ನಮ್ಮ ಬೆಂಗಳೂರಿನಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಟಾಟಾ ಹ್ಯಾರಿಯರ್
ಟಾಟಾ ಮೋಟಾರ್ಸ್ ಸಂಸ್ಥೆಯು ಮುಂಬರುವ ದಿನಗಳಲ್ಲಿ ಹಲವು ಬಗೆಯ ಗೇಮ್ ಚೇಂಜರ್ ಕಾರುಗಳನ್ನು ಬಿಡುಗಡೆಗೊಳಿಸುತ್ತಿದ್ದು, ಇದರಲ್ಲಿ ಹ್ಯಾರಿಯರ್ ಹೆಸರಿನ ವಿನೂತನ ಎಸ್‌ಯುವಿ ಮಾದರಿಯು ಕೂಡಾ ಸಾಕಷ್ಟು ನೀರಿಕ್ಷೆ ಹುಟ್ಟುಹಾಕಿದೆ. ಸದ್ಯ ಬಿಡುಗಡೆ ಹೊಸ್ತಿನಲ್ಲಿರುವ ಹ್ಯಾರಿಯರ್ ಕಾರುಗಳು ಮೊದಲ ಬಾರಿಗೆ ನಮ್ಮ ಬೆಂಗಳೂರಿನಲ್ಲೂ ಸ್ಪಾಟ್ ಟೆಸ್ಟಿಂಗ್ ನಡೆಸಿದ್ದು ವಿಶೇಷವಾಗಿತ್ತು.

ಎಸ್‌ಯುವಿ ವಿಭಾಗಕ್ಕೆ ವಿನೂತನ ಕಾರು ಮಾದರಿಯನ್ನು ಪರಿಚಯಿಸಲು ಸಿದ್ದವಾಗುತ್ತಿರುವ ಟಾಟಾ ಮೋಟಾರ್ಸ್ ಸಂಸ್ಥೆಯು ತನ್ನ ಬಹುನೀರಿಕ್ಷಿತ ಕಾರನ್ನು ಹಲವು ಸುತ್ತಿನ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದು, ಕಳೆದ ವಾರವಷ್ಟೇ ಕಾರಿನ ಅಧಿಕೃತ ಹೆಸರನ್ನು ಬಹಿರಂಗ ಪಡಿಸಿರುವುದಲ್ಲದೇ ಇದೀಗಿ ಕಾರಿನಲ್ಲಿ ಒದಗಿಸಲಾಗಿರುವ ಗುಣಮಟ್ಟದ ತಾಂತ್ರಿಕ ಸೌಲಭ್ಯಗಳು ಎಸ್‌ಯುವಿ ಕಾರು ಪ್ರಿಯರ ಆಕರ್ಷಣೆಗೆ ಕಾರಣವಾಗಿವೆ.

ಕಾರಿನ ಎಂಜಿನ್ ವೈಶಿಷ್ಟ್ಯತೆ, ಕಾರಿನ ವಿನ್ಯಾಸಗಳ ಆಧಾರದ ಮೇಲೆ ಟಾಟಾ ಹೊಸ ಕಾರಿಗೆ ಹ್ಯಾರಿಯರ್ ಎಂದು ನಾಮಕರಣ ಮಾಡಲಾಗಿದ್ದು, ಹೆಸರಿಗೆ ತಕ್ಕಂತೆ ಹೊಸ ಕಾರುಗಳಲ್ಲಿ ವಿಶ್ವದರ್ಜೆಯ ಸೌಲಭ್ಯಗಳನ್ನ ಒದಗಿಸುವ ಬಗ್ಗೆ ಟಾಟಾ ಸುಳಿವು ನೀಡಿದೆ.

ನಿನ್ನೆಯಷ್ಟೇ ಬೆಂಗಳೂರಿನ ಪ್ರಮುಖ ಕಡೆಗಳಲ್ಲಿ ಎಂಜಿನ್ ಕಾರ್ಯಕ್ಷಮತೆ ಕುರಿತು ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿರುವಾಗ ಹೊಸ ಹ್ಯಾರಿಯರ್ ಕಾರುಗಳು ಅಲಾಯ್ ಚಕ್ರಗಳ ಜೊತೆಗೆ ಗುಣಮಟ್ಟದ ಬ್ರಿಡ್ಜ್ ಸ್ಟೋನ್ ಟೈರ್ ಮಾದರಿಯನ್ನ ಪಡೆದುಕೊಂಡಿರುವುದು ಕಂಡುಬಂದಿದೆ.

ಇನ್ನು ಇಂಪ್ಯಾಕ್ಟ್ ಡಿಸೈನ್ 2.0 ತಂತ್ರಜ್ಞಾನ ಆಧಾರದ ಮೇಲೆ ಹ್ಯಾರಿಯರ್ ಕಾರುಗಳನ್ನು ನಿರ್ಮಾಣ ಮಾಡಲಾಗಿದ್ದು, ಹೊಸ ಕಾರುಗಳಲ್ಲಿ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್ (OMEGA)" ಆರ್ಕಿಟೆಕ್ಚರ್ ಬಳಕೆ ಮಾಡಿರುವುದೇ ಹೊಸ ವಿನ್ಯಾಸಗಳು ಅದ್ಭುತವಾಗಿವೆ.

