ಟಾಟಾ ನೆಕ್ಸಾನ್ ಎಎಂಟಿ ಆವೃತ್ತಿಯ ಖರೀದಿಗಾಗಿ ಬುಕ್ಕಿಂಗ್ ಪ್ರಕ್ರಿಯೆ ಆರಂಭ...

ಟಾಟಾ ನೆಕ್ಸಾನ್ ಕಾರು ಆವೃತ್ತಿಗಳು ಕೇವಲ ಮ್ಯಾನುವಲ್ ಗೇರ್‌ಬಾಕ್ಸ್ ಸೌಲಭ್ಯದೊಂದಿಗೆ ಮಾತ್ರ ಮಾರಾಟಕ್ಕೆ ಲಭ್ಯವಾಗಿದ್ದವು. ಇದೀಗ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆವೃತ್ತಿಯನ್ನು ಕೂಡಾ ಪರಿಚಯಿಸಲಾಗುತ್ತಿದೆ.

By Praveen

ಕಳೆದ ಸಪ್ಟೆಂಬರ್‌ನಲ್ಲಿ ದೇಶಿಯ ಮಾರುಕಟ್ಟೆಗೆ ಭರ್ಜರಿ ಎಂಟ್ರಿ ಕೊಟ್ಟಿದ್ದ ಟಾಟಾ ನೆಕ್ಸಾನ್ ಕಾರು ಆವೃತ್ತಿಗಳು ಕೇವಲ ಮ್ಯಾನುವಲ್ ಗೇರ್‌ಬಾಕ್ಸ್ ಸೌಲಭ್ಯದೊಂದಿಗೆ ಮಾತ್ರ ಮಾರಾಟಕ್ಕೆ ಲಭ್ಯವಾಗಿದ್ದವು. ಇದೀಗ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆವೃತ್ತಿಯನ್ನು ಕೂಡಾ ಪರಿಚಯಿಸಲಾಗುತ್ತಿದೆ.

ಟಾಟಾ ನೆಕ್ಸಾನ್ ಎಎಂಟಿ ಆವೃತ್ತಿಯ ಖರೀದಿಗಾಗಿ ಬುಕ್ಕಿಂಗ್ ಪ್ರಕ್ರಿಯೆ ಆರಂಭ...

ಮಾರ್ಚ್ ಮೊದಲ ವಾರವೇ ನೆಕ್ಸಾನ್ ಎಎಂಟಿ(ಆಟೋಮ್ಯಾಟಿಕ್ ಗೇರ್‌ಬಾಕ್ಸ್) ಆವೃತ್ತಿಗಳು ಖರೀದಿಗೆ ಲಭ್ಯವಾಗಲಿದ್ದು, ಆಸಕ್ತ ಗ್ರಾಹಕರು ರೂ. 11 ಸಾವಿರ ಮುಂಗಡ ಪಾವತಿಸಿ ಹೊಸ ಕಾರನ್ನು ಬುಕ್ಕಿಂಗ್ ಮಾಡಬಹುದಾಗಿದೆ.

ಟಾಟಾ ನೆಕ್ಸಾನ್ ಎಎಂಟಿ ಆವೃತ್ತಿಯ ಖರೀದಿಗಾಗಿ ಬುಕ್ಕಿಂಗ್ ಪ್ರಕ್ರಿಯೆ ಆರಂಭ...

ಫೋರ್ಡ್ ಇಕೋ ಸ್ಪೋರ್ಟ್ ಎಎಂಟಿ, ಮಹೀಂದ್ರಾ ಟಿಯುವಿ300 ಎಎಂಟಿ ಆವೃತ್ತಿಗಳಿಗೆ ತೀವ್ರ ಪೈಪೋಟಿ ನೀಡಲಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ನೆಕ್ಸಾನ್ ಎಎಂಟಿ ಮಾದರಿಯನ್ನು ಅಭಿವೃದ್ಧಿ ಮಾಡಲಾಗಿದೆ.

ಟಾಟಾ ನೆಕ್ಸಾನ್ ಎಎಂಟಿ ಆವೃತ್ತಿಯ ಖರೀದಿಗಾಗಿ ಬುಕ್ಕಿಂಗ್ ಪ್ರಕ್ರಿಯೆ ಆರಂಭ...

ಸದ್ಯ ಮಾರುಕಟ್ಟೆಯಲ್ಲಿ ಲಭ್ಯವಿರುವ ಟಾಟಾ ನೆಕ್ಸಾನ್ ಆವೃತ್ತಿಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ವ್ಯವಸ್ಥೆಯನ್ನು ಒದಗಿಸಲಾಗಿದ್ದು, ಗ್ರಾಹಕರ ಬೇಡಿಕೆ ಹಿನ್ನೆಲೆ ಇದೀಗ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಒದಗಿಸಲು ಮುಂದಾಗಿದೆ.

ಟಾಟಾ ನೆಕ್ಸಾನ್ ಎಎಂಟಿ ಆವೃತ್ತಿಯ ಖರೀದಿಗಾಗಿ ಬುಕ್ಕಿಂಗ್ ಪ್ರಕ್ರಿಯೆ ಆರಂಭ...

ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಗಳಿಗೆ ಈಗಾಗಲೇ ಸಾವಿರಾರು ಗ್ರಾಹಕರು ಬೇಡಿಕೆಯಿಟ್ಟಿದ್ದು, ಈ ಹಿನ್ನೆಲೆ ಮಹತ್ವದ ಯೋಜನೆ ರೂಪಿಸಿರುವ ಟಾಟಾ ಮೋಟಾರ್ಸ್ ಸಂಸ್ಥೆಯು ಮಾರ್ಚ್ ಮೊದಲ ವಾರದಲ್ಲಿ ಆಟೋಮ್ಯಾಟಿಕ್ ಗೇರ್‍‌ಬಾಕ್ಸ್ ಆವೃತ್ತಿಯನ್ನು ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ.

