ಭಾರತದಲ್ಲಿ ದಿನಂಪ್ರತಿ ಅಪಘಾತಗಳಲ್ಲಿ ಬಲಿಯಾಗುತ್ತಿರುವ ಜೀವಗಳ ಸಂಖ್ಯೆ ಎಷ್ಟು ಗೊತ್ತಾ?

ದೇಶದಲ್ಲಿ ದಿನಂಪ್ರತಿ ಹತ್ತಾರು ಭೀಕರ ಅಪಘಾತಗಳು ನಡೆಯುತ್ತಲೇ ಇರುತ್ತವೆ. ಆದ್ರೆ ಬಹುತೇಕ ವಾಹನಗಳಲ್ಲಿ ಸುರಕ್ಷಾ ಸೌಲಭ್ಯಗಳು ಇಲ್ಲದ ಹಿನ್ನೆಲೆಯಲ್ಲಿ ಅಪಘಾತದ ತೀವ್ರತೆ ಹೆಚ್ಚುತ್ತಿದ್ದು, ವಾಹನ ಚಾಲನೆ ವೇಳೆ ಮಾಡುವ ಸಣ್ಣಪುಟ್ಟ ಚಾಲನಾ ದೋಷಗಳೇ ದುರಂತಗಳಿಗೆ ಪ್ರಮುಖ ಕಾರಣವಾಗುತ್ತಿವೆ.

ಭಾರತದಲ್ಲಿ ದಿನಂಪ್ರತಿ ಅಪಘಾತಗಳಲ್ಲಿ ಬಲಿಯಾಗುತ್ತಿರುವ ಜೀವಗಳ ಸಂಖ್ಯೆ ಎಷ್ಟು ಗೊತ್ತಾ?

ರಸ್ತೆ ಅಪಘಾತಗಳನ್ನು ತಗ್ಗಿಸುವ ಉದ್ದೇಶದಿಂದ ದೇಶದಲ್ಲಿ ಹಲವಾರು ಕಠಿಣ ಕ್ರಮಗಳನ್ನು ಜಾರಿಗೆ ಮಾಡುತ್ತಿದ್ದರೂ ಸಹ ಅಪಘಾತದಲ್ಲಿ ಸಾವನ್ನಪ್ಪುವವರ ಸಂಖ್ಯೆ ಮಾತ್ರ ಹೆಚ್ಚುತ್ತಲೇ ಇದ್ದು, ವಿಶ್ವ ಆರೋಗ್ಯ ಸಂಸ್ಥೆಯು ಭಾರತದಲ್ಲಿ ನಡೆಸಿದ ಸಮೀಕ್ಷೆಯೊಂದು ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.

ಭಾರತದಲ್ಲಿ ದಿನಂಪ್ರತಿ ಅಪಘಾತಗಳಲ್ಲಿ ಬಲಿಯಾಗುತ್ತಿರುವ ಜೀವಗಳ ಸಂಖ್ಯೆ ಎಷ್ಟು ಗೊತ್ತಾ?

ಡಬ್ಲ್ಯು‌ಹೆಚ್ಓ ನಡೆಸಿದ ಸರ್ವೇ ಪ್ರಕಾರ, ಭಾರತದಲ್ಲಿ ಸಾವನ್ನಪ್ಪುವ ಪ್ರತಿ ಒಂಬತ್ತು ಜನರಲ್ಲಿ 1 ಜೀವ ಅಪಘಾತದಲ್ಲಿ ಬಲಿಯಾಗುತ್ತಿರುವ ಬಗ್ಗೆ ಆತಂಕಕಾರಿ ಸುದ್ದಿಯನ್ನು ಹೊರಹಾಕಿದ್ದು, ಕೇಂದ್ರ ಸಾರಿಗೆ ಇಲಾಖೆಗೆ ಹೊಸ ಸಮೀಕ್ಷೆಯ ವರದಿ ಸಲ್ಲಿಸಿದೆ.

ಭಾರತದಲ್ಲಿ ದಿನಂಪ್ರತಿ ಅಪಘಾತಗಳಲ್ಲಿ ಬಲಿಯಾಗುತ್ತಿರುವ ಜೀವಗಳ ಸಂಖ್ಯೆ ಎಷ್ಟು ಗೊತ್ತಾ?

