ಬಿಡುಗಡೆಯಾಗಲಿರುವ ರೆನಾಲ್ಟ್ ಹೊಸ ಎಂಪಿವಿ ಕಾರಿನ ಇಂಟಿರಿಯರ್ ಹೇಗಿರಲಿದೆ ಗೊತ್ತಾ?

ರೆನಾಲ್ಟ್ ಇಂಡಿಯಾ ಸಂಸ್ಥೆಯು ಮುಂಬರುವ ದಿನಗಳಲ್ಲಿ ತನ್ನ ಹೊಚ್ಚ ಹೊಸ ಮಿನಿ ಎಂಪಿವಿ(ಮಲ್ಟಿ ಪರ್ಪಸ್ ವೆಹಿಕಲ್) ಕಾರು ಮಾದರಿಯನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿದ್ದು, ಆರ್‍‌ಬಿಸಿ ಕೋಡ್‌ ಆಧಾರದ ಮೇಲೆ ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ದೇಶದ ವಿವಿಧಡ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದೆ.

ಬಿಡುಗಡೆಯಾಗಲಿರುವ ರೆನಾಲ್ಟ್ ಹೊಸ ಎಂಪಿವಿ ಕಾರಿನ ಇಂಟಿರಿಯರ್ ಹೇಗಿರಲಿದೆ ಗೊತ್ತಾ?

ಮಧ್ಯಮ ಗಾತ್ರದ ಹಲವು ಕಾರು ಮಾದರಿಗಳನ್ನು ಬಿಡುಗಡೆಗೊಳಿಸಿ ಯಶಸ್ವಿಯಾಗಿರುವ ರೆನಾಲ್ಟ್ ಸಂಸ್ಥೆಯು ಲೊಡ್ಜಿ ಎಂಪಿವಿ ಕಾರುಗಳ ಮಾರಾಟದಲ್ಲಿ ತುಸು ಹಿನ್ನೆಡೆ ಅನುಭವಿಸಿದೆ ಅಂದ್ರೆ ತಪ್ಪಾಗುವುದಿಲ್ಲ. ಇದೇ ಕಾರಣಕ್ಕಾಗಿ ಕಾರು ಮಾರಾಟದಲ್ಲಿ ಭಾರೀ ಬದಲಾವಣೆಗೆ ನಿರ್ಧರಿಸಿರುವ ರೆನಾಲ್ಟ್ ಈ ಬಾರಿ ಹೊಸ ಯೋಜನೆಗೆ ಕೈಹಾಕಿದೆ.

ಬಿಡುಗಡೆಯಾಗಲಿರುವ ರೆನಾಲ್ಟ್ ಹೊಸ ಎಂಪಿವಿ ಕಾರಿನ ಇಂಟಿರಿಯರ್ ಹೇಗಿರಲಿದೆ ಗೊತ್ತಾ?

ಹೊಸ ಕಾರು ಉತ್ಪನ್ನದೊಂದಿಗೆ ಮತ್ತೊಮ್ಮೆ ಅದೃಷ್ಟದ ಪರೀಕ್ಷೆಗೆ ಇಳಿದಿರುವ ರೆನಾಲ್ಟ್ ಸಂಸ್ಥೆಯು ವಿನೂತನ ಶೈಲಿಯ 7 ಸೀಟರ್ ಮಾದರಿಯ ಮಿನಿ ಎಂಪಿವಿ ಕಾರು ಮಾದರಿಯೊಂದನ್ನು ಬಿಡುಗಡೆ ಮಾಡುವ ಇರಾದೆಯಲ್ಲಿದೆ.

ಬಿಡುಗಡೆಯಾಗಲಿರುವ ರೆನಾಲ್ಟ್ ಹೊಸ ಎಂಪಿವಿ ಕಾರಿನ ಇಂಟಿರಿಯರ್ ಹೇಗಿರಲಿದೆ ಗೊತ್ತಾ?

ರೆನಾಲ್ಟ್ ಇಂಡಿಯಾ ಸಂಸ್ಥೆಯು ಭಾರತದಲ್ಲಿ ತನ್ನ ಹೊಸ ಎಂಪಿವಿ ಕಾರುನ್ನು ಸದ್ಯಕ್ಕೆ ಆರ್‌ಬಿಸಿ ಎನ್ನುವ ಕೋಡ್ ಆಧಾರ ಮೇಲೆ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದು, ಹೊಸ ಕಾರಿನ ತಾಂತ್ರಿಕ ಅಂಶಗಳ ಬಗೆಗೆ ಕೆಲವು ಮಹತ್ವದ ಮಾಹಿತಿಗಳು ಲಭ್ಯವಾಗಿವೆ.

