ಬಿಡದಿಯಲ್ಲಿರುವ ಟೊಯೊಟಾ ಘಟಕದ ವಿಸ್ತರಣೆಗಾಗಿ 7 ಸಾವಿರ ಕೋಟಿ ಹೂಡಿಕೆ ಮಾಡಿದ ಸುಜುಕಿ

By Praveen Sannamani

ಜಪಾನ್ ಮೂಲದ ವಾಹನ ಉತ್ಪಾದನಾ ದಿಗ್ಗಜರಾದ ಸುಜುಕಿ ಮೋಟಾರ್ಸ್ ಮತ್ತು ಟೊಯೊಟಾ ಮೋಟಾರ್ಸ್ ಹೊಸ ಕಾರುಗಳ ಉತ್ಪಾದನೆಗಾಗಿ ಕೈಜೋಡಿಸಿದ್ದು, ಸಹಭಾಗಿತ್ವ ಆಧಾರದ ಮೇಲೆ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹೊಸ ಉತ್ಪನ್ನಗಳನ್ನು ತಯಾರಿಸಲು ಬೃಹತ್ ಬಂಡವಾಳ ಹೂಡಿಕೆ ಮಾಡಿವೆ.

ಬಿಡದಿಯಲ್ಲಿರುವ ಟೊಯೊಟಾ ಘಟಕದ ವಿಸ್ತರಣೆಗಾಗಿ 7 ಸಾವಿರ ಕೋಟಿ ಹೂಡಿಕೆ ಮಾಡಿದ ಸುಜುಕಿ

ಕಳೆದ ವರ್ಷ ಫೆಬ್ರುವರಿಯಲ್ಲಿಯೇ ಟೊಯೊಟಾ ಮತ್ತು ಸುಜುಕಿ ಮೋಟಾರ್ಸ್ ಜಂಟಿಯಾಗಿ ಕಾರು ಉತ್ಪಾದಿಸುವ ಬಗ್ಗೆ ಮಾತುಕತೆ ನಡೆಸಿದ್ದವು. ಆದ್ರೆ ಕಾರಣಾಂತರಗಳಿಂದ ಹೊಸ ಯೋಜನೆ ಬಗ್ಗೆ ತಟಸ್ಥವಾಗಿದ್ದ ಎರಡು ಸಂಸ್ಥೆಗಳು ಇದೀಗ ಮಹತ್ವದ ನಿರ್ಣಯಕ್ಕೆ ಬಂದಿದ್ದು, ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗಾಗಿ ಹೊಸ ಒಪ್ಪಂದ ಮಾಡಿಕೊಂಡಿವೆ.

ಬಿಡದಿಯಲ್ಲಿರುವ ಟೊಯೊಟಾ ಘಟಕದ ವಿಸ್ತರಣೆಗಾಗಿ 7 ಸಾವಿರ ಕೋಟಿ ಹೂಡಿಕೆ ಮಾಡಿದ ಸುಜುಕಿ

ಹೊಸ ಒಪ್ಪಂದದ ಪ್ರಕಾರ ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಮಾಡುವುದಷ್ಟೇ ಅಲ್ಲದೇ ಕಾರುಗಳ ಮಾರಾಟಕ್ಕೂ ಪರಸ್ಪರ ಸಹಾಯ ಮಾಡುವ ಮಹತ್ವದ ಕಾರ್ಯಯೋಜನೆಗೂ ಟೊಯೊಟಾ ಮತ್ತು ಸುಜುಕಿ ಸಂಸ್ಥೆಗಳು ಒಪ್ಪಿಗೆ ಸೂಚಿವೆ.

ಬಿಡದಿಯಲ್ಲಿರುವ ಟೊಯೊಟಾ ಘಟಕದ ವಿಸ್ತರಣೆಗಾಗಿ 7 ಸಾವಿರ ಕೋಟಿ ಹೂಡಿಕೆ ಮಾಡಿದ ಸುಜುಕಿ

ಹೀಗಾಗಿ ಸುಜುಕಿ ಡೀಲರ್ಸ್‌ಗಳಲ್ಲಿ ಟೊಯೊಟಾ ಉತ್ಪನ್ನಗಳು ಮತ್ತು ಟೊಯೊಟಾ ಡೀಲರ್ಸ್‌ಗಳಲ್ಲಿ ಸುಜುಕಿ ಕಾರು ಉತ್ಪನ್ನಗಳು ದೊರೆಯಲಿದ್ದು, ಇದು ಕಾರು ಮಾರಾಟ ಜಾಲವನ್ನು ವಿಸ್ತರಿಸುವ ಉದ್ದೇಶದಿಂದ ಇಂತದೊಂದು ಒಪ್ಪಂದ ಮಾಡಿಕೊಂಡಿವೆ.

