ರಾಕೆಟ್ ಎಂಜಿನ್ ಪ್ರೇರಣೆಯೊಂದಿಗೆ ಅಭಿವೃದ್ಧಿಗೊಂಡಿದೆ ಟಾಟಾ ಹೊಸ ಹ್ಯಾರಿಯರ್ ಕಾರು

ಟಾಟಾ ಮೋಟಾರ್ಸ್ ಸಂಸ್ಥೆಯು ಇದೇ ವರ್ಷ ದೀಪಾವಳಿ ಹೊತ್ತಿಗೆ ಹಲವು ಗೇಮ್ ಚೇಂಜರ್ ಕಾರುಗಳನ್ನು ಬಿಡುಗಡೆಗೊಳಿಸುತ್ತಿದ್ದು, ಇದರಲ್ಲಿ ಹ್ಯಾರಿಯರ್ ಹೆಸರಿನ ವಿನೂತನ ಎಸ್‌ಯುವಿ ಮಾದರಿಯು ಕೂಡಾ ಸಾಕಷ್ಟು ನೀರಿಕ್ಷೆ ಹುಟ್ಟುಹಾಕಿದೆ. ಸದ್ಯ ಬಿಡುಗಡೆ ಹೊಸ್ತಿನಲ್ಲಿರುವ ಹ್ಯಾರಿಯರ್ ಕಾರುಗಳು ಸ್ಪಾಟ್ ಟೆಸ್ಟಿಂಗ್ ನಡೆಸಿದ್ದು, ರಾಕೆಟ್ ಎಂಜಿನ್ ಪ್ರೇರಣೆಯೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡುವುದು ಖಚಿತವಾಗಿದೆ.

ರಾಕೆಟ್ ಎಂಜಿನ್ ಪ್ರೇರಣೆಯೊಂದಿಗೆ ಅಭಿವೃದ್ಧಿಗೊಂಡಿದೆ ಟಾಟಾ ಹೊಸ ಹ್ಯಾರಿಯರ್ ಕಾರು

ಎಸ್‌ಯುವಿ ವಿಭಾಗಕ್ಕೆ ವಿನೂತನ ಕಾರು ಮಾದರಿಯನ್ನು ಪರಿಚಯಿಸಲು ಸಿದ್ದವಾಗುತ್ತಿರುವ ಟಾಟಾ ಮೋಟಾರ್ಸ್ ಸಂಸ್ಥೆಯು ತನ್ನ ಬಹುನೀರಿಕ್ಷಿತ ಕಾರನ್ನು ಹಲವು ಸುತ್ತಿನ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದು, ಕಾರಿನ ಅಧಿಕೃತ ಹೆಸರು ಬಹಿರಂಗಗೊಂಡ ನಂತರ ಕಾರಿನಲ್ಲಿ ಒದಗಿಸಲಾಗಿರುವ ಗುಣಮಟ್ಟದ ತಾಂತ್ರಿಕ ಸೌಲಭ್ಯಗಳು ಇದೀಗ ಎಸ್‌ಯುವಿ ಕಾರು ಪ್ರಿಯರ ಆಕರ್ಷಣೆಗೆ ಕಾರಣವಾಗಿವೆ.

ರಾಕೆಟ್ ಎಂಜಿನ್ ಪ್ರೇರಣೆಯೊಂದಿಗೆ ಅಭಿವೃದ್ಧಿಗೊಂಡಿದೆ ಟಾಟಾ ಹೊಸ ಹ್ಯಾರಿಯರ್ ಕಾರು

ಕಾರಿನ ಎಂಜಿನ್ ವೈಶಿಷ್ಟ್ಯತೆ, ಕಾರಿನ ವಿನ್ಯಾಸಗಳ ಆಧಾರದ ಮೇಲೆ ಟಾಟಾ ಹೊಸ ಕಾರಿಗೆ ಹ್ಯಾರಿಯರ್ ಎಂದು ನಾಮಕರಣ ಮಾಡಲಾಗಿದ್ದು, ಹೆಸರಿಗೆ ತಕ್ಕಂತೆ ಹೊಸ ಕಾರುಗಳಲ್ಲಿ ವಿಶ್ವದರ್ಜೆಯ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಟಾಟಾ ಸುಳಿವು ನೀಡಿದೆ.

ರಾಕೆಟ್ ಎಂಜಿನ್ ಪ್ರೇರಣೆಯೊಂದಿಗೆ ಅಭಿವೃದ್ಧಿಗೊಂಡಿದೆ ಟಾಟಾ ಹೊಸ ಹ್ಯಾರಿಯರ್ ಕಾರು

ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ಕಡೆಗಳಲ್ಲಿ ಕಳೆದ 2 ತಿಂಗಳಿನಿಂದ ವಿವಿಧ ಹಂತದ ಎಂಜಿನ್ ಕಾರ್ಯಕ್ಷಮತೆ ಕುರಿತು ಸ್ಪಾಟ್‌ ಟೆಸ್ಟಿಂಗ್ ನಡೆಸುತ್ತಿರುವಾಗ ಹೊಸ ಹ್ಯಾರಿಯರ್ ಕಾರುಗಳು ಅಲಾಯ್ ಚಕ್ರಗಳ ಜೊತೆಗೆ ಗುಣಮಟ್ಟದ ಬ್ರಿಡ್ಜ್ ಸ್ಟೋನ್ ಟೈರ್ ಮಾದರಿಯನ್ನ ಪಡೆದುಕೊಂಡಿರುವುದು ಕಂಡುಬಂದಿದೆ.