ಇದರಲ್ಲಿ ಇನ್ನೊಂದು ವಿಶೇಷ ಅಂದ್ರೆ, ದೇಶಿಯ ಮಾರುಕಟ್ಟೆಯಲ್ಲಿ ಟಾಟಾ ಜೊತೆ ಕೈಜೋಡಿಸಿರುವ ಜೆಎಲ್ಆರ್ (ಜಾಗ್ವಾರ್, ಲ್ಯಾಂಡ್ ರೋವರ್, ರೇಂಜ್ ರೋವರ್) ಕೂಡಾ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್ (OMEGA)" ಆರ್ಕಿಟೆಕ್ಚರ್ ತಂತ್ರವನ್ನೇ ಬಳಕೆ ಮಾಡುತ್ತಿದ್ದು, ಇದೇ ಕಾರಣಕ್ಕೆ ಟಾಟಾ ಕಾರುಗಳಲ್ಲೂ ಜೆಎಲ್ಆರ್ ಹೊಸ ಪ್ರಯೋಗ ಮಾಡಲಾಗಿದೆ.

ಕಾರಿನ ವೈಶಿಷ್ಟ್ಯತೆಗಳು
ಹ್ಯಾರಿಯರ್ ಕಾರುಗಳು ಸ್ಲಿಕ್ ಆ್ಯಂಗರಲ್ ಎಲ್‌ಇಡಿ ಹೆಡ್ ಲೈಟ್ಸ್‌ಗಳನ್ನು ಹೊಂದಿದ್ದು, ಇಂಪ್ಯಾಕ್ಟ್ ಡಿಸೈನ್ ಗ್ರೀಲ್‌ಗಳು ಕಾರಿನ ಲುಕ್ ಹೆಚ್ಚಿಸಿವೆ. ಜೊತೆಗೆ ಪರಿಕಲ್ಪನೆ ಮಾದರಿಯನ್ನು ಗ್ರೇ ಪೇಟಿಂಗ್ ವಿನ್ಯಾಸಗಳು ಗಮನಸೆಳೆಯುತ್ತಿದ್ದು, ದೊಡ್ಡದಾದ ಚಕ್ರಗಳು, ವಿಸ್ತರಿತ ಬೂಟ್ ಸ್ಪೆಸ್ ಬಳಕೆ ಮಾಡಲಾಗಿದೆ.

ಜೊತೆಗೆ ರೂಫ್ ಮೌಟೆಂಡ್ ಸ್ಪಾಯ್ಲರ್ ಮತ್ತು ಶಾರ್ಪ್ ಮಾದರಿಯ ರಿರ್ ವೀಂಡ್ ಸ್ಕ್ರೀನ್‌ಗಳನ್ನು ಅದ್ಭುತವಾಗಿ ಡಿಸೈನ್ ಮಾಡಲಾಗಿದೆ. ಹೀಗಾಗಿ ಸದ್ಯ ಮಾರುಕಟ್ಟೆಯಲ್ಲಿರುವ ನೆಕ್ಸಾನ್ ಆವೃತ್ತಿಗಿಂತ ಹೆಚ್ಚಿನ ಗುಣ ವಿನ್ಯಾಸ ಹೊಂದಿರುವ ಹ್ಯಾರಿಯರ್ ಕಾರುಗಳು ಎಸ್‌ಯುವಿ ಪ್ರಿಯರ ಹಾಟ್ ಫೆವರಿಟ್ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ.

ಎಂಜಿನ್ ಸಾಮರ್ಥ್ಯ
ಹ್ಯಾರಿಯರ್ ಎಸ್‌ಯುವಿ ಮಾದರಿಗಳ ಎಂಜಿನ್ ಬಗೆಗೆ ಟಾಟಾ ಯಾವುದೇ ಅಧಿಕೃತ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲವಾದರೂ ಕೆಲವು ವರದಿಗಳ ಪ್ರಕಾರ 2.0-ಲೀಟರ್ ಪೆಟ್ರೋಲ್ ಎಂಜಿನ್ ಅಥವಾ 2.0-ಲೀಟರ್ ಮಲ್ಟಿ ಜೆಟ್ ಡೀಸೆಲ್ ಎಂಜಿನ್ ಮಾದರಿಯಲ್ಲಿ ಹೊಸ ಕಾರುಗಳು ಅಭಿವೃದ್ಧಿಯಾಗಲಿವೆ.

ಕಾರಿನ ಬೆಲೆಗಳು (ಅಂದಾಜು)
ಟಾಟಾ ಹ್ಯಾರಿಯರ್ ಕಾರುಗಳು 2018ರ ಕೊನೆಯಲ್ಲಿ ಇಲ್ಲವೇ 2019ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಮಾರುಕಟ್ಟೆಗೆ ಲಗ್ಗೆಯಿಡಲಿದ್ದು, ಹೊಸ ಕಾರಿನ ಬೆಲೆಗಳು ರೂ. 12 ಲಕ್ಷದಿಂದ ರೂ. 15 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.


Click it and Unblock the Notifications








