ಬಿಡುಗಡೆಗೂ ಮುನ್ನವೇ ಹ್ಯಾರಿಯರ್ ಕಾರಿನ ಬೆಲೆ ಬಹಿರಂಗಗೊಳಿಸಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಸಂಸ್ಥೆಯು 2019ರ ಆರಂಭದಲ್ಲಿ ತನ್ನ ಬಹುನೀರಿಕ್ಷಿತ ಪ್ರೀಮಿಯಂ ಕಂಪ್ಯಾಕ್ಟ್ ಎಸ್‍ಯುವಿ ಮಾದರಿಯಾದ ಹ್ಯಾರಿಯರ್ ಕಾರನ್ನು ಬಿಡುಗಡೆಗೊಳಿಸುತ್ತಿದ್ದು, ಬಿಡುಗಡೆಗೂ ಮುನ್ನವೇ ಹೊಸ ಕಾರಿನ ತಾಂತ್ರಿಕ ಅಂಶಗಳ ಜೊತೆಗೆ ಕಾರಿನ ಬೆಲೆ ಮಾಹಿತಿಯನ್ನು ಸಹ ಬಹಿರಂಗಗೊಳಿಸಿರುವುದು ಎಸ್‌ಯುವಿ ಪ್ರಿಯರಲ್ಲಿ ಭಾರೀ ಆಕರ್ಷಣೆಗೆ ಕಾರಣವಾಗಿದೆ.

ಬಿಡುಗಡೆಗೂ ಮುನ್ನವೇ ಹ್ಯಾರಿಯರ್ ಕಾರಿನ ಬೆಲೆ ಬಹಿರಂಗಗೊಳಿಸಿದ ಟಾಟಾ ಮೋಟಾರ್ಸ್

ಇಂಪ್ಯಾಕ್ಟ್ ಡಿಸೈನ್ 2.0 ತಂತ್ರಜ್ಞಾನ ಆಧಾರದ ಮೇಲೆ ಹ್ಯಾರಿಯರ್ ಕಾರುಗಳನ್ನು ನಿರ್ಮಾಣ ಮಾಡಲಾಗಿದ್ದು, ಹೊಸ ಕಾರುಗಳಲ್ಲಿ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್ (OMEGA)" ಆರ್ಕಿಟೆಕ್ಚರ್ ಬಳಕೆ ಮಾಡಿರುವುದೇ ಹೊಸ ವಿನ್ಯಾಸಗಳು ಅದ್ಭುತವಾಗಿರುವುದಲ್ಲದೇ ಕೈಗೆಟುಕುವ ಬೆಲೆಯಲ್ಲಿ ಹೊಸ ಕಾರಿನ ದರ ನಿಗದಿ ಮಾಡಿರುವುದು ಗಮನಸೆಳೆಯುತ್ತಿವೆ.

ಬಿಡುಗಡೆಗೂ ಮುನ್ನವೇ ಹ್ಯಾರಿಯರ್ ಕಾರಿನ ಬೆಲೆ ಬಹಿರಂಗಗೊಳಿಸಿದ ಟಾಟಾ ಮೋಟಾರ್ಸ್

ಟಾಟಾ ಹ್ಯಾರಿಯರ್ ಕಾರುಗಳು ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ ಮತ್ತು ಎಕ್ಸ್‌ಜೆಡ್ ಎಂಬ ನಾಲ್ಕು ವೇರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ವೇರಿಯೆಂಟ್‍ಗಳಿಗೆ ಅನುಗುಣವಾಗಿ ಕಾರಿನ ಬೆಲೆಗಳನ್ನು ನಿಗದಿಮಾಡಲಾಗಿದೆ.

