ಟಾಟಾ ನೆಕ್ಸಾನ್ ಎಎಂಟಿ ಆವೃತ್ತಿ ಕಾರುಗಳ ಬಿಡುಗಡೆಗೆ ದಿನಗಣನೆ..

ಕಳೆದ ಸಪ್ಟೆಂಬರ್‌ನಲ್ಲಿ ದೇಶಿಯ ಮಾರುಕಟ್ಟೆಗೆ ಭರ್ಜರಿ ಎಂಟ್ರಿ ಕೊಟ್ಟಿದ್ದ ಟಾಟಾ ನೆಕ್ಸಾನ್ ಕಾರು ಆವೃತ್ತಿಗಳು ಕೇವಲ ಮ್ಯಾನುವಲ್ ಗೇರ್‌ಬಾಕ್ಸ್ ಸೌಲಭ್ಯದೊಂದಿಗೆ ಮಾತ್ರ ಮಾರಾಟಕ್ಕೆ ಲಭ್ಯವಾಗಿದ್ದವು.

By Rahul Ts

ಕಳೆದ ಸಪ್ಟೆಂಬರ್‌ನಲ್ಲಿ ದೇಶಿಯ ಮಾರುಕಟ್ಟೆಗೆ ಭರ್ಜರಿ ಎಂಟ್ರಿ ಕೊಟ್ಟಿದ್ದ ಟಾಟಾ ನೆಕ್ಸಾನ್ ಕಾರು ಆವೃತ್ತಿಗಳು ಕೇವಲ ಮ್ಯಾನುವಲ್ ಗೇರ್‌ಬಾಕ್ಸ್ ಸೌಲಭ್ಯದೊಂದಿಗೆ ಮಾತ್ರ ಮಾರಾಟಕ್ಕೆ ಲಭ್ಯವಾಗಿದ್ದವು. ಇದೀಗ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆವೃತ್ತಿಯನ್ನು ಕೂಡಾ ಪರಿಚಯಿಸಲಾಗುತ್ತಿದೆ.

ಟಾಟಾ ನೆಕ್ಸಾನ್ ಎಎಂಟಿ ಆವೃತ್ತಿ ಕಾರುಗಳ ಬಿಡುಗಡೆಗೆ ದಿನಗಣನೆ..

ಟಾಟಾ ನೆಕ್ಸಾನ್ ಎಎಂಟಿ ಕಾರು ಮೊದಲ ಬಾರಿಗೆ ದೆಹಲಿಯಲ್ಲಿ ನಡೆದ 2018ರ ಆಟೋ ಎಕ್ಸ್ ಪೋ ಮೇಳದಲ್ಲಿ ಅನಾವರಣಗೊಳಿಸಲಾಗಿದ್ದು, ಇದೇ ತಿಂಗಳು ಅಥವ ಮುಂದಿನ ತಿಂಗಳಿನಲ್ಲಿ ಬಿಡುಗಡೆಗೊಳ್ಳಲಿದೆ ಎನ್ನಲಾಗಿದೆ.

ಟಾಟಾ ನೆಕ್ಸಾನ್ ಎಎಂಟಿ ಆವೃತ್ತಿ ಕಾರುಗಳ ಬಿಡುಗಡೆಗೆ ದಿನಗಣನೆ..

ಮಾಹಿತಿಗಳ ಪ್ರಕಾರ ಸಂಸ್ಥೆಯು ನೆಕ್ಸಾನ್ ಎಎಂಟಿ ಕಾರುಗಳನ್ನು ಇಂಡಿಯನ್ ಪ್ರಿಮಿಯರ್ ಲೀಗ್ (IPL) ಮುಗಿಯುವುದರ ಒಳಗೆ (ಏಪ್ರಿಲ್ 7 - ಮೇ 27) ಬಿಡುಗಡೆಗೊಳಿಸುವ ಮೂಲಕ ಟಾಟಾ ಕಾರುಗಳ ಪ್ರಿಯರಿಗೆ ಸರ್ಪ್ರೈಸ್ ನೀಡಲಿದೆ ಎನ್ನಲಾಗಿದೆ.

