ನಿಯಂತ್ರಣ ತಪ್ಪಿ 20 ಅಡಿ ಹಳ್ಳಕ್ಕೆ ಬಿದ್ದ ಟಾಟಾ ನೆಕ್ಸಾನ್- ಕಾರಿನಲ್ಲಿದ್ದವರಿಗೆ ಪರಿಸ್ಥಿತಿ ಏನಾಯ್ತು ಗೊತ್ತಾ?

ಕಡಿಮೆ ಸುರಕ್ಷಾ ಸಾಧನಗಳಿಂದಾಗಿಯೇ ಪ್ರಾಣಹಾನಿ ಹೆಚ್ಚುತ್ತಿರುವುದು ಕಳವಳಕಾರಿ ಅಂಶವಾಗಿದ್ದು, ವಾಹನಗಳಲ್ಲಿರುವ ಸುರಕ್ಷಾ ಸೌಲಭ್ಯಗಳು ಅಪಘಾತದ ಸಂದರ್ಭದಲ್ಲಿ ಹೇಗೆ ಸಹಾಯಕ್ಕೆ ಬರುತ್ತವೇ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ.

By Praveen Sannamani

ದೇಶದಲ್ಲಿ ಪ್ರತಿ ಗಂಟೆಗೊಂದು ಭೀಕರ ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ. ಬಹುತೇಕ ಪ್ರಕರಣಗಳಲ್ಲಿ ವಾಹನಗಳಲ್ಲಿರುವ ಕಡಿಮೆ ಸುರಕ್ಷಾ ಸಾಧನಗಳಿಂದಾಗಿಯೇ ಪ್ರಾಣಹಾನಿ ಹೆಚ್ಚುತ್ತಿರುವುದು ಕಳವಳಕಾರಿ ಅಂಶವಾಗಿದ್ದು, ವಾಹನಗಳಲ್ಲಿರುವ ಸುರಕ್ಷಾ ಸೌಲಭ್ಯಗಳು ಅಪಘಾತದ ಸಂದರ್ಭದಲ್ಲಿ ಹೇಗೆ ಸಹಾಯಕ್ಕೆ ಬರುತ್ತವೇ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ.

ನಿಯಂತ್ರಣ ತಪ್ಪಿ 20 ಅಡಿ ಹಳ್ಳಕ್ಕೆ ಬಿದ್ದ ಟಾಟಾ ನೆಕ್ಸಾನ್- ಕಾರಿನಲ್ಲಿದ್ದವರಿಗೆ ಪರಿಸ್ಥಿತಿ ಏನಾಯ್ತು ಗೊತ್ತಾ?

ಪ್ರವಾಸಕ್ಕೆ ಹೊರಟಿದ್ದ ಟಾಟಾ ನೆಕ್ಸಾನ್ ಎಸ್‌ಯುವಿ ಕಾರೊಂದು ವೇಗದ ಚಾಲನೆಯಲ್ಲಿದ್ದಾಗ ನಿಯಂತ್ರಣ ತಪ್ಪಿದ ಪರಿಣಾಮ 20 ಅಡಿ ಆಳದ ಹಳ್ಳಕ್ಕೆ ಬಿದ್ದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಸಣ್ಣಪುಟ್ಟ ಗಾಯಗಳನ್ನು ಹೊರತುಪಡಿಸಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದಕ್ಕೆ ಕಾರಣ ಕಾರಿನಲ್ಲಿರುವ ಸುರಕ್ಷಾ ಸೌಲಭ್ಯಗಳು ಅಂದ್ರೆ ನೀವು ನಂಬಲೇಬೇಕು.

ನಿಯಂತ್ರಣ ತಪ್ಪಿ 20 ಅಡಿ ಹಳ್ಳಕ್ಕೆ ಬಿದ್ದ ಟಾಟಾ ನೆಕ್ಸಾನ್- ಕಾರಿನಲ್ಲಿದ್ದವರಿಗೆ ಪರಿಸ್ಥಿತಿ ಏನಾಯ್ತು ಗೊತ್ತಾ?

