Just In
- 8 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 9 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 10 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 10 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
45ಎಕ್ಸ್ ಪ್ರೀಮಿಯಂ ಕಾರಿನ ಬಿಡುಗಡೆ ಮಾಹಿತಿ ಬಿಚ್ಚಿಟ್ಟ ಟಾಟಾ ಮೋಟಾರ್ಸ್
2019ರ ಜನವರಿ ಆರಂಭದಲ್ಲಿ ಹ್ಯಾರಿಯರ್ ಸಬ್ ಕಂಪ್ಯಾಕ್ಟ್ ಎಸ್ಯುವಿ ಕಾರನ್ನು ಬಿಡುಗಡೆಗೊಳಿಸಲಿರುವ ಟಾಟಾ ಮೋಟಾರ್ಸ್ ಸಂಸ್ಥೆಯು, ತದನಂತರವಷ್ಟೇ ಮತ್ತೊಂದು ಬಹುನೀರಿಕ್ಷಿತ 45ಎಕ್ಸ್ ಹೆಸರಿನ ಪ್ರೀಮಿಯಂ ಹ್ಯಾಚ್ಬ್ಯಾಕ್ ಬಿಡುಗಡೆಗೊಳಿಸುವ ಬಗ್ಗೆ ಸುಳಿವು ನೀಡಿದೆ.
ಟಾಟಾ ಮೋಟಾರ್ಸ್ ಸಂಸ್ಥೆಯು ಪ್ರೀಯಿಯಂ ಕಾರುಗಳ ವಿಭಾಗದಲ್ಲಿ ಬಹುದೊಡ್ಡ ಬದಲಾವಣೆ ತರುತ್ತಿದ್ದು, ಭಾರತೀಯ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಸದ್ಯದಲ್ಲೇ 45ಎಕ್ಸ್ ಕಾನ್ಸೆಪ್ಟ್ ಮಾದರಿಯನ್ನು ಅಭಿವೃದ್ದಿಗೊಳಿಸುವ ಯೋಜನೆ ಚಾಲನೆ ನೀಡಲಿದೆ. ಈ ಬಗ್ಗೆ ಮಾತನಾಡಿರುವ ಟಾಟಾ ಹಿರಿಯ ಅಧಿಕಾರಿಯೊಬ್ಬರು ಹೊಸ ಕಾರುನ್ನು 2019ರ 2ನೇ ತ್ರೈಮಾಸಿಕ ಅಂತ್ಯಕ್ಕೆ ಬಿಡುಗಡೆಗೊಳಿಸುವ ಯೋಜನೆ ರೂಪಿಸಿರುವುದಾಗಿ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.
ಇನ್ನು ಕಳೆದ ಫೆಬ್ರುವರಿಯಲ್ಲಿ ನಡೆದಿದ್ದ 2018ರ ಆಟೋ ಎಕ್ಸ್ ಪೋದಲ್ಲಿ ವಿನೂತನ 45ಎಕ್ಸ್ ಮಾದರಿಯನ್ನು ಪ್ರದರ್ಶನ ಮಾಡಿರುವ ಟಾಟಾ ಸಂಸ್ಥೆಯು ಪ್ರೀಮಿಯಂ ಕಾರು ಪ್ರಿಯರಲ್ಲಿ ಕುತೂಹಲ ಹುಟ್ಟುಹಾಕಿದ್ದು, ಹೊಸ ಕಾರಿನ ವಿನ್ಯಾಸಗಳು ಇಂಪ್ಯಾಕ್ಟ್ ಡಿಸೈನ್ 2.0 ಸಿದ್ದಾಂತ ಆಧರಿತ ಅಡ್ವಾನ್ಸ್ ಆಕ್ಟಿಟೆಕ್ಕರ್ ವಿನ್ಯಾಸದೊಂದಿಗೆ ಸಿದ್ದವಾಗಿವೆ.
