ಬೆಂಗಳೂರು ರಸ್ತೆಗಳಲ್ಲಿ ಟಾಟಾ ಹ್ಯಾರಿಯರ್ ಕಾರಿನದ್ದೇ ಹವಾ..!

ಟಾಟಾ ಮೋಟಾರ್ಸ್ ಸಂಸ್ಥೆಯು ದೀಪಾವಳಿ ಹೊತ್ತಿಗೆ ಹಲವು ಗೇಮ್ ಚೇಂಜರ್ ಕಾರುಗಳನ್ನು ಬಿಡುಗಡೆಗೊಳಿಸುತ್ತಿದ್ದು, ಇದರಲ್ಲಿ ಹ್ಯಾರಿಯರ್ ಹೆಸರಿನ ವಿನೂತನ ಎಸ್‌ಯುವಿ ಮಾದರಿಯು ಕೂಡಾ ಸಾಕಷ್ಟು ನೀರಿಕ್ಷೆ ಹುಟ್ಟುಹಾಕಿದೆ. ಸದ್ಯ ಬಿಡುಗಡೆ ಹೊಸ್ತಿನಲ್ಲಿರುವ ಹ್ಯಾರಿಯರ್ ಕಾರುಗಳು ನಮ್ಮ ಬೆಂಗಳೂರಿನಲ್ಲೂ ಸ್ಪಾಟ್ ಟೆಸ್ಟಿಂಗ್ ನಡೆಸಿದ್ದು, ಹೊಸ ಕಾರು ಕಂಡು ಕಾರು ಪ್ರಿಯರಲ್ಲಿ ಕುತೂಹಲ ಹಾಕಿದೆ.

ಬೆಂಗಳೂರು ರಸ್ತೆಗಳಲ್ಲಿ ಟಾಟಾ ಹ್ಯಾರಿಯರ್ ಕಾರಿನದ್ದೇ ಹವಾ..!

ಎಸ್‌ಯುವಿ ವಿಭಾಗಕ್ಕೆ ವಿನೂತನ ಕಾರು ಮಾದರಿಯನ್ನು ಪರಿಚಯಿಸಲು ಸಿದ್ದವಾಗುತ್ತಿರುವ ಟಾಟಾ ಮೋಟಾರ್ಸ್ ಸಂಸ್ಥೆಯು ತನ್ನ ಬಹುನೀರಿಕ್ಷಿತ ಕಾರನ್ನು ಹಲವು ಸುತ್ತಿನ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದು, ಕಳೆದ ವಾರವಷ್ಟೇ ಕಾರಿನ ಅಧಿಕೃತ ಹೆಸರನ್ನು ಬಹಿರಂಗ ಪಡಿಸಿರುವುದಲ್ಲದೇ ಇದೀಗ ಕಾರಿನಲ್ಲಿ ಒದಗಿಸಲಾಗಿರುವ ಗುಣಮಟ್ಟದ ತಾಂತ್ರಿಕ ಸೌಲಭ್ಯಗಳು ಎಸ್‌ಯುವಿ ಕಾರು ಪ್ರಿಯರ ಆಕರ್ಷಣೆಗೆ ಕಾರಣವಾಗಿವೆ.

ಬೆಂಗಳೂರು ರಸ್ತೆಗಳಲ್ಲಿ ಟಾಟಾ ಹ್ಯಾರಿಯರ್ ಕಾರಿನದ್ದೇ ಹವಾ..!

ಕಾರಿನ ಎಂಜಿನ್ ವೈಶಿಷ್ಟ್ಯತೆ, ಕಾರಿನ ವಿನ್ಯಾಸಗಳ ಆಧಾರದ ಮೇಲೆ ಟಾಟಾ ಹೊಸ ಕಾರಿಗೆ ಹ್ಯಾರಿಯರ್ ಎಂದು ನಾಮಕರಣ ಮಾಡಲಾಗಿದ್ದು, ಹೆಸರಿಗೆ ತಕ್ಕಂತೆ ಹೊಸ ಕಾರುಗಳಲ್ಲಿ ವಿಶ್ವದರ್ಜೆಯ ಸೌಲಭ್ಯಗಳನ್ನ ಒದಗಿಸುವ ಬಗ್ಗೆ ಟಾಟಾ ಸುಳಿವು ನೀಡಿದೆ.

ಬೆಂಗಳೂರು ರಸ್ತೆಗಳಲ್ಲಿ ಟಾಟಾ ಹ್ಯಾರಿಯರ್ ಕಾರಿನದ್ದೇ ಹವಾ..!