ಭಾರತ ಸೇರಿದಂತೆ ವಿಶ್ವದ ಎಲ್ಲಾ ರಾಷ್ಟ್ರಗಳಲ್ಲೂ ಅಪಘಾತದಿಂದ ಸಾವನ್ನಪ್ಪುವವರ ಕುರಿತಾಗಿ ಸಮೀಕ್ಷೆ ನಡೆಸಿದ ಡಬ್ಲ್ಯು‌ಹೆಚ್ಓ ಸಂಸ್ಥೆಯು ಭಾರತದಲ್ಲಿ ಹೆಚ್ಚುತ್ತಿರುವ ಅಪಘಾತ ಸಂಖ್ಯೆಯ ಹಿಂದಿನ ಕರಾಳ ಸತ್ಯವನ್ನನ್ನು ಸಹ ಇದೇ ಸಂದರ್ಭದಲ್ಲಿ ಹೊರಹಾಕಿದೆ.

ಭಾರತದಲ್ಲಿ ದಿನಂಪ್ರತಿ ಅಪಘಾತಗಳಲ್ಲಿ ಬಲಿಯಾಗುತ್ತಿರುವ ಜೀವಗಳ ಸಂಖ್ಯೆ ಎಷ್ಟು ಗೊತ್ತಾ?

ದಿನಂಪ್ರತಿ ಸಾವನ್ನಪ್ಪುವರರ ಸಂಖ್ಯೆ 410...

ಹೌದು, ಸಮೀಕ್ಷೆಯ ಪ್ರಕಾರ 2017ರಲ್ಲಿ ದೇಶಾದ್ಯಂತ ಒಟ್ಟು 1.50 ಲಕ್ಷ ಜನ ಅಪಘಾತದಲ್ಲಿ ತಮ್ಮ ಪ್ರಾಣ ಕಳೆದುಕೊಂಡಿದ್ದು, ದಿನಂಪ್ರತಿ ಮರಣ ಹೊಂದುವವರ ಸಂಖ್ಯೆ 410 ಅಂದ್ರೆ ನಾವೇಲ್ಲಾ ನಂಬಲೇಬೇಕಾದ ಕರಾಳ ಸತ್ಯ.

ಭಾರತದಲ್ಲಿ ದಿನಂಪ್ರತಿ ಅಪಘಾತಗಳಲ್ಲಿ ಬಲಿಯಾಗುತ್ತಿರುವ ಜೀವಗಳ ಸಂಖ್ಯೆ ಎಷ್ಟು ಗೊತ್ತಾ?

ಯುವಕರೇ ಎಚ್ಚರ..!

ಡಬ್ಲ್ಯು‌ಹೆಚ್‌ಓ ಹೊರಹಾಕಿರುವ ವರದಿಯಲ್ಲಿ ಯುವಕ ಸಮುದಾಯ ಬಗ್ಗೆ ಆಘಾತಕಾರಿ ಮಾಹಿತಿಯೊಂದನ್ನು ಹಂಚಿಕೊಂಡಿದ್ದು, ಸಾವನ್ನಪ್ಪಿರುವ 1.50 ಲಕ್ಷ ಜನರಲ್ಲಿ ಬಹುತೇಕರು 5 ವರ್ಷದಿಂದ 29 ವರ್ಷದೊಳಗಿನ ಯುವ ಸಮುದಾಯವೇ ಆಗಿರುವುದನ್ನು ವರದಿಯಲ್ಲಿ ಉಲ್ಲೇಖಿಸಿದೆ.

ಭಾರತದಲ್ಲಿ ದಿನಂಪ್ರತಿ ಅಪಘಾತಗಳಲ್ಲಿ ಬಲಿಯಾಗುತ್ತಿರುವ ಜೀವಗಳ ಸಂಖ್ಯೆ ಎಷ್ಟು ಗೊತ್ತಾ?