ರಾಕೆಟ್ ಎಂಜಿನ್ ಪ್ರೇರಣೆಯೊಂದಿಗೆ ಅಭಿವೃದ್ಧಿಗೊಂಡಿದೆ ಟಾಟಾ ಹೊಸ ಹ್ಯಾರಿಯರ್ ಕಾರು

ಇಂಪ್ಯಾಕ್ಟ್ ಡಿಸೈನ್ 2.0 ತಂತ್ರಜ್ಞಾನ ಆಧಾರದ ಮೇಲೆ ಹ್ಯಾರಿಯರ್ ಕಾರುಗಳನ್ನು ನಿರ್ಮಾಣ ಮಾಡಲಾಗಿದ್ದು, ಹೊಸ ಕಾರುಗಳಲ್ಲಿ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್ (OMEGA)" ಆರ್ಕಿಟೆಕ್ಚರ್ ಬಳಕೆಯಿಂದಾಗಿ ಹೊಸ ವಿನ್ಯಾಸಗಳು ಅದ್ಭುತವಾಗಿವೆ.

ರಾಕೆಟ್ ಎಂಜಿನ್ ಪ್ರೇರಣೆಯೊಂದಿಗೆ ಅಭಿವೃದ್ಧಿಗೊಂಡಿದೆ ಟಾಟಾ ಹೊಸ ಹ್ಯಾರಿಯರ್ ಕಾರು

ಇದರಲ್ಲಿ ಇನ್ನೊಂದು ವಿಶೇಷ ಅಂದ್ರೆ, ದೇಶಿಯ ಮಾರುಕಟ್ಟೆಯಲ್ಲಿ ಟಾಟಾ ಜೊತೆ ಕೈಜೋಡಿಸಿರುವ ಜೆಎಲ್ಆರ್ (ಜಾಗ್ವಾರ್, ಲ್ಯಾಂಡ್ ರೋವರ್, ರೇಂಜ್ ರೋವರ್) ಕೂಡಾ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್ (OMEGA)" ಆರ್ಕಿಟೆಕ್ಚರ್ ತಂತ್ರವನ್ನೇ ಬಳಕೆ ಮಾಡುತ್ತಿದ್ದು, ಇದೇ ಕಾರಣಕ್ಕೆ ಟಾಟಾ ಕಾರುಗಳಲ್ಲೂ ಜೆಎಲ್ಆರ್ ಹೊಸ ಪ್ರಯೋಗ ಮಾಡಲಾಗಿದೆ.

ರಾಕೆಟ್ ಎಂಜಿನ್ ಪ್ರೇರಣೆಯೊಂದಿಗೆ ಅಭಿವೃದ್ಧಿಗೊಂಡಿದೆ ಟಾಟಾ ಹೊಸ ಹ್ಯಾರಿಯರ್ ಕಾರು

ಕಾರಿನ ವೈಶಿಷ್ಟ್ಯತೆಗಳು ಹ್ಯಾರಿಯರ್ ಕಾರುಗಳು ಸ್ಲಿಕ್ ಆ್ಯಂಗರಲ್ ಎಲ್‌ಇಡಿ ಹೆಡ್ ಲೈಟ್ಸ್‌ಗಳನ್ನು ಹೊಂದಿದ್ದು, ಇಂಪ್ಯಾಕ್ಟ್ ಡಿಸೈನ್ ಗ್ರೀಲ್‌ಗಳು ಕಾರಿನ ಲುಕ್ ಹೆಚ್ಚಿಸಿವೆ. ಜೊತೆಗೆ ಪರಿಕಲ್ಪನೆ ಮಾದರಿಯನ್ನು ಗ್ರೇ ಪೇಟಿಂಗ್ ವಿನ್ಯಾಸಗಳು ಗಮನಸೆಳೆಯುತ್ತಿದ್ದು, ದೊಡ್ಡದಾದ ಚಕ್ರಗಳು, ವಿಸ್ತರಿತ ಬೂಟ್ ಸ್ಪೆಸ್ ಬಳಕೆ ಮಾಡಲಾಗಿದೆ.

