ಟಿಯಾಗೊ ಜೆಟಿಪಿ ಜೊತೆ ಮತ್ತೆರಡು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಟಾಟಾ ಸಂಸ್ಥೆಯು ಹೊಸ ಹೊಸ ಕಾರು ಉತ್ಪನ್ನಗಳ ಮೂಲಕ ಮಾರುತಿ ಸುಜುಕಿಯೊಂದಿಗೆ ಪೈಪೋಟಿ ನಡೆಸುತ್ತಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ನಮೂನೆಯ ಕಾರು ಉತ್ಪನ್ನಗಳನ್ನು ಸಿದ್ದಗೊಳಿಸುತ್ತಿದೆ. ಇದರಲ್ಲಿ ಪರ್ಫಾಮೆನ್ಸ್ ಪ್ರಿಯರಿಗಾಗಿ ಸಿದ್ದವಾಗಿರುವ ಟಿಯಾಗೊ ಜೆಟಿಪಿ ಮತ್ತು ಟಿಗೋರ್ ಜೆಟಿಪಿ ಭಾರೀ ನೀರಿಕ್ಷೆ ಹುಟ್ಟುಹಾಕಿವೆ.

ಟಿಯಾಗೊ ಜೆಟಿಪಿ ಜೊತೆ ಮತ್ತೆರಡು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಸಂಸ್ಥೆಯು ಕಳೆದ 2 ದಿನಗಳ ಹಿಂದಷ್ಟೇ ಟಿಯಾಗೊ ಎನ್‌ಆರ್‌ಜಿ ಎನ್ನುವ ಹೊಸ ಕಾರನ್ನು ಬಿಡುಗಡೆ ಮಾಡಿದ್ದು, ಇದೀಗ ಟಿಯಾಗೊ ಜೆಟಿಪಿ ಮತ್ತು ಟಿಗೋರ್ ಜೆಟಿಪಿ ಬಿಡುಗಡೆಗಾಗಿ ವೇದಿಕೆ ಸಿದ್ದಗೊಳಿಸುತ್ತಿದೆ. ಮಾಹಿತಿಗಳ ಪ್ರಕಾರ ದೀಪಾವಳಿ ಹೊತ್ತಿಗೆ ಟಿಯಾಗೊ ಜೆಟಿಪಿ ಮತ್ತು ಟಿಗೋರ್ ಜೆಟಿಪಿ ಕಾರುಗಳು ಗ್ರಾಹಕರ ಕೈ ಸೇರುವ ಸಾಧ್ಯತೆಗಳಿದ್ದು, ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿವೆ.

ಟಿಯಾಗೊ ಜೆಟಿಪಿ ಜೊತೆ ಮತ್ತೆರಡು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಕಳೆದ ಫೆಬ್ರುವರಿಯಲ್ಲಿ ನಡೆದಿದ್ದ 2018ರ ಆಟೋ ಎಕ್ಸ್‌ಪೋದಲ್ಲಿ ಅತಿ ನೂತನ ಟಿಯಾಗೊ ಜೆಟಿಪಿ ಮತ್ತು ಟಿಗೋರ್ ಜೆಟಿಪಿ ಪರ್ಫಾಮೆನ್ಸ್ ಆವೃತ್ತಿಗಳನ್ನು ಅನಾವರಣಗೊಳಿಸಿದ್ದ ಟಾಟಾ ಸಂಸ್ಥೆಯು ಸಾಮಾನ್ಯ ಮಾದರಿಯ ಕಾರುಗಳಿಂತಲೂ ಹೆಚ್ಚಿನ ಎಂಜಿನ್ ಪರ್ಫಾಮೆನ್ಸ್ ಒದಗಿಸಲಿದೆ.