ಇದಲ್ಲದೇ ಭಾರತದಲ್ಲಿ ಸದ್ಯ ಮಾರಾಟವಾಗುತ್ತಿರುವ 20ಕ್ಕೂ ಹೆಚ್ಚು ಕಾರುಗಳಲ್ಲಿ ಕನಿಷ್ಠ ಮಟ್ಟದ ಸುರಕ್ಷಾ ಸೌಲಭ್ಯಗಳಿಲ್ಲದಿರುವುದು ವಾಹನ ಸವಾರರಿಗೆ ಮಾರಕವಾಗಿ ಪರಿಣಮಿಸಿದ್ದು, ಅಪಘಾತದ ವೇಳೆ ಸುರಕ್ಷಾ ಸಾಧನಗಳು ಇಲ್ಲದಿರುವುದರಿಂದ ಸಾವುಗಳ ಸಂಖ್ಯೆ ಹೆಚ್ಚಳವಾಗುತ್ತಿದೆ ಎನ್ನುವುದು ಕಟು ಸತ್ಯ.

ಭಾರತದಲ್ಲಿ ದಿನಂಪ್ರತಿ ಅಪಘಾತಗಳಲ್ಲಿ ಬಲಿಯಾಗುತ್ತಿರುವ ಜೀವಗಳ ಸಂಖ್ಯೆ ಎಷ್ಟು ಗೊತ್ತಾ?

ಹೀಗಾಗಿ 2019ರಿಂದ ನಿರ್ದಿಷ್ಟ ಮಟ್ಟದ ಸುರಕ್ಷಾ ಸಾಧನಗಳನ್ನು ಹೊಂದಿರುವ ವಾಹನಗಳ ಮಾರಾಟಕ್ಕೆ ಬ್ರೇಕ್ ಹಾಕಲು ನಿರ್ಧರಿಸಿರುವ ಕೇಂದ್ರ ಸಾರಿಗೆ ಇಲಾಖೆಯು ಗ್ಲೋಬಲ್ ಎನ್‌ಸಿಎಪಿ ಸುರಕ್ಷತಾ ಪರೀಕ್ಷೆಯ ಮೂಲಕ ಕಾರುಗಳ ನಿರ್ಮಾಣದ ಶೈಲಿಯಲ್ಲಿ ಬಹುದೊಡ್ಡ ಬದಲಾವಣೆ ತರುವ ಯೋಜನೆ ಹೊಂದಿದೆ.

MOST READ: ಇನ್ಮುಂದೆ ಬೇರೆಯವರ ಕೈಗೆ ನಿಮ್ಮ ವಾಹನಗಳನ್ನು ನೀಡುವುದಕ್ಕೂ ಮುನ್ನ ಹತ್ತು ಬಾರಿ ಯೋಚಿಸಿ..!

ಭಾರತದಲ್ಲಿ ದಿನಂಪ್ರತಿ ಅಪಘಾತಗಳಲ್ಲಿ ಬಲಿಯಾಗುತ್ತಿರುವ ಜೀವಗಳ ಸಂಖ್ಯೆ ಎಷ್ಟು ಗೊತ್ತಾ?

#SAFERCARSFORINDIA ಅಭಿಯಾನದಡಿ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಕಾರು ಮಾದರಿಗಳ ಸುರಕ್ಷೆ ಕುರಿತಂತೆ ಕ್ರ್ಯಾಶ್ ಟೆಸ್ಟಿಂಗ್‌ಗಳನ್ನು ಹಮ್ಮಿಕೊಂಡಿರುವ ಗ್ಲೋಬಲ್ ಎನ್‌ಸಿಎಪಿ ಸಂಸ್ಥೆಯು ಜನಪ್ರಿಯ ಸಂಸ್ಥೆಯ ಕಾರುಗಳ ಅಸಲಿಯತ್ತು ಬಯಲು ಮಾಡುತ್ತಿದೆ.

ಭಾರತದಲ್ಲಿ ದಿನಂಪ್ರತಿ ಅಪಘಾತಗಳಲ್ಲಿ ಬಲಿಯಾಗುತ್ತಿರುವ ಜೀವಗಳ ಸಂಖ್ಯೆ ಎಷ್ಟು ಗೊತ್ತಾ?

ಒಂದು ವೇಳೆ ಕಾರುಗಳು ಗಿಟ್ಟಿಸಿಕೊಳ್ಳುವ ಅಂಕಗಳ ಆಧಾರ ಮೇಲೆ ಅವುಗಳ ಮಾರಾಟಕ್ಕೆ ಅನುಮತಿ ನಿರ್ಧರಿಸಲಿರುವ ಕೇಂದ್ರ ಸಾರಿಗೆ ಇಲಾಖೆಯು ಒಟ್ಟು 5 ಸ್ಟಾರ್ ರೇಟಿಂಗ್‌ನಲ್ಲಿ ಕನಿಷ್ಠ 3 ಸ್ಟಾರ್‌ಗಿಂತ ಕಡಿಮೆ ರೇಟಿಂಗ್ ಹೊಂದಿರುವ ವಾಹನಗಳಿಗೆ ಬ್ರೇಕ್ ಹಾಕಲಿದೆ.

