ಮಹಾರಾಷ್ಟ್ರ ಸರ್ಕಾರಕ್ಕೆ 1 ಸಾವಿರ ಎಲೆಕ್ಟ್ರಿಕ್ ಕಾರುಗಳನ್ನು ಒದಗಿಸಲಿದೆ ಟಾಟಾ..

ನೀತಿ ಆಯೋಗದ ಶಿಫಾರಸ್ಸು ಅನ್ವಯ ಮಹಾರಾಷ್ಟ್ರ ಸರ್ಕಾರವು ಎಲೆಕ್ಟ್ರಿಕ್ ಕಾರುಗಳ ಖರೀದಿಗೆ ಉತ್ಸುಕವಾಗಿದ್ದು, ದೇಶದ ಜನಪ್ರಿಯ ಕಾರು ಉತ್ಪಾದನಾ ಸಂಸ್ಥೆಯಾದ ಟಾಟಾ ಮೋಟಾರ್ಸ್ ಜೊತೆಗೆ ಮಹತ್ವದ ಒಪ್ಪಂದ ಮಾಡಿಕೊಂಡಿದೆ.

By Praveen Sannamani

ಸರ್ಕಾರಿ ಕಚೇರಿಗಳಲ್ಲಿ ಎಲೆಕ್ಟ್ರಿಕ್ ಕಾರುಗಳನ್ನೇ ಬಳಕೆ ಮಾಡುವಂತೆ ಮಹತ್ವದ ಸೂಚನೆ ನೀಡಿರುವ ನೀತಿ ಆಯೋಗದ ಶಿಫಾರಸ್ಸು ಅನ್ವಯ ಮಹಾರಾಷ್ಟ್ರ ಸರ್ಕಾರವು ಎಲೆಕ್ಟ್ರಿಕ್ ಕಾರುಗಳ ಖರೀದಿಗೆ ಉತ್ಸುಕವಾಗಿದ್ದು, ದೇಶದ ಜನಪ್ರಿಯ ಕಾರು ಉತ್ಪಾದನಾ ಸಂಸ್ಥೆಯಾದ ಟಾಟಾ ಮೋಟಾರ್ಸ್ ಜೊತೆಗೆ ಮಹತ್ವದ ಒಪ್ಪಂದ ಮಾಡಿಕೊಂಡಿದೆ.

ಮಹಾರಾಷ್ಟ್ರ ಸರ್ಕಾರಕ್ಕೆ 1 ಸಾವಿರ ಎಲೆಕ್ಟ್ರಿಕ್ ಕಾರುಗಳನ್ನು ಒದಗಿಸಲಿದೆ ಟಾಟಾ..

ಎಲೆಕ್ಟ್ರಿಕ್ ಕಾರುಗಳನ್ನು ಒದಗಿಸುವ ಕುರಿತಂತೆ ಟಾಟಾ ಮೋಟಾರ್ಸ್ ಜೊತೆಗೆ ಮಹತ್ವದ ಒಪ್ಪಂದ ಮಾಡಿರುವ ಮಹಾರಾಷ್ಟ್ರ ಸರ್ಕಾರವು, ಮುಂದಿನ 6 ತಿಂಗಳ ಅವಧಿಯಲ್ಲಿ ಒಟ್ಟು 1 ಸಾವಿರ ಎಲೆಕ್ಟ್ರಿಕ್ ಕಾರುಗಳು ಮತ್ತು ಎಲೆಕ್ಟ್ರಿಕ್ ಎಂಜಿನ್ ಪ್ರೇರಿತ ವಾಣಿಜ್ಯ ವಾಹನಗಳನ್ನು ಒಗದಿಸುವ ಒಡಂಬಡಿಕೆಗೆ ಪರಸ್ಪರ ಸಹಿ ಹಾಕಿವೆ.

ಮಹಾರಾಷ್ಟ್ರ ಸರ್ಕಾರಕ್ಕೆ 1 ಸಾವಿರ ಎಲೆಕ್ಟ್ರಿಕ್ ಕಾರುಗಳನ್ನು ಒದಗಿಸಲಿದೆ ಟಾಟಾ..

