ಮಾರುತಿ ಬಲೆನೊ ಕಾರಿಗೆ ಪೈಪೋಟಿ ನೀಡಲು ಸಜ್ಜಾದ ಟಾಟಾ 45ಎಕ್ಸ್

2019ರ ಜನವರಿ 23ರಂದು ಹ್ಯಾರಿಯರ್ ಸಬ್ ಕಂಪ್ಯಾಕ್ಟ್ ಎಸ್‌ಯುವಿ ಕಾರನ್ನು ಬಿಡುಗಡೆಗೊಳಿಸಲಿರುವ ಟಾಟಾ ಮೋಟಾರ್ಸ್ ಸಂಸ್ಥೆಯು, ತದನಂತರವಷ್ಟೇ ಮತ್ತೊಂದು ಬಹುನೀರಿಕ್ಷಿತ 45ಎಕ್ಸ್ ಹೆಸರಿನ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಬಿಡುಗಡೆಗೊಳಿಸುವ ಬಗ್ಗೆ ಸುಳಿವು ನೀಡಿದೆ.

ಮಾರುತಿ ಬಲೆನೊ ಕಾರಿಗೆ ಪೈಪೋಟಿ ನೀಡಲು ಸಜ್ಜಾದ ಟಾಟಾ 45ಎಕ್ಸ್

ಟಾಟಾ ಮೋಟಾರ್ಸ್ ಸಂಸ್ಥೆಯು ಪ್ರೀಮಿಯಂ ಕಾರುಗಳ ವಿಭಾಗದಲ್ಲಿ ಬಹುದೊಡ್ಡ ಬದಲಾವಣೆ ತರುತ್ತಿದ್ದು, ಭಾರತೀಯ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಸದ್ಯದಲ್ಲೇ 45ಎಕ್ಸ್ ಕಾನ್ಸೆಪ್ಟ್ ಮಾದರಿಯನ್ನು ಅಭಿವೃದ್ದಿಗೊಳಿಸುವ ಯೋಜನೆ ಚಾಲನೆ ನೀಡಲಿದೆ. ಈ ಬಗ್ಗೆ ಮಾತನಾಡಿರುವ ಟಾಟಾ ಹಿರಿಯ ಅಧಿಕಾರಿಯೊಬ್ಬರು ಹೊಸ ಕಾರುನ್ನು 2019ರ 2ನೇ ತ್ರೈಮಾಸಿಕ ಅಂತ್ಯಕ್ಕೆ ಬಿಡುಗಡೆಗೊಳಿಸುವ ಯೋಜನೆ ರೂಪಿಸಿರುವುದಾಗಿ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

ಮಾರುತಿ ಬಲೆನೊ ಕಾರಿಗೆ ಪೈಪೋಟಿ ನೀಡಲು ಸಜ್ಜಾದ ಟಾಟಾ 45ಎಕ್ಸ್

ಇನ್ನು ಕಳೆದ ಫೆಬ್ರುವರಿಯಲ್ಲಿ ನಡೆದಿದ್ದ 2018ರ ಆಟೋ ಎಕ್ಸ್ ಪೋದಲ್ಲಿ ವಿನೂತನ 45ಎಕ್ಸ್ ಮಾದರಿಯನ್ನು ಪ್ರದರ್ಶನ ಮಾಡಿರುವ ಟಾಟಾ ಸಂಸ್ಥೆಯು ಪ್ರೀಮಿಯಂ ಕಾರು ಪ್ರಿಯರಲ್ಲಿ ಕುತೂಹಲ ಹುಟ್ಟುಹಾಕಿದ್ದು, ಹೊಸ ಕಾರಿನ ವಿನ್ಯಾಸಗಳು ಇಂಪ್ಯಾಕ್ಟ್ ಡಿಸೈನ್ 2.0 ಸಿದ್ದಾಂತ ಆಧರಿತ ಅಡ್ವಾನ್ಸ್ ಆಕ್ಟಿಟೆಕ್ಕರ್ ವಿನ್ಯಾಸದೊಂದಿಗೆ ಸಿದ್ದವಾಗಿದೆ.

ಮಾರುತಿ ಬಲೆನೊ ಕಾರಿಗೆ ಪೈಪೋಟಿ ನೀಡಲು ಸಜ್ಜಾದ ಟಾಟಾ 45ಎಕ್ಸ್

ಮಾರುಕಟ್ಟೆಯಲ್ಲಿ ಸದ್ಯ ಮಾರಾಟವಾಗುತ್ತಿರುವ ನೆಕ್ಸಾನ್ ಎಸ್‌ಯುವಿ ಮಾದರಿಗಳಿಂತಲೂ ವಿಶೇಷ ಹೊರ ವಿನ್ಯಾಸಗಳನ್ನು ಪಡೆದುಕೊಂಡಿರುವ 45ಎಕ್ಸ್ ಪ್ರಿಮಿಯಂ ಹ್ಯಾಚ್‌ಬ್ಯಾಕ್ ಕಾರುಗಳು ಶಾರ್ಪ್ ಎಡ್ಜ್‌ ಮತ್ತು ಸ್ಪೋರ್ಟಿ ಲುಕ್ ಸೌಲಭ್ಯವು ಕಾರಿನ ಅಂದ ಹೆಚ್ಚಿಸಿವೆ.