ಬಿಡುಗಡೆಗೂ ಮುನ್ನವೇ ಹ್ಯಾರಿಯರ್ ಕಾರಿನ ಬೆಲೆ ಬಹಿರಂಗಗೊಳಿಸಿದ ಟಾಟಾ ಮೋಟಾರ್ಸ್

ಎಂಜಿನ್ ಸಾಮರ್ಥ್ಯ

ಹ್ಯಾರಿಯರ್ ಎಸ್‌ಯುವಿ ಕಾರು 2-ಲೀಟರ್(2 ಸಾವಿರ ಸಿಸಿ) 4 ಸಿಲಿಂಡರ್, ಕ್ರೆಯೊಟೆಕ್ ಡೀಸೆಲ್ ಎಂಜಿನ್ ಸಹಾಯದಿಂದ 140-ಬಿಹೆಚ್‍ಪಿ ಶಕ್ತಿಯನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದಿದ್ದು, ಎಂಜಿನ್ ಅನ್ನು 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ. ಇದಲ್ಲದೆ ಹ್ಯುಂಡೈ‍‍ನಿಂದ ಎರವಲು ಪಡೆಯಲಾದ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಸಹ ಆಯ್ಕೆ ರೂಪದಲ್ಲಿರಲಿವೆ.

ಬಿಡುಗಡೆಗೂ ಮುನ್ನವೇ ಹ್ಯಾರಿಯರ್ ಕಾರಿನ ಬೆಲೆ ಬಹಿರಂಗಗೊಳಿಸಿದ ಟಾಟಾ ಮೋಟಾರ್ಸ್

ವೆರಿಯೆಂಟ್‌ಗಳು ಮತ್ತು ತಾಂತ್ರಿಕ ಸೌಲಭ್ಯಗಳು

ಹ್ಯಾರಿಯರ್ ಎಕ್ಸ್‌ಇ

ಆರಂಭಿಕ ಆವೃತ್ತಿಯಾಗಿರುವ ಹ್ಯಾರಿಯಲ್ ಎಕ್ಸ್‌ಇ ಕಾರುಗಳಲ್ಲಿ ಪ್ರೊಜೆಕ್ಟರ್ ಹೆಡ್‍ಲ್ಯಾಂಪ್ಸ್, ಎಲ್ಇಡಿ ಡಿಆರ್‍ಎಲ್, 16 ಇಂಚಿನ ಸ್ಟೀಲ್ ವ್ಹೀಲ್ಸ್, ಎಲ್ಇಡಿ ಟೈಲ್ ಲೈಟ್ಸ್ . ಪವರ್ ಅಡ್ಜೆಸ್ಟೆಬಲ್ ಒಆರ್‍‍ವಿಎಂಗಳು, ಮ್ಯಾನುವಲ್ ಎಸಿ, ರಿಯರ್ ಎಸಿ ವೆಂಟ್ಸ್, ಪವರ್ ವಿಂಡೋಸ್, 4 ಇಂಚಿನ ಮಲ್ಟಿ ಇನ್ಫಾರ್ಮೆಷನ್ ಡಿಸ್ಪ್ಲೇ ಒದಗಿಸಲಾಗಿದೆ.

ಬಿಡುಗಡೆಗೂ ಮುನ್ನವೇ ಹ್ಯಾರಿಯರ್ ಕಾರಿನ ಬೆಲೆ ಬಹಿರಂಗಗೊಳಿಸಿದ ಟಾಟಾ ಮೋಟಾರ್ಸ್

ಹಾಗೆಯೇ ಪ್ರಯಾಣಿಕರ ಸುರಕ್ಷತೆಗಾಗಿ ಸೆಂಟ್ರಲ್ ಲಾಕಿಂಗ್, ಡ್ಯುಯಲ್ ಏರ್‍‍ಬ್ಯಾಗ್ಸ್, ಎಬಿಎಸ್‍ನೊಂದಿಗೆ ಇಬಿಡಿ ಪಾರ್ಕಿಂಗ್ ಸೆನ್ಸಾರ್ಸ್, ಸ್ಪೀಡ್ ಸೆನ್ಸಿಟಿವ್ ಡೋರ್ ಲಾಕ್, ಸೀಟ್ ಬೆಲ್ಟ್ ರಿಮೈಂಡರ್ ಅನ್ನು ನೀಡಲಾಗಿದೆ.

