ವಿದೇಶಿ ಮಾರುಕಟ್ಟೆಗಳಲ್ಲೂ ಕಮಾಲ್ ಮಾಡಲಿದೆ ಟಾಟಾ ಹ್ಯಾರಿಯರ್
ಟಾಟಾ ಮೋಟಾರ್ಸ್ ಸಂಸ್ಥೆಯು ಇದೇ ವರ್ಷಾಂತ್ಯಕ್ಕೆ ತನ್ನ ಬಹುನೀರಿಕ್ಷಿತ ಹ್ಯಾರಿಯರ್ ಕಂಪ್ಯಾಕ್ಟ್ ಎಸ್‌ಯುವಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸುತ್ತಿದ್ದು, ಇದೇ ಕಾರು ಮಾದರಿಯನ್ನ ವಿದೇಶಿ ಮಾರುಕಟ್ಟೆಗಳಲ್ಲೂ ಬಿಡುಗಡೆಗೊಳಿಸುವ ಬಗ್ಗೆ ಟಾಟಾ ಸುಳಿವು ನೀಡಿದೆ.

ಹ್ಯಾರಿಯರ್ ಹೆಸರಿನೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿರುವ ಟಾಟಾ ಹೊಸ ಕಾರು ವಿದೇಶಿ ಮಾರುಕಟ್ಟೆಗಳಿಗಾಗಿ ಮಗದೊಂದು ಹೆಸರು ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ವಿದೇಶಿ ಮಾರುಕಟ್ಟೆಗಳಲ್ಲಿ ಈಗಾಗಲೇ ಟೊಯೊಟಾ ನಿರ್ಮಾಣದ ಹ್ಯಾರಿಯರ್ ಕಾರು ಮಾದರಿಯು ಮಾರಾಟಗೊಳ್ಳುತ್ತಿದೆ. ಹೀಗಾಗಿ ವಿದೇಶಿ ಮಾರುಕಟ್ಟೆಗಳಲ್ಲಿ ಹ್ಯಾರಿಯರ್ ಹೆಸರನ್ನು ಬಳಕೆ ಮಾಡಲು ಟಾಟಾ ಸಂಸ್ಥೆಗೆ ಅನುಮತಿ ಸಿಗುವುದು ಕಷ್ಟ.

ಇದರಿಂದ ಹ್ಯಾರಿಯರ್‌ಗೆ ಬದಲಾಗಿ ಬೇರೆ ಹೆಸರಿನೊಂದಿಗೆ ಪರಿಚಯಿಸಲು ನಿರ್ಧರಿಸಲಾಗಿದ್ದು, ಭಾರತವನ್ನು ಹೊರತುಪಡಿಸಿ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಟೊಯೊಟಾ ಸಂಸ್ಥೆಯು ಹ್ಯಾರಿಯರ್ ಹೆಸರಿನ ಬಳಕೆಯ ಹಕ್ಕು ಸ್ವಾಮ್ಯತೆ ಹೊಂದಿದೆ. ಹೀಗಾಗಿ ಭಾರತದಲ್ಲಿನ ಹ್ಯಾರಿಯರ್ ವಿದೇಶಿ ಮಾರುಕಟ್ಟೆಗಳಲ್ಲಿ ಹೊಸ ಹೆಸರಿನೊಂದಿಗೆ ಮಿಂಚಲಿದೆ.

ಇನ್ನು ಇಂಪ್ಯಾಕ್ಟ್ ಡಿಸೈನ್ 2.0 ತಂತ್ರಜ್ಞಾನ ಆಧಾರದ ಮೇಲೆ ಹ್ಯಾರಿಯರ್ ಕಾರುಗಳನ್ನು ನಿರ್ಮಾಣ ಮಾಡಲಾಗಿದ್ದು, ಹೊಸ ಕಾರುಗಳಲ್ಲಿ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್ (OMEGA)" ಆರ್ಕಿಟೆಕ್ಚರ್ ಬಳಕೆ ಮಾಡಿರುವುದೇ ಹೊಸ ವಿನ್ಯಾಸಗಳು ಅದ್ಭುತವಾಗಿವೆ.