MOST READ: ಬಹುನೀರಿಕ್ಷಿತ ಹೊಚ್ಚ ಹೊಸ ಹ್ಯುಂಡೈ ಸ್ಯಾಂಟ್ರೋ ಅನಾವರಣ

ರಾಕೆಟ್ ಎಂಜಿನ್ ಪ್ರೇರಣೆಯೊಂದಿಗೆ ಅಭಿವೃದ್ಧಿಗೊಂಡಿದೆ ಟಾಟಾ ಹೊಸ ಹ್ಯಾರಿಯರ್ ಕಾರು

ಜೊತೆಗೆ ರೂಫ್ ಮೌಟೆಂಡ್ ಸ್ಪಾಯ್ಲರ್ ಮತ್ತು ಶಾರ್ಪ್ ಮಾದರಿಯ ರಿರ್ ವೀಂಡ್ ಸ್ಕ್ರೀನ್‌ಗಳನ್ನು ಅದ್ಭುತವಾಗಿ ಡಿಸೈನ್ ಮಾಡಲಾಗಿದೆ. ಹೀಗಾಗಿ ಸದ್ಯ ಮಾರುಕಟ್ಟೆಯಲ್ಲಿರುವ ನೆಕ್ಸಾನ್ ಆವೃತ್ತಿಗಿಂತ ಹೆಚ್ಚಿನ ಗುಣ ವಿನ್ಯಾಸ ಹೊಂದಿರುವ ಹ್ಯಾರಿಯರ್ ಕಾರುಗಳು ಎಸ್‌ಯುವಿ ಪ್ರಿಯರ ಹಾಟ್ ಫೆವರಿಟ್ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ.

ರಾಕೆಟ್ ಎಂಜಿನ್ ಪ್ರೇರಣೆಯೊಂದಿಗೆ ಅಭಿವೃದ್ಧಿಗೊಂಡಿದೆ ಟಾಟಾ ಹೊಸ ಹ್ಯಾರಿಯರ್ ಕಾರು

ಎಂಜಿನ್ ವೈಶಿಷ್ಟ್ಯತೆ

ಹ್ಯಾರಿಯರ್ ಎಸ್‌ಯುವಿ ಮಾದರಿಗಳ ಎಂಜಿನ್ ಬಗೆಗೆ ಇದೇ ಮೊದಲ ಬಾರಿಗೆ ಮಾಹಿತಿ ಬಿಟ್ಟುಕೊಟ್ಟಿದ್ದು, 2.0-ಲೀಟರ್ ಕ್ರಿಯೊಟೆಕ್ ಡೀಸೆಲ್ ಎಂಜಿನ್ ಪಡೆದುಕೊಳ್ಳಲಿದೆ. ಇದು ರಾಕೆಟ್‌ನಲ್ಲಿ ಬಳಸುವ ಎಂಜಿನ್ ಮಾದರಿಯಾಗಿದ್ದು, ಅತ್ಯುತ್ತಮ ಪರ್ಫಾಮೆನ್ಸ್‌ಗೆ ಸಹಕಾರಿಯಾಗಿರುವುದೇ ಈ ಎಂಜಿನ್ ವಿಶೇಷತೆ ಎನ್ನಬಹುದು.

MOST READ: ತನ್ನ ತಂದೆಯ 50ನೇ ಹುಟ್ಟುಹಬ್ಬಕ್ಕೆ ಮಗನಿಂದ ಸರ್ಪ್ರೈಸ್ ಗಿಫ್ಟ್

ರಾಕೆಟ್ ಎಂಜಿನ್ ಪ್ರೇರಣೆಯೊಂದಿಗೆ ಅಭಿವೃದ್ಧಿಗೊಂಡಿದೆ ಟಾಟಾ ಹೊಸ ಹ್ಯಾರಿಯರ್ ಕಾರು

ಕಾರಿನ ಬೆಲೆಗಳು (ಅಂದಾಜು)

ಟಾಟಾ ಹ್ಯಾರಿಯರ್ ಕಾರುಗಳು 2018ರ ಕೊನೆಯಲ್ಲಿ ಇಲ್ಲವೇ 2019ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಮಾರುಕಟ್ಟೆಗೆ ಲಗ್ಗೆಯಿಡಲಿದ್ದು, ಹೊಸ ಕಾರಿನ ಬೆಲೆಗಳು ರೂ. 12 ಲಕ್ಷದಿಂದ ರೂ. 15 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

ಬಿಡುಗಡೆಗೆ ಸಿದ್ದವಾಗಿರುವ ಟಾಟಾ ಹ್ಯಾರಿಯರ್ ಕಾರುಗಳ ವೈಶಿಷ್ಟ್ಯತೆಗಳನ್ನು ತಿಳಿಯಲು ಇಲ್ಲಿರುವ ಫೋಟೋ ಗ್ಯಾಲರಿ ನೋಡಿ..!

Kannada
English summary
Tata Harrier SUV To Feature New Kryotec Diesel Engine — Inspired By A Rocket!
X

ತಕ್ಷಣದ ಆಟೊ ಸುದ್ದಿಗಳನ್ನು ಡ್ರೈವ್ಸ್ಪಾರ್ಕ್ನಲ್ಲಿ ಪಡೆದುಕೊಳ್ಳಿ- Kannada DriveSpark

We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more