ಬಿಡುಗಡೆಗೂ ಮುನ್ನವೇ ಹ್ಯಾರಿಯರ್ ಕಾರಿನ ಬೆಲೆ ಬಹಿರಂಗಗೊಳಿಸಿದ ಟಾಟಾ ಮೋಟಾರ್ಸ್

ಹ್ಯಾರಿಯರ್ ಎಕ್ಸ್ಎಂ

ಎರಡನೇ ಮಾದರಿಯ ಎಕ್ಸ್ಎಂ ಆವೃತ್ತಿಯಲ್ಲಿ ಫ್ರಂಟ್ ಫಾಗ್ ಲ್ಯಾಂಪ್ಸ್, ಫಾಲೋ-ಮೀ-ಹೋಂ ಹೆಡ್‍ಲ್ಯಾಂಪ್ಸ್, ರಿಯರ್ ವೈಪರ್ಸ್, ಬೂಟ್ ಲ್ಯಾಂಪ್ಸ್, ರಿಯರ್ ಪಾರ್ಸಲ್ ಸೆಲ್ಫ್, 7 ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ, 4 ಸ್ಪೀಕರ್ಸ್, ಸ್ಟೀರಿಂಗ್ ಮೌಂಟೆಡ್ ಆಡಿಯೋ ಕಂಟ್ರೋಲ್ಸ್, ರಿಮೋಟ್ ಸೆಂಟ್ರಲ್ ಲಾಕಿಂಗ್ ಜೊತೆಗೆ ಇಕೊ, ಸಿಟಿ ಮತ್ತು ಸ್ಪೋರ್ಟ್ ಎಂಬ ಮಲ್ಟಿ ಡ್ರೈವಿಂಗ್ ಮೋಡ್‍ಗಳನ್ನು ಪಡೆದುಕೊಂಡಿದೆ.

ಬಿಡುಗಡೆಗೂ ಮುನ್ನವೇ ಹ್ಯಾರಿಯರ್ ಕಾರಿನ ಬೆಲೆ ಬಹಿರಂಗಗೊಳಿಸಿದ ಟಾಟಾ ಮೋಟಾರ್ಸ್

ಹ್ಯಾರಿಯರ್ ಎಕ್ಸ್‌ಟಿ

ಈ ವೇರಿಯೆಂಟ್‍ನಲ್ಲಿ ಆಟೋಮ್ಯಾಟಿಕ್ ಹೆಡ್‍ಲ್ಯಾಂಪ್ಸ್, ಡ್ಯುಯಲ್ ಫಂಕ್ಷನ್ ಎಲ್ಇಡಿ ಡಿಆರ್‍ಎಲ್, 17 ಇಂಚಿನ ಅಲಾಯ್ ವ್ಹೀಲ್ಸ್, ರಿಯರ್ ಡೀಫಾಗರ್, ಪುಶ್-ಬಟನ್ ಸ್ಟಾರ್ಟ್, 8 ವಿಧಗಳಲ್ಲಿ ಹೊಂದಾಣಿಕೆ ಮಾಡಬಹುದಾದ ಡ್ರೈವರ್ ಸೀಟ್ಸ್, ಕ್ಲೈಮೇಟ್ ಕಂಟ್ರೋಲ್ ಸಿಸ್ಟಂ, ಕ್ರೂಸ್ ಕಂಟ್ರೋಲ್ ಅಡ್ಜೆಸ್ಟೆಬಲ್ ಒಆರ್‍‍ವಿಎಂಗಳು ಮತ್ತು ರಿವರ್ಸ್ ಕ್ಯಾಮೆರಾ ವೈಶಿಷ್ಟ್ಯತೆಗಳನ್ನು ಪಡೆದುಕೊಂಡಿದೆ.