ಮಾರುಕಟ್ಟೆಯಲ್ಲಿ ಸದ್ಯ ಮಾರಾಟವಾಗುತ್ತಿರುವ ನೆಕ್ಸಾನ್ ಎಸ್ಯುವಿ ಮಾದರಿಗಳಿಂತಲೂ ವಿಶೇಷ ಹೊರ ವಿನ್ಯಾಸಗಳನ್ನು ಪಡೆದುಕೊಂಡಿರುವ 45ಎಕ್ಸ್ ಪ್ರಿಮಿಯಂ ಹ್ಯಾಚ್ಬ್ಯಾಕ್ ಕಾರುಗಳು ಶಾರ್ಪ್ ಎಡ್ಜ್ ಮತ್ತು ಸ್ಪೋರ್ಟಿ ಲುಕ್ ಸೌಲಭ್ಯವು ಕಾರಿನ ಅಂದ ಹೆಚ್ಚಿಸಿವೆ.
ಆದ್ರೆ ಕಾರಿನ ಒಳವಿನ್ಯಾಸಗಳ ಬಗ್ಗೆ ಯಾವುದೇ ತಾಂತ್ರಿಕ ಮಾಹಿತಿಗಳನ್ನು ಬಿಟ್ಟುಕೊಡದ ಟಾಟಾ ಮೋಟಾರ್ಸ್ ಸಂಸ್ಥೆಯು, ಹೊಸ ಕಾರಿನ ಎಂಜಿನ್ ವೈಶಿಷ್ಟ್ಯತೆಗಳ ಬಗೆಗೆ ಸಂದರ್ಶನವೊಂದರಲ್ಲಿ ಕೆಲವು ಮಾಹಿತಿಗಳನ್ನು ಹಂಚಿಕೊಂಡಿದೆ.
ವರದಿಗಳ ಪ್ರಕಾರ, 45ಎಕ್ಸ್ ಕಾರು ಮಾದರಿಯಲ್ಲಿ ಪೆಟ್ರೋಲ್ ಎಂಜಿನ್ನೊಂದಿಗೆ 48ಕೆವಿ ಮೈಲ್ಡ್ ಹೈಬ್ರಿಡ್(ಎಲೆಕ್ಟ್ರಿಕ್ ಮೋಟಾರ್) ತಂತ್ರಜ್ಞಾನ ಬಳಕೆ ಮಾಡಲಾಗುತ್ತಿದೆ ಎನ್ನಲಾಗಿದ್ದು, ಇದು ಕಾರಿನ ಇಂಧನ ದಕ್ಷತೆಯನ್ನು ಹೆಚ್ಚಿಸುವಲ್ಲಿ ಸಾಕಷ್ಟು ಅನುಕೂಲಕರವಾಗಲಿದೆ.
ಹೀಗಾಗಿ ಜೋಡಣೆ ಮಾಡಲು ಉದ್ದೇಶಿಸಿರುವ 1.2-ಲೀಟರ್, ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಜೊತೆಗೆ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಅಳವಡಿಕೆ ಮಾಡಿದ್ದಲ್ಲಿ ಕಾರಿನ ಮೈಲೇಜ್ ಹೆಚ್ಚಳದ ಜೊತೆಗೆ ಇಂಗಾಲ ಹೊರಸೂಸುವಿಕೆ ಪ್ರಮಾಣವನ್ನು ಸಹ ತಗ್ಗಿಸಲು ನೆರವಾಗಲಿದೆ.
ಪ್ರಸ್ತುತ ಮಾರುಕಟ್ಟೆಯಲ್ಲಿ ಕೇವಲ ಐಷಾರಾಮಿ ಕಾರುಗಳಲ್ಲಿ ಮಾತ್ರವೇ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನವನ್ನು ಬಳಕೆ ಮಾಡಲಾಗುತ್ತಿದ್ದು, ಈ ಹೊಸ ಸೌಲಭ್ಯವಿದಲ್ಲಿ ಕಾರು ಸ್ಟಾರ್ಟ್ ಆಗುವ ಸಂದರ್ಭ ಮತ್ತು ನಿಗದಿತ ಪ್ರಮಾಣದ ದೂರದ ತನಕ ಪೆಟ್ರೋಲ್ ಎಂಜಿನ್ಗೆ ಬದಲಾಗಿ ಎಲೆಕ್ಟ್ರಿಕ್ ಮೋಟಾರ್ ಸಹಾಯದೊಂದಿಗೆ ಚಲಿಸುತ್ತೆ.
