ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಟಾಟಾ ಮೋಟಾರ್ಸ್‍ನ ಹೊಸ ಪ್ರೀಮಿಯಂ ಹ್ಯಾಚ್‍ಬ್ಯಾಕ್ ಕಾರು...
ಟಾಟಾ ಮೋಟಾರ್ಸ್ ಸಂಸ್ಥೆಯು ಪ್ರಿಯಿಯಂ ಹ್ಯಾಚ್‌ಬ್ಯಾಕ್ ವಿಭಾಗದಲ್ಲಿ ಬಹುದೊಡ್ಡ ಬದಲಾವಣೆ ತರುತ್ತಿದ್ದು, ಭಾರತೀಯ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 45ಎಕ್ಸ್ ಕಾನ್ಸೆಪ್ಟ್ ಮಾದರಿಯನ್ನು ಅಭಿವೃದ್ದಿಗೊಳಿಸುವ ಯೋಜನೆಯಲಿದೆ.
ಟಾಟಾ ಮೋಟಾರ್ಸ್ ಸಂಸ್ಥೆಯು ಪ್ರಿಯಿಯಂ ಹ್ಯಾಚ್‌ಬ್ಯಾಕ್ ವಿಭಾಗದಲ್ಲಿ ಬಹುದೊಡ್ಡ ಬದಲಾವಣೆ ತರುತ್ತಿದ್ದು, ಭಾರತೀಯ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 45ಎಕ್ಸ್ ಕಾನ್ಸೆಪ್ಟ್ ಮಾದರಿಯನ್ನು ಅಭಿವೃದ್ದಿಗೊಳಿಸುವ ಯೋಜನೆಯಲಿದೆ.

2018ರ ಆಟೋ ಎಕ್ಸ್ ಪೋದಲ್ಲಿ ವಿನೂತನ 45ಎಕ್ಸ್ ಮಾದರಿಯನ್ನು ಪ್ರದರ್ಶನ ಮಾಡಿದ್ದ ಟಾಟಾ ಮೋಟಾರ್ಸ್, ಇಂಪ್ಯಾಕ್ಟ್ ಡಿಸೈನ್ 2.0 ಸಿದ್ದಾಂತ ಆಧರಿತ ಅಡ್ವಾನ್ಸ್ ಆಕ್ಟಿಟೆಕ್ಕರ್ ವಿನ್ಯಾಸಗಳನ್ನು ಹೊಸ ಕಾರಿನಲ್ಲಿ ನೀಡಲಾಗಿದ್ದು, ಇದೀಗ ಮುಂಬೈ ನಗರದಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಟಾಟಾ 45ಎಕ್ಸ್ ಕಾರು ಸಂಪೂರ್ಣವಾಗಿ ಮುಚ್ಚಿರಲಾಗಿದ್ದು, ಹೆಡ್‍ಲ್ಯಾಂಫ್ ಮತ್ತು ಟೈಲ್‍ಲೈಟ್‍ಗಳು ಮಾತ್ರ ಕಾಣಿಸಿಕೊಂಡಿವೆ. ಕಾರಿನ ರಿಯರ್ ವ್ಯೂ ಮಿರರ್‍ಗಳನ್ನು ಏ-ಪಿಲ್ಲರ್‍ನಲ್ಲಿ ಅಲ್ಲದೆ ಬಾಗಿಲುಗಳಿಗೆ ಅಳವಡಿಸಲಾಗಿದೆ. ಅಂದರೆ ಆಟೋ ಎಕ್ಸ್ ಪೋ ಮೇಳದಲ್ಲಿ ಪ್ರದರ್ಶಿಸಲ್ಪಟ್ಟ ಪರಿಕಲ್ಪನೆಯಂತೆಯೆ ಉತ್ಪಾದಿಸಲಾಗಿದೆ.

ಆದರೆ, ಕಾರಿನ ಒಳವಿನ್ಯಾಸಗಳ ಬಗ್ಗೆ ಯಾವುದೇ ತಾಂತ್ರಿಕ ಮಾಹಿತಿಗಳನ್ನು ಬಿಟ್ಟುಕೊಡದ ಟಾಟಾ ಮೋಟಾರ್ಸ್ ಸಂಸ್ಥೆಯು 1.5-ಲೀಟರ್ ಡೀಸೆಲ್ ಮತ್ತು 1.2-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯಲ್ಲಿ ಹೊಸ ಕಾರುಗಳನ್ನು ಹೊರತರುವ ಯೋಜನೆ ಹೊಂದಿದೆ.