ಬಿಡುಗಡೆಗೂ ಮುನ್ನವೇ ಹ್ಯಾರಿಯರ್ ಕಾರಿನ ಬೆಲೆ ಬಹಿರಂಗಗೊಳಿಸಿದ ಟಾಟಾ ಮೋಟಾರ್ಸ್

ಹ್ಯಾರಿಯರ್ ಎಕ್ಸ್‌ಜೆಡ್

ಜೆನಾನ್ ಪ್ರೊಜೆಕ್ಟರ್ ಹೆಡ್‍ಲ್ಯಾಂಪ್ಸ್, ಫ್ರಂಟ್ ಫಾಗ್ ಲ್ಯಾಂಪ್ಸ್ ಮತ್ತು ಕಾರ್ನರಿಂಗ್ ಲೈಟ್ಸ್, ಶಾರ್ಕ್ ಫಿನ್ ಆಂಟೆನಾ, 7 ಇಂಚಿನ ಡಿಜಿಟಲ್ ಇನ್ಸ್ಟ್ರೂಮೆಂಟ್ ಕ್ಲಸ್ಟರ್, 8.8 ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ, 9 ಜೆಬಿಎಲ್ ಸ್ಪೀಕರ್ಸ್‍, 60:40 ವಿಭಜಿತ ಸೀಟ್‍ಗಳು, ನಾರ್ಮಲ್, ವೆಟ್ ಮತ್ತು ರಫ್ ಎಂಬ ಮೂರು ಟೆರೈನ್ ರೆಸ್ಪಾನ್ಸ್ ಮೊಡ್ಸ್, ಆರು ಏರ್‍‍ಬ್ಯಾಗ್‍ಗಳು, ಇಎಸ್‍ಪಿ ಮತ್ತು ಐಎಸ್ಒ ಚೈಲ್ಡ್ ಸೀಟ್ ಮೌಂಟ್ಸ್, ಹಿಲ್-ಹೋಲ್ಡ್, ಹಿಲ್ ಡಿಸ್ಸೆಂಟ್ ರೋಲ್-ಓವರ್, ಕಾರ್ನರಿಂಗ್ ಸ್ಟ್ಯಾಬಿಲಿಟಿ ಕಂಟ್ರೋಲ್ ಟ್ರಾಕ್ಷನ್, ಕಂಟ್ರೋಲ್ ಹೈಡ್ರಾಲಿಕ್ ಬ್ರೇಕ್ ಅಸ್ಸಿಸ್ಟ್ ಪಡೆದುಕೊಂಡಿದೆ.

ಬಿಡುಗಡೆಗೂ ಮುನ್ನವೇ ಹ್ಯಾರಿಯರ್ ಕಾರಿನ ಬೆಲೆ ಬಹಿರಂಗಗೊಳಿಸಿದ ಟಾಟಾ ಮೋಟಾರ್ಸ್

ಕಾರಿನ ಬೆಲೆಗಳು(ಆನ್ ರೋಡ್ ಪ್ರಕಾರ)

ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಲ್ಲಿ ವಿಶೇಷ ಡಿಸೈನ್ ಹೊತ್ತು ಬಂದಿರುವ ಹ್ಯಾರಿಯರ್ ಕಾರಿನ ಬೆಲೆಯನ್ನು ಆನ್ ರೋಡ್ ಪ್ರಕಾದ ಆರಂಭಿಕವಾಗಿ ರೂ. 16 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯನ್ನು ರೂ. 21 ಲಕ್ಷಕ್ಕೆ ಬಿಡುಗಡೆಗೊಳಿಸುವುದಾಗಿ ಟಾಟಾ ಸಂಸ್ಥೆಯೇ ಹೇಳಿಕೊಂಡಿದೆ.

MOST READ: ಜನಸಾಮಾನ್ಯರ ಮೇಲೆ ಕೇಸ್ ಜಡಿಯುವ ಪೊಲೀಸರಿಗೆ ಡಿಸಿಎಂ ಪುತ್ರಿಯ ದರ್ಬಾರ್ ಯಾಕೆ ಕಾಣಿಸ್ತಾ ಇಲ್ಲ?

