Just In
- 9 hrs ago
ಕೊನೆಯ ಆಸೆಯೆಂತೆ ರಾಜಕುಮಾರ ಪ್ರಿನ್ಸ್ ಫಿಲಿಪ್ ಅಂತಿಮ ಯಾತ್ರೆಗೆ ಸಿದ್ದವಾಗಿದೆ ಮಾಡಿಫೈ ಲ್ಯಾಂಡ್ ರೋವರ್
- 10 hrs ago
ಜಪಾನ್ನಲ್ಲಿ ಬಿಡುಗಡೆಯಾಯ್ತು ಮೇಡ್ ಇನ್ ಇಂಡಿಯಾ 2021ರ ಸುಜುಕಿ ಜಿಕ್ಸರ್ 250 ಬೈಕ್
- 11 hrs ago
ಆಕರ್ಷಕ ಬೆಲೆಯಲ್ಲಿ ದೇಶದ ಮೊದಲ ಹೈಬ್ರಿಡ್ ಟ್ರ್ಯಾಕ್ಟರ್ ಬಿಡುಗಡೆ
- 11 hrs ago
ಬೆಲೆ ಏರಿಕೆ ಪಡೆದುಕೊಂಡ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್
Don't Miss!
- Sports
ಆರ್ಸಿಬಿ ಪರ ನಿರ್ಣಾಯಕ ಪಾತ್ರವಹಿಸಲು ಕಾರಣವಾದ ಅಂಶವನ್ನು ವಿವರಿಸಿದ ಗ್ಲೆನ್ ಮ್ಯಾಕ್ಸ್ವೆಲ್
- News
ಬೆಂಗಳೂರಲ್ಲಿ ರೆಮಿಡಿಸ್ವಿರ್ ಔಷಧಿ ಪೂರೈಕೆಗೆ SAST ಏಜೆನ್ಸಿ ನಿಯೋಜನೆ
- Lifestyle
ಗುರುವಾರದ ದಿನ ಭವಿಷ್ಯ: ಈ ದಿನ ಹೇಗಿದೆ ನಿಮ್ಮ ರಾಶಿಫಲ
- Finance
ಚಿನ್ನ, ಬೆಳ್ಳಿ ಸ್ವಲ್ಪ ಕುಸಿತ: ಏಪ್ರಿಲ್ 14ರಂದು ಎಲ್ಲೆಡೆ ಬೆಲೆ ಎಷ್ಟಿದೆ?
- Movies
40, 50, 60ರ ಸೀಕ್ರೆಟ್ ಬಿಚ್ಚಿಟ್ಟ ಕ್ರೇಜಿಸ್ಟಾರ್ ರವಿಚಂದ್ರನ್
- Education
SSLC Exams 2021: ಸಿಬಿಎಸ್ಇ ಪರೀಕ್ಷೆ ರದ್ದು ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಊಹಾಪೋಹ: ಸುರೇಶ್ ಕುಮಾರ್ ಸ್ಪಷ್ಟನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಡುಗಡೆಯ ಸನಿಹದಲ್ಲಿ ಟಾಟಾ ಹೊಸ ಪ್ರಿಮಿಯಂ ಹ್ಯಾಚ್‌ಬ್ಯಾಕ್
ಟಾಟಾ ಮೋಟಾರ್ಸ್ ಸಂಸ್ಥೆಯು ಪ್ರಿಯಿಯಂ ಹ್ಯಾಚ್‌ಬ್ಯಾಕ್ ವಿಭಾಗದಲ್ಲಿ ಬಹುದೊಡ್ಡ ಬದಲಾವಣೆ ತರುತ್ತಿದ್ದು, ಭಾರತೀಯ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಸದ್ಯದಲ್ಲೇ 45ಎಕ್ಸ್ ಕಾನ್ಸೆಪ್ಟ್ ಮಾದರಿಯನ್ನು ಅಭಿವೃದ್ದಿಗೊಳಿಸುವ ಯೋಜನೆ ಚಾಲನೆ ನೀಡಲಿದೆ. ಹೀಗಾಗಿ ಹೊಸ ಮಾದರಿಯ ಕಾರು 2018ರ ಕೊನೆಯಲ್ಲಿ ಇಲ್ಲವೇ 2019ರ ಮೊದಲಾರ್ಧದಲ್ಲೇ ಬಿಡುಗಡೆಗೊಳ್ಳುವ ಸಾಧ್ಯತೆಗಳಿದ್ದ, ಹೊಸ ಕಾರಿನ ತಾಂತ್ರಿಕ ಅಂಶಗಳ ಕುರಿತಾಗಿ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದೆ.

