ಭಾರತದಲ್ಲಿ ಟಾಟಾ ಹ್ಯಾರಿಯರ್ ಕಾರಿನ ಉತ್ಪಾದನೆ ಶುರು

ದೇಶಿಯ ವಾಹನ ತಯಾರಕ ಸಂಸ್ಥೆಯಾದ ಟಾಟಾ ಮೋಟಾರ್ಸ್ ತಮ್ಮ ಬಹುನಿರೀಕ್ಷಿತ ಹ್ಯಾರಿಯರ್ ಎಸ್‍ಯುವಿ ಕಾರನ್ನು 2019ರಲ್ಲಿ ಮಾರುಕಟ್ಟೆಗೆ ಪರಿಚಯಿಸಲಿದ್ದು, ಪುಣೆಯಲ್ಲಿನ ಪ್ಲಾಂಟ್‍ನಲ್ಲಿ ಕಾರುಗಳ ಉತ್ಪಾದನೆಯನ್ನು ಸಹ ಪ್ರಾರಂಭಿಸಲಾಗಿದೆ. ಈ ನಿಟ್ಟಿನಲ್ಲಿ ಎಸ್‍ಯುವಿ ವಾಹನ ಪ್ರಿಯರಲ್ಲಿ ಕುತೂಹಲವನ್ನು ಹುಟ್ಟುಹಾಕಿದ ಈ ಕಾರಿನ ಬಗ್ಗೆ ಇಂದಿನ ಲೇಖನದಲ್ಲಿ ಮಾಹಿತಿಯನ್ನು ಪಡೆಯಿರಿ.

ಭಾರತದಲ್ಲಿ ಟಾಟಾ ಹ್ಯಾರಿಯರ್ ಕಾರಿನ ಉತ್ಪಾದನೆ ಶುರು

ಬುಕ್ಕಿಂಗ್ ಶುರು

ಟಾಟಾ ಸಂಸ್ಥೆಯು ಈಗಾಗಲೇ ಹೊಸ ಹ್ಯಾರಿಯರ್ ಕಾರುಗಳ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ಕೂಡಾ ನೀಡಿದ್ದು, ರೂ.30 ಸಾವಿರ ಮುಂಗಡ ಪಾವತಿಸಿ ಹೊಸ ಕಾರು ಖರೀದಿಗಾಗಿ ಬುಕ್ ಮಾಡಬಹುದಾಗಿದೆ.

ಭಾರತದಲ್ಲಿ ಟಾಟಾ ಹ್ಯಾರಿಯರ್ ಕಾರಿನ ಉತ್ಪಾದನೆ ಶುರು

ಸ್ಪಾಟ್ ಟ್ವೆಸ್ಟಿಂಗ್ ವೇಳೆ ಹೊಸ ದಾಖಲೆ

ಬಿಡುಗಡೆಯ ಹೊಸ್ತಿನಲ್ಲಿರುವ ಹ್ಯಾರಿಯರ್ ಸದ್ಯ ದೇಶಾದ್ಯಂತ ವಿವಿಧ ಮಾದರಿಯ ಸ್ವಾಟ್ ಟೆಸ್ಟಿಂಗ್ ನಡೆಸಿದ್ದು, ಬರೋಬ್ಬರಿ 22 ಲಕ್ಷ ಕಿ.ಮೀ ನಷ್ಟು ದೂರ ಕ್ರಮಿಸುವ ಮೂಲಕ ಹೊಸ ದಾಖಲೆ ಸೃಷ್ಠಿಸಿದೆ.

ಹೀಗಾಗಿ ಕಾರಿನ ಎಂಜಿನ್ ವೈಶಿಷ್ಟ್ಯತೆ, ಕಾರಿನ ವಿನ್ಯಾಸಗಳ ಆಧಾರದ ಮೇಲೆ ಟಾಟಾ ಹೊಸ ಕಾರಿಗೆ ಹ್ಯಾರಿಯರ್ ಎಂದು ನಾಮಕರಣ ಮಾಡಲಾಗಿದ್ದು, ಹೆಸರಿಗೆ ತಕ್ಕಂತೆ ಹೊಸ ಕಾರುಗಳಲ್ಲಿ ವಿಶ್ವದರ್ಜೆಯ ಸೌಲಭ್ಯಗಳನ್ನ ಒದಗಿಸುವ ಬಗ್ಗೆ ಟಾಟಾ ಸುಳಿವು ನೀಡಿದೆ.