ಬುಕ್ಕಿಂಗ್ ಆರಂಭ

ಟಾಟಾ ಈಗಾಗಲೇ ಹೊಸ ಹ್ಯಾರಿಯರ್ ಕಾರುಗಳ ಖರೀದಿಗಾಗಿ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ಕೂಡಾ ನೀಡಿದ್ದು, ರೂ.30 ಸಾವಿರ ಮುಂಗಡ ಪಾವತಿಸಿ ಹೊಸ ಕಾರು ಖರೀದಿಗಾಗಿ ಬುಕ್ ಮಾಡಬಹುದಾಗಿದೆ.

ಬಿಡುಗಡೆಗೂ ಮುನ್ನವೇ ಹ್ಯಾರಿಯರ್ ಕಾರಿನ ಬೆಲೆ ಬಹಿರಂಗಗೊಳಿಸಿದ ಟಾಟಾ ಮೋಟಾರ್ಸ್

ಇಲ್ಲಿ ಇನ್ನೊಂದು ವಿಶೇಷ ಅಂದ್ರೆ, ದೇಶಿಯ ಮಾರುಕಟ್ಟೆಯಲ್ಲಿ ಟಾಟಾ ಜೊತೆ ಕೈಜೋಡಿಸಿರುವ ಜೆಎಲ್ಆರ್ (ಜಾಗ್ವಾರ್, ಲ್ಯಾಂಡ್ ರೋವರ್, ರೇಂಜ್ ರೋವರ್) ಕೂಡಾ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್ (OMEGA)" ಆರ್ಕಿಟೆಕ್ಚರ್ ತಂತ್ರವನ್ನೇ ಬಳಕೆ ಮಾಡುತ್ತಿದ್ದು, ಇದೇ ಕಾರಣಕ್ಕೆ ಟಾಟಾ ಕಾರುಗಳಲ್ಲೂ ಜೆಎಲ್ಆರ್ ಹೊಸ ಪ್ರಯೋಗ ಮಾಡಿರುವುದು ಹ್ಯಾರಿಯರ್ ವಿನ್ಯಾಸಕ್ಕೆ ಮತ್ತಷ್ಟು ಮೆರಗು ಬಂದಿದೆ.

MOST READ: ಮಾಡಿಫೈಡ್ ವಿನ್ಯಾಸದಲ್ಲಿ ಮಿಂಚಿದ ಟೊಯೊಟಾ ಇನೋವಾ ಕ್ರಿಸ್ಟಾ!

ಬಿಡುಗಡೆಗೂ ಮುನ್ನವೇ ಹ್ಯಾರಿಯರ್ ಕಾರಿನ ಬೆಲೆ ಬಹಿರಂಗಗೊಳಿಸಿದ ಟಾಟಾ ಮೋಟಾರ್ಸ್

ಒಟ್ಟಿನಲ್ಲಿ ಪ್ರೀಮಿಯಂ ಎಸ್‍ಯುವಿ ಕಾರುಗಳ ಸರಣಿಯಲ್ಲಿ ಟಾಟಾ ಹ್ಯಾರಿಯರ್ ಭಾರೀ ನಿರೀಕ್ಷೆಯನ್ನು ಹುಟ್ಟುಹಾಕಿದ್ದು, 2019ರ ಜನವರಿ ಮೊದಲ ವಾರದಲ್ಲೇ ಬಿಡುಗಡೆಗೊಳ್ಳಲಿರುವ ಹೊ ಕಾರು ಜೀಪ್ ಕಂಪಾಸ್, ಹ್ಯುಂಡೈ ಕ್ರೆಟಾ ಮತ್ತು ಮಹೀಂದ್ರಾ ಎಕ್ಸ್‌ಯುವಿ500 ಕಾರುಗಳಿಗೆ ಸಾಕಷ್ಟು ಪೈಪೋಟಿ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.

Most Read Articles

Kannada
English summary
Tata Harrier Price Range Confirmed Officially — Prices To Start Around Rs 16 Lakh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X