ಕಳೆದ ಫೆಬ್ರುವರಿಯಲ್ಲಿ ನಡೆದಿದ್ದ 2018ರ ಆಟೋ ಎಕ್ಸ್ ಪೋದಲ್ಲಿ ವಿನೂತನ 45ಎಕ್ಸ್ ಮಾದರಿಯನ್ನು ಪ್ರದರ್ಶನ ಮಾಡಿರುವ ಟಾಟಾ ಮೋಟಾರ್ಸ್ ಇದೀಗ ಬಿಡುಗಡೆಯ ಸುಳಿವು ನೀಡಿದ್ದು, ಹೊಸ ಕಾರಿನ ವಿನ್ಯಾಸಗಳು ಇಂಪ್ಯಾಕ್ಟ್ ಡಿಸೈನ್ 2.0 ಸಿದ್ದಾಂತ ಆಧರಿತ ಅಡ್ವಾನ್ಸ್ ಆಕ್ಟಿಟೆಕ್ಕರ್ ವಿನ್ಯಾಸದೊಂದಿಗೆ ಸಿದ್ದವಾಗಿರುವುದು ಹ್ಯಾಚ್‌ಬ್ಯಾಕ್ ಪ್ರಿಯರ ಆಕರ್ಷಣೆಗೆ ಕಾರಣವಾಗಿದೆ.

ಹೀಗಾಗಿ ಮಾರುಕಟ್ಟೆಯಲ್ಲಿ ಸದ್ಯ ಮಾರಾಟವಾಗುತ್ತಿರುವ ನೆಕ್ಸಾನ್ ಎಸ್‌ಯುವಿ ಮಾದರಿಗಳಿಂತಲೂ ವಿಶೇಷ ಹೊರ ವಿನ್ಯಾಸಗಳನ್ನು ಪಡೆದುಕೊಂಡಿರುವ 45ಎಕ್ಸ್ ಪ್ರಿಮಿಯಂ ಹ್ಯಾಚ್‌ಬ್ಯಾಕ್ ಕಾರುಗಳು ಶಾರ್ಪ್ ಎಡ್ಜ್ ಮತ್ತು ಸ್ಪೋರ್ಟಿ ಲುಕ್ ಕಾರಿನ ಹೊರ ನೋಟವನ್ನು ಮತ್ತಷ್ಟು ಹೆಚ್ಚಿಸಿವೆ.

ಆದರೇ ಕಾರಿನ ಒಳವಿನ್ಯಾಸಗಳ ಬಗ್ಗೆ ಯಾವುದೇ ತಾಂತ್ರಿಕ ಮಾಹಿತಿಗಳನ್ನು ಬಿಟ್ಟುಕೊಡದ ಟಾಟಾ ಮೋಟಾರ್ಸ್ ಸಂಸ್ಥೆಯು ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಯಲ್ಲೂ ಹೊಸ ಕಾರುಗಳನ್ನು ಹೊರತರುವ ಯೋಜನೆ ಹೊಂದಿದೆ.