ಅಂದಹಾಗೆ ಈ ಘಟನೆ ನಡೆದಿದ್ದು ಜಮ್ಮುವಿನ ದೊಡಾದಲ್ಲಿ. ಪ್ರವಾಸಕ್ಕಾಗಿ ಹೊರಟಿದ್ದಾಗ ಈ ಘಟನೆ ನಡೆದಿದ್ದು, ಕಾರು ಮಾಲೀಕ ಸುರಿಂದರ್ ಷಾನ್ ಮತ್ತು ಸ್ನೇಹಿತ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಿಯಂತ್ರಣ ತಪ್ಪಿ 20 ಅಡಿ ಹಳ್ಳಕ್ಕೆ ಬಿದ್ದ ಟಾಟಾ ನೆಕ್ಸಾನ್- ಕಾರಿನಲ್ಲಿದ್ದವರಿಗೆ ಪರಿಸ್ಥಿತಿ ಏನಾಯ್ತು ಗೊತ್ತಾ?

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಘಟನೆಯ ವಿವರವನ್ನು ಹಂಚಿಕೊಂಡಿರುವ ಸುರಿಂದರ್ ಸಿಂಗ್ ಅವರು, ಕಡಿದಾದ ಮಾರ್ಗದಲ್ಲಿ ಚಲಿಸುವಾಗ ನಿಯಂತ್ರಣ ತಪ್ಪಿದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದಿದ್ದಾರೆ.

ನಿಯಂತ್ರಣ ತಪ್ಪಿ 20 ಅಡಿ ಹಳ್ಳಕ್ಕೆ ಬಿದ್ದ ಟಾಟಾ ನೆಕ್ಸಾನ್- ಕಾರಿನಲ್ಲಿದ್ದವರಿಗೆ ಪರಿಸ್ಥಿತಿ ಏನಾಯ್ತು ಗೊತ್ತಾ?

ಜೊತೆಗೆ ಭೀಕರ ಅಪಘಾತದಲ್ಲೂ ಸಣ್ಣಪುಟ್ಟ ಗಾಯಗಳನ್ನು ಹೊರತು ಪಡಿಸಿ ಪ್ರಾಣಾಪಾಯದಿಂದ ಪಾರಾಗಿ ಬಂದಿರುವ ಬಗ್ಗೆ ಅಚ್ಚರಿ ವ್ಯಕ್ತಪಡಿಸಿರುವ ಸುರಿಂದರ್, ನೆಕ್ಸಾನ್ ಕಾರುಗಳಲ್ಲಿ ಅತ್ಯುತ್ತಮ ಬಾಡಿ ಕಿಟ್ ಮತ್ತು ಸುರಕ್ಷಾ ಸೌಲಭ್ಯಗಳನ್ನು ಒದಗಿಸಿರುವ ಟಾಟಾ ಸಂಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಿಯಂತ್ರಣ ತಪ್ಪಿ 20 ಅಡಿ ಹಳ್ಳಕ್ಕೆ ಬಿದ್ದ ಟಾಟಾ ನೆಕ್ಸಾನ್- ಕಾರಿನಲ್ಲಿದ್ದವರಿಗೆ ಪರಿಸ್ಥಿತಿ ಏನಾಯ್ತು ಗೊತ್ತಾ?

