ಸ್ಪಾಟ್ ಟೆಸ್ಟಿಂಗ್ ನಡೆಸಿದ ಟಾಟಾ ಮೋಟಾರ್ಸ್ ವಿನೂತನ 7 ಸೀಟರ್ ಕಾರು

ಟಾಟಾ ಮೋಟಾರ್ಸ್ ಸಂಸ್ಥೆಯು ಹೆಚ್7ಎಕ್ಸ್ ಕೋಡ್ ಆಧಾರದಲ್ಲಿ 7 ಸೀಟರ್ ಮಾದರಿಯೊಂದನ್ನು ಅಭಿವೃದ್ಧಿಗೊಳಿಸುತ್ತಿದ್ದು, ಇದೀಗ ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತಾಗಿ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದೆ.

By Praveen Sannamani

ಎಸ್‌ಯುವಿ ವಿಭಾಗಕ್ಕೆ ಮತ್ತೊಂದು ವಿನೂತನ ಕಾರು ಮಾದರಿಯನ್ನು ಪರಿಚಯಿಸಲು ಸಿದ್ದವಾಗುತ್ತಿರುವ ಟಾಟಾ ಮೋಟಾರ್ಸ್ ಸಂಸ್ಥೆಯು ಹೆಚ್7ಎಕ್ಸ್ ಕೋಡ್ ಆಧಾರದಲ್ಲಿ 7 ಸೀಟರ್ ಮಾದರಿಯೊಂದನ್ನು ಅಭಿವೃದ್ಧಿಗೊಳಿಸುತ್ತಿದ್ದು, ಇದೀಗ ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತಾಗಿ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದೆ.

ಸ್ಪಾಟ್ ಟೆಸ್ಟಿಂಗ್ ನಡೆಸಿದ ಟಾಟಾ ಮೋಟಾರ್ಸ್ ವಿನೂತನ 7 ಸೀಟರ್ ಕಾರು

ಈ ಹಿಂದೆ ಫೆಬ್ರುವರಿಯಲ್ಲಿ ನಡೆದ 2018ರ ಆಟೋ ಎಕ್ಸ್‌ಪೋದಲ್ಲಿ ಹೆಚ್5ಎಕ್ಸ್ ಹೆಸರಿನ 5 ಸೀಟರ್ ಸಾಮರ್ಥ್ಯದ ಎಸ್‌ಯುವಿಯೊಂದನ್ನು ಪ್ರದರ್ಶನ ಮಾಡಿದ್ದ ಟಾಟಾ ಸಂಸ್ಥೆಯು ಇದೀಗ ಅದೇ ಮಾದರಿಯಲ್ಲಿ ಹೆಚ್7ಎಕ್ಸ್ 7 ಸೀಟರ್ ಮಾದರಿಯನ್ನು ಸಹ ಬಿಡುಗಡೆ ಮಾಡುವ ತವಕದಲ್ಲಿದೆ.

ಸ್ಪಾಟ್ ಟೆಸ್ಟಿಂಗ್ ನಡೆಸಿದ ಟಾಟಾ ಮೋಟಾರ್ಸ್ ವಿನೂತನ 7 ಸೀಟರ್ ಕಾರು

ಹೆಚ್7ಎಕ್ಸ್ ಮಾದರಿಯು 6 ಪ್ಲಸ್ 1 ಮಾದರಿಯ ಎಸ್‌ಯುವಿಯಾಗಿದ್ದು, 2018ರ ಆಟೋ ಎಕ್ಸ್‌ಪೋ ಪ್ರದರ್ಶನವಾದ ಹೆಚ್5ಎಕ್ಸ್ ಮಾದರಿಯಲ್ಲೇ ಒಳ ಮತ್ತು ಹೊರ ವಿನ್ಯಾಸಗಳನ್ನು ಪಡೆದುಕೊಂಡಿದೆ.