ಭಾರತದಲ್ಲಿ ಟಾಟಾ ಹ್ಯಾರಿಯರ್ ಕಾರಿನ ಉತ್ಪಾದನೆ ಶುರು

ಜೊತೆಗೆ ಎಂಜಿನ್ ಕಾರ್ಯಕ್ಷಮತೆ ಕುರಿತು ಸ್ಪಾಟ್‌ ಟೆಸ್ಟಿಂಗ್ ನಡೆಸುತ್ತಿರುವಾಗ ಹೊಸ ಹ್ಯಾರಿಯರ್ ಕಾರುಗಳು ಅಲಾಯ್ ಚಕ್ರಗಳ ಜೊತೆಗೆ ಗುಣಮಟ್ಟದ ಬ್ರಿಡ್ಜ್ ಸ್ಟೋನ್ ಟೈರ್ ಮಾದರಿಯನ್ನ ಪಡೆದುಕೊಂಡಿರುವುದು ಕಂಡುಬಂದಿದೆ.

ಭಾರತದಲ್ಲಿ ಟಾಟಾ ಹ್ಯಾರಿಯರ್ ಕಾರಿನ ಉತ್ಪಾದನೆ ಶುರು

ಇನ್ನು ಇಂಪ್ಯಾಕ್ಟ್ ಡಿಸೈನ್ 2.0 ತಂತ್ರಜ್ಞಾನ ಆಧಾರದ ಮೇಲೆ ಹ್ಯಾರಿಯರ್ ಕಾರುಗಳನ್ನು ನಿರ್ಮಾಣ ಮಾಡಲಾಗಿದ್ದು, ಹೊಸ ಕಾರುಗಳಲ್ಲಿ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್ (OMEGA)" ಆರ್ಕಿಟೆಕ್ಚರ್ ಬಳಕೆ ಮಾಡಿರುವುದೇ ಹೊಸ ವಿನ್ಯಾಸಗಳು ಅದ್ಭುತವಾಗಿವೆ.

ಭಾರತದಲ್ಲಿ ಟಾಟಾ ಹ್ಯಾರಿಯರ್ ಕಾರಿನ ಉತ್ಪಾದನೆ ಶುರು

ಇದರಲ್ಲಿ ಇನ್ನೊಂದು ವಿಶೇಷ ಅಂದ್ರೆ, ದೇಶಿಯ ಮಾರುಕಟ್ಟೆಯಲ್ಲಿ ಟಾಟಾ ಜೊತೆ ಕೈಜೋಡಿಸಿರುವ ಜೆಎಲ್ಆರ್ (ಜಾಗ್ವಾರ್, ಲ್ಯಾಂಡ್ ರೋವರ್, ರೇಂಜ್ ರೋವರ್) ಕೂಡಾ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್ (OMEGA)" ಆರ್ಕಿಟೆಕ್ಚರ್ ತಂತ್ರವನ್ನೇ ಬಳಕೆ ಮಾಡುತ್ತಿದ್ದು, ಇದೇ ಕಾರಣಕ್ಕೆ ಟಾಟಾ ಕಾರುಗಳಲ್ಲೂ ಜೆಎಲ್ಆರ್ ಹೊಸ ಪ್ರಯೋಗ ಮಾಡಲಾಗಿದೆ.