ಬಿಡದಿಯಲ್ಲಿರುವ ಟೊಯೊಟಾ ಘಟಕದ ವಿಸ್ತರಣೆಗಾಗಿ 7 ಸಾವಿರ ಕೋಟಿ ಹೂಡಿಕೆ ಮಾಡಿದ ಸುಜುಕಿ

ಮತ್ತಷ್ಟು ವಿಸ್ತರಣೆಯಾಗಲಿದೆ ಬಿಡದಿ ಕಾರು ಉತ್ಪಾದನಾ ಘಕಟ..!

ಸದ್ಯ ಭಾರತದಲ್ಲಿ ಮೂರು ಕಾರು ಉತ್ಪಾದನಾ ಘಟಕಗಳನ್ನ ಹೊಂದಿರುವ ಸುಜುಕಿ ಸಂಸ್ಥೆಯು ಹರಿಯಾಣದಲ್ಲಿ ಎರಡು ಮತ್ತು ಗುಜರಾತ್‌ನಲ್ಲಿ ಒಂದು ಉತ್ಪಾದನಾ ಘಟಕವನ್ನ ಹೊಂದಿದೆ. ಹೀಗಾಗಿ ದಕ್ಷಿಣ ಭಾರತದಲ್ಲಿ ಯಾವುದೇ ಉತ್ಪಾದನಾ ಘಟಕ ಇಲ್ಲದಿರುವುದು ಸುಜುಕಿ ಸಂಸ್ಥೆಗೆ ಕಾರುಗಳ ಸರಬರಾಜು ಒಂದು ಸವಾಲಿನ ವಿಚಾರವೇ ಸರಿ.

ಬಿಡದಿಯಲ್ಲಿರುವ ಟೊಯೊಟಾ ಘಟಕದ ವಿಸ್ತರಣೆಗಾಗಿ 7 ಸಾವಿರ ಕೋಟಿ ಹೂಡಿಕೆ ಮಾಡಿದ ಸುಜುಕಿ

ಹೀಗಿರುವಾಗ ಬೆಂಗಳೂರ ಬಳಿ ಇರುವ ಬಿಡದಿಯಲ್ಲಿ ನೆಲೆಗೊಂಡಿರುವ ಟೊಯೊಟಾ ಸಂಸ್ಥೆಯ ಕಾರು ಉತ್ಪಾದನಾ ಘಟಕದಿಂದ ಸುಜುಕಿ ಸಂಸ್ಥೆಯು ತನ್ನ ಜನಪ್ರಿಯ ಕಾರುಗಳಾದ ವಿಟಾರಾ ಬ್ರೆಝಾ ಮತ್ತು ಬಲೆನೊ ಕಾರುಗಳನ್ನು ಇಲ್ಲಿಯೇ ಉತ್ಪಾದನೆ ಮಾಡುವ ಮೂಲಕ ದಕ್ಷಿಣ ಭಾರತದಲ್ಲಿನ ಡೀಲರ್ಸ್‌ಗಳಿಗೆ ಸರಬರಾಜು ಮಾಡಲಿದೆ.

ಬಿಡದಿಯಲ್ಲಿರುವ ಟೊಯೊಟಾ ಘಟಕದ ವಿಸ್ತರಣೆಗಾಗಿ 7 ಸಾವಿರ ಕೋಟಿ ಹೂಡಿಕೆ ಮಾಡಿದ ಸುಜುಕಿ

ಇದಕ್ಕೆ ಸುಜುಕಿ ಮತ್ತು ಟೊಯೊಟಾ ಸಂಸ್ಥೆಗಳು ಪರಸ್ಪರ ಒಪ್ಪಿಗೆ ಸೂಚಿಸಿದ್ದು, ಕಳೆದ ವಾರವಷ್ಟೇ ಬಿಡದಿಗೆ ಭೇಟಿ ನೀಡಿದ್ದ ಸುಜುಕಿ ಸಂಸ್ಥೆಯ ಹಿರಿಯ ಅಧಿಕಾರಿಗಳು ಕಾರು ಉತ್ಪಾದನೆಯ ಸಾಮರ್ಥ್ಯವನ್ನ ಹೆಚ್ಚಿಸಲು ಅಗತ್ಯ ಸೌಲಭ್ಯಗಳನ್ನ ಪೂರೈಕೆ ಮಾಡುವುದಾಗಿ ಸಮ್ಮತಿ ಸೂಚಿಸಿದೆ.

