ಆ್ಯಪಲ್ ಕಾರ್ ಪ್ಲೇ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟ ಟಾಟಾ ನೆಕ್ಸಾನ್

ಟಾಟಾ ಮೋಟಾರ್ಸ್ ಸಂಸ್ಥೆಯು ತನ್ನ ಜನಪ್ರಿಯ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಲ್ಲಿ ಭಾರೀ ಬದಲಾವಣೆ ತರುತ್ತಿದೆ.

By Praveen Sannamani

ಟಾಟಾ ಮೋಟಾರ್ಸ್ ಸಂಸ್ಥೆಯು ತನ್ನ ಜನಪ್ರಿಯ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಲ್ಲಿ ಭಾರೀ ಬದಲಾವಣೆ ತರುತ್ತಿದ್ದು, ಈ ಹಿಂದೆ ಆಟೋಮ್ಯಾಟಿಕ್ ಮತ್ತು ಎಲೆಕ್ಟ್ರಿಕ್ ಸನ್‌ರೂಫ್ ಹೊರತಂದಿದ್ದ ಟಾಟಾ ಸಂಸ್ಥೆಯು ಇದೀಗ ನೆಕ್ಸಾನ್‌ನಲ್ಲಿ ಖರೀದಿಗೆ ಲಭ್ಯವಿರುವ ಪ್ರತಿ ವೆರಿಯೆಂಟ್‌ಗಳಲ್ಲೂ ಆ್ಯಪಲ್ ಕಾರ್ ಪ್ಲೇ ಸೌಲಭ್ಯವನ್ನು ಸೇರ್ಪಡೆ ಮಾಡಿದೆ.

ಆ್ಯಪಲ್ ಕಾರ್ ಪ್ಲೇ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟ ಟಾಟಾ ನೆಕ್ಸಾನ್

ಟಾಟಾ ಮೋಟಾರ್ಸ್ ಸಂಸ್ಥೆಯು ಕಳೆದ ಸೆಪ್ಟೆಂಬರ್‌ನಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿದ್ದ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿಗಳಲ್ಲಿ ಹಲವಾರು ಬದಲಾವಣೆ ತರುತ್ತಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಇದೀಗ ಕಾರಿನಲ್ಲಿರುವ ಸಾಫ್ಟ್‌ವೇರ್ ಸೌಲಭ್ಯವನ್ನು ಉನ್ನತೀಕರಿಸುವ ಮೂಲಕ ಗ್ರಾಹಕರಿಗೆ ಗುಣಮಟ್ಟದ ಸೇವೆಗಳನ್ನು ಒದಗಿಸುತ್ತಿದೆ.

ಆ್ಯಪಲ್ ಕಾರ್ ಪ್ಲೇ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟ ಟಾಟಾ ನೆಕ್ಸಾನ್

ನೆಕ್ಸಾನ್ ಕಾರುಗಳಲ್ಲಿ ಲಭ್ಯವಿರುವ ಎಕ್ಸ್‌ಜೆಡ್, ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ಎ ಪ್ಲಸ್ ವೆರಿಯೆಂಟ್‌ಗಳಲ್ಲಿ ಆ್ಯಪಲ್ ಕಾರ್ ಪ್ಲೇ ಸೌಲಭ್ಯವನ್ನು ಒದಗಿಸುತ್ತಿದ್ದು, ಆಸಕ್ತ ನೆಕ್ಸಾನ್ ಗ್ರಾಹಕರು ನಿಮ್ಮ ಹತ್ತಿರದ ಡೀಲರ್ಸ್‌ಗಳಲ್ಲಿ ಹೊಸ ಸೌಲಭ್ಯವನ್ನು ಜೋಡಣೆ ಮಾಡಸಿಕೊಳ್ಳಬಹುದು.

ಆ್ಯಪಲ್ ಕಾರ್ ಪ್ಲೇ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟ ಟಾಟಾ ನೆಕ್ಸಾನ್

ಇನ್ನು ಇದೇ ತಿಂಗಳು ಕೊನೆಯಲ್ಲಿ ಖರೀದಿಗೆ ಲಭ್ಯವಾಗುವ ಹೊಸ ನೆಕ್ಸಾನ್‌ಗಳಲ್ಲಿ ಟಾಟಾ ಸಂಸ್ಥೆಯೇ ಹೊಸ ಆ್ಯಪಲ್ ಕಾರ್ ಪ್ಲೇ ಸೌಲಭ್ಯವನ್ನ ಜೋಡಣೆ ಮಾಡಿ ಮಾಾರಾಟ ಮಾಡಲಿದ್ದು, 6.5-ಇಂಚಿನ ಫ್ಲೋಟಿಂಗ್ ಟಚ್ ಸ್ಕ್ರೀನ್ ಜೊತೆ ಅಂಡ್ರಾಯ್ಡ್ ಆಟೋ ಸೌಲಭ್ಯವು ಸಹ ನೆಕ್ಸಾನ್ ಕಾರುಗಳಲ್ಲಿರಲಿದೆ.

