿ ಎಂಪಿವಿ ಕಾರನ್ನು ಬಿಡುಗಡೆಗೊಳಿಸಲಿದೆ ರೆನಾಲ್ಟ್‌

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ

ಕ್ವಿಡ್ ಕಾರುಗಳ ಡಿಸೈನ್ ಆಧಾರಿತ ಹೊಸ ರೆನಾಲ್ಟ್ ಕಾರುಗಳು 7 ಸೀಟರ್ ವ್ಯವಸ್ಥೆಯಿಂದಾಗಿ ಮಾರುಕಟ್ಟೆಯಲ್ಲಿ ಯಶಸ್ವಿಯಾಗುವ ಸಾಧ್ಯತೆಗಳಿದ್ದು, ಉತ್ತಮ ತಾಂತ್ರಿಕ ಅಂಶಗಳೊಂದಿಗೆ ಕೈಗೆಟುವ ಬೆಲೆಗಳಲ್ಲಿ ಹೊಸ ಕಾರನ್ನು ಬಿಡುಗಡೆ ಮಾಡಿದಲ್ಲಿ ಹೊಸ ಸಂಚಲನವನ್ನೇ ಸೃಷ್ಠಿಸಬಹುದು.

Most Read Articles

Kannada
Read more on renault mpv
English summary
New Renault MPV spied testing in India for the first time.
Story first published: Friday, June 15, 2018, 11:28 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X