ಬಿಡದಿಯಲ್ಲಿರುವ ಟೊಯೊಟಾ ಘಟಕದ ವಿಸ್ತರಣೆಗಾಗಿ 7 ಸಾವಿರ ಕೋಟಿ ಹೂಡಿಕೆ ಮಾಡಿದ ಸುಜುಕಿ

ಜೊತೆಗೆ ಸುಜುಕಿ ಕಾರುಗಳನ್ನು ಉತ್ಪಾದನೆ ಮಾಡಲು ಪ್ರತ್ಯೇಕ ಪ್ಲ್ಯಾಟ್‌ಫಾರ್ಮ್ ಸಿದ್ದಗೊಳಿಸಲಿರುವ ಟೊಯೊಟಾ ಸಂಸ್ಥೆಯು ಸುಜುಕಿ ಸಂಸ್ಥೆಯ ಉದ್ಯೋಗಿಗಳ ಜೊತೆಗೂಡಿ ಕಾರ್ಯನಿರ್ವಹಣೆ ಮಾಡಲಿದೆ. ಇದಕ್ಕೆ ಪ್ರತಿಯಾಗಿ ಸುಜುಕಿ ಸಂಸ್ಥೆಯು ತನ್ನ ಅಧಿಕೃತ ಡೀಲರ್ಸ್‌ಗಳಲ್ಲಿ ಟೊಯಾಟೊ ಕಾರುಗಳ ಮಾರಾಟಕ್ಕೆ ಅವಕಾಶ ನೀಡಲಿದ್ದು, ಹೈಬ್ರಿಡ್ ತಂತ್ರಜ್ಞಾನ ಅಭಿವೃದ್ಧಿಗೂ ಸಹಕಾರ ನೀಡಲಿದೆ.

ಬಿಡದಿಯಲ್ಲಿರುವ ಟೊಯೊಟಾ ಘಟಕದ ವಿಸ್ತರಣೆಗಾಗಿ 7 ಸಾವಿರ ಕೋಟಿ ಹೂಡಿಕೆ ಮಾಡಿದ ಸುಜುಕಿ

ಇದಲ್ಲದೇ ಕಾರುಗಳ ಇಂಧನ ಕಾರ್ಯಕ್ಷಮತೆ ಮತ್ತು ಕಾರುಗಳ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಕಾರುಗಳ ಬಿಡಿಭಾಗಗಳನ್ನು ಸಹ ಒದಗಿಸುವ ಒಪ್ಪಂದಕ್ಕೂ ಉಭಯ ಸಂಸ್ಥೆಗಳು ಮುಂದಾಗಿದ್ದು, ಭಾರತದಲ್ಲಿ ಆರಂಭಗೊಂಡಿರುವ 'ಮೆಕ್ ಇನ್ ಇಂಡಿಯಾ' ಯೋಜನೆ ಅಡಿ ಹೊಸ ಕಾರುಗಳ ಉತ್ಪಾದನೆಯನ್ನು ಆರಂಭಿಸಲಿವೆ.

ಬಿಡದಿಯಲ್ಲಿರುವ ಟೊಯೊಟಾ ಘಟಕದ ವಿಸ್ತರಣೆಗಾಗಿ 7 ಸಾವಿರ ಕೋಟಿ ಹೂಡಿಕೆ ಮಾಡಿದ ಸುಜುಕಿ

ಈ ಮೂಲಕ 2020ರ ವೇಳೆಗೆ ಹೊಸ ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ಕಾರುಗಳನ್ನು ಸಹ ಬಿಡುಗಡೆಗೊಳಿಸುವ ಸಾಧ್ಯತೆಗಳಿದ್ದು, ಮಧ್ಯಮ ಗಾತ್ರದ ಬಜೆಟ್‌ನಲ್ಲಿ ಉತ್ತಮ ಎಲೆಕ್ಟ್ರಿಕ್ ಕಾರುಗಳನ್ನು ಅಭಿವೃದ್ಧಿಗೊಳಿಸುವ ಬಗ್ಗೆಯು ಹೊಸ ಸಂಶೋಧನೆಗಳನ್ನು ನಡೆಸಲಿದೆ.

ಬಿಡದಿಯಲ್ಲಿರುವ ಟೊಯೊಟಾ ಘಟಕದ ವಿಸ್ತರಣೆಗಾಗಿ 7 ಸಾವಿರ ಕೋಟಿ ಹೂಡಿಕೆ ಮಾಡಿದ ಸುಜುಕಿ

ಒಟ್ಟಿನಲ್ಲಿ ಕಾರು ಉತ್ಪಾದಕ ದಿಗ್ಗಜರು ಇದೀಗ ಒಂದಾಗಿದ್ದು, ಹೊಸ ಉತ್ಪನ್ನಗಳ ಮೂಲಕ ಭಾರತೀಯ ಮಾರುಕಟ್ಟೆಯಲ್ಲಿ ಮತ್ತೊಮ್ಮೆ ಸದ್ದು ಮಾಡಲಿವೆ. ಜೊತೆಗೆ ಭಾರತೀಯ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಮತ್ತಷ್ಟು ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ಕಾರುಗಳ ರಸ್ತೆಗಿಳಿಯಲಿವೆ.

Most Read Articles

Kannada
English summary
Suzuki To Invest INR 7000Cr In Toyota’s Bengaluru Plant.
Story first published: Tuesday, August 7, 2018, 12:30 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X