ಟಾಟಾ ನೆಕ್ಸಾನ್ ಎಎಂಟಿ ಆವೃತ್ತಿ ಕಾರುಗಳ ಬಿಡುಗಡೆಗೆ ದಿನಗಣನೆ..

ಫೋರ್ಡ್ ಇಕೋ ಸ್ಪೋರ್ಟ್ ಎಎಂಟಿ, ಮಹೀಂದ್ರಾ ಟಿಯುವಿ300 ಎಎಂಟಿ ಆವೃತ್ತಿಗಳಿಗೆ ತೀವ್ರ ಪೈಪೋಟಿ ನೀಡಲಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ನೆಕ್ಸಾನ್ ಎಎಂಟಿ ಮಾದರಿಯನ್ನು ಅಭಿವೃದ್ಧಿ ಮಾಡಲಾಗಿದೆ.

ಟಾಟಾ ನೆಕ್ಸಾನ್ ಎಎಂಟಿ ಆವೃತ್ತಿ ಕಾರುಗಳ ಬಿಡುಗಡೆಗೆ ದಿನಗಣನೆ..

ಸದ್ಯ ಮಾರುಕಟ್ಟೆಯಲ್ಲಿ ಲಭ್ಯವಿರುವ ಟಾಟಾ ನೆಕ್ಸಾನ್ ಆವೃತ್ತಿಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ವ್ಯವಸ್ಥೆಯನ್ನು ಒದಗಿಸಲಾಗಿದ್ದು, ಗ್ರಾಹಕರ ಬೇಡಿಕೆ ಹಿನ್ನೆಲೆ ಇದೀಗ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಒದಗಿಸಲು ಮುಂದಾಗಿದೆ.

ಟಾಟಾ ನೆಕ್ಸಾನ್ ಎಎಂಟಿ ಆವೃತ್ತಿ ಕಾರುಗಳ ಬಿಡುಗಡೆಗೆ ದಿನಗಣನೆ..

ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಗಳಿಗೆ ಈಗಾಗಲೇ ಸಾವಿರಾರು ಗ್ರಾಹಕರು ಬೇಡಿಕೆಯಿಟ್ಟಿದ್ದು, ಈ ಹಿನ್ನೆಲೆ ಮಹತ್ವದ ಯೋಜನೆ ರೂಪಿಸಿರುವ ಟಾಟಾ ಮೋಟಾರ್ಸ್ ಸಂಸ್ಥೆಯು ಮಾರ್ಚ್ ಮೊದಲ ವಾರದಲ್ಲಿ ಆಟೋಮ್ಯಾಟಿಕ್ ಗೇರ್‍‌ಬಾಕ್ಸ್ ಆವೃತ್ತಿಯನ್ನು ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ.

ಟಾಟಾ ನೆಕ್ಸಾನ್ ಎಎಂಟಿ ಆವೃತ್ತಿ ಕಾರುಗಳ ಬಿಡುಗಡೆಗೆ ದಿನಗಣನೆ..

ಇನ್ನು ವಿಶಿಷ್ಟ ವಿನ್ಯಾಸಗಳೊಂದಿಗೆ ಎಸ್‌ಯುವಿ ಪ್ರಿಯರನ್ನು ಸೆಳೆಯುವಲ್ಲಿ ಯಶಸ್ವಿಯಾಗಿರುವ ನೆಕ್ಸಾನ್ ಆವೃತ್ತಿಯು ಇಂಪ್ಯಾಕ್ಟ್ 2.0 ಡಿಸೈನ್‌ನೊಂದಿಗೆ ಅಭಿವೃದ್ಧಿಗೊಂಡಿದ್ದು, ಮಲ್ಟಿ ಡ್ರೈವ್ ಮೋಡ್, ತೇಲುವ ಡ್ಯಾಶ್ ಟಾಪ್ ಎಚ್‌ಡಿ ಟಚ್‌ಸ್ಕ್ರೀನ್, ಹರ್ಮನ್ ಇನ್ಫೋಟೈನ್ಮೆಂಟ್ ಸಿಸ್ಟಂ, ಬೃಹತ್ತಾದ ಸೆಂಟ್ರಲ್ ಕನ್ಸಾಲ್ ಪಡೆದುಕೊಂಡಿರುವುದು ಹೊಸ ನೀರಿಕ್ಷೆ ಹುಟ್ಟುಹಾಕಿದೆ.