ಜೊತೆಗೆ ಎಲೆಕ್ಟ್ರಿಕ್ ಕಾರುಗಳಿಗೆ ಸಹಾಯವಾಗುವಂತೆ ಅಗತ್ಯ ಚಾರ್ಜಿಂಗ್ ಸ್ಟೇಷನ್‌ಗಳನ್ನು ನಿರ್ಮಾಣ ಮಾಡಲು ಮಹಾರಾಷ್ಟ್ರ ಸರ್ಕಾರ ಸಹ ಟಾಟಾ ಸಂಸ್ಥೆಗೆ ಒಪ್ಪಿಗೆ ಸೂಚಿಸಿದ್ದು, ಇ-ಮೊಬಿಲಿಟಿ ಅಭಿವೃದ್ದಿಗಾಗಿ ಹೊಸ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳುವಂತೆಯೂ ಟಾಟಾ ಸಂಸ್ಥೆಯು ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿದೆ.

ಮಹಾರಾಷ್ಟ್ರ ಸರ್ಕಾರಕ್ಕೆ 1 ಸಾವಿರ ಎಲೆಕ್ಟ್ರಿಕ್ ಕಾರುಗಳನ್ನು ಒದಗಿಸಲಿದೆ ಟಾಟಾ..

ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಟಾಟಾ ಮೋಟಾರ್ಸ್‌ನ ಎಂಡಿ ಗುಂಟೆರ್​ ಬುಟ್ಸ್ಚೆಕ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ರೊಂದಿಗೆ ಹೊಸ ಒಡಂಬಡಿಕೆಗೆ ಸಹಿ ಹಾಕಿ ಮಾತನಾಡಿದ್ದು, ಮಹಾರಾಷ್ಟ್ರ ಸರ್ಕಾರದ ನಿರ್ಧಾರಕ್ಕೆ ಹರ್ಷ ವ್ಯಕ್ತಪಡಿಸಿದ್ದಲ್ಲದೇ, ಇ-ಮೊಬಿಲಿಟಿ ಜನಪ್ರಿಯತೆಗೊಳಿಸಲು ಸರ್ಕಾರದ ಮಟ್ಟದಲ್ಲಿ ಇಂತಹ ಕಾರ್ಯಕ್ರಮಗಳು ಇನ್ನಷ್ಟು ಹೆಚ್ಚಾಗಲಿ ಎಂಬ ಅಭಿಲಾಷೆ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರಕ್ಕೆ 1 ಸಾವಿರ ಎಲೆಕ್ಟ್ರಿಕ್ ಕಾರುಗಳನ್ನು ಒದಗಿಸಲಿದೆ ಟಾಟಾ..

ಇನ್ನು ಟಾಟಾ ಮೋಟಾರ್ಸ್ ಸಂಸ್ಥೆಯು ಹೊಸ ಯೋಜನೆಯ ಮೊದಲ ಭಾಗವಾಗಿ 5 ಟಿಗೋರ್ ಇವಿ ಕಾರುಗಳನ್ನು ಮಹಾರಾಷ್ಟ್ರ ಸರ್ಕಾರಕ್ಕೆ ಒದಗಿಸಿದ್ದು, ಗೇಟ್‌ವೇ ಆಫ್ ಇಂಡಿಯಾ ಬಳಿ ಹೊಸ ಕಾರುಗಳಿಗೆ ಗ್ರೀನ್ ಸಿಗ್ನಲ್ ನೀಡುವ ಮೂಲಕ ಮುಂಬೈ ಜನತೆಯಲ್ಲಿ ಎಲೆಕ್ಟ್ರಿಕ್ ಕಾರುಗಳ ಅಗತ್ಯತೆ ಬಗೆಗೆ ಅರಿವು ಮೂಡಿಸುತ್ತಿದೆ.

ಮಹಾರಾಷ್ಟ್ರ ಸರ್ಕಾರಕ್ಕೆ 1 ಸಾವಿರ ಎಲೆಕ್ಟ್ರಿಕ್ ಕಾರುಗಳನ್ನು ಒದಗಿಸಲಿದೆ ಟಾಟಾ..