ಟಿಯಾಗೊ ಜೆಟಿಪಿ ಜೊತೆ ಮತ್ತೆರಡು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಹೀಗಾಗಿ ದಸರಾ ಅಥವಾ ದೀಪಾವಳಿ ಅವಧಿಗೆ ಹೊಸ ಟಿಯಾಗೊ ಜೆಟಿಪಿ ಮತ್ತು ಟಿಗೋರ್ ಜೆಟಿಪಿ ಪರ್ಫಾಮೆನ್ಸ್ ಆವೃತ್ತಿಗಳು ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ತಮಿಳುನಾಡಿನ ಹಲವು ಕಡೆ ಸ್ಪಾಟ್ ಟೆಸ್ಟಿಂಗ್ ಸಂದರ್ಭದಲ್ಲಿ ಹೊಸ ಕಾರುಗಳಲ್ಲಿ ಸ್ಪೋರ್ಟಿ ಲುಕ್ ಒದಗಿಸಿರುವ ಬಗ್ಗೆ ನಾವು ಈಗಾಗಲೇ ಹಲವು ಬಾರಿ ವರದಿ ಮಾಡಲಾಗಿತ್ತು.

ಟಿಯಾಗೊ ಜೆಟಿಪಿ ಜೊತೆ ಮತ್ತೆರಡು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಇನ್ನೊಂದು ಪ್ರಮುಖ ವಿಚಾರ ಅಂದ್ರೆ, ಜೆಟಿಪಿ ಎಂಬುದರ ಪೂರ್ಣರೂಪ ಜೇಯಮ್ ಟಾಟಾ ಫರ್ಫಾಮನ್ಸ್ (Jayem Tata Performance) ಎಂಬುದಾಗಿದೆ. ಟಾಟಾ ಮೋಟಾರ್ಸ್ ಹಾಗೂ ಜೇಯಮ್ ಆಟೋಮೋಟಿವ್ಸ್ ಜಂಟಿಯಾಗಿ ತಾಜಾ ಟಾಟಾ ಕಾರುಗಳ ಶಕ್ತಿಶಾಲಿ ಮಾಡೆಲ್‌ಗಳನ್ನು ನಿರ್ಮಿಸುತ್ತಿದೆ.

MOST READ: ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಮರಾಜೊ ಹೊಸ ಎಂಪಿವಿ

ಟಿಯಾಗೊ ಜೆಟಿಪಿ ಜೊತೆ ಮತ್ತೆರಡು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಸ್ಟ್ಯಾಂಡರ್ಡ್ ಮಾದರಿಗಳಿಗೆ ಹೋಲಿಸಿದಾಗ ಗಮನಾರ್ಹ ಬದಲಾವಣೆಗಳು ಕಂಡುಬರಲಿದ್ದು, ಕ್ರೀಡಾತ್ಮಕ ಬಂಪರ್ ಜತೆಗೆ ಹೊಸತಾದ ಫಾಗ್ ಲ್ಯಾಂಪ್ ಹೌಸಿಂಗ್ ಹಾಗೂ ಅಗಲವಾದ ಲೋವರ್ ಗ್ರಿಲ್ ಇರಲಿದೆ. ಕಪ್ಪು ವರ್ಣ ಸುತ್ತುವರಿದ ಹೆಡ್‌ಲ್ಯಾಂಪ್ ಜತೆಗೆ ಜೆಟಿಪಿ ಲೊಗೊ ಸಹ ಪ್ರಮುಖ ಆಕರ್ಷಣೆಯಾಗಲಿದ್ದು, ಹಿಂಭಾಗದಲ್ಲೂ ರೂಫ್ ಸ್ಪಾಯ್ಲರ್ ಹೆಚ್ಚಿನ ಕ್ರೀಡಾತ್ಮಕ ಲುಕ್ ನೀಡಲಿದೆ.

ಟಿಯಾಗೊ ಜೆಟಿಪಿ ಜೊತೆ ಮತ್ತೆರಡು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

15 ಇಂಚುಗಳ ದೊಡ್ಡದಾದ ಡೈಮಂಡ್ ಕಟ್ ಅಲಾಯ್ ಚಕ್ರಗಳು ಹಾಗೂ ಏರೋ ಡೈನಾಮಿಕ್ ವಿನ್ಯಾಸ ಇರಲಿದೆ. ಕಾರಿನೊಳಗೂ ಆಲ್ ಬ್ಲ್ಯಾಕ್ ಲೆದರ್ ಹೋದಿಕೆಯ ಜತೆ ಲೆದರ್ ಹೋದಿಕೆಯ ಸ್ಟೀರಿಂಗ್ ವೀಲ್ಹ್ ಸಹ ಇರಲಿದೆ. ಜೊತೆಗೆ ಎಂಟು ಸ್ಪೀಕರ್‌ಗಳ ಹರ್ಮನ್ ಇನ್ಪೋಟೈನ್ಮೆಂಟ್ ಸಿಸ್ಟಂ ಜೋಡಣೆ ಹೊಂದಿದೆ.