ಬಿಡುಗಡೆಯಾಗಲಿರುವ ರೆನಾಲ್ಟ್ ಹೊಸ ಎಂಪಿವಿ ಕಾರಿನ ಇಂಟಿರಿಯರ್ ಹೇಗಿರಲಿದೆ ಗೊತ್ತಾ?

ರೆನಾಲ್ಟ್ ಹೊಸ ಮಿನಿ ಎಂಪಿವಿ ಕಾರು ಕ್ವಿಡ್‌ ಕಾರಿನ ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಆಧರಿಸಿ ಸಿದ್ದಗೊಂಡಿದ್ದು, ಕ್ವಿಡ್ ಕಾರಿಗಿಂತಲೂ ತುಸು ದೊಡ್ಡದಾಗಿದೆ. ಆದ್ರೆ ಲೊಡ್ಜಿ ಕಾರಿಗಿಂತಲೂ ಗಾತ್ರದಲ್ಲಿ ಚಿಕ್ಕದಾಗಿದ್ದರೂ ಉತ್ತಮ ತಾಂತ್ರಿಕ ಅಂಶಗಳೊಂದಿಗೆ ಮಾರುಕಟ್ಟೆ ಪ್ರವೇಶ ಪಡೆಯುವ ನೀರಿಕ್ಷೆಯಲ್ಲಿದೆ.

ಬಿಡುಗಡೆಯಾಗಲಿರುವ ರೆನಾಲ್ಟ್ ಹೊಸ ಎಂಪಿವಿ ಕಾರಿನ ಇಂಟಿರಿಯರ್ ಹೇಗಿರಲಿದೆ ಗೊತ್ತಾ?

ಈಗಾಗಲೇ ತಮಿಳುನಾಡಿನ ಪ್ರಮುಖ ಕಡೆಗಳಲ್ಲಿ ರೆನಾಲ್ಟ್ ಹೊಸ ಎಂಪಿವಿ ಕಾರು ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದು, ರೆನಾಲ್ಟ್ ಸಂಸ್ಥೆಯ ಸಿಎಂಎಫ್ ಎ ಪ್ಲಸ್ ಕಾರು ಉತ್ಪಾದನಾ ಪ್ಯಾರ್ಟ್‌ಫಾರ್ಮ್ ಅಡಿಯಲ್ಲಿ ಈ ಹೊಸ ಕಾರನ್ನು ಅಭಿವೃದ್ಧಿ ಮಾಡಲಾಗಿದೆಯೆಂತೆ.

ಬಿಡುಗಡೆಯಾಗಲಿರುವ ರೆನಾಲ್ಟ್ ಹೊಸ ಎಂಪಿವಿ ಕಾರಿನ ಇಂಟಿರಿಯರ್ ಹೇಗಿರಲಿದೆ ಗೊತ್ತಾ?

ಎಂಪಿವಿ ಮಾದರಿಗಳಲ್ಲೇ ಸಣ್ಣ ಗಾತ್ರದ ಕಾರು ಆವೃತ್ತಿಯಾಗಿರುವ ರೆನಾಲ್ಟ್ ಹೊಸ ಕಾರು ಬೆಲೆ ಮತ್ತು ಎಂಜಿನ್ ಗಾತ್ರದಲ್ಲೂ ತುಸು ಬದಲಾವಣೆಯೊಂದಿಗೆ ಗ್ರಾಹಕರನ್ನು ಸೆಳೆಯುವ ವಿಶ್ವಾಸದಲ್ಲಿದ್ದು, ಲೊಡ್ಜಿ ಕಾರುಗಳ ಮಾರಾಟದಲ್ಲಿ ಆದ ಹಿನ್ನಡೆಯನ್ನು ಈ ಕಾರಿನ ಮೂಲಕ ಗ್ರಾಹಕರ ಬೇಡಿಕೆಯನ್ನು ಕಾಯ್ದುಕೊಳ್ಳಲು ಇದು ನೆರವಾಗಲಿದೆ.

ಬಿಡುಗಡೆಯಾಗಲಿರುವ ರೆನಾಲ್ಟ್ ಹೊಸ ಎಂಪಿವಿ ಕಾರಿನ ಇಂಟಿರಿಯರ್ ಹೇಗಿರಲಿದೆ ಗೊತ್ತಾ?