ಆ್ಯಪಲ್ ಕಾರ್ ಪ್ಲೇ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟ ಟಾಟಾ ನೆಕ್ಸಾನ್

ಕಳೆದ ತಿಂಗಳ ಹಿಂದಷ್ಟೇ ಎಕ್ಸ್‌ಜೆಡ್ಎ ಪ್ಲಸ್ ಟಾಪ್ ಎಂಡ್ ನೆಕ್ಸಾನ್ ಕಾರುಗಳಲ್ಲಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಜೋಡಣೆ ಮಾಡಿದ್ದ ಟಾಟಾ ಸಂಸ್ಥೆಯು, ಗ್ರಾಹಕರ ಆಯ್ಕೆಯನ್ನ ಹೆಚ್ಚಿಸಿತ್ತು. ಇದೀಗ ಆಟೋ ಕಾರ್ ಪ್ಲೇ ಪರಿಚಯಿಸಿರುವುದು ಯುವ ಗ್ರಾಹಕರ ಆಯ್ಕೆಗೆ ಸಹಕಾರಿಯಾಗಲಿದೆ ಎನ್ನಬಹುದು.

ಆ್ಯಪಲ್ ಕಾರ್ ಪ್ಲೇ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟ ಟಾಟಾ ನೆಕ್ಸಾನ್

ಇದಲ್ಲದೇ ವಿಶಿಷ್ಟ ವಿನ್ಯಾಸಗಳೊಂದಿಗೆ ಎಸ್‌ಯುವಿ ಪ್ರಿಯರನ್ನು ಸೆಳೆಯುವಲ್ಲಿ ಯಶಸ್ವಿಯಾಗಿರುವ ನೆಕ್ಸಾನ್ ಆವೃತ್ತಿಗಳು ಇಂಪ್ಯಾಕ್ಟ್ 2.0 ಡಿಸೈನ್‌ನೊಂದಿಗೆ ಅಭಿವೃದ್ಧಿಗೊಂಡಿದ್ದು, ಮಲ್ಟಿ ಡ್ರೈವ್ ಮೋಡ್, ತೇಲುವ ಡ್ಯಾಶ್ ಟಾಪ್ ಎಚ್‌ಡಿ ಟಚ್‌ಸ್ಕ್ರೀನ್, ಹರ್ಮನ್ ಇನ್ಫೋಟೈನ್ಮೆಂಟ್ ಸಿಸ್ಟಂ, ಬೃಹತ್ತಾದ ಸೆಂಟ್ರಲ್ ಕನ್ಸಾಲ್ ಪಡೆದುಕೊಂಡಿರುವುದು ಕಾರಿನ ಮೌಲ್ಯವನ್ನ ಹೆಚ್ಚಿಸಿದೆ ಎನ್ನಬಹುದು.

ಆ್ಯಪಲ್ ಕಾರ್ ಪ್ಲೇ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟ ಟಾಟಾ ನೆಕ್ಸಾನ್

ಎಂಜಿನ್ ಸಾಮರ್ಥ್ಯ

1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಹೊಂದಿರುವ ಟಾಟಾ ನೆಕ್ಸಾನ್ ಝೆಡ್ಎಕ್ಸ್ ಮಾದರಿಗಳು, ಪೆಟ್ರೋಲ್ ಎಂಜಿನ್‌ನ ಮೂಲಕ 108ಬಿಎಚ್‌ಪಿ, 170ಎನ್ಎಂ ಟಾರ್ಕ್ ಮತ್ತು ಡೀಸೆಲ್ ಎಂಜಿನ್ ಮೂಲಕ 108ಬಿಎಚ್‌ಪಿ, 260ಎನ್ಎಂ ಟಾರ್ಕ್ ಉತ್ಪಾದಿಸಬಲ್ಲವು.

ಆ್ಯಪಲ್ ಕಾರ್ ಪ್ಲೇ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟ ಟಾಟಾ ನೆಕ್ಸಾನ್

ಜೊತೆಗೆ ಪ್ರಯಾಣಿಕರ ಸುರಕ್ಷತೆಗಾಗಿ ನೆಕ್ಸಾನ್ ಕಾರುಗಳಲ್ಲಿ ಚಾಲಕ ಮತ್ತು ಪ್ರಯಾಣಿಕ ಸೀಟುಗಳ ಕಡೆಗೆ ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್, ಐಸೋಫೆಕ್ಸ್ ಚೈಲ್ಡ್ ಮೌಟೆಂಡ್ ಸೀಟುಗಳು ಮತ್ತು ಬಲಿಷ್ಠ ಬಾಡಿ ಕಿಟ್ ಹೊಂದಿರುವುದು ಕಾರಿನ ಮತ್ತೊಂದು ವಿಶೇಷ.

ಆ್ಯಪಲ್ ಕಾರ್ ಪ್ಲೇ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟ ಟಾಟಾ ನೆಕ್ಸಾನ್

ಇದಲ್ಲದೇ ಮೊದಲ ಬಾರಿಗೆ ಮೆಡ್ ಇನ್ ಇಂಡಿಯಾ ಯೋಜನೆಯಡಿ ನಿರ್ಮಾಣವಾದ ಪ್ರಮುಖ ಕಾರುಗಳಲ್ಲಿ ಟಾಟಾ ನೆಕ್ಸಾನ್ ಕೂಡಾ ಒಂದಾಗಿದ್ದು, ದೇಶಿಯ ಮಾರುಕಟ್ಟೆಯ ಕಾರು ಮಾದರಿಯೊಂದು ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಉತ್ತಮ ರೇಟಿಂಗ್ ಗಳಿಸಿರುವ ಮೊದಲು ಮೊದಲ ಕಾರು ಅಂದ್ರೆ ನೀವು ನಂಬಲೇಬೇಕು.

Most Read Articles

Kannada
Read more on tata motors suv
English summary
Tata Nexon Gets Apple CarPlay With The Latest Software Update.
Story first published: Thursday, August 9, 2018, 13:26 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X