ಬೆಂಗಳೂರಿನ ಪ್ರಮುಖ ಕಡೆಗಳಲ್ಲಿ ಕಳೆದ ಒಂದು ವಾರದಿಂದ ವಿವಿಧ ಹಂತದ ಎಂಜಿನ್ ಕಾರ್ಯಕ್ಷಮತೆ ಕುರಿತು ಸ್ಪಾಟ್‌ ಟೆಸ್ಟಿಂಗ್ ನಡೆಸುತ್ತಿರುವಾಗ ಹೊಸ ಹ್ಯಾರಿಯರ್ ಕಾರುಗಳು ಅಲಾಯ್ ಚಕ್ರಗಳ ಜೊತೆಗೆ ಗುಣಮಟ್ಟದ ಬ್ರಿಡ್ಜ್ ಸ್ಟೋನ್ ಟೈರ್ ಮಾದರಿಯನ್ನ ಪಡೆದುಕೊಂಡಿರುವುದು ಕಂಡುಬಂದಿದೆ.

ಬೆಂಗಳೂರು ರಸ್ತೆಗಳಲ್ಲಿ ಟಾಟಾ ಹ್ಯಾರಿಯರ್ ಕಾರಿನದ್ದೇ ಹವಾ..!

ಇಂಪ್ಯಾಕ್ಟ್ ಡಿಸೈನ್ 2.0 ತಂತ್ರಜ್ಞಾನ ಆಧಾರದ ಮೇಲೆ ಹ್ಯಾರಿಯರ್ ಕಾರುಗಳನ್ನು ನಿರ್ಮಾಣ ಮಾಡಲಾಗಿದ್ದು, ಹೊಸ ಕಾರುಗಳಲ್ಲಿ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್ (OMEGA)" ಆರ್ಕಿಟೆಕ್ಚರ್ ಬಳಕೆ ಮಾಡಿರುವುದೇ ಹೊಸ ವಿನ್ಯಾಸಗಳು ಅದ್ಭುತವಾಗಿವೆ.

MOST READ: ಜಾಗ್ವಾರ್ ಕಾರು ಖರೀದಿಸಿದ ರೈತನ ಅಸಲಿ ಕಥೆ ಏನು.?

ಬೆಂಗಳೂರು ರಸ್ತೆಗಳಲ್ಲಿ ಟಾಟಾ ಹ್ಯಾರಿಯರ್ ಕಾರಿನದ್ದೇ ಹವಾ..!

ಇದರಲ್ಲಿ ಇನ್ನೊಂದು ವಿಶೇಷ ಅಂದ್ರೆ, ದೇಶಿಯ ಮಾರುಕಟ್ಟೆಯಲ್ಲಿ ಟಾಟಾ ಜೊತೆ ಕೈಜೋಡಿಸಿರುವ ಜೆಎಲ್ಆರ್ (ಜಾಗ್ವಾರ್, ಲ್ಯಾಂಡ್ ರೋವರ್, ರೇಂಜ್ ರೋವರ್) ಕೂಡಾ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್ (OMEGA)" ಆರ್ಕಿಟೆಕ್ಚರ್ ತಂತ್ರವನ್ನೇ ಬಳಕೆ ಮಾಡುತ್ತಿದ್ದು, ಇದೇ ಕಾರಣಕ್ಕೆ ಟಾಟಾ ಕಾರುಗಳಲ್ಲೂ ಜೆಎಲ್ಆರ್ ಹೊಸ ಪ್ರಯೋಗ ಮಾಡಲಾಗಿದೆ.

ಬೆಂಗಳೂರು ರಸ್ತೆಗಳಲ್ಲಿ ಟಾಟಾ ಹ್ಯಾರಿಯರ್ ಕಾರಿನದ್ದೇ ಹವಾ..!

ಕಾರಿನ ವೈಶಿಷ್ಟ್ಯತೆಗಳು ಹ್ಯಾರಿಯರ್ ಕಾರುಗಳು ಸ್ಲಿಕ್ ಆ್ಯಂಗರಲ್ ಎಲ್‌ಇಡಿ ಹೆಡ್ ಲೈಟ್ಸ್‌ಗಳನ್ನು ಹೊಂದಿದ್ದು, ಇಂಪ್ಯಾಕ್ಟ್ ಡಿಸೈನ್ ಗ್ರೀಲ್‌ಗಳು ಕಾರಿನ ಲುಕ್ ಹೆಚ್ಚಿಸಿವೆ. ಜೊತೆಗೆ ಪರಿಕಲ್ಪನೆ ಮಾದರಿಯನ್ನು ಗ್ರೇ ಪೇಟಿಂಗ್ ವಿನ್ಯಾಸಗಳು ಗಮನಸೆಳೆಯುತ್ತಿದ್ದು, ದೊಡ್ಡದಾದ ಚಕ್ರಗಳು, ವಿಸ್ತರಿತ ಬೂಟ್ ಸ್ಪೆಸ್ ಬಳಕೆ ಮಾಡಲಾಗಿದೆ.