ಲಭ್ಯವಾಗಿರುವ ಮಾಹಿತಿಗಳ ಪ್ರಕಾರ, 7 ಸೀಟರ್ ಸೌಲಭ್ಯವನ್ನು ಹೊಂದಿರುವ ರೆನಾಲ್ಟ್ ಹೊಸ ಎಂಪಿವಿ ಕಾರು ಗುಣಮಟ್ಟ ತಾಂತ್ರಿಕ ಅಂಶಗಳನ್ನು ಪಡೆದುಕೊಂಡಿದ್ದು, ಡ್ಯುಯಲ್ ಟೋನ್ ಡ್ಯಾಶ್‌ಬೋರ್ಡ್, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಎಲ್‌ಇಡಿ ಡಿಆರ್‌ಎಸ್, ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಮತ್ತು ಪುಶ್ ಬಟನ್ ಸ್ಟಾರ್ಟ್ ಸೌಲಭ್ಯಗಳು ಇದರಲ್ಲಿವೆ.

ಬಿಡುಗಡೆಯಾಗಲಿರುವ ರೆನಾಲ್ಟ್ ಹೊಸ ಎಂಪಿವಿ ಕಾರಿನ ಇಂಟಿರಿಯರ್ ಹೇಗಿರಲಿದೆ ಗೊತ್ತಾ?

ಎಂಜಿನ್ ಸಾಮರ್ಥ್ಯ

ಹೊಸ ಕಾರುಗಳಲ್ಲಿ 1.2-ಲೀಟರ್ ಪೆಟ್ರೋಲ್ ಅಥವಾ 1.5-ಲೀಟರ್ ಡೀಸೆಲ್ ಎಂಜಿನ್ ಒದಗಿಸುವ ಸಾಧ್ಯತೆಗಳಿದ್ದು, ಇದು ಪರ್ಫಾಮೆನ್ಸ್ ಜೊತೆಗೆ ಉತ್ತಮ ಇಂಧನ ದಕ್ಷತೆ ಕಾಯ್ದುಕೊಳ್ಳವು ನೆರವಾಗಲಿದೆ ಎನ್ನಬಹುದು.

MOST READ: ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಮರಾಜೊ ಹೊಸ ಎಂಪಿವಿ

ಬಿಡುಗಡೆಯಾಗಲಿರುವ ರೆನಾಲ್ಟ್ ಹೊಸ ಎಂಪಿವಿ ಕಾರಿನ ಇಂಟಿರಿಯರ್ ಹೇಗಿರಲಿದೆ ಗೊತ್ತಾ?

ಕಾರಿನ ಬೆಲೆ ಮತ್ತು ಬಿಡುಗಡೆ ಮಾಹಿತಿ ಕಾರಿನ ಗುಣಮಟ್ಟ ಮತ್ತು ಎಂಜಿನ್ ಸಾಮರ್ಥ್ಯವನ್ನು ನೋಡಿದಾಗ ಹೊಸ ಕಾರಿನ ಬೆಲೆಯು ರೂ. 7 ಲಕ್ಷದಿಂದ ರೂ. 11 ಲಕ್ಷ ಇರಬಹುದೆಂದು ಅಂದಾಜಿಸಲಾಗಿದ್ದು, ಹೊಸ ಕಾರುಗಳು 2019ರ ಮೊದಲ ತ್ರೈಮಾಸಿಕ ಅವಧಿಗೆ ಖರೀದಿಗೆ ಲಭ್ಯವಾಗುವ ಸಾಧ್ಯತೆಗಳಿವೆ.

ಬಿಡುಗಡೆಯಾಗಲಿರುವ ರೆನಾಲ್ಟ್ ಹೊಸ ಎಂಪಿವಿ ಕಾರಿನ ಇಂಟಿರಿಯರ್ ಹೇಗಿರಲಿದೆ ಗೊತ್ತಾ?

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ

ಕ್ವಿಡ್ ಕಾರುಗಳ ಡಿಸೈನ್ ಆಧಾರಿತ ಹೊಸ ರೆನಾಲ್ಟ್ ಕಾರುಗಳು 7 ಸೀಟರ್ ವ್ಯವಸ್ಥೆಯಿಂದಾಗಿ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಗಳಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿ ಇಷ್ಟೇ ಪ್ರಮಾಣದ ತಾಂತ್ರಿಕ ಅಂಶಗಳನ್ನು ಹೊಂದಿರುವ ಮಾರುತಿ ಸುಜುಕಿ ಎರ್ಟಿಗಾ ಮತ್ತು ಮಹೀಂದ್ರಾ ಮರಾಜೋ ಕಾರುಗಳಿಗೆ ಇದು ಉತ್ತಮ ಪೈಪೋಟಿ ನೀಡಬಲ್ಲದು.

Source: Teambhp

Article Published On: Friday, December 28, 2018, 11:05 [IST]
English summary
Renault Kwid MPV’s (RBC) Interiors Seem To Feature Quite A Lot. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+