ಸ್ಪಾಟ್ ಟೆಸ್ಟಿಂಗ್ ನಡೆಸಿದ ಟಾಟಾ ಮೋಟಾರ್ಸ್ ವಿನೂತನ 7 ಸೀಟರ್ ಕಾರು

ಇನ್ನು ಹೆಚ್7ಎಕ್ಸ್ ಎಸ್‍ಯುವಿ ಕಾರುಗಳು ಇಂಪ್ಯಾಕ್ಟ್ 2.0 ವಿನ್ಯಾಸ ತತ್ವಶಾಸ್ತ್ರದ ಅಡಿ ನಿರ್ಮಾಣವಾಗಿದ್ದು, ಇನ್ನು ಕಾರಿನ ಉತ್ಪಾದನಾ ಆವೃತ್ತಿಯು ಫ್ಲೇರ್ಡ್ ಆರ್ಚೆಸ್, ಮುಂಭಾಗದ ಬಂಪರ್‍‍ಗಳಿಗೆ ಟ್ರೈ ಆರೋ ಡಿಸೈನ್, ಡ್ಯುಯಲ್ ಟೋನ್ ಬಂಪರ್, ಎಲ್ಇಡಿ ಹೆಡ್‍ಲೈಟ್, ವ್ರಾಪ್ಡ್ ಅರೌಂಡ್ ಟೈಲ್ ಲೈಟ್ ಮತ್ತು ಸ್ಕಿಡ್ ಪ್ಲೇಟ್‍‍ಗಳಿಂದ ಸಜ್ಜುಗೊಂಡಿದೆ.

ಸ್ಪಾಟ್ ಟೆಸ್ಟಿಂಗ್ ನಡೆಸಿದ ಟಾಟಾ ಮೋಟಾರ್ಸ್ ವಿನೂತನ 7 ಸೀಟರ್ ಕಾರು

ಕಾರಿನ ವಿನ್ಯಾಸಗಳು

ಹೆಚ್‍7ಎಕ್ಸ್ ಎಸ್‍ಯುವಿ ಕಾರುಗಳು ಐಷಾರಾಮಿ ಒಳವಿನ್ಯಾಸದೊಂದಿಗೆ ವಿಶಾಲವಾದ ಕ್ಯಾಬಿನ್ ಸ್ಪೆಸ್ ಹೊಂದಿದ್ದು, ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲರ್, ಪ್ರೀಮಿಯಂ ಆಡಿಯೊ ಸಿಸ್ಟಂ ಹಾಗೂ ಇನ್ನು ಹಲವಾರು ವೈಶಿಷ್ಟ್ಯತೆಗಳನ್ನು ಪಡೆದುಕೊಂಡಿರಲಿದೆ.

ಸ್ಪಾಟ್ ಟೆಸ್ಟಿಂಗ್ ನಡೆಸಿದ ಟಾಟಾ ಮೋಟಾರ್ಸ್ ವಿನೂತನ 7 ಸೀಟರ್ ಕಾರು

ಟಾಟಾ ಹೆಚ್7ಎಕ್ಸ್ ಆಪ್ಟಿಮಲ್ ಮಾಡ್ಯುಲರ್ ಎಫಿಶಿಯೆಂಟ್ ಗ್ಲೋಬಲ್ ಅಡ್ವಾನ್ಸ್ಡ್ ಪ್ಲಾಟ್‍ಫಾರ್ಮ್ ಅನ್ನು ಆಧರಿಸಿದ್ದು, ಲ್ಯಾಂಡ್ ರೋವರ್ ಡಿಸ್ಕವರಿ ಕಾರಿನಲ್ಲಿಯೂ ಕೂಡ ಈ ಪ್ಲಾಟ್‍‍ಫಾರ್ಮ್ ಅನ್ನು ಕಾಣಬಹುದಾಗಿದೆ.

ಸ್ಪಾಟ್ ಟೆಸ್ಟಿಂಗ್ ನಡೆಸಿದ ಟಾಟಾ ಮೋಟಾರ್ಸ್ ವಿನೂತನ 7 ಸೀಟರ್ ಕಾರು

ಎಂಜಿನ್ ಸಾಮರ್ಥ್ಯ

ಟಾಟಾ ಹೆಚ್7ಎಕ್ಸ್ ಕಾರುಗಳು 2 ಲೀಟರ್ ಟರ್ಬೋ ಚಾರ್ಜ್ಡ್ ಡೀಸೆಲ್ ಎಂಜಿನ್ ಸಹಾಯದಿಂದ 170-ಬಿಹೆಚ್‍ಪಿ ಹಾಗೂ 350-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ಟಿಯನ್ನು ಪಡೆದಿದ್ದು, ಜೆಡ್ಎಫ್ 9 ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ನೊಂದಿಗೆ ಜೋಡಿಸಿರಬಹುದು ಎನ್ನಲಾಗಿದೆ.

