ಬೆಂಗಳೂರಿನಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಟೊಯೊಟಾ ಸಿ-ಹೆಚ್ಆರ್ ಕಂಪ್ಯಾಕ್ಟ್ ಎಸ್‌ಯುವಿ

By Praveen Sannamani

ದೇಶಿಯ ಮಾರುಕಟ್ಟೆಯಲ್ಲಿ ಟೊಯೊಟಾ ಕಾರುಗಳು ಈಗಾಗಲೇ ಭಾರೀ ಬೇಡಿಕೆಯೊಂದಿಗೆ ಮುನ್ನಡೆ ಸಾಧಿಸುತ್ತಿದ್ದು, ಸದ್ಯದಲ್ಲೇ ಮತ್ತೆರಡು ವಿನೂತನ ಎಸ್‌ಯುವಿ ಕಾರುಗಳನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿದೆ. ಒಂದು ವೇಳೆ ಟೊಯೊಟಾ ಹೊಸ ಎಸ್‌ಯುವಿ ಕಾರುಗಳು ನಿಗದಿತ ಅವಧಿಯಲ್ಲಿ ಬಿಡುಗಡೆಗೊಂಡಿದ್ದೆ ಆದಲ್ಲಿ ಭಾರತದಲ್ಲಿ ಪ್ರಮುಖ ಎಸ್‌ಯುವಿ ಕಾರುಗಳಿಗೆ ತೀವ್ರ ಪೈಪೋಟಿ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.

ಬೆಂಗಳೂರಿನಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಟೊಯೊಟಾ ಸಿ-ಹೆಚ್ಆರ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಎಸ್‌ಯುವಿ ಕಾರುಗಳನ್ನು ಪರಿಚಯಿಸುವ ಕುರಿತು ಈ ಹಿಂದೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಟೊಯೊಟಾ ಕಿರ್ಲೋಸ್ಕರ್ ಇಂಡಿಯಾ ಎಂಡಿ ಅಕಿತೊ ತಾಚಿಬಾನಾ ಅವರು, 'ವಾಹನ ಉದ್ಯಮದಲ್ಲಿ ಅತಿವೇಗವಾಗಿ ಬೆಳೆಯುತ್ತಿರುವ ಭಾರತೀಯ ಮಾರುಕಟ್ಟೆಯಲ್ಲಿ ನಮ್ಮ ಪ್ರಮುಖ ಉತ್ಪನ್ನಗಳು ಯಶಸ್ವಿಯಾಗಿದ್ದು, ಮುಂಬರುವ ದಿನಗಳಲ್ಲಿ 10 ರಿಂದ 15 ಲಕ್ಷ ಬೆಲೆ ಅಂತರದಲ್ಲಿ ವಿಶೇಷ ಎಸ್‌ಯುವಿ ಕಾರುಗಳನ್ನು ಬಿಡುಗಡೆಗೊಳಿಸುವ ನಮ್ಮ ಮುಂದಿನ ಯೋಜನೆಗಳಾಗಿವೆ ಎಂದಿದ್ದರು.

ಬೆಂಗಳೂರಿನಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಟೊಯೊಟಾ ಸಿ-ಹೆಚ್ಆರ್ ಕಂಪ್ಯಾಕ್ಟ್ ಎಸ್‌ಯುವಿ

ಇದಕ್ಕೆ ಪೂರಕ ಎನ್ನುವಂತೆ ನಮ್ಮ ಬೆಂಗಳೂರಿನಲ್ಲಿ ಸಿ-ಹೆಚ್ಆರ್ ಕಾರು ಮಾದರಿಯ ಉತ್ಪಾದನಾ ಆವೃತ್ತಿಯ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದು, ಸದ್ಯದಲ್ಲೇ ಬಿಡುಗಡೆಗೊಳಿಸುವ ಸುಳಿವು ನೀಡಿದೆ.

ಬೆಂಗಳೂರಿನಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಟೊಯೊಟಾ ಸಿ-ಹೆಚ್ಆರ್ ಕಂಪ್ಯಾಕ್ಟ್ ಎಸ್‌ಯುವಿ

ಸಿ-ಹೆಚ್‌ಆರ್ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳು ಯುರೋಪ್ ಮಾರುಕಟ್ಟೆಯಲ್ಲಿ ಭಾರೀ ಜನಪ್ರಿಯತೆಯನ್ನು ಹೊಂದಿದ್ದು, ಸುಮಾರು 14 ಲಕ್ಷ ದಿಂದ 16 ಲಕ್ಷ ಬೆಲೆಗಳೊಂದಿಗೆ ಮಾರಾಟವಾಗುತ್ತಿದೆ. ಏರೋ ಡೈನಾಮಿಕ್ ವಿನ್ಯಾಸಗಳನ್ನು ಹೊಂದಿರುವ ಈ ಕಾರು 2.0-ಲೀಟರ್ ಡಿಸೇಲ್ ಎಂಜಿನ್ ಮತ್ತು ಪೆಟ್ರೋಲ್ ಎಂಜಿನ್ ಪಡೆದುಕೊಂಡಿದೆ.

ಬೆಂಗಳೂರಿನಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಟೊಯೊಟಾ ಸಿ-ಹೆಚ್ಆರ್ ಕಂಪ್ಯಾಕ್ಟ್ ಎಸ್‌ಯುವಿ

ಇದೇ ಮಾದರಿಯನ್ನು 1.5-ಲೀಟರ್ ಡಿಸೇಲ್ ಎಂಜಿನ್‌ನೊಂದಿಗೆ ಪರಿಚಯಿಸುವ ಮೂಲಕ ಕ್ರೇಟಾ ಮತ್ತು ಮಾರುತಿ ಸುಜುಕಿ ಮುಂಬರುವ ಹೊಸ ಕಾರು ವಿಟಾರಾ ಎಸ್‌ಯುವಿ ಕಾರುಗಳಿಗೆ ಪೈಪೋಟಿ ನೀಡುವ ಗುರಿಹೊಂದಲಾಗಿದ್ದು, ಕೆಲವು ತಾಂತ್ರಿಕ ಬದಲಾವಣೆ ತರುವ ಮೂಲಕ ಕಾರಿನ ಬೆಲೆಯನ್ನು ತಗ್ಗಿಸುವ ಚಿಂತನೆ ನಡೆಸಲಾಗಿದೆ.

ಬೆಂಗಳೂರಿನಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಟೊಯೊಟಾ ಸಿ-ಹೆಚ್ಆರ್ ಕಂಪ್ಯಾಕ್ಟ್ ಎಸ್‌ಯುವಿ

ಇದರಿಂದ ಹೊಸ ಸಿ-ಹೆಚ್‌ಆರ್ ಕಾರುಗಳು 1.5-ಲೀಟರ್ ಡೀಸೆಲ್ ಮತ್ತು 1.5-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ ರೂ. 12 ರಿಂದ ರೂ. 15 ಲಕ್ಷದ ತನಕ ಬೆಲೆ ನಿಗದಿಗೊಳಿಸಿ ಹೊಸ ಟ್ರೆಂಡ್ ಕ್ರಿಯೆಟ್ ಮಾಡಲಿವೆ.

ಬೆಂಗಳೂರಿನಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಟೊಯೊಟಾ ಸಿ-ಹೆಚ್ಆರ್ ಕಂಪ್ಯಾಕ್ಟ್ ಎಸ್‌ಯುವಿ

ಜೊತೆಗೆ ಹೊಸ ಕಾರುಗಳು ಜೀಪ್ ಕಂಪಾಸ್ ಕಾರುಗಳಲ್ಲಿ ಹೊಂದಿರುವ ಎಲ್ಲಾ ಸೌಲಭ್ಯಗಳನ್ನು ಹೊಂದಿದ್ದು, 22 ಲಕ್ಷ ಪಾವತಿಸಿ ಜೀಪ್ ಕಂಪಾಸ್ ಖರೀದಿಸುವ ಗ್ರಾಹಕರಿಗೆ ಇದು ಹೊಸ ಆಯ್ಕೆಯಾಗಿದ್ದು, ಮುಂದಿನ ಇದು ಯಾವ ರೀತಿ ಬದಲಾವಣೆಯೊಂದಿಗೆ ಭಾರತಕ್ಕೆ ಎಂಟ್ರಿ ನೀಡಲಿದೆ ಎನ್ನುವುದು ಮುಂದಿನ ದಿನಗಳಲ್ಲಿ ಮತ್ತಷ್ಟು ಮಾಹಿತಿ ತಿಳಿಯಲಿದೆ.

ಬೆಂಗಳೂರಿನಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಟೊಯೊಟಾ ಸಿ-ಹೆಚ್ಆರ್ ಕಂಪ್ಯಾಕ್ಟ್ ಎಸ್‌ಯುವಿ

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ

ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ಕಂಪ್ಯಾಕ್ಟ್ ಎಸ್‌ಯುವಿಗಳಿಗೆ ಉತ್ತಮ ಮಾರುಕಟ್ಟೆಯಿದ್ದು, ಈ ಹಿನ್ನೆಲೆ ಜನಪ್ರಿಯ ಮಾದರಿಗಳಾದ ಹ್ಯುಂಡೈ ಕ್ರೇಟಾ, ರೆನಾಲ್ಟ್ ಕ್ಯಾಪ್ಚರ್, ಫೋರ್ಡ್ ಇಕೋ ಸ್ಪೋರ್ಟ್, ಮಾರುತಿ ಸುಜುಕಿ ವಿಟಾರಾ, ಜೀಪ್ ಕಂಪಾಸ್ ಹಿಂದಿಕ್ಕುವ ಉದ್ದೇಶದೊಂದಿಗೆ ಟೊಯೊಟಾ ಸಂಸ್ಥೆಯು ರಷ್ ಮತ್ತು ಸಿ-ಹೆಚ್‌ಆರ್ ಬಿಡುಗಡೆ ಮಾಡುವ ಯೋಜನೆಯಲ್ಲಿದೆ ಎನ್ನಬಹುದು.

Source: AutoCarIndia

Most Read Articles

Kannada
Read more on toyota suv
English summary
2018 Toyota C-HR Compact SUV Spied In India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X