MOST READ: ಅಯ್ಯೋ ದೇವರೇ.. ಜಿಪಿಎಸ್ ನಂಬಿಕೊಂಡು ಹೋದ್ರೆ ಹೀಗಾ ಆಗೋದು..!

ಭಾರತದಲ್ಲಿ ದಿನಂಪ್ರತಿ ಅಪಘಾತಗಳಲ್ಲಿ ಬಲಿಯಾಗುತ್ತಿರುವ ಜೀವಗಳ ಸಂಖ್ಯೆ ಎಷ್ಟು ಗೊತ್ತಾ?

ಇತ್ತ ಅಪಘಾತದಲ್ಲಿ ಸಾವನ್ನಪ್ಪಿದ ಮತ್ತು ಗಂಭೀರವಾಗಿ ಗಾಯಗೊಂಡ ಸಂತ್ರಸ್ತರಿಗೆ ಇದುವರೆಗೆ ಒದಗಿಸಲಾಗುತ್ತಿದ್ದ ಪರಿಹಾರದ ಮೊತ್ತವನ್ನು ಹತ್ತು ಪಟ್ಟು ಹೆಚ್ಚಳ ಮಾಡಿರುವ ಕೇಂದ್ರ ಸರ್ಕಾರವು, ಪರಿಹಾರದ ಮೊತ್ತವನ್ನು ಪಡೆಯುವಲ್ಲಿ ಇದುವರೆಗೆ ಇದ್ದ ಕೆಲವು ನಿಯಮಗಳನ್ನು ಸಡಿಸಲಾಗಿರುವುದು ಮತ್ತೊಂದು ಪ್ರಮುಖ ವಿಚಾರ.

ಭಾರತದಲ್ಲಿ ದಿನಂಪ್ರತಿ ಅಪಘಾತಗಳಲ್ಲಿ ಬಲಿಯಾಗುತ್ತಿರುವ ಜೀವಗಳ ಸಂಖ್ಯೆ ಎಷ್ಟು ಗೊತ್ತಾ?

ಸದ್ಯ ಅಪಘಾತದಲ್ಲಿ ಮೃತಪಟ್ಟ ವಾಹನ ಮಾಲೀಕನ ಕುಟುಂಬಕ್ಕೆ ಕೇಂದ್ರ ಸರ್ಕಾರವು ರೂ.1 ಲಕ್ಷ ಪರಿಹಾರ ನೀಡುತ್ತಿದ್ದು, ಅಪಘಾತಗಳಲ್ಲಿ ಗಂಭೀರ ಪ್ರಮಾಣದಲ್ಲಿ ಗಾಯಗೊಂಡ ಸಂತ್ರಸ್ತರಿಗೆ ರೂ.50 ಸಾವಿರ ಪರಿಹಾರ ಒದಗಿಸುತ್ತಿದೆ.

ಭಾರತದಲ್ಲಿ ದಿನಂಪ್ರತಿ ಅಪಘಾತಗಳಲ್ಲಿ ಬಲಿಯಾಗುತ್ತಿರುವ ಜೀವಗಳ ಸಂಖ್ಯೆ ಎಷ್ಟು ಗೊತ್ತಾ?

ಆದ್ರೆ ಕೆಲವು ಅಪಘಾತ ಪ್ರಕರಣಗಳಲ್ಲಿ ಮೃತರ ಕುಟುಂಬಗಳಿಗೆ ಒದಗಿಸಲಾಗುವ ರೂ. 1 ಲಕ್ಷ ಮತ್ತು ಗಾಯಾಳುಗಳಿಗೆ ಒದಗಿಸಲಾಗುವ ರೂ. 50 ಸಾವಿರ ಪರಿಹಾರ ಯಾವುದಕ್ಕೂ ಸಾಲದು. ಕಾರಣ, ಮೃತ ವ್ಯಕ್ತಿಯನ್ನು ನಂಬಿಕೊಂಡ ಕುಟುಂಬಸ್ಥರ ಪಾಡು ಹೇಳತಿರದು.