ಇದಲ್ಲದೇ ಟಾಟಾ ಮೋಟಾರ್ಸ್ ಸಂಸ್ಥೆಯು ಸದ್ಯ ಟಿಗೋರ್ ಇವಿ ಕಾರುಗಳ ಉತ್ಪಾದನೆ ಮೇಲೆಯೇ ಹೆಚ್ಚಿನ ಒತ್ತು ನೀಡುತ್ತಿದ್ದು, ಟಿಗೋರ್ ಎಲೆಕ್ಟ್ರಿಕ್ ಕಾರುಗಳು 40ಬಿಎಚ್‌ಪಿ ಉತ್ಪಾದನಾ ಸಾಮರ್ಥ್ಯದೊಂದಿಗೆ ಇತರೆ ಇವಿ ಕಾರುಗಳಿಂತಲೂ ಉತ್ತಮವಾಗಿವೆ ಎಂಬುವುದನ್ನು ಸಾಬೀತುಪಡಿಸಿವೆ.

ಮಹಾರಾಷ್ಟ್ರ ಸರ್ಕಾರಕ್ಕೆ 1 ಸಾವಿರ ಎಲೆಕ್ಟ್ರಿಕ್ ಕಾರುಗಳನ್ನು ಒದಗಿಸಲಿದೆ ಟಾಟಾ..

ಜೊತೆಗೆ 2+3 ಪ್ರಯಾಣಿಕ ಸೀಟುಗಳು ಹೊಂದಿರುವ ಟಿಗೋರ್ ಎಲೆಕ್ಟ್ರಿಕ್ ಕಾರುಗಳು, 1,216 ಕೆಜಿ ಭಾರ ಪಡೆದುಕೊಳ್ಳುವ ಮೂಲಕ ಮಹೀಂದ್ರಾ ವೆರಿಟೋ ಕಾರಿಗಿಂತ 200 ಕೆಜಿಯಷ್ಚು ಹಗುರವಾಗಿದೆ ಎನ್ನಲಾಗಿದೆ.

ಮಹಾರಾಷ್ಟ್ರ ಸರ್ಕಾರಕ್ಕೆ 1 ಸಾವಿರ ಎಲೆಕ್ಟ್ರಿಕ್ ಕಾರುಗಳನ್ನು ಒದಗಿಸಲಿದೆ ಟಾಟಾ..

ಬ್ಯಾಟರಿ ಸಾಮರ್ಥ್ಯ

ಟಿಗೋರ್ ಎಲೆಕ್ಟ್ರಿಕ್ ಕಾರು ಮಾದರಿಯಲ್ಲಿ ಸುಧಾರಿತ ತಂತ್ರಜ್ಞಾನ ಪ್ರೇರಿತ ಬ್ಯಾಟರಿ ಬಳಕೆ ಮಾಡಲಾಗಿದ್ದು, ಒಂದು ಬಾರಿ ಪೂರ್ಣ ಪ್ರಮಾಣದ ಬ್ಯಾಟರಿ ಚಾರ್ಜಿಂಗ್ ಮಾಡಿದಲ್ಲಿ ಗರಿಷ್ಠವಾಗಿ 150 ಕಿ.ಮಿ ಮೈಲೇಜ್ ಒದಗಿಸಲಿದೆ ಎಂದು ಟಾಟಾ ಸಂಸ್ಥೆ ಹೇಳಿಕೊಂಡಿದೆ.

ಮಹಾರಾಷ್ಟ್ರ ಸರ್ಕಾರಕ್ಕೆ 1 ಸಾವಿರ ಎಲೆಕ್ಟ್ರಿಕ್ ಕಾರುಗಳನ್ನು ಒದಗಿಸಲಿದೆ ಟಾಟಾ..

ಹೀಗಾಗಿ ಇದು ಭಾರತೀಯ ಗ್ರಾಹಕರನ್ನು ಸೆಳೆಯುವ ವಿಶ್ವಾಸವನ್ನು ಹೊಂದಿರುವ ಟಾಟಾ ಸಂಸ್ಥೆಯು, ಟಿಗೋರ್ ಜೊತೆಗೆ ಮತ್ತೊಂದು ಜನಪ್ರಿಯ ಕಾರು ಮಾದರಿಯಾದ ನ್ಯಾನೋ ಆವೃತ್ತಿಯನ್ನು ಕೂಡಾ ಎಲೆಕ್ಟ್ರಿಕ್ ಎಂಜಿನ್ ಜೊತೆಗೆ ಬಿಡುಗಡೆಗೊಳಿಸುವ ಇರಾದೆಯಲ್ಲಿದೆ.

Most Read Articles

Kannada
Read more on tata motors electric cars
English summary
Tata Motors & Maharashtra Government Sign MoU; Will Provide 1000 Electric Vehicles.
Story first published: Wednesday, June 6, 2018, 11:06 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X