ಟಾಟಾ ನೆಕ್ಸಾನ್ ಎಎಂಟಿ ಆವೃತ್ತಿ ಕಾರುಗಳ ಬಿಡುಗಡೆಗೆ ದಿನಗಣನೆ..

ಎಂಜಿನ್ ಸಾಮರ್ಥ್ಯ

ನೂತನ ಟಾಟಾ ನೆಕ್ಸಾನ್ ಆವೃತ್ತಿಯು 1.2 ಲೀಟರ್ ಟರ್ಬೊಚಾರ್ಜ್ಡ್ ಪೆಟ್ರೋಲ್ ರೆವೊಟ್ರಾನ್ ಮತ್ತು 1.5 ಲೀಟರ್ ರೆವೊಟಾರ್ಕ್ ಡೀಸೆಲ್ ಎಂಜಿನ್ ಆಳವಡಿಸಲಾಗಿದ್ದು, ಹೊಸತಾದ 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್‌ನೊಂದಿಗೆ ಪರಿಚಯಿಸಲಾಗಿದೆ.

ಟಾಟಾ ನೆಕ್ಸಾನ್ ಎಎಂಟಿ ಆವೃತ್ತಿ ಕಾರುಗಳ ಬಿಡುಗಡೆಗೆ ದಿನಗಣನೆ..

ಬೆಲೆ (ಬೆಂಗಳೂರು ಎಕ್ಸ್‌ಶೋರಂ)

ಪೆಟ್ರೋಲ್ ಆವೃತ್ತಿಯ ಆರಂಭಿಕ ಕಾರಿನ ಬೆಲೆಯು ರೂ. 5.94 ಲಕ್ಷಕ್ಕೆ ಮತ್ತು ಉನ್ನತ ಆವೃತ್ತಿಯ ಬೆಲೆಯು ರೂ8.69 ಲಕ್ಷಕ್ಕೆ ಲಭ್ಯವಿದ್ದರೆ ಡೀಸೆಲ್ ಆವೃತ್ತಿಯ ಆರಂಭಿಕ ಬೆಲೆಯು ರೂ. 6.85 ಲಕ್ಷಕ್ಕೆ ಮತ್ತು ಉನ್ನತ ಆವೃತ್ತಿಯನ್ನು ರೂ.9.54 ಲಕ್ಷಕ್ಕೆ ಖರೀದಿಸಬಹುದಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವಿಭಾಗದಲ್ಲಿನ ಟಾಪ್ ಸ್ಟೋರಿಗಳು:

ನಟ ಹೃತಿಕ್ ರೋಷನ್‍ ಖರೀದಿ ಮಾಡಿದ ಹೊಸ ಐಷಾರಾಮಿ ಕಾರು ಯಾವುದು ಗೊತ್ತಾ?

ರೈಲು ತಡೆ ವೇಳೆ ಅವಘಡ- ಹೈ ಟೆನ್ಷನ್ ವೈರ್ ತಾಗಿ ಸುಟ್ಟುಹೋದ ಯುವಕ

ಭಾರತೀಯ ಕ್ರಿಕೆಟ್ ಆಟಗಾರರ ಐಷಾರಾಮಿ ಕಾರುಗಳ ಭರ್ಜರಿ ಕಲೆಕ್ಷನ್ ಹೇಗಿದೆ ಗೊತ್ತಾ?

ಇಲ್ಲಿ ಇದ್ದವರಿಗೆ ಒಂದು ಕಾನೂನು.. ಇಲ್ಲದವರಿಗೆ ಇನ್ನೊಂದು ಕಾನೂನು..

ಟ್ರಾಫಿಕ್ ರೂಲ್ಸ್ ಬ್ರೇಕ್- ಮಗನನ್ನೇ ಹಿಡಿದು ದಂಡ ವಸೂಲಿ ಮಾಡಿದ ಪೊಲೀಸ್..

Most Read Articles

Kannada
Read more on tata motors suv
English summary
Tata Nexon AMT Launch Details Revealed.
Story first published: Thursday, April 12, 2018, 18:29 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X