ಮಾರುತಿ ಬಲೆನೊ ಕಾರಿಗೆ ಪೈಪೋಟಿ ನೀಡಲು ಸಜ್ಜಾದ ಟಾಟಾ 45ಎಕ್ಸ್

ಆದ್ರೆ ಕಾರಿನ ಒಳವಿನ್ಯಾಸಗಳ ಬಗ್ಗೆ ಯಾವುದೇ ತಾಂತ್ರಿಕ ಮಾಹಿತಿಗಳನ್ನು ಬಿಟ್ಟುಕೊಡದ ಟಾಟಾ ಮೋಟಾರ್ಸ್ ಸಂಸ್ಥೆಯು, ಹೊಸ ಕಾರಿನ ಎಂಜಿನ್ ವೈಶಿಷ್ಟ್ಯತೆಗಳ ಬಗೆಗೆ ಸಂದರ್ಶನವೊಂದರಲ್ಲಿ ಕೆಲವು ಮಾಹಿತಿಗಳನ್ನು ಹಂಚಿಕೊಂಡಿದೆ.

ಮಾರುತಿ ಬಲೆನೊ ಕಾರಿಗೆ ಪೈಪೋಟಿ ನೀಡಲು ಸಜ್ಜಾದ ಟಾಟಾ 45ಎಕ್ಸ್

ವರದಿಗಳ ಪ್ರಕಾರ, 45ಎಕ್ಸ್ ಕಾರು ಮಾದರಿಯಲ್ಲಿ ಪೆಟ್ರೋಲ್ ಎಂಜಿನ್‌ನೊಂದಿಗೆ 48ಕೆವಿ ಮೈಲ್ಡ್ ಹೈಬ್ರಿಡ್(ಎಲೆಕ್ಟ್ರಿಕ್ ಮೋಟಾರ್) ತಂತ್ರಜ್ಞಾನ ಬಳಕೆ ಮಾಡಲಾಗುತ್ತಿದೆ ಎನ್ನಲಾಗಿದ್ದು, ಇದು ಕಾರಿನ ಇಂಧನ ದಕ್ಷತೆಯನ್ನು ಹೆಚ್ಚಿಸುವಲ್ಲಿ ಸಾಕಷ್ಟು ಅನುಕೂಲಕರವಾಗಲಿದೆ.

ಮಾರುತಿ ಬಲೆನೊ ಕಾರಿಗೆ ಪೈಪೋಟಿ ನೀಡಲು ಸಜ್ಜಾದ ಟಾಟಾ 45ಎಕ್ಸ್

ಹೀಗಾಗಿ ಜೋಡಣೆ ಮಾಡಲು ಉದ್ದೇಶಿಸಿರುವ 1.2-ಲೀಟರ್, ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಜೊತೆಗೆ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಅಳವಡಿಕೆ ಮಾಡಿದ್ದಲ್ಲಿ ಕಾರಿನ ಮೈಲೇಜ್ ಹೆಚ್ಚಳದ ಜೊತೆಗೆ ಇಂಗಾಲ ಹೊರಸೂಸುವಿಕೆ ಪ್ರಮಾಣವನ್ನು ಸಹ ತಗ್ಗಿಸಲು ನೆರವಾಗಲಿದೆ.

ಮಾರುತಿ ಬಲೆನೊ ಕಾರಿಗೆ ಪೈಪೋಟಿ ನೀಡಲು ಸಜ್ಜಾದ ಟಾಟಾ 45ಎಕ್ಸ್

ಪ್ರಸ್ತುತ ಮಾರುಕಟ್ಟೆಯಲ್ಲಿ ಕೇವಲ ಐಷಾರಾಮಿ ಕಾರುಗಳಲ್ಲಿ ಮಾತ್ರವೇ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನವನ್ನು ಬಳಕೆ ಮಾಡಲಾಗುತ್ತಿದ್ದು, ಈ ಹೊಸ ಸೌಲಭ್ಯವಿದಲ್ಲಿ ಕಾರು ಸ್ಟಾರ್ಟ್ ಆಗುವ ಸಂದರ್ಭ ಮತ್ತು ನಿಗದಿತ ಪ್ರಮಾಣದ ದೂರದ ತನಕ ಪೆಟ್ರೋಲ್ ಎಂಜಿನ್‌ಗೆ ಬದಲಾಗಿ ಎಲೆಕ್ಟ್ರಿಕ್ ಮೋಟಾರ್ ಸಹಾಯದೊಂದಿಗೆ ಚಲಿಸುತ್ತೆ.