ಟಿಯಾಗೊ ಜೆಟಿಪಿ ಜೊತೆ ಮತ್ತೆರಡು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಅಂದ ಹಾಗೆ ಟಾಟಾ ಟಿಯಾಗೊ ಜೆಟಿಪಿ ಹಾಗೂ ಟಿಗೋರ್ ಜೆಟಿಪಿ ಮಾದರಿಗಳು ನೆಕ್ಸನ್ ಎಸ್‌ಯುವಿಗೆ ಸಮಾನವಾದ 1.2 ಲೀಟರ್ ಟರ್ಬೊಚಾರ್ಜ್ಡ್ ರವೊಟಾರ್ನ್ ಪೆಟ್ರೋಲ್ ಎಂಜಿನ್‌ಗಳನ್ನು ಪಡೆಯಲಿದೆ. ಇದು 150 ಎನ್‌ಎಂ ತಿರುಗುಬಲದಲ್ಲಿ 110 ಅಶ್ವಶಕ್ತಿಯನ್ನು ಉತ್ಪಾದಿಸಲಿದೆ. ಹಾಗೆಯೇ ಐದು ಸ್ಪೀಡ್ ಗೇರ್ ಬಾಕ್ಸ್ ಜೋಡಿಸಲಾಗಿದೆ.

ಟಿಯಾಗೊ ಜೆಟಿಪಿ ಜೊತೆ ಮತ್ತೆರಡು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಬೆಲೆಗಳು(ಅಂದಾಜು)

ಸ್ಪೋಟಿ ಲುಕ್‌ನೊಂದಿಗೆ ಪರ್ಫಾಮೆನ್ಸ್ ಪ್ರಿಯರನ್ನು ಸೆಳೆಯಲಿರುವ ಟಿಯಾಗೊ ಜೆಟಿಪಿ ಕಾರುಗಳು ಸಾಮಾನ್ಯ ಕಾರುಗಳಿಂತ ತುಸು ದುಬಾರಿಯಾಗಲಿದ್ದು, ಎಕ್ಸ್‌ಶೋರಂ ಪ್ರಕಾರ ರೂ.7 ಲಕ್ಷ ಆರಂಭಿಕ ಬೆಲೆ ಪಡೆದುಕೊಳ್ಳುವ ಸಾಧ್ಯತೆಗಳಿವೆ.

ಟಿಯಾಗೊ ಜೆಟಿಪಿ ಜೊತೆ ಮತ್ತೆರಡು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಒಟ್ಟಿನಲ್ಲಿ ಎರಡೂ ಕಾರುಗಳು ಉತ್ತಮ ರೈಡ್ ಮತ್ತು ಹ್ಯಾಂಡ್ಲಿಂಗ್ ಅನುಭವವನ್ನು ನೀಡಲಿದ್ದು, ಗ್ರಾಹಕರು ಹೆಚ್ಚಿನ ಮೈಲೇಜ್ ಕೊಡುವಂತಹ ರೆಗ್ಯುಲರ್ ಟಿಯಾಗೊ ಅಥವಾ ಸ್ಪೋರ್ಟ್ ಡ್ರೈವ್ ಅನುಭವಕ್ಕಾಗಿ ಜಿಟಿಪಿ ಆವೃತ್ತಿಯ ಟಿಯಾಗೊ ಕಾರನ್ನು ಆಯ್ಕೆ ಮಾಡಬಹುದಾಗಿದೆ.

More from DriveSpark

Article Published On: Friday, September 14, 2018, 11:04 [IST]
English summary
Tata Tiago JTP Launch Soon, Along With Three Other Models — Tata Motors Confirms.
Read more on tata motors hatchback
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+