ಇನ್ನು ಅಪಘಾತದ ಸಂದರ್ಭದಲ್ಲಿ ಕಾರಿನ ಎಲ್ಲ ಏರ್‌ಬ್ಯಾಗ್‌ಗಳು ಸರಿಯಾದ ಸಮಯಕ್ಕೆ ಕಾರ್ಯನಿರ್ವಹಣೆಯಾಗಿದ್ದು, ಕಾರಿನ ಹಿಂಭಾಗವು ಸಂಪೂರ್ಣ ಜಖಂಗೊಂಡಿದ್ದರು ಕಾರಿನಲ್ಲಿದ್ದವರಿಗೆ ಯಾವುದೇ ರೀತಿಯ ತೊಂದರೆ ಆಗಿಲ್ಲ ಎನ್ನುವುದೇ ಗಮನಿಸಬೇಕಾದ ಅಂಶವಾಗಿದೆ.

ನಿಯಂತ್ರಣ ತಪ್ಪಿ 20 ಅಡಿ ಹಳ್ಳಕ್ಕೆ ಬಿದ್ದ ಟಾಟಾ ನೆಕ್ಸಾನ್- ಕಾರಿನಲ್ಲಿದ್ದವರಿಗೆ ಪರಿಸ್ಥಿತಿ ಏನಾಯ್ತು ಗೊತ್ತಾ?

ಇನ್ನು ಕಳೆದ ತಿಂಗಳ ಹಿಂದಷ್ಟೇ ಗೋವಾದ ಪಣಜಿ ಬಳಿಯು ಇಂತದ್ದೆ ಘಟನೆ ನಡೆದಿತ್ತು. ಟಾಟಾ ನೆಕ್ಸಾನ್ ಎಸ್‌ಯುವಿ ಕಾರೊಂದು ವೇಗದ ಚಾಲನೆ ವೇಳೆ ಟ್ರಕ್ ಗುದ್ದಿದ ಪರಿಣಾಮ ನಿಯಂತ್ರಣ ತಪ್ಪಿ ಬರೋಬ್ಬರಿ ಮೂರು ಬಾರಿ ಪಲ್ಟಿ ಹೊಡೆದಿತ್ತು.

ನಿಯಂತ್ರಣ ತಪ್ಪಿ 20 ಅಡಿ ಹಳ್ಳಕ್ಕೆ ಬಿದ್ದ ಟಾಟಾ ನೆಕ್ಸಾನ್- ಕಾರಿನಲ್ಲಿದ್ದವರಿಗೆ ಪರಿಸ್ಥಿತಿ ಏನಾಯ್ತು ಗೊತ್ತಾ?

ಆಗಲೂ ಕೂಡಾ ಅಪಘಾತದಲ್ಲಿ ಟಾಟಾ ನೆಕ್ಸನ್ ಕಾರು ಸಂಪೂರ್ಣ ಜಖಂಗೊಂಡಿದ್ದರು ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳನ್ನು ಹೊರತುಪಡಿಸಿ ಎಲ್ಲರೂ ಪ್ರಾಣಪಾಯದಿಂದ ಪಾರಾಗಿದ್ದರು.

ನಿಯಂತ್ರಣ ತಪ್ಪಿ 20 ಅಡಿ ಹಳ್ಳಕ್ಕೆ ಬಿದ್ದ ಟಾಟಾ ನೆಕ್ಸಾನ್- ಕಾರಿನಲ್ಲಿದ್ದವರಿಗೆ ಪರಿಸ್ಥಿತಿ ಏನಾಯ್ತು ಗೊತ್ತಾ?

ಇದಕ್ಕಾಗಿಯೇ ಟಾಟಾ ಮೋಟಾರ್ಸ್ ನಿರ್ಮಾಣದ ನೆಕ್ಸಾನ್ ಕಾರುಗಳಲ್ಲಿನ ಸುರಕ್ಷತೆಗೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ ಶ್ರೀಜಿತ್ ಎನ್ನುವರು ನೆಕ್ಸಾನ್ ಕಾರಿನಲ್ಲಿ ನೀಡಲಾಗಿರುವ ಅತ್ಯತ್ತಮ ಸುರಕ್ಷಾ ಸಾಧನಗಳು ಮತ್ತು ಗಟ್ಟಿಮುಟ್ಟಾದ ಕವಚ ನಿರ್ಮಾಣವೇ ನಮ್ಮ ಜೀವ ಉಳಿಯಲು ಕಾರಣ ಎಂದಿದ್ದರು.