ಮಾರುತಿ ಬಲೆನೊ ಕಾರಿಗೆ ಪೈಪೋಟಿ ನೀಡಲು ಸಜ್ಜಾದ ಟಾಟಾ 45ಎಕ್ಸ್

ತದನಂತರ ಆಟೋ ಮೂಡ್ ಮೂಲಕ ತನ್ನಷ್ಟೇ ತಾನೇ ಎಲೆಕ್ಟ್ರಿಕ್ ಮೋಟಾರ್‌ನಿಂದ ಪೆಟ್ರೋಲ್ ಎಂಜಿನ್‌ಗೆ ವರ್ಗಾವಣೆಗೊಳ್ಳುವ ಕಾರಿನ ಎಂಜಿನ್ ಅನವಶ್ಯಕವಾಗಿ ಇಂಧನ ವ್ಯರ್ಥವಾಗುವುದನ್ನು ತಪ್ಪಿಸುತ್ತೆ. ಈ ಮೂಲಕ ಕಾರಿನ ಮೈಲೇಜ್ ಪ್ರಮಾಣವು ಹೆಚ್ಚಾಗುವುದಲ್ಲದೇ ಮಾಲಿನ್ಯ ಪ್ರಮಾಣ ಕೂಡಾ ತಗ್ಗುವುದು.

MOST READ: ನ್ಯಾನೋ ಬರುವುದಕ್ಕೂ ಮುನ್ನ ಬಂದು ಹೋದ 'ಮೀರಾ' ಕಾರಿನ ಕಥೆ ಗೊತ್ತಾ?

ಮಾರುತಿ ಬಲೆನೊ ಕಾರಿಗೆ ಪೈಪೋಟಿ ನೀಡಲು ಸಜ್ಜಾದ ಟಾಟಾ 45ಎಕ್ಸ್

ಜೊತೆಗೆ ಹೊಸ ಕಾರಿನ ಬ್ಯಾನೆಟ್ ಹಾಗೂ ಹಿಂಭಾಗದ ವಿಂಡೋಗಳು ಕೂಡಾ ವಿಭಿನ್ನ ರಚನೆ ಹೊಂದಿದ್ದು, ಕಟರ್ ಫ್ರೀ ಡಿಸೈನ್‌ನೊಂದಿಗೆ ಸ್ಲಿಕ್ ಹೆಡ್‌ಲ್ಯಾಂಪ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಸೇರಿದಂತೆ ಎಲ್ಇಡಿ ಟೈಲ್ ಲೈಟ್ಸ್, ಫಾಗ್ ಲ್ಯಾಂಪ್ ಮತ್ತು ವಿನೂತನ ಗ್ರೀಲ್‌ಗಳು ಈ ಕಾರಿಗೆ ಮತ್ತಷ್ಟು ಮೆರಗು ತಂದಿವೆ.

ಮಾರುತಿ ಬಲೆನೊ ಕಾರಿಗೆ ಪೈಪೋಟಿ ನೀಡಲು ಸಜ್ಜಾದ ಟಾಟಾ 45ಎಕ್ಸ್

ಬೆಲೆ (ಅಂದಾಜು) ಮೈಲ್ಡ್ ಹೈಬ್ರಿಡ್ ಎಂಜಿನ್ ಸೌಲಭ್ಯದಿಂದಾಗಿ ಕಾರಿನ ಬೆಲೆಯು ತುಸು ದುಬಾರಿ ಎನ್ನಿಸಲಿದ್ದು, ದೆಹಲಿ ಎಕ್ಸ್‌‌ಶೋರೂಂ ಪ್ರಕಾರ ರೂ.9 ಲಕ್ಷದಿಂದ ರೂ. 12 ಲಕ್ಷದ ತನಕ ಇರಬಹುದೆಂದು ಅಂದಾಜಿಸಲಾಗಿದೆ.

MOST READ: ಶಾಕಿಂಗ್ ಸುದ್ದಿ- ಭಾರತದಲ್ಲಿ ಬ್ಯಾನ್ ಆಗಲಿವೆ ಈ ಒಂಬತ್ತು ಜನಪ್ರಿಯ ಕಾರುಗಳು..!

ಮಾರುತಿ ಬಲೆನೊ ಕಾರಿಗೆ ಪೈಪೋಟಿ ನೀಡಲು ಸಜ್ಜಾದ ಟಾಟಾ 45ಎಕ್ಸ್

ಇದರೊಂದಿಗೆ ಟಾಟಾ ಹೊಸ ಕಾರುಗಳು ಗೇಮ್‌ಚೆಂಜರ್ ಮಾದರಿಯಾಗಿ ಮಾರುಕಟ್ಟೆ ಪ್ರವೇಶ ಪಡೆಯಲಿದ್ದು, ಹ್ಯುಂಡೈ ಐ20 ಮತ್ತು ಮಾರುತಿ ಸುಜುಕಿ ಬಲೆನೊ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರುಗಳಿಗೆ ತ್ರೀವ ಪೈಪೋಟಿ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.

Source: Rushlane

Most Read Articles

Kannada
English summary
Tata 45X Premium Hatchback Spied Ahead Of 2019 Launch.
Story first published: Monday, December 31, 2018, 14:19 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X