ಭಾರತದಲ್ಲಿ ಟಾಟಾ ಹ್ಯಾರಿಯರ್ ಕಾರಿನ ಉತ್ಪಾದನೆ ಶುರು

ಕಾರಿನ ವೈಶಿಷ್ಟ್ಯತೆಗಳು

ಹ್ಯಾರಿಯರ್ ಕಾರುಗಳು ಸ್ಲಿಕ್ ಆ್ಯಂಗರಲ್ ಎಲ್‌ಇಡಿ ಹೆಡ್ ಲೈಟ್ಸ್‌ಗಳನ್ನು ಹೊಂದಿದ್ದು, ಇಂಪ್ಯಾಕ್ಟ್ ಡಿಸೈನ್ ಗ್ರೀಲ್‌ಗಳು ಕಾರಿನ ಲುಕ್ ಹೆಚ್ಚಿಸಿವೆ. ಜೊತೆಗೆ ಪರಿಕಲ್ಪನೆ ಮಾದರಿಯನ್ನು ಗ್ರೇ ಪೇಟಿಂಗ್ ವಿನ್ಯಾಸಗಳು ಗಮನಸೆಳೆಯುತ್ತಿದ್ದು, ದೊಡ್ಡದಾದ ಚಕ್ರಗಳು, ವಿಸ್ತರಿತ ಬೂಟ್ ಸ್ಪೆಸ್ ಬಳಕೆ ಮಾಡಲಾಗಿದೆ.

ಭಾರತದಲ್ಲಿ ಟಾಟಾ ಹ್ಯಾರಿಯರ್ ಕಾರಿನ ಉತ್ಪಾದನೆ ಶುರು

ಜೊತೆಗೆ ರೂಫ್ ಮೌಂಟೆಡ್ ಸ್ಪಾಯ್ಲರ್ ಮತ್ತು ಶಾರ್ಪ್ ಮಾದರಿಯ ರಿರ್ ವೀಂಡ್ ಸ್ಕ್ರೀನ್‌ಗಳನ್ನು ಅದ್ಭುತವಾಗಿ ಡಿಸೈನ್ ಮಾಡಲಾಗಿದೆ. ಹೀಗಾಗಿ ಸದ್ಯ ಮಾರುಕಟ್ಟೆಯಲ್ಲಿರುವ ನೆಕ್ಸಾನ್ ಆವೃತ್ತಿಗಿಂತ ಹೆಚ್ಚಿನ ಗುಣ ವಿನ್ಯಾಸ ಹೊಂದಿರುವ ಹ್ಯಾರಿಯರ್ ಕಾರುಗಳು ಎಸ್‌ಯುವಿ ಪ್ರಿಯರ ಹಾಟ್ ಫೆವರಿಟ್ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ.

ಭಾರತದಲ್ಲಿ ಟಾಟಾ ಹ್ಯಾರಿಯರ್ ಕಾರಿನ ಉತ್ಪಾದನೆ ಶುರು

ಎಂಜಿನ್ ಸಾಮರ್ಥ್ಯ

ಹ್ಯಾರಿಯರ್ ಎಸ್‌ಯುವಿ ಕಾರು 2 ಲೀಟರ್ 4 ಸಿಲೆಂಡರ್, ಕ್ರೆಯೊಟೆಕ್ ಡೀಸೆಲ್ ಎಂಜಿನ್ ಸಹಾಯದಿಂದ 140ಬಿಹೆಚ್‍ಪಿ ಶಕ್ತಿಯನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದಿದ್ದು, ಎಂಜಿನ್ ಅನ್ನು 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ. ಇದಲ್ಲದೆ ಹ್ಯುಂಡೈ‍‍ನಿಂದ ಪಡೆದ 6 ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಸಹ ನೀಡಲಿದೆ ಎನ್ನಲಾಗಿದೆ.

ಭಾರತದಲ್ಲಿ ಟಾಟಾ ಹ್ಯಾರಿಯರ್ ಕಾರಿನ ಉತ್ಪಾದನೆ ಶುರು

ಕಾರಿನ ಬೆಲೆಗಳು (ಅಂದಾಜು)

ಟಾಟಾ ಹ್ಯಾರಿಯರ್ ಕಾರುಗಳು 2018ರ ಕೊನೆಯಲ್ಲಿ ಇಲ್ಲವೇ 2019ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಮಾರುಕಟ್ಟೆಗೆ ಲಗ್ಗೆಯಿಡಲಿದ್ದು, ಹೊಸ ಕಾರಿನ ಬೆಲೆಗಳು ರೂ. 12 ಲಕ್ಷದಿಂದ ರೂ. 15 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

Most Read Articles

Kannada
English summary
Tata Harrier Production Begins In India — First SUV Rolls Out Of Pune Plant.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X