ಟಾಟಾ 45ಎಕ್ಸ್ ಕಾರಿನ 1.2 ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ 110ಬಿಹೆಚ್‍ಪಿ ಮತ್ತು 170ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದಿದೆ. ಇನ್ನು 1.5 ಲೀಟರ್ ಡೀಸೆಲ್ ಎಂಜಿನ್ 110ಬಿಹೆಚ್‍ಪಿ ಮತ್ತು 260ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದುಕೊಂಡಿದ್ದು, ಎಂಜಿನ್‍ಗಳನ್ನು 6 ಸ್ಪೀಡ್ ಮ್ಯಾನುವಲ್ ಮತ್ತು ಎಎಮ್‍ತಿ ಗೇರ್‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

ಹೊಸ ಕಾರಿನ ವೈಶಿಷ್ಟ್ಯತೆ
ಟಾಟಾ 45ಎಕ್ಸ್ ಕಾರುಗಳಲ್ಲಿ ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ, ಕ್ಲೈಮೇಟ್ ಕಂಟ್ರೋಲ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ಸ್, ಆಟೋಮ್ಯಾಟಿಕ್ ಹೆಡ್‍ಲ್ಯಾಂಪ್, ಆಟೋಮ್ಯಾಟಿಕ್ ವೈಪರ್, ಕೂಲ್ಡ್ ಗ್ಲೋವ್ ಬಾಕ್ಸ್ ಮತ್ತು ಇನ್ನಿತರೆ ವೈಶಿಷ್ಟ್ಯತೆಗಳನ್ನು ಅಳವಡಿಸಲಾಗಿದೆ.

ಇನ್ನು ಹೊಸ ಕಾರಿನ ಬ್ಯಾನೆಟ್ ಹಾಗೂ ಹಿಂಭಾಗದ ವಿಂಡೋಗಳು ಕೂಡಾ ವಿಭಿನ್ನ ರಚನೆ ಹೊಂದಿದ್ದು, ಸ್ಲಿಕ್ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್ ಲೈಟ್ಸ್, ಫಾಗ್ ಲ್ಯಾಂಪ್ ಮತ್ತು ವಿನೂತನ ಗ್ರೀಲ್‌ಗಳು ಈ ಕಾರಿಗೆ ಮತ್ತಷ್ಟು ಮೆರಗು ತಂದಿವೆ.

ಮುಂದಿನ ವರ್ಷದಲ್ಲಿ ಬಿಡುಗಡೆಗೊಳ್ಳಲಿರುವ ಟಾಟಾ 45ಎಕ್ಸ್ ಪ್ರೀಮಿಯಂ ಹ್ಯಾಚ್‍ಬ್ಯಾಕ್ ಕಾರು ಮಾರುಕಟ್ಟೆಯಲ್ಲಿ ಹ್ಯುಂಡೈ ಎಲೈಟ್ ಐ20, ಮಾರುತಿ ಸುಜುಕಿ ಬಲೆನೊ ಮತ್ತು ಹೋಂಡಾ ಜಾಝ್ ಕಾರುಗಳಿಗೇ ತೀವ್ರ ಪೈಪೋಟಿಯನ್ನು ನೀಡಲಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವಿಭಾಗದಲ್ಲಿನ ಟಾಪ್ ಸ್ಟೋರಿಗಳು:
ಅಪಘಾತದಲ್ಲಿ ಮೃತಪಟ್ಟವರ ಪರಿಹಾರದ ಮೊತ್ತವನ್ನ 10 ಪಟ್ಟು ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ...
ಡೈಮಂಡ್ ರಿಂಗ್ ಹೊಂದಿರುವ ಈ ಬೈಕಿನ ಬೆಲೆ ಕೇಳಿದ್ರೆ ಶಾಕ್ ಆಗುತ್ತೆ..!!
ಡ್ರೈವಿಂಗ್ ಲೈಸೆನ್ಸ್ ವಿಚಾರದಲ್ಲಿ ಯುವ ಸಮುದಾಯಕ್ಕೊಂದು ಸಿಹಿ ಸುದ್ದಿ...
ವಿಡಿಯೋ- ಟೊಯೊಟಾ ಇನೋವಾ ಗುದ್ದಿದ ರಭಸಕ್ಕೆ 30 ಅಡಿ ದೂರ ಹೋಗಿ ಬಿದ್ದ ಯುವಕ...


Click it and Unblock the Notifications