MOST READ: ಭಾರತದಲ್ಲಿ ಓಮ್ನಿ ಮಾರಾಟಕ್ಕೆ ಬ್ರೇಕ್ ಹಾಕಲು ನಿರ್ಧರಿಸಿದ ಮಾರುತಿ..!

ಭಾರತದಲ್ಲಿ ದಿನಂಪ್ರತಿ ಅಪಘಾತಗಳಲ್ಲಿ ಬಲಿಯಾಗುತ್ತಿರುವ ಜೀವಗಳ ಸಂಖ್ಯೆ ಎಷ್ಟು ಗೊತ್ತಾ?

ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರವು ಪರಿಹಾರ ಮೊತ್ತವನ್ನು ರೂ. 1 ಲಕ್ಷದಿಂದ ರೂ. 15 ಲಕ್ಷಕ್ಕೆ ಹೆಚ್ಚಿಸಿದ್ದು, ಗಾಯಾಳುಗಳಿಗೆ ರೂ.50 ಸಾವಿರದಿಂದ 5 ಲಕ್ಷ ಪರಿಹಾರ ಒದಗಿಸುವ ಸುತ್ತೋಲೆಗೆ ಸಹಿ ಹಾಕಿದೆ. ಜೊತೆಗೆ ಹೊಸ ನಿಯಮವು ಈ ಕೂಡಲೇ ಜಾರಿಗೆ ಬರುವಂತೆ ನಿರ್ದೇಶನ ನೀಡಲಾಗಿದೆ.

ಭಾರತದಲ್ಲಿ ದಿನಂಪ್ರತಿ ಅಪಘಾತಗಳಲ್ಲಿ ಬಲಿಯಾಗುತ್ತಿರುವ ಜೀವಗಳ ಸಂಖ್ಯೆ ಎಷ್ಟು ಗೊತ್ತಾ?

ಕೇಂದ್ರ ಸರ್ಕಾರ ಹೊಸ ನಿಯಮದಂತೆ ಅಪಘಾತದಲ್ಲಿ ಮೃತಪಟ್ಟ ಪ್ರತಿಯೊಬ್ಬರು ರೂ. 5 ಲಕ್ಷ ಪರಿಹಾರಕ್ಕೆ ಅರ್ಹರಾಗಿದ್ದು, ಕೆಲವು ಅಪಘಾತ ಪ್ರಕರಣಗಳಲ್ಲಿ ಸಂತ್ರಸ್ತರ ಕುಟುಂಬಗಳು ಇನ್ನು ಹೆಚ್ಚಿನ ಪರಿಹಾರ ಕೋರಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.

ಭಾರತದಲ್ಲಿ ದಿನಂಪ್ರತಿ ಅಪಘಾತಗಳಲ್ಲಿ ಬಲಿಯಾಗುತ್ತಿರುವ ಜೀವಗಳ ಸಂಖ್ಯೆ ಎಷ್ಟು ಗೊತ್ತಾ?

ಒಟ್ಟಿನಲ್ಲಿ ಕೇಂದ್ರ ಸರ್ಕಾರವು ಅಪಘಾತದಲ್ಲಿ ಮೃತ ಪಟ್ಟ ವ್ಯಕ್ತಿ ಕುಟುಂಬಕ್ಕೆ ಮತ್ತು ಗಂಭೀರವಾಗಿ ಗಾಯಗೊಂಡ ಸಂತ್ರಸ್ತರ ಕುಟುಂಬಗಳಿಗೆ ಆರ್ಥಿಕವಾಗಿ ಧೈರ್ಯ ತುಂಬುವ ಪ್ರಯತ್ನ ಮಾಡಿದ್ದು, ಅಷ್ಟೇ ಪ್ರಮಾಣದಲ್ಲಿ ಅಪಘಾತಗಳ ಸಂಖ್ಯೆಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಹಲವು ಕಠಿಣ ರಸ್ತೆ ನಿಯಮಗಳನ್ನು ಜಾರಿಗೆ ತರುತ್ತಿದೆ ಎನ್ನಬಹುದು.

Most Read Articles

Kannada
Read more on ಅಪಘಾತ accident
English summary
Road Accident Survey Of India By WHO Reveals An Annual Death Rate Of 1.5 Lakh People. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X