ಇದರಲ್ಲಿ ಇನ್ನೊಂದು ವಿಶೇಷ ಅಂದ್ರೆ, ದೇಶಿಯ ಮಾರುಕಟ್ಟೆಯಲ್ಲಿ ಟಾಟಾ ಜೊತೆ ಕೈಜೋಡಿಸಿರುವ ಜೆಎಲ್ಆರ್ (ಜಾಗ್ವಾರ್, ಲ್ಯಾಂಡ್ ರೋವರ್, ರೇಂಜ್ ರೋವರ್) ಕೂಡಾ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್ (OMEGA)" ಆರ್ಕಿಟೆಕ್ಚರ್ ತಂತ್ರವನ್ನೇ ಬಳಕೆ ಮಾಡುತ್ತಿದ್ದು, ಇದೇ ಕಾರಣಕ್ಕೆ ಟಾಟಾ ಕಾರುಗಳಲ್ಲೂ ಜೆಎಲ್ಆರ್ ಹೊಸ ಪ್ರಯೋಗ ಮಾಡಲಾಗಿದೆ.

ಕಾರಿನ ವೈಶಿಷ್ಟ್ಯತೆಗಳು
ಹ್ಯಾರಿಯರ್ ಕಾರುಗಳು ಸ್ಲಿಕ್ ಆ್ಯಂಗರಲ್ ಎಲ್‌ಇಡಿ ಹೆಡ್ ಲೈಟ್ಸ್‌ಗಳನ್ನು ಹೊಂದಿದ್ದು, ಇಂಪ್ಯಾಕ್ಟ್ ಡಿಸೈನ್ ಗ್ರೀಲ್‌ಗಳು ಕಾರಿನ ಲುಕ್ ಹೆಚ್ಚಿಸಿವೆ. ಜೊತೆಗೆ ಪರಿಕಲ್ಪನೆ ಮಾದರಿಯನ್ನು ಗ್ರೇ ಪೇಟಿಂಗ್ ವಿನ್ಯಾಸಗಳು ಗಮನಸೆಳೆಯುತ್ತಿದ್ದು, ದೊಡ್ಡದಾದ ಚಕ್ರಗಳು, ವಿಸ್ತರಿತ ಬೂಟ್ ಸ್ಪೆಸ್ ಬಳಕೆ ಮಾಡಲಾಗಿದೆ.

ಜೊತೆಗೆ ರೂಫ್ ಮೌಟೆಂಡ್ ಸ್ಪಾಯ್ಲರ್ ಮತ್ತು ಶಾರ್ಪ್ ಮಾದರಿಯ ರಿರ್ ವೀಂಡ್ ಸ್ಕ್ರೀನ್‌ಗಳನ್ನು ಅದ್ಭುತವಾಗಿ ಡಿಸೈನ್ ಮಾಡಲಾಗಿದೆ. ಹೀಗಾಗಿ ಸದ್ಯ ಮಾರುಕಟ್ಟೆಯಲ್ಲಿರುವ ನೆಕ್ಸಾನ್ ಆವೃತ್ತಿಗಿಂತ ಹೆಚ್ಚಿನ ಗುಣ ವಿನ್ಯಾಸ ಹೊಂದಿರುವ ಹ್ಯಾರಿಯರ್ ಕಾರುಗಳು ಎಸ್‌ಯುವಿ ಪ್ರಿಯರ ಹಾಟ್ ಫೆವರಿಟ್ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ.

ಎಂಜಿನ್ ಸಾಮರ್ಥ್ಯ
ಹ್ಯಾರಿಯರ್ ಎಸ್‌ಯುವಿ ಮಾದರಿಗಳ ಎಂಜಿನ್ ಬಗೆಗೆ ಟಾಟಾ ಯಾವುದೇ ಅಧಿಕೃತ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲವಾದರೂ ಕೆಲವು ವರದಿಗಳ ಪ್ರಕಾರ 2.0-ಲೀಟರ್ ಪೆಟ್ರೋಲ್ ಎಂಜಿನ್ ಅಥವಾ 2.0-ಲೀಟರ್ ಮಲ್ಟಿ ಜೆಟ್ ಡೀಸೆಲ್ ಎಂಜಿನ್ ಮಾದರಿಯಲ್ಲಿ ಹೊಸ ಕಾರುಗಳು ಅಭಿವೃದ್ಧಿಯಾಗಲಿವೆ.

ಕಾರಿನ ಬೆಲೆಗಳು (ಅಂದಾಜು)
ಟಾಟಾ ಹ್ಯಾರಿಯರ್ ಕಾರುಗಳು 2018ರ ಕೊನೆಯಲ್ಲಿ ಇಲ್ಲವೇ 2019ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಮಾರುಕಟ್ಟೆಗೆ ಲಗ್ಗೆಯಿಡಲಿದ್ದು, ಹೊಸ ಕಾರಿನ ಬೆಲೆಗಳು ರೂ. 12 ಲಕ್ಷದಿಂದ ರೂ. 15 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.


Click it and Unblock the Notifications