ಸ್ಪಾಟ್ ಟೆಸ್ಟಿಂಗ್ ನಡೆಸಿದ ಟಾಟಾ ಮೋಟಾರ್ಸ್ ವಿನೂತನ 7 ಸೀಟರ್ ಕಾರು

ಇದಲ್ಲದೆ ಟಾಟಾ ಹೆಚ್7ಎಕ್ಸ್ ಕಾರುಗಳು ಐಷಾರಾಮಿ ಕಾರುಗಳ ಮಾದರಿಯಲ್ಲೇ ಆಲ್ ವೀಲ್ ಡ್ರೈ ಸಿಸ್ಟಂ ಮತ್ತು ವಿವಿಧ ಡ್ರೈವಿಂಗ್ ಮೋಡ್‍‍ಗಳನ್ನು ಪಡೆದಿರಲಿದ್ದು, ಆಫ್ ರೋಡಿಂಗ್‌ನಲ್ಲೂ ಸರಾಗ ಚಾಲನೆಗಾಗಿ ಆಫ್ ರೋಡ್ ಡ್ರೈವಿಂಗ್ ಮೋಡ್ ಅನ್ನು ಸಹ ಪಡೆದಿರಲಿದೆ.

ಸ್ಪಾಟ್ ಟೆಸ್ಟಿಂಗ್ ನಡೆಸಿದ ಟಾಟಾ ಮೋಟಾರ್ಸ್ ವಿನೂತನ 7 ಸೀಟರ್ ಕಾರು

ಹೀಗಾಗಿ ಪ್ರಸ್ಥುತ ಈ ಕಾರನ್ನು ಭಾರತೀಯ ರಸ್ತೆಗಳಲ್ಲಿ ಪರಿಶೀಲಿಸಲಾಗುತ್ತಿದ್ದು, ಇದೇ ಹಣಕಾಸು ವರ್ಷದ ಅವಧಿಯೊಳಗೆ ಬಿಡುಗಡೆಗೊಳಿಸಲು ಟಾಟಾ ಎದುರು ನೋಡುತ್ತಿದ್ದು, ಹೊಸ ಕಾರಿನ ಬೆಲೆಯ ಕುರಿತು ನಿಖರ ಮಾಹಿತಿ ಇಲ್ಲವಾದರೂ ಅಂದಾಜು 18 ಲಕ್ಷದಿಂದ 21 ಲಕ್ಷದ ವರೆಗೆ ಇರಲಿವೆ.

ಸ್ಪಾಟ್ ಟೆಸ್ಟಿಂಗ್ ನಡೆಸಿದ ಟಾಟಾ ಮೋಟಾರ್ಸ್ ವಿನೂತನ 7 ಸೀಟರ್ ಕಾರು

ಇದರಲ್ಲದೇ ಟಾಟಾ ಸಂಸ್ಥೆಯು ಹೆಚ್7ಎಕ್ಸ್ ಎಸ್‍ಯುವಿ ಕಾರುಗಳು ಮೂಲಕ ಗ್ರಾಹಕರಲ್ಲಿ ಹೆಚ್ಚಿನ ನಿರೀಕ್ಷೆಯನ್ನು ಹುಟ್ಟುಹಾಕುತ್ತಿದ್ದು, ಬಿಡುಗಡೆಗೊಂಡ ನಂತರ ಈ ಕಾರು ಫಾರ್ಚೂನರ್, ಎಂಡೀವರ್ ಮತ್ತು ಹೋಂಡಾ ಸಿಆರ್‌ವಿ ಕಾರುಗಳಿಗೆ ಪೈಪೋಟಿಯನ್ನು ನೀಡಲಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವಿಭಾಗದಲ್ಲಿನ ಟಾಪ್ ಸ್ಟೋರಿಗಳು:

ಇನೋವಾ ಮತ್ತು ಲಾರಿ ನಡುವೆ ಭೀಕರ ಅಪಘಾತ- 7 ಮಂದಿ ದುರ್ಮರಣ

ಮಾರುತಿ ಜಿಪ್ಸಿಗೆ ಗುಡ್ ಬೈ- ಟಾಟಾ ಸಫಾರಿ ಸ್ಟ್ರೋಮ್‌ಗೆ ಫಿದಾ ಆದ ಸೇನೆ...

ಪ್ರಯಾಣಿಕರನ್ನು ಸೆಳೆಯಲು ಹೊಸ ಆಫರ್ ಪ್ರಕಟಿಸಿದ ಓಲಾ..!!

ಹೆಲ್ಮೆಟ್ ವಿಚಾರವಾಗಿ ಮಾರಾಮಾರಿ- ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಪೊಲೀಸರು..

30 ಕೋಟಿಗೂ ಹೆಚ್ಚು ಬೆಲೆಬಾಳುವ ಈ ಐಷಾರಾಮಿ ಎಸ್‌ಯುವಿ ಕಾರಿನ ವಿಶೇಷತೆ ಏನು?

Article Published On: Monday, April 9, 2018, 17:55 [IST]
English summary
Tata H7X 7-Seater SUV Spotted Testing; Expected Launch, Price, Specs And Features.
Read more on tata motors suv
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+