ತದನಂತರ ಆಟೋ ಮೂಡ್ ಮೂಲಕ ತನ್ನಷ್ಟೇ ತಾನೇ ಎಲೆಕ್ಟ್ರಿಕ್ ಮೋಟಾರ್ನಿಂದ ಪೆಟ್ರೋಲ್ ಎಂಜಿನ್ಗೆ ವರ್ಗಾವಣೆಗೊಳ್ಳುವ ಕಾರಿನ ಎಂಜಿನ್ ಅನವಶ್ಯಕವಾಗಿ ಇಂಧನ ವ್ಯರ್ಥವಾಗುವುದನ್ನು ತಪ್ಪಿಸುತ್ತೆ. ಈ ಮೂಲಕ ಕಾರಿನ ಮೈಲೇಜ್ ಪ್ರಮಾಣವು ಹೆಚ್ಚಾಗುವುದಲ್ಲದೇ ಮಾಲಿನ್ಯ ಪ್ರಮಾಣ ಕೂಡಾ ತಗ್ಗುವುದು.
MOST READ: ಇಂಧನಗಳ ಬೆಲೆ ಏರಿಳಿತದಲ್ಲಿ ಪ್ರಧಾನಿ ಮೋದಿ ಆಟ ಬಲ್ಲವರಾರು?
ಜೊತೆಗೆ ಹೊಸ ಕಾರಿನ ಬ್ಯಾನೆಟ್ ಹಾಗೂ ಹಿಂಭಾಗದ ವಿಂಡೋಗಳು ಕೂಡಾ ವಿಭಿನ್ನ ರಚನೆ ಹೊಂದಿದ್ದು, ಕಟರ್ ಫ್ರೀ ಡಿಸೈನ್ನೊಂದಿಗೆ ಸ್ಲಿಕ್ ಹೆಡ್ಲ್ಯಾಂಪ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಸೇರಿದಂತೆ ಎಲ್ಇಡಿ ಟೈಲ್ ಲೈಟ್ಸ್, ಫಾಗ್ ಲ್ಯಾಂಪ್ ಮತ್ತು ವಿನೂತನ ಗ್ರೀಲ್ಗಳು ಈ ಕಾರಿಗೆ ಮತ್ತಷ್ಟು ಮೆರಗು ತಂದಿವೆ.
ಬೆಲೆ (ಅಂದಾಜು)
ಮೈಲ್ಡ್ ಹೈಬ್ರಿಡ್ ಎಂಜಿನ್ ಸೌಲಭ್ಯದಿಂದಾಗಿ ಕಾರಿನ ಬೆಲೆಯು ತುಸು ದುಬಾರಿ ಎನ್ನಿಸಲಿದ್ದು, ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ.9 ಲಕ್ಷದಿಂದ ರೂ. 12 ಲಕ್ಷದ ತನಕ ಇರಬಹುದೆಂದು ಅಂದಾಜಿಸಲಾಗಿದೆ.
MOST READ: ಭಾರತದ ಐಫೆಲ್ ಟವರ್ ಖ್ಯಾತಿಯ ಸಿಗ್ನೇಚರ್ ಸೇತುವೆಯ ಸ್ಪೆಷಾಲಿಟಿ ಏನು ಗೊತ್ತಾ?
ಇದರೊಂದಿಗೆ ಟಾಟಾ ಹೊಸ ಕಾರುಗಳು ಗೇಮ್ಚೆಂಜರ್ ಮಾದರಿಯಾಗಿ ಮಾರುಕಟ್ಟೆ ಪ್ರವೇಶ ಪಡೆಯಲಿದ್ದು, ಹ್ಯುಂಡೈ ಐ20 ಮತ್ತು ಮಾರುತಿ ಸುಜುಕಿ ಬಲೆನೊ ಪ್ರಿಮಿಯಂ ಹ್ಯಾಚ್ಬ್ಯಾಕ್ ಕಾರುಗಳಿಗೆ ತ್ರೀವ ಪೈಪೋಟಿ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.