ಟಾಟಾ ನೆಕ್ಸಾನ್ ಎಎಂಟಿ ಆವೃತ್ತಿಯ ಖರೀದಿಗಾಗಿ ಬುಕ್ಕಿಂಗ್ ಪ್ರಕ್ರಿಯೆ ಆರಂಭ...

ಇನ್ನು ವಿಶಿಷ್ಟ ವಿನ್ಯಾಸಗಳೊಂದಿಗೆ ಎಸ್‌ಯುವಿ ಪ್ರಿಯರನ್ನು ಸೆಳೆಯುವಲ್ಲಿ ಯಶಸ್ವಿಯಾಗಿರುವ ನೆಕ್ಸಾನ್ ಆವೃತ್ತಿಯು ಇಂಪ್ಯಾಕ್ಟ್ 2.0 ಡಿಸೈನ್‌ನೊಂದಿಗೆ ಅಭಿವೃದ್ಧಿಗೊಂಡಿದ್ದು, ಮಲ್ಟಿ ಡ್ರೈವ್ ಮೋಡ್, ತೇಲುವ ಡ್ಯಾಶ್ ಟಾಪ್ ಎಚ್‌ಡಿ ಟಚ್‌ಸ್ಕ್ರೀನ್, ಹರ್ಮನ್ ಇನ್ಫೋಟೈನ್ಮೆಂಟ್ ಸಿಸ್ಟಂ, ಬೃಹತ್ತಾದ ಸೆಂಟ್ರಲ್ ಕನ್ಸಾಲ್ ಪಡೆದುಕೊಂಡಿರುವುದು ಹೊಸ ನೀರಿಕ್ಷೆ ಹುಟ್ಟುಹಾಕಿದೆ.

ಟಾಟಾ ನೆಕ್ಸಾನ್ ಎಎಂಟಿ ಆವೃತ್ತಿಯ ಖರೀದಿಗಾಗಿ ಬುಕ್ಕಿಂಗ್ ಪ್ರಕ್ರಿಯೆ ಆರಂಭ...

ಎಂಜಿನ್ ಸಾಮರ್ಥ್ಯ

ನೂತನ ಟಾಟಾ ನೆಕ್ಸಾನ್ ಆವೃತ್ತಿಯು 1.2 ಲೀಟರ್ ಟರ್ಬೊಚಾರ್ಜ್ಡ್ ಪೆಟ್ರೋಲ್ ರೆವೊಟ್ರಾನ್ ಮತ್ತು 1.5 ಲೀಟರ್ ರೆವೊಟಾರ್ಕ್ ಡೀಸೆಲ್ ಎಂಜಿನ್ ಆಳವಡಿಸಲಾಗಿದ್ದು, ಹೊಸತಾದ 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್‌ನೊಂದಿಗೆ ಪರಿಚಯಿಸಲಾಗಿದೆ.

ಟಾಟಾ ನೆಕ್ಸಾನ್ ಎಎಂಟಿ ಆವೃತ್ತಿಯ ಖರೀದಿಗಾಗಿ ಬುಕ್ಕಿಂಗ್ ಪ್ರಕ್ರಿಯೆ ಆರಂಭ...

ಬೆಲೆ (ಬೆಂಗಳೂರು ಎಕ್ಸ್‌ಶೋರಂ)

ಪೆಟ್ರೋಲ್ ಆವೃತ್ತಿಯ ಆರಂಭಿಕ ಕಾರಿನ ಬೆಲೆಯು ರೂ. 5.94 ಲಕ್ಷಕ್ಕೆ ಮತ್ತು ಉನ್ನತ ಆವೃತ್ತಿಯ ಬೆಲೆಯು ರೂ8.69 ಲಕ್ಷಕ್ಕೆ ಲಭ್ಯವಿದ್ದರೆ ಡೀಸೆಲ್ ಆವೃತ್ತಿಯ ಆರಂಭಿಕ ಬೆಲೆಯು ರೂ. 6.85 ಲಕ್ಷಕ್ಕೆ ಮತ್ತು ಉನ್ನತ ಆವೃತ್ತಿಯನ್ನು ರೂ.9.54 ಲಕ್ಷಕ್ಕೆ ಖರೀದಿಸಬಹುದಾಗಿದೆ.

ಟಾಟಾ ನೆಕ್ಸಾನ್ ಎಎಂಟಿ ಆವೃತ್ತಿಯ ಖರೀದಿಗಾಗಿ ಬುಕ್ಕಿಂಗ್ ಪ್ರಕ್ರಿಯೆ ಆರಂಭ...

ಇದಲ್ಲದೇ ನೆಕ್ಸಾನ್ ಮಾದರಿಯ ಮತ್ತಷ್ಟು ವಿಶೇಷತೆಗಳ ಬಗ್ಗೆ ಹೇಳುವುದಾದರೆ, ಈ ಕಾರು ರಿವರ್ಸ್ ಕ್ಯಾಮೆರಾ, 6.5 ಇಂಚಿನ ಇನ್ಫೋಟೈನ್ಮೆಂಟ್ ಸಿಸ್ಟಮ್ ಎಚ್‌ಡಿ ಡಿಸ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಸೌಲಭ್ಯಗಳನ್ನು ಹೊಂದಿದೆ.

Article Published On: Thursday, February 22, 2018, 14:30 [IST]
English summary
Tata Nexon AMT Bookings Open At Dealership Level: Booking Amount, Delivery Details & Expected Launch.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+