ಎಂಜಿನ್ ಸಾಮರ್ಥ್ಯ
ಪೆಟ್ರೋಲ್ ಕಾರುಗಳು 1.2-ಲೀಟರ್ ಟರ್ಬೋಚಾಜ್ಡ್ ಎಂಜಿನ್ ಜೊತೆಗೆ 108-ಬಿಎಚ್‌ಪಿ, 170ಎನ್ಎಂ ಟಾರ್ಕ್ ಉತ್ಪಾದನಾ ಶಕ್ತಿಯನ್ನು ಹೊಂದಿದ್ದರೆ, 1.5-ಲೀಟರ್ ಡೀಸೆಲ್ ಎಂಜಿನ್ ಸಹ 108-ಬಿಎಚ್‌ಪಿ ಮತ್ತು 260-ಎನ್ಎಂ ಟಾರ್ಕ್ ಉತ್ಪಾದನಾ ಶಕ್ತಿಯನ್ನು ಹೊಂದಿದೆ.

ಈ ಮೂಲಕ ಹ್ಯುಂಡೈ ಐ20 ಮತ್ತು ಮಾರುತಿ ಸುಜುಕಿ ಬಲೆನೊ ಕಾರುಗಳಿಗೆ ತೀವ್ರ ಪೈಪೋಟಿ ನೀಡಲಿರುವ ಟಾಟಾ ಸಂಸ್ಥೆಯು ಕಟರ್ ಫ್ರೀ ಡಿಸೈನ್‌ಗಳ ಮೂಲಕ ಕಾರಿನ ಚಿತ್ರಣವನ್ನೇ ಬದಲಿಸಿರುವುದು ಮತ್ತೊಂದು ವಿಶೇಷ.

ಇನ್ನು ಹೊಸ ಕಾರಿನ ಬ್ಯಾನೆಟ್ ಹಾಗೂ ಹಿಂಭಾಗದ ವಿಂಡೋಗಳು ಕೂಡಾ ವಿಭಿನ್ನ ರಚನೆ ಹೊಂದಿದ್ದು, ಸ್ಲಿಕ್ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್ ಲೈಟ್ಸ್, ಫಾಗ್ ಲ್ಯಾಂಪ್ ಮತ್ತು ವಿನೂತನ ಗ್ರೀಲ್‌ಗಳು ಈ ಕಾರಿಗೆ ಮತ್ತಷ್ಟು ಮೆರಗು ತಂದಿವೆ.

ಬೆಲೆ ಮತ್ತು ಬಿಡುಗಡೆ ದಿನಾಂಕ (ಅಂದಾಜು)
ಟಾಟಾ ಸಂಸ್ಥೆಯು ಬಿಡುಗಡೆ ಮಾಡಲು ಯೋಜಿಸಿರುವ ವಿನೂತನ 45ಎಕ್ಸ್ ಕಾನ್ಸೆಪ್ಟ್ ಮಾದರಿಯು ಇದೇ ವರ್ಷದ ಕೊನೆಯಲ್ಲಿ ಇಲ್ಲವೇ 2019ರ ಆರಂಭದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಕಾರಿನ ಬೆಲೆಯು 9 ರಿಂದ 12 ಲಕ್ಷ ಬೆಲೆ ಇರಬಹುದೆಂದು ನೀರಿಕ್ಷಿಸಲಾಗಿದೆ.

ಇದರೊಂದಿಗೆ ಟಾಟಾ ಹೊಸ ಕಾರುಗಳು ಗೇಮ್‌ಚೆಂಜರ್ ಮಾದರಿಯಾಗಿ ಮಾರುಕಟ್ಟೆ ಪ್ರವೇಶ ಪಡೆಯಲಿದ್ದು, ಹ್ಯುಂಡೈ ಐ20 ಮತ್ತು ಮಾರುತಿ ಸುಜುಕಿ ಬಲೆನೊ ಪ್ರಿಮಿಯಂ ಹ್ಯಾಚ್‌ಬ್ಯಾಕ್ ಕಾರುಗಳಿಗೆ ತ್ರೀವ ಪೈಪೋಟಿ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.
Spy Image Source: TeamBHP