ಬೆಂಗಳೂರು ರಸ್ತೆಗಳಲ್ಲಿ ಟಾಟಾ ಹ್ಯಾರಿಯರ್ ಕಾರಿನದ್ದೇ ಹವಾ..!

ಜೊತೆಗೆ ರೂಫ್ ಮೌಟೆಂಡ್ ಸ್ಪಾಯ್ಲರ್ ಮತ್ತು ಶಾರ್ಪ್ ಮಾದರಿಯ ರಿರ್ ವೀಂಡ್ ಸ್ಕ್ರೀನ್‌ಗಳನ್ನು ಅದ್ಭುತವಾಗಿ ಡಿಸೈನ್ ಮಾಡಲಾಗಿದೆ. ಹೀಗಾಗಿ ಸದ್ಯ ಮಾರುಕಟ್ಟೆಯಲ್ಲಿರುವ ನೆಕ್ಸಾನ್ ಆವೃತ್ತಿಗಿಂತ ಹೆಚ್ಚಿನ ಗುಣ ವಿನ್ಯಾಸ ಹೊಂದಿರುವ ಹ್ಯಾರಿಯರ್ ಕಾರುಗಳು ಎಸ್‌ಯುವಿ ಪ್ರಿಯರ ಹಾಟ್ ಫೆವರಿಟ್ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ.

ಬೆಂಗಳೂರು ರಸ್ತೆಗಳಲ್ಲಿ ಟಾಟಾ ಹ್ಯಾರಿಯರ್ ಕಾರಿನದ್ದೇ ಹವಾ..!

ಎಂಜಿನ್ ಸಾಮರ್ಥ್ಯ

ಹ್ಯಾರಿಯರ್ ಎಸ್‌ಯುವಿ ಮಾದರಿಗಳ ಎಂಜಿನ್ ಬಗೆಗೆ ಟಾಟಾ ಯಾವುದೇ ಅಧಿಕೃತ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲವಾದರೂ ಕೆಲವು ವರದಿಗಳ ಪ್ರಕಾರ 2.0-ಲೀಟರ್ ಪೆಟ್ರೋಲ್ ಎಂಜಿನ್ ಅಥವಾ 2.0-ಲೀಟರ್ ಮಲ್ಟಿ ಜೆಟ್ ಡೀಸೆಲ್ ಎಂಜಿನ್ ಮಾದರಿಯಲ್ಲಿ ಹೊಸ ಕಾರುಗಳು ಅಭಿವೃದ್ಧಿಯಾಗಲಿವೆ.

MOST READ: ಮದುವೆ ಮನೆಯಲ್ಲಿ ಗೆಳೆಯರ ಸ್ಪೆಷಲ್ ಗಿಫ್ಟ್ ನೋಡಿ ನವದಂಪತಿ ಫುಲ್ ಶಾಕ್.!?

ಬೆಂಗಳೂರು ರಸ್ತೆಗಳಲ್ಲಿ ಟಾಟಾ ಹ್ಯಾರಿಯರ್ ಕಾರಿನದ್ದೇ ಹವಾ..!

ಕಾರಿನ ಬೆಲೆಗಳು (ಅಂದಾಜು)

ಟಾಟಾ ಹ್ಯಾರಿಯರ್ ಕಾರುಗಳು 2018ರ ಕೊನೆಯಲ್ಲಿ ಇಲ್ಲವೇ 2019ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಮಾರುಕಟ್ಟೆಗೆ ಲಗ್ಗೆಯಿಡಲಿದ್ದು, ಹೊಸ ಕಾರಿನ ಬೆಲೆಗಳು ರೂ. 12 ಲಕ್ಷದಿಂದ ರೂ. 15 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

ಬಿಡುಗಡೆ ಸಿದ್ದವಾಗಿರುವ ಟಾಟಾ ಹ್ಯಾರಿಯರ್ ಕಾರುಗಳ ವೈಶಿಷ್ಟ್ಯತೆಗಳನ್ನು ತಿಳಿಯಲು ಇಲ್ಲಿರುವ ಫೋಟೋ ಗ್ಯಾಲರಿ ನೋಡಿ..

Most Read Articles

Kannada
Read more on tata motors suv new car
English summary
Exclusive: Tata Harrier SUV Spied Testing Again In Bangalore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X