ನಿಯಂತ್ರಣ ತಪ್ಪಿ 20 ಅಡಿ ಹಳ್ಳಕ್ಕೆ ಬಿದ್ದ ಟಾಟಾ ನೆಕ್ಸಾನ್- ಕಾರಿನಲ್ಲಿದ್ದವರಿಗೆ ಪರಿಸ್ಥಿತಿ ಏನಾಯ್ತು ಗೊತ್ತಾ?

ಒಟ್ಟಿನಲ್ಲಿ ಗ್ರಾಹಕರ ನೀಡುವ ದರಗಳಿಗೆ ಟಾಟಾ ನೆಕ್ಸಾನ್ ಕಾರುಗಳು ಉತ್ತಮ ಮಾದರಿಯಾಗಿದ್ದು, ಅಪಘಾತಗಳ ಸಂದರ್ಭದಲ್ಲಿ ನಿರ್ದಿಷ್ಟ ಮಟ್ಟದ ಸುರಕ್ಷೆ ನೀಡುವಲ್ಲಿ ಟಾಟಾ ಕಾರುಗಳು ಉತ್ತಮ ಭರವಸೆ ಹೊಂದಿವೆ ಅಂದರೇ ತಪ್ಪಾಗಲಾರದು.

ನಿಯಂತ್ರಣ ತಪ್ಪಿ 20 ಅಡಿ ಹಳ್ಳಕ್ಕೆ ಬಿದ್ದ ಟಾಟಾ ನೆಕ್ಸಾನ್- ಕಾರಿನಲ್ಲಿದ್ದವರಿಗೆ ಪರಿಸ್ಥಿತಿ ಏನಾಯ್ತು ಗೊತ್ತಾ?

ಡ್ರೈವ್‌ಸ್ಪಾರ್ಕ್ ಕನ್ನಡ ವಿಭಾಗದಲ್ಲಿನ ಟಾಪ್ ಸ್ಟೋರಿಗಳು:

ಮಗು ಮಾಡಿದ ಒಂದು ಸಣ್ಣ ತಪ್ಪಿನಿಂದಾಗಿ ಕಾರಿನಲ್ಲಿದ್ದ 7 ಮಂದಿ ದುರ್ಮರಣ..

ಬೆಂಗಳೂರಿನ ಪ್ರತಿಷ್ಠಿತ ಮಾರುತಿ ಸರ್ವಿಸ್ ಸ್ಟೇಷನ್ ಕರ್ಮಕಾಂಡ ಬಯಲು ಮಾಡಿದ ಗ್ರಾಹಕ !! ವಿಡಿಯೋ

ಉಬರ್ ಚಾಲಕನ ದುರ್ವರ್ತನೆಯಿಂದ ಬಯಲಾಯ್ತು ಮತ್ತೊಂದು ಸ್ಪೋಟಕ ಮಾಹಿತಿ..!!

ರಾಯಲ್ ಎನ್‌ಫೀಲ್ಡ್ ಬೈಕ್‌ಗಳನ್ನು ಖರೀದಿ ಮಾಡೋದು ಲಾಭಕ್ಕಿಂತ ನಷ್ಟವೇ ಹೆಚ್ಚಂತೆ? ಇದು ನೀಜವೇ?

ಮಾರಾಟಕ್ಕಿರುವ 132 ಕೋಟಿ ಮೌಲ್ಯದ ಈ ನಂಬರ್ ಪ್ಲೇಟ್‌ ವಿಶೇಷತೆ ಏನು?

Most Read Articles

Kannada
Read more on accident auto news
English summary
Tata Nexon Topples With Passengers Inside — Here's What Happened To The SUV.
Story first published